Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*
  • *ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*
  • *ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*
  • *ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*
  • *ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*
  • *ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*
  • *2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*
  • *ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*
  • *ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*
  • *ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಸಹಕಾರ ಸಂಘಗಳ ಪರಿಣಾಮಕಾರಿ ಆಡಳಿತ ನಿರ್ವಹಣೆ ಕುರಿತು ತರಬೇತಿ : ಗ್ರಾಮೀಣ ಅಭಿವೃದ್ಧಿಗೆ ಸಹಕಾರ ಸಂಘಗಳ ಕೊಡುಗೆ ಅಪಾರ : ಬಾಂಡ್ ಗಣಪತಿ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಸಹಕಾರ ಸಂಘಗಳ ಪರಿಣಾಮಕಾರಿ ಆಡಳಿತ ನಿರ್ವಹಣೆ ಕುರಿತು ತರಬೇತಿ : ಗ್ರಾಮೀಣ ಅಭಿವೃದ್ಧಿಗೆ ಸಹಕಾರ ಸಂಘಗಳ ಕೊಡುಗೆ ಅಪಾರ : ಬಾಂಡ್ ಗಣಪತಿ*

ಡಿಸೆಂಬರ್ 12, 20253 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಡಿ.12 NEWS DESK : ಗ್ರಾಮೀಣ ಅಭಿವೃದ್ಧಿಯಲ್ಲಿ ಸಹಕಾರ ಸಂಘಗಳ ಪಾತ್ರ ಹೆಚ್ಚಿನದ್ದಾಗಿದ್ದು, ಆ ನಿಟ್ಟಿನಲ್ಲಿ ಸಹಕಾರ ಸಂಘಗಳ ಬಲವರ್ಧನೆಗೆ ಮತ್ತಷ್ಟು ಪ್ರಯತ್ನಗಳು ನಡೆಯಬೇಕು ಎಂದು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‍ನ ಅಧ್ಯಕ್ಷರಾದ ಕೊಡಂದೇರ ಬಾಂಡ್ ಗಣಪತಿ ಅವರು ತಿಳಿಸಿದ್ದಾರೆ. ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳಲ್ಲಿ ನೂತನವಾಗಿ ಆಯ್ಕೆಯಾಗಿರುವ ನಿರ್ದೇಶಕರಿಗೆ ನಗರದ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‍ನ ‘ಉನ್ನತಿ’ ಭವನದ ಸಭಾಂಗಣದಲ್ಲಿ ‘ಸಹಕಾರ ಸಂಘಗಳ ಆಡಳಿತ ಪರಿಣಾಮಕಾರಿ ನಿರ್ವಹಣೆ’ ಸಂಬಂಧ ಒಂದು ವಾರಗಳ ಕಾಲ ನಡೆದ ತರಬೇತಿ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳಲ್ಲಿ ಗುಣಾತ್ಮಕ ಆಡಳಿತ ನಿರ್ವಹಣೆ ಅಗತ್ಯ. ಆ ನಿಟ್ಟಿನಲ್ಲಿ ತರಬೇತಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದರು. ಸಹಕಾರ ವ್ಯವಸ್ಥೆಯಲ್ಲಿ ಕಲಿಕೆಯು ನಿರಂತರವಾಗಿದ್ದು, ಸಾಲದ ಪ್ರಕ್ರಿಯೆ ಮತ್ತು ಮಾರ್ಗಸೂಚಿಗಳು ಕಾಲ ಕಾಲಕ್ಕೆ ಬದಲಾಗುತ್ತಾ ಹೋಗುತ್ತವೆ. ಆದ್ದರಿಂದ ಸಹಕಾರ ಕಾಯ್ದೆ ಮತ್ತು ತಿದ್ದುಪಡಿ ಬಗ್ಗೆ ಮನನ ಮಾಡಿಕೊಳ್ಳಬೇಕು ಎಂದು ಬಾಂಡ್ ಗಣಪತಿ ಅವರು ಸಲಹೆ ನೀಡಿದರು. ಸಹಕಾರ ಕಾಯ್ದೆಗಳು, ಕಾನೂನುಗಳನ್ನು ತಿಳಿದುಕೊಂಡಲ್ಲಿ ಸಹಕಾರ ಸಂಘಗಳನ್ನು ಇನ್ನಷ್ಟು ಉತ್ತಮ ಮಟ್ಟಕ್ಕೆ ಕೊಂಡೊಯ್ಯಲು ಸಹಕಾರಿಯಾಗಲಿದೆ. ಇದರಿಂದ ಕೃಷಿಕರಿಗೆ ಸಹಕಾರ ಸಂಘದ ಸೌಲಭ್ಯಗಳನ್ನು ಪರಿಣಾಮಕಾರಿಯಾಗಿ ತಲುಪಿಸಲು ಅನುಕೂಲವಾಗಲಿದೆ ಎಂದು ಅವರು ವಿವರಿಸಿದರು. ತರಬೇತಿ ಕಾರ್ಯಕ್ರಮದಲ್ಲಿ ಜಿಲ್ಲೆಯ 74 ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಿಂದ ಅಧ್ಯಕ್ಷರು ಮತ್ತು ಉಪಾಧ್ಯಕ್ಷರು ಒಳಗೊಂಡಂತೆ 518 ಜನ ನಿರ್ದೇಶಕರು ಪಾಲ್ಗೊಂಡಿರುವುದು ವಿಶೇಷವಾಗಿದೆ ಎಂದರು. ಕೊಡಗು ಜಿಲ್ಲೆಯ ಡಿಸಿಸಿ ಬ್ಯಾಂಕಿನ ನಿರಂತರ ಪ್ರಯತ್ನದಿಂದ ಸಹಕಾರ ಸಂಘಗಳಲ್ಲಿ ಷೇರಿನ ಮೊತ್ತವನ್ನು ಹೆಚ್ಚಿಸುವಲ್ಲಿ ಬೈಲಾ ತಿದ್ದುಪಡಿ ಮಾಡಲಾಗಿದೆ. ಇದು ಸಹಕಾರ ಸಂಘಗಳ ಬೆಳವಣಿಗೆಗೆ ಸಹಕಾರಿಯಾಗಲಿದೆ ಎಂದು ಬಾಂಡ್ ಗಣಪತಿ ಅವರು ಇದೇ ಸಂದರ್ಭದಲ್ಲಿ ತಿಳಿಸಿದರು. ‘ಸಹಕಾರ ಹೊಸ ಕಾಯ್ದೆಯನ್ನು ಜಾರಿಗೊಳಿಸಲು ಮುಂದಾಗಲಾಗಿದ್ದು, ಈ ಸಂಬಂಧ ನ್ಯಾಯಾಲಯದಲ್ಲಿ ಧಾವೆ ಹೂಡಲಾಗುತ್ತದೆ. ಈ ಸಂಬಂಧ ಇನ್ನೂ ಸಹ ಕಾನೂನು ಜಾರಿಯಾಗದಿರುವ ಹಿನ್ನೆಲೆ ಹೈಕೋರ್ಟ್‍ಗೆ ಧಾವೆ ಹೂಡಿಲ್ಲ ಎಂದು ಬಾಂಡ್ ಗಣಪತಿ ಅವರು ತಿಳಿಸಿದರು.’ ಸಹಕಾರ ಇಲಾಖೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶರವಣ ಕುಮಾರ್ ಅವರು ಮಾತನಾಡಿ ಸಹಕಾರ ಕ್ಷೇತ್ರದಲ್ಲಿ ಕೊಡಗು ಜಿಲ್ಲೆ ರಾಜ್ಯದಲ್ಲಿ ಮೂರನೇ ಸ್ಥಾನದಲ್ಲಿದ್ದು, ಸದೃಢವಾಗಿದೆ ಎಂದರು. ಕೊಡಗು ಜಿಲ್ಲೆಯಲ್ಲಿ ಸಹಕಾರ ಕ್ಷೇತ್ರದ ಹೊಸ ಹೊಸ ಕಲ್ಪನೆಗಳು ಆಧುನಿಕತೆಗೆ ಹೊಂದಿಕೊಂಡು ಕಾರ್ಯನಿರ್ವಹಿಸುತ್ತಿರುವುದು ಶ್ಲಾಘನೀಯ ಕಾರ್ಯವಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ತೊರೆನೂರು ಸಹಕಾರ ಸಂಘದ ನಿರ್ದೇಶಕರಾದ ಕೃಷ್ಣೇಗೌಡ ಅವರು ಮಾತನಾಡಿ ಸಹಕಾರ ಸಂಘಗಳಿಗೆ ಸಂಬಂಧಿಸಿದಂತೆ ನೂತನವಾಗಿ ಜಾರಿಗೊಳಿಸಲು ಉದ್ದೇಶಿಸಿರುವ ಕಾಯ್ದೆಯು ಕೃಷಿಕರಿಗೆ ಮರಣ ಶಾಸನವಾಗಿದೆ ಎಂದು ಅವರು ಅಭಿಪ್ರಾಯಪಟ್ಟರು. ಸಹಕಾರ ಸಂಘಗಳಿಗೆ ಸರ್ಕಾರದಿಂದ ಹಣಕಾಸಿನ ನೆರವು ನೀಡುವಂತಾಗಬೇಕು. ಯಾವುದೇ ಕಾರಣಕ್ಕೂ ಸಹಕಾರ ಸಂಘಗಳ ಮೇಲೆ ಗದಪ್ರಹಾರ ಮಾಡಬಾರದು ಎಂದು ಅವರು ಒತ್ತಿ ಹೇಳಿದರು. ಸಹಕಾರ ಸಂಘಗಳನ್ನು ಉಳಿಸಬೇಕು ಮತ್ತು ಬೆಳೆಸಬೇಕು. ಇವು ಕೃಷಿಕರಿಗೆ, ಗ್ರಾಮೀಣ ಪ್ರದೇಶದ ಜನರಿಗೆ ಅನುಕೂಲವಾಗಿದೆ ಎಂದು ಕೃಷ್ಣೇಗೌಡ ಅವರು ನುಡಿದರು. ಅಪೆಕ್ಸ್ ಬ್ಯಾಂಕಿನ ಕೃಷಿ ಸಹಕಾರಿ ಸಿಬ್ಬಂದಿ ತರಬೇತಿ ಸಂಸ್ಥೆಯ ಬೋಧಕರಾದ ಗುರುಸ್ವಾಮಿ ಅವರು ಮಾತನಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಕಾರ್ಯನಿರ್ವಹಣೆಗೆ ಸಂಬಂಧಿಸಿದಂತೆ ಅನ್ವಯವಾಗುವ ಸಹಕಾರ ಕಾಯ್ದೆ 1959 ಮತ್ತು ನಿಯಮಗಳು 1960 ಹಾಗೂ ಸಹಕಾರ ಕಾಯ್ದೆ ಮತ್ತು ನಿಯಮಗಳಲ್ಲಾದ ಇತ್ತೀಚಿನ ಬದಲಾವಣೆಗಳು ವಿಷಯದ ಬಗ್ಗೆ ವಿವರಿಸಿದರು. ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ನಡೆಸಬಹುದಾದ ವಿವಿಧ ಪ್ರಕಾರದ ಸಭೆಗಳು ಮತ್ತು ಕಾರ್ಯವಿಧಾನ, ಸಾಮಾನ್ಯ ಸಭೆ, ವಿಶೇಷ ಸಾಮಾನ್ಯ ಸಭೆ, ಆಡಳಿತ ಮಂಡಳಿ ಸಭೆ ಮತ್ತಿತರ ಕುರಿತು ಮಾಹಿತಿ ನೀಡಿದರು. ಬೋಧಕರಾದ ಆದಪ್ಪ ಅವರು ಮಾತನಾಡಿ, ಉತ್ತಮ ಗುಣಾತ್ಮಕ ಆಡಳಿತ ನಿರ್ವಹಣೆಯ ಸೂತ್ರಗಳು ಹಾಗೂ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ವ್ಯಾಪಾರ ಅಭಿವೃದ್ಧಿಯಲ್ಲಿ ಹಾಗೂ ಬೆಳವಣಿಗೆಯಲ್ಲಿ ನಿರ್ದೇಶಕರ ಪಾತ್ರ ಮತ್ತು ಹೊಣೆಗಾರಿಕೆಗಳು ವಿಷಯದ ಬಗ್ಗೆ ಮಾಹಿತಿ ನೀಡಿದರು. ಬ್ಯಾಂಕಿನ ವೃತ್ತಿಪರ ನಿರ್ದೇಶಕರು ಹಾಗೂ ಶಾಸನ ಬದ್ಧ ಲೆಕ್ಕಪರಿಶೋಧಕರಾದ ಎ.ಗೋಪಾಲಕೃಷ್ಣ ಅವರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಶಾಸನ ಬದ್ಧ ಲೆಕ್ಕ ಪರಿಶೋಧನೆಯಲ್ಲಿ ನಿರ್ದೇಶಕರ ಪಾತ್ರ ಹಾಗೂ ಜಿಎಸ್‍ಟಿ, ಟಿಡಿಎಸ್. ಆದಾಯ ತೆರಿಗೆ ಇತ್ಯಾದಿ ವಿಷಯಗಳ ಬಗ್ಗೆ ವಿವರ ನೀಡಿದರು. ಕಡಂಗ ಸಹಕಾರ ಸಂಘದ ನಿರ್ದೇಶಕರಾದ ಕೆ.ಎಂ.ತಮ್ಮಯ್ಯ ಅವರು ಮಾತನಾಡಿ, ಸಹಕಾರ ಸಂಘಗಳ ಬೆಳವಣಿಗೆಯಲ್ಲಿ ಸಹಕಾರಿಗಳ ಪಾತ್ರ ಕುರಿತು ಗಮನ ಸೆಳೆದರು. ತರಬೇತಿಯಲ್ಲಿ ಭಾಗವಹಿಸಿದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಎಲ್ಲಾ ನಿರ್ದೇಶಕರಿಗೆ ಬ್ಯಾಂಕಿನ ವತಿಯಿಂದ ತರಬೇತಿ ಪ್ರಮಾಣ ಪತ್ರವನ್ನು ನೀಡಲಾಯಿತು. ಡಿಸಿಸಿ ಬ್ಯಾಂಕಿನ ಉಪಾಧ್ಯಕ್ಷರಾದ ಕೇಟೋಳಿರ ಎಸ್.ಪೂವಯ್ಯ, ನಿರ್ದೇಶಕರಾದ ಪೂಳಂಡ ಪಿ.ಪೆಮ್ಮಯ್ಯ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹೆಚ್.ಡಿ.ರವಿಕುಮಾರ್, ಡಿಸಿಸಿ ಬ್ಯಾಂಕಿನ ಪ್ರಧಾನ ವ್ಯವಸ್ಥಾಪಕರಾದ ಭೋಜಮ್ಮ, ಇತರರು ಇದ್ದರು.

Follow us Follow us
Share. WhatsApp Facebook Twitter Email Telegram Copy Link

Related Posts

*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಸೆ.26: ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್…

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*

ಸೆಪ್ಟೆಂಬರ್ 26, 2026

*ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*

ಸೆಪ್ಟೆಂಬರ್ 26, 2026

*ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*

ಸೆಪ್ಟೆಂಬರ್ 26, 2026

*2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*

ಸೆಪ್ಟೆಂಬರ್ 26, 2026

*ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*

ಸೆಪ್ಟೆಂಬರ್ 26, 2026

*ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*

ಸೆಪ್ಟೆಂಬರ್ 26, 2026

*ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*

ಸೆಪ್ಟೆಂಬರ್ 26, 2026

*36 ವರ್ಷ ಸೇವೆ ಸಲ್ಲಿಸಿದ ಅಂಗನವಾಡಿ ಕಾರ್ಯಕರ್ತೆ ದೇವಮಾಜಿ, ಶಿಕ್ಷಕಿ ಭೋಜಮ್ಮಗೆ ಆತ್ಮೀಯ ಬೀಳ್ಕೊಡುಗೆ*

ಸೆಪ್ಟೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.