Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಆನೆ-ಮಾನವ ಸಂಘರ್ಷ ಶಾಶ್ವತ ಪರಿಹಾಕ್ಕೆ ಪ್ರಾಮಾಣಿಕ ಯತ್ನ : ಮಡಿಕೇರಿ 7, ನಾಗರಹೊಳೆ ವಿಭಾಗಕ್ಕೆ 20 ಕಿ.ಮೀ. ರೈಲ್ವೆ ಬ್ಯಾರಿಕೇಡ್ ಮಂಜೂರು : ಸಚಿವ ಈಶ್ವರ ಖಂಡ್ರೆ*
  • *ಅರಣ್ಯ ಸಚಿವರು ತುರ್ತು ಸಭೆ ನಡೆಸಿ ಕಾಡಾನೆ ದಾಳಿ ನಿಯಂತ್ರಿಸದಿದ್ದಲ್ಲಿ ಪ್ರತಿಭಟನೆ : ಮಹಿಳಾ ಬಿಜೆಪಿ ಎಚ್ಚರಿಕೆ*
  • *ಕರ್ನಾಟಕ ಸುವರ್ಣ ಸಮುಚ್ಚಯ ಭವನದ ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಸೂಚನೆ*
  • *ಮಾಯಮುಡಿ ಗ್ರಾ.ಪಂ ಆಡಳಿತಾಧಿಕಾರಿಯಾಗಿ ಪಿ.ಪಿ.ಕವಿತಾ ಅಧಿಕಾರ ಸ್ವೀಕಾರ*
  • *ಜವಾಬ್ದಾರಿ ನಿಭಾಯಿಸಲು ಸಾಧ್ಯವಾಗದಿದ್ದಲ್ಲಿ ಅರಣ್ಯ ಸಚಿವರು ರಾಜೀನಾಮೆ ನೀಡಲಿ : ವಿರಾಜಪೇಟೆ ಬಿಜೆಪಿ ಒತ್ತಾಯ*
  • *ಪರಿಹಾರಕ್ಕಿಂತಲೂ ಅಮೂಲ್ಯವಾದದ್ದು ಮನುಷ್ಯನ ಜೀವ : ಕಾಡಾನೆ ಸೆರೆಗೆ ಶಾಸಕರ ಸೂಚನೆ*
  • *ಹಮ್ಮಿಯಾಲದಲ್ಲಿ ಸಾರಿಗೆ ಸಮಸ್ಯೆ : ಗ್ರಾಮಸ್ಥರ ಮನವಿಗೆ ಸ್ಪಂದಿಸಿದ ಶಾಸಕ ಡಾ.ಮಂತರ್ ಗೌಡ*
  • *ಕೆಎಸ್‌ಐಸಿ ಆವರಣದಲ್ಲಿ ಸ್ಡೇಡಿಯಂ ನಿರ್ಮಾಣ ಯೋಜನೆಗೆ ತಿಲಾಂಜಲಿ : ಸಂಘಟಿತ ಹೋರಾಟಕ್ಕೆ ಸಂದ ಜಯ : ಧನ್ಯವಾದ ಸಲ್ಲಿಸಿದ ಸಂಸದ ಯದುವೀರ್‌ ಒಡೆಯರ್‌*
  • *ಮಡಿಕೇರಿ : ಮಾ.11 ರಂದು ನಗರಸಭೆಯ ಆಯವ್ಯಯ ಸಭೆ*
  • *ಮಾ.12ರ ಹೋರಾಟಕ್ಕೆ ಸಿಪಿಐಎಂ ಪಕ್ಷದ ವಿರಾಜಪೇಟೆ ಘಟಕ ಬೆಂಬಲ : ಕೆ.ಎಸ್ ರಮೇಶ್*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಶಿಕ್ಷಕರ ಸಹಪಠ್ಯ ಸ್ಪರ್ಧಾ ಕಾರ್ಯಕ್ರಮ : ಶಿಕ್ಷಕರು ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಿ : ಶರ್ಮಿಳಾ ಸಲಹೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಶಿಕ್ಷಕರ ಸಹಪಠ್ಯ ಸ್ಪರ್ಧಾ ಕಾರ್ಯಕ್ರಮ : ಶಿಕ್ಷಕರು ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಿ : ಶರ್ಮಿಳಾ ಸಲಹೆ*

ಡಿಸೆಂಬರ್ 12, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ನಾಪೋಕ್ಲು ಡಿ.12 NEWS DESK : ಮಡಿಕೇರಿಯ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಆಯೋಜಿಸಲಾಗಿದ್ದ ಶಿಕ್ಷಕರ ಸಹಪಠ್ಯ ಸ್ಪರ್ಧಾ ಕಾರ್ಯಕ್ರಮದ ಪ್ರೌಢಶಾಲಾ ವಿಭಾಗದ ಆಶುಭಾಷಣ ಸ್ಪರ್ಧೆಯಲ್ಲಿ ಭಾಗಮಂಡಲದ ಕಾವೇರಿ ಪದವಿ ಪೂರ್ವ ಕಾಲೇಜಿನ ಪಾಂಡುರಂಗ ಪ್ರಥಮ ಸ್ಥಾನವನ್ನು ಮಡಿಕೇರಿ ಸರ್ಕಾರಿ ಪದವಿಪೂರ್ವ ಕಾಲೇಜಿನ ಐರಿನ್ ಉಷಾ ದ್ವಿತೀಯ ಸ್ಥಾನವನ್ನು ಪಡೆದರು. ವಿಜ್ಞಾನ ರಸಪ್ರಶ್ನೆ ಸ್ಪರ್ಧೆಯಲ್ಲಿ ಮಡಿಕೇರಿ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಮೋದ್ ಹಾಗೂ ಇಸಿಓ ಜಾನೆಟ್ ಕ್ರಮವಾಗಿ ಪ್ರಥಮ ಮತ್ತು ದ್ವಿತೀಯ ಸ್ಥಾನ ಗಳಿಸಿದರು. ಸಾಮಾನ್ಯ ರಸಪ್ರಶ್ನೆ ಸ್ಪರ್ಧೆಯಲ್ಲಿ ಹಾಕತ್ತೂರು ಸರ್ಕಾರಿ ಪ್ರೌಢಶಾಲೆಯ ಶಿಕ್ಷಕರಾದ ಸಿ.ಎಂ.ಮುನೀರ್, ಬಿ.ಎಂ.ಮೀನಾ ಹಾಗೂ ಬಿ.ಎನ್.ಜಯಂತಿ ಕ್ರಮವಾಗಿ ಪ್ರಥಮ, ದ್ವಿತೀಯ ಮತ್ತು ತೃತೀಯ ಸ್ಥಾನ ಗಳಿಸಿದರು. ಚಿತ್ರಕಲಾ ಸ್ಪರ್ಧೆಯಲ್ಲಿ ಭಾಗಮಂಡಲದ ಜ್ಞಾನೋದಯ ಪ್ರೌಢಶಾಲೆಯ ಶಿಕ್ಷಕಿ ಪ್ರತಿಭಾ ಎಂ ಪ್ರಥಮ ಸ್ಥಾನ ಗಳಿಸಿದರು. ಪ್ರಾಥಮಿಕ ಶಾಲಾ ವಿಭಾಗದ ಆಶುಭಾಷಣ ಸ್ಪರ್ಧೆಯಲ್ಲಿ ಮಡಿಕೇರಿಯ ಯುರೋ ಕಿಡ್ಸ್ ಶಾಲೆಯ ಶಿಕ್ಷಕಿ ರಶ್ಮಿ ದೀಪ ಪ್ರಥಮ ಸ್ಥಾನವನ್ನು ಪುತ್ಯಪೆರಾಜೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ಮೋಹನ್ ಪೆರಾಜೆ ದ್ವಿತೀಯ ಸ್ಥಾನವನ್ನು, ಚೆಂಬು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ರೋಹಿತ್ ಕುಮಾರ್ ತೃತೀಯ ಸ್ಥಾನವನ್ನು ಗಳಿಸಿದರು. ವಿಜ್ಞಾನ ರಸಪ್ರಶ್ನೆ ಸ್ಪರ್ಧೆಯಲ್ಲಿ ನಾಪೋಕ್ಲು ಕೆಪಿಎಸ್ ಶಾಲೆಯ ಚಂದ್ರಮತಿ ಪ್ರಥಮ ಸ್ಥಾನವನ್ನು ಮಡಿಕೇರಿಯ ಯುರೋಕಿಡ್ಸ್ ಶಾಲೆಯ ಚೈತನ್ಯ ಬಿ.ಪಿ.ದ್ವಿತೀಯ ಸ್ಥಾನವನ್ನು ಹಾಗೂ ಕಡಗದಾಳು ಸಿಆರ್ಪಿ ನಿಶಾ ಪಿ.ಸಿ ತೃತೀಯ ಸ್ಥಾನವನ್ನು ಗಳಿಸಿದರು. ಸಾಮಾನ್ಯ ರಸ ಪ್ರಶ್ನೆ ಸ್ಪರ್ಧೆಯಲ್ಲಿ ಚೆಯ್ಯಂಡಾಣೆಯ ಸಿಆರ್ಪಿ ಪವಿತ್ರ ಪ್ರಥಮ ಸ್ಥಾನವನ್ನು ,ಪೆರಾಜೆ ಕುಂದಲ್ಪಾಡಿಯ ಶಿಕ್ಷಕ ಎನ್.ಎಸ್ ಕುಮಾರ್ ದ್ವಿತೀಯ ಸ್ಥಾನವನ್ನು, ಮಡಿಕೇರಿಯ ಕ್ಷೇತ್ರ ಸಂಪನ್ಮೂಲ ಸಮನ್ವಯ ವ್ಯಕ್ತಿ ವೀಣಾ ಎನ್ ದ್ವಿತೀಯ ಸ್ಥಾನವನ್ನು ಗಳಿಸಿದರು. ಚಿತ್ರಕಲಾ ಸ್ಪರ್ಧೆಯಲ್ಲಿ ಮೇಕೇರಿ ಸಿಆರ್ ಪಿ ಕಲ್ಪನಾ ಪಿ.ಆರ್ ಪ್ರಥಮ ಸ್ಥಾನವನ್ನು, ಜ್ಞಾನೋದಯ ಭಾಗಮಂಡಲ ಶಾಲೆಯ ವರ್ಷ ಎಂ.ಎ ದ್ವಿತೀಯ ಸ್ಥಾನವನ್ನು ಹಾಗೂ ಚೇರಂಬಾಣೆಯ ಸಿಆರ್‍ಪಿಬಿ ಚಂದ್ರಿಕಾ ದ್ವಿತೀಯ ಸ್ಥಾನವನ್ನು ಗಳಿಸಿದರು. :: ಸಭಾ ಕಾರ್ಯಕ್ರಮ :: ಶಿಕ್ಷಕರ ಸಹಪಠ್ಯ ಸ್ಪರ್ಧಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಸಮೂಹ ಸಂಪನ್ಮೂಲ ಕೇಂದ್ರದ ಸಮನ್ವಯ ಅಧಿಕಾರಿ ಶರ್ಮಿಳಾ ವಿದ್ಯಾರ್ಥಿಗಳ ಪ್ರತಿಭೆ ಪ್ರದರ್ಶನಕ್ಕೆ ಶೈಕ್ಷಣಿಕ ವರ್ಷದಲ್ಲಿ ವಿವಿಧ ಚಟುವಟಿಕೆಗಳನ್ನು ಆಯೋಜಿಸಲಾಗುತ್ತಿದೆ. ಅಂತೆಯೇ ಶಿಕ್ಷಕರು ಸಹ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಲು ಶಿಕ್ಷಕರ ಕಲ್ಯಾಣ ನಿಧಿ ವತಿಯಿಂದ ವಿವಿಧ ಸಹಪಠ್ಯ ಚಟುವಟಿಕೆಗಳನ್ನು ಆಯೋಜಿಸಲಾಗುತ್ತಿದೆ ಎಂದರು. ವಿವಿಧ ಶಾಲೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಶಿಕ್ಷಕರು ಸ್ಪರ್ಧೆಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು. ಸಿಕ್ಕ ಅವಕಾಶಗಳನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದರು. ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಮೋಹನ್ ಪೆರಾಜೆ ಮಾತನಾಡಿ, ಶಿಕ್ಷಕರ ಕಲ್ಯಾಣ ನಿಧಿ ಶಿಕ್ಷಕರ ಪ್ರತಿಭೆಗಳನ್ನು ಗುರುತಿಸಲು ದೊಡ್ಡ ಮಟ್ಟದ ಕಾರ್ಯಕ್ರಮ ಆಯೋಜಿಸುತ್ತಿದೆ. ಆದರೆ ಸಹಪಠ್ಯ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವ ಶಿಕ್ಷಕರ ಸಂಖ್ಯೆ ಇಳಿಮುಖಗೊಳ್ಳುತ್ತಿದೆ, ಶಾಲಾ ಜಂಜಾಟದಿಂದ ಹೊರಬಂದು ಶಿಕ್ಷಕರು ತಮ್ಮ ಪ್ರತಿಭೆಗಳನ್ನು ಅನಾವರಣಗೊಳಿಸಲು ಇದೊಂದು ಉತ್ತಮ ವೇದಿಕೆಯಾಗಿದೆ ಎಂದರು.ಎಲೆಮರೆಯ ಕಾಯಿಯಂತೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಶಿಕ್ಷಕರು ನಮ್ಮನಡುವೆ ಇದ್ದಾರೆ. ಅಂತಹ ಪ್ರತಿಭಾವಂತ ಶಿಕ್ಷಕರನ್ನು ಶಿಕ್ಷಕರ ದಿನಾಚರಣೆ ಸಂದರ್ಭದಲ್ಲಿ ಗೌರವಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಡಿವೈಪಿಸಿ ಕೃಷ್ಣಪ್ಪ ಮಾತನಾಡಿ, ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಇಸಿಒ ಜಾನೆಟ್ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಆಶುಭಾಷಣ, ಪ್ರಬಂಧ ,ಸಾಮಾನ್ಯ ಜ್ಞಾನದ ರಸಪ್ರಶ್ನೆ, ವಿಜ್ಞಾನ ರಸಪ್ರಶ್ನೆ ,ಚಿತ್ರಕಲೆ ಪಾಠೋಪಕರಣ ತಯಾರಿ ಸೇರಿದಂತೆ ವಿವಿಧ ಸ್ಪರ್ಧೆಗಳು ಜರುಗಿದವು. ತಾಲೂಕಿನ ಪ್ರಾಥಮಿಕ ಹಾಗೂ ಪ್ರೌಢಶಾಲೆಯ ವಿವಿಧ ಶಿಕ್ಷಕರು ಪಾಲ್ಗೊಂಡಿದ್ದರು. ವಿಜೇತ ಶಿಕ್ಷಕರಿಗೆ ಕ್ರಮವಾಗಿ ರೂ.1500, ರೂ.1000 ಮತ್ತು ರೂ.500 ನಗದು ಹಾಗೂ ಪ್ರಮಾಣ ಪತ್ರಗಳನ್ನು ವಿತರಿಸಲಾಯಿತು.

ವರದಿ : ದುಗ್ಗಳ ಸದಾನಂದ. 

 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಆನೆ-ಮಾನವ ಸಂಘರ್ಷ ಶಾಶ್ವತ ಪರಿಹಾಕ್ಕೆ ಪ್ರಾಮಾಣಿಕ ಯತ್ನ : ಮಡಿಕೇರಿ 7, ನಾಗರಹೊಳೆ ವಿಭಾಗಕ್ಕೆ 20 ಕಿ.ಮೀ. ರೈಲ್ವೆ ಬ್ಯಾರಿಕೇಡ್ ಮಂಜೂರು : ಸಚಿವ ಈಶ್ವರ ಖಂಡ್ರೆ*

ಮಾರ್ಚ್ 10, 2026

*ಅರಣ್ಯ ಸಚಿವರು ತುರ್ತು ಸಭೆ ನಡೆಸಿ ಕಾಡಾನೆ ದಾಳಿ ನಿಯಂತ್ರಿಸದಿದ್ದಲ್ಲಿ ಪ್ರತಿಭಟನೆ : ಮಹಿಳಾ ಬಿಜೆಪಿ ಎಚ್ಚರಿಕೆ*

ಮಾರ್ಚ್ 10, 2026

*ಕರ್ನಾಟಕ ಸುವರ್ಣ ಸಮುಚ್ಚಯ ಭವನದ ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಸೂಚನೆ*

ಮಾರ್ಚ್ 10, 2026

*ಅರಣ್ಯ ಸಚಿವರು ತುರ್ತು ಸಭೆ ನಡೆಸಿ ಕಾಡಾನೆ ದಾಳಿ ನಿಯಂತ್ರಿಸದಿದ್ದಲ್ಲಿ ಪ್ರತಿಭಟನೆ : ಮಹಿಳಾ ಬಿಜೆಪಿ ಎಚ್ಚರಿಕೆ*

ಮಾರ್ಚ್ 10, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ NEWS DESK ಮಾ.10 : ಕೊಡಗು ಜಿಲ್ಲೆಯಲ್ಲಿ ನಿರಂತರ ಕಾಡಾನೆ ದಾಳಿಯಿಂದ ಅಮಾಯಕ ಜೀವಗಳು ಬಲಿಯಾಗುತ್ತಿರುವುದರಿಂದ ಅರಣ್ಯ ಸಚಿವರು…

*ಕರ್ನಾಟಕ ಸುವರ್ಣ ಸಮುಚ್ಚಯ ಭವನದ ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಸೂಚನೆ*

ಮಾರ್ಚ್ 10, 2026

*ಮಾಯಮುಡಿ ಗ್ರಾ.ಪಂ ಆಡಳಿತಾಧಿಕಾರಿಯಾಗಿ ಪಿ.ಪಿ.ಕವಿತಾ ಅಧಿಕಾರ ಸ್ವೀಕಾರ*

ಮಾರ್ಚ್ 10, 2026

*ಜವಾಬ್ದಾರಿ ನಿಭಾಯಿಸಲು ಸಾಧ್ಯವಾಗದಿದ್ದಲ್ಲಿ ಅರಣ್ಯ ಸಚಿವರು ರಾಜೀನಾಮೆ ನೀಡಲಿ : ವಿರಾಜಪೇಟೆ ಬಿಜೆಪಿ ಒತ್ತಾಯ*

ಮಾರ್ಚ್ 10, 2026

*ಪರಿಹಾರಕ್ಕಿಂತಲೂ ಅಮೂಲ್ಯವಾದದ್ದು ಮನುಷ್ಯನ ಜೀವ : ಕಾಡಾನೆ ಸೆರೆಗೆ ಶಾಸಕರ ಸೂಚನೆ*

ಮಾರ್ಚ್ 10, 2026

*ಹಮ್ಮಿಯಾಲದಲ್ಲಿ ಸಾರಿಗೆ ಸಮಸ್ಯೆ : ಗ್ರಾಮಸ್ಥರ ಮನವಿಗೆ ಸ್ಪಂದಿಸಿದ ಶಾಸಕ ಡಾ.ಮಂತರ್ ಗೌಡ*

ಮಾರ್ಚ್ 10, 2026

*ಕೆಎಸ್‌ಐಸಿ ಆವರಣದಲ್ಲಿ ಸ್ಡೇಡಿಯಂ ನಿರ್ಮಾಣ ಯೋಜನೆಗೆ ತಿಲಾಂಜಲಿ : ಸಂಘಟಿತ ಹೋರಾಟಕ್ಕೆ ಸಂದ ಜಯ : ಧನ್ಯವಾದ ಸಲ್ಲಿಸಿದ ಸಂಸದ ಯದುವೀರ್‌ ಒಡೆಯರ್‌*

ಮಾರ್ಚ್ 9, 2026

*ಮಡಿಕೇರಿ : ಮಾ.11 ರಂದು ನಗರಸಭೆಯ ಆಯವ್ಯಯ ಸಭೆ*

ಮಾರ್ಚ್ 9, 2026

*ಮಾ.12ರ ಹೋರಾಟಕ್ಕೆ ಸಿಪಿಐಎಂ ಪಕ್ಷದ ವಿರಾಜಪೇಟೆ ಘಟಕ ಬೆಂಬಲ : ಕೆ.ಎಸ್ ರಮೇಶ್*

ಮಾರ್ಚ್ 9, 2026

*ಕ.ಸಾ.ಪ ದತ್ತಿ ಕಾರ್ಯಕ್ರಮ : ಕೊಡಗಿನ ಸಂಸ್ಕೃತಿಯ ಮೂಲ ಸ್ವರೂಪ ಪ್ರಕೃತಿ ಆರಾಧನೆ : ಮಧೋಶ್ ಪೂವಯ್ಯ*

ಮಾರ್ಚ್ 9, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.