Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*
  • *ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*
  • *ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*
  • *ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*
  • *ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*
  • *ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*
  • *2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*
  • *ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*
  • *ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*
  • *ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಸುಂಟಿಕೊಪ್ಪ ನಾಡು ಪ್ರೌಢಶಾಲೆಯ 61ನೇ ವಾರ್ಷಿಕೋತ್ಸವ : ವಿದ್ಯೆಯಿಂದ ಮಾತ್ರ ಸಮಾಜದ ಸುಧಾರಣೆ : ಹರಪಳ್ಳಿ ಎನ್.ರವೀಂದ್ರ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಸುಂಟಿಕೊಪ್ಪ ನಾಡು ಪ್ರೌಢಶಾಲೆಯ 61ನೇ ವಾರ್ಷಿಕೋತ್ಸವ : ವಿದ್ಯೆಯಿಂದ ಮಾತ್ರ ಸಮಾಜದ ಸುಧಾರಣೆ : ಹರಪಳ್ಳಿ ಎನ್.ರವೀಂದ್ರ*

ಡಿಸೆಂಬರ್ 13, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಸುಂಟಿಕೊಪ್ಪ ಡಿ.13 NEWS DESK : ಪ್ರಪಂಚದಲ್ಲಿ ಒಬ್ಬರಿಂದ ಕಿತ್ತುಕೊಳ್ಳಲಾಗದ ಮತ್ತು ಅಪಹರಿಸಲಾಗದ ಸಂಪತ್ತು ಎಂದರೆ ಅದು ವಿದ್ಯೆ ಎಂದು ಸಮಾಜ ಸೇವಕ ಹರಪಳ್ಳಿ ಎನ್.ರವೀಂದ್ರ ಹೇಳಿದರು. ಕೊಡಗರಹಳ್ಳಿಯ ಸುಂಟಿಕೊಪ್ಪ ನಾಡು ಪ್ರೌಢಶಾಲೆಯ 61ನೇ ಶಾಲಾ ವಾರ್ಷಿಕೋತ್ಸವವನ್ನು ಉದ್ಘಾಟಿಸಿ ಮಾತನಾಡಿದ ಅವರು, ಹಳ್ಳಿಯಲ್ಲಿರುವ ಈ ಶಾಲೆ ಕನ್ನಡ ಮಾಧ್ಯಮದಾಗಿದ್ದು, ಪಠ್ಯ ಮತ್ತು ಪಠ್ಯೇತರ ಚಟುವಟಿಕೆಗಳಲ್ಲಿ ರಾಜ್ಯ ಮತ್ತು ರಾಷ್ಟ್ರಮಟ್ಟದ ಸಾಧನೆ ಮಾಡಿದೆ ಎಂದು ಪ್ರಶಂಸಿದರು. ಬದುಕಿನಲ್ಲಿ ನಾವು ಕೊಟ್ಟು ಹೋಗಬೇಕು ಇಲ್ಲಾವೇ ಬಿಟ್ಟು ಹೋಗಬೇಕು ಈ ತತ್ವಕ್ಕೆ ಅನುಸಾರವಾಗಿ ಬದುಕಬೇಕೆಂದು ಹೇಳಿದ ಅವರು, ಸ್ವಾಮಿ ವಿವೇಕಾನಂದರು ಹೇಳಿದ ಮನುಷ್ಯನಲ್ಲಿರುವ ಪರಿಪೂರ್ಣತೆಯನ್ನು ಪ್ರಕಾಶಗೊಳಿಸುವುದೇ ವಿದ್ಯೆ. ವಿದ್ಯೆಯಿಂದ ನಮ್ಮ ಬಾಳು ಮಾತ್ರವಲ್ಲ ಸಮಾಜವನ್ನು ಬೆಳಗುವಂತಾಗಬೇಕೆಂದು ಕಿವಿಮಾತು ಹೇಳಿದರು. ನಾವು ಏನೇ ಕಲಿತರು ಎಷ್ಟೇ ದೊಡ್ಡವರಾದರೂ ಸಮಾಜಕ್ಕಾಗಿ ಮತ್ತು ಪರಹಿತಕ್ಕಾಗಿ ನಮ್ಮನ್ನು ಸಮರ್ಪಸಿಕೊಳ್ಳುವುದು ನಮ್ಮ ವ್ಯಕ್ತಿತ್ವದ ಭಾಗವಾಗಬೇಕೆಂದು ಅವರು ಕರೆ ನೀಡಿದರು. ಶಾಲೆಯ ಮಕ್ಕಳಿಗೆ ಟ್ರ್ಯಾಕ್‍ಶೂಟ್ ಕೊಡುಗೆಯಾಗಿ ನೀಡಿ ಮಾತನಾಡಿದ ಕಾಫಿ ಬೆಳೆಗಾರ ಮತ್ತು ಸಮಾಜ ಸೇವಕ ಟಿ.ಕೆ.ಸಾಯಿಕುಮಾರ್ ಅವರು, ಸರಕಾರಿ ಶಾಲೆ ಮತ್ತು ಕನ್ನಡ ಮಾಧ್ಯಮ ಶಾಲೆ ಎಂಬ ಕಿಳಾರಿಮೆ ಬೇಕಾಗಿಲ್ಲ ಸುಂಟಿಕೊಪ್ಪ ನಾಡು ಪ್ರೌಢಶಾಲೆಯು ಈ ಸಮಾಜಕ್ಕೆ ಅತ್ಯುತ್ತಮ ನಾಗರೀಕರನ್ನು ಕೊಡುಗೆಯಾಗಿ ನೀಡಿದೆ. ಈ ಪರಂಪರೆ ಮುಂದುವರಿಯುತ್ತಿರುವುದು ಶಾಲಾ ವಾರ್ಷಿಕ ವರದಿಯಲ್ಲಿ ಕಂಡು ಬರುತ್ತಿದೆ. ಇದಕ್ಕೆ ಕಾರಣರಾದ ಶಾಲಾ ಶಿಕ್ಷಕ ವೃಂದ ಅವರಿಗೆ ಸಾಥ್ ನೀಡಿದ ವಿದ್ಯಾರ್ಥಿ ಮತ್ತು ಪೋಷಕ ವೃಂದಕ್ಕೆ ಅಭಿನಂದನೆಗಳನ್ನು ಸಲ್ಲಿಸುವುದಾಗಿ ಸಾಯಿಕುಮಾರ್ ನುಡಿದರು. ಶಾಲೆಗೆ ಮುಂಬರುವ ದಿನಗಳಲ್ಲಿ ಮತ್ತಷ್ಟು ಕೊಡುಗೆಗಳನ್ನು ನೀಡಲಿರುವುದಾಗಿ ಅವರು ಘೋಷಿಸಿದರು. ಕಾರ್ಯಕ್ರಮದಲ್ಲಿ ಸುಂಟಿಕೊಪ್ಪ ಸಂತ ಅಂತೋಣಿ ಹಿರಿಯ ಪ್ರಾಥಮಿಕ ಶಾಲೆಯ ರಾಜ್ಯ ಪ್ರಶಸ್ತಿ ಪುರಸ್ಕøತ ಮುಖ್ಯೋಪಾದ್ಯಾಯನಿ ಜೋವಿಟಾ ವಾಸ್ ಅವರನ್ನು ಸನ್ಮಾನಿಸಲಾಯಿತು. ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು ಅನುದಾನಿತ ಶಾಲೆ ಮತ್ತು ಕನ್ನಡ ಮಾಧ್ಯಮದಲ್ಲಿ ಕಲಿತವರು ಸಮಾಜದಲ್ಲಿ ಹಿಂದೆ ಬಿದ್ದಿಲ್ಲ ವಿದ್ಯೆ ಕಲಿಸಿದ ಗುರು ನಮ್ಮ ಹೀರೋ ಆಗಬೇಕೆಂದು ಕರೆ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಶಾಲಾಡಳಿತ ಮಂಡಳಿಯ ಗೌರವ ಕಾರ್ಯದರ್ಶಿ ಕೆ.ಎಸ್.ಮಂಜುನಾಥ್, ಸರಕಾರಿ ಅನುದಾನಿತ ಶಾಲೆಗಳಿಗೆ ಮಲತಾಯಿ ಧೋರಣೆ ಅನುಸರಿಸುತ್ತಿದ್ದು, ಶಾಲೆಗಳಲ್ಲಿ ವರ್ಗಾವಣೆಯಾದರೆ ಅಥವಾ ವಯೋಸಹಜ ನಿವೃತ್ತಿ ಹೊಂದಿದ್ದರೆ ಆ ಹುದ್ದೆಗಳಿಗೆ ಮರು ನೇಮಕಾತಿಗೊಳಿಸುವ ಪ್ರಕ್ರಿಯೆಯನ್ನು ಕೈ ಬಿಟ್ಟಿದೆ. ಶಿಕ್ಷಕರ ವೇತನ ಹೊರತು ಪಡಿಸಿ ಬೇರೆ ಯಾವುದೇ ಅನುದಾನವನ್ನು ನೀಡುತ್ತಿಲ್ಲ. ಶಾಲಾ ಆಡಳಿತ ಮಂಡಳಿಯು 8 ಮತ್ತು 9ನೇ ತರಗತಿಯ ವಿದ್ಯಾರ್ಥಿಗಳ ವಾರ್ಷಿಕ ಶಾಲಾ ಶುಲ್ಕವನ್ನು ಪಾವತಿಸಿದ್ದು, ಶಿಕ್ಷಕ ವೃಂದದವರು ಶಾಲಾ ವಿದ್ಯಾರ್ಥಿಗಳಿಗೆ ಸಮವಸ್ತ್ರಗಳನ್ನು ಪ್ರಾಯೋಜಿಸಿದ್ದಾರೆಂದು ಅವರು ಹೇಳಿದರು. ಈ ಕುರಿತು ಸಮಾಜದ ಗಣ್ಯರು ಸಮಾಜ ಸೇವಕರು ಅನುದಾನಿತ ಶಾಲೆಗಳನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ನಮ್ಮ ಸಮಸ್ಯೆಗಳನ್ನು ಸರಕಾರದ ತರುವಂತಗಾಬೇಕೆಂದು ಅವರು ಮನವಿ ಮಾಡಿದರು. ಕಾರ್ಯಕ್ರಮದಲ್ಲಿ ಪಠ್ಯ ಮತ್ತು ಪಠ್ಯೇತರ ಚಟುವಟಿಕೆಗಳಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಬಹುಮಾನವನ್ನು ವಿತರಿಸಲಾಯಿತು. ವೇದಿಕೆಯಲ್ಲಿ ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷ ಎಸ್.ಬಿ.ಶಂಕರ್, ಉಪಾಧ್ಯಕ್ಷ ಎಂ.ಎ.ಕುಟ್ಟಪ್ಪ, ಆಡಳಿತ ಮಂಡಳಿ ನಿರ್ದೇಶ ಎಂ.ಎಸ್.ಸುರೇಶ್ ಚಂಗಪ್ಪ, ಭಾರತೀಯ ಎಜುಕೇಷನ್ ಟ್ರಸ್ಟ್‍ನ ಕಾರ್ಯದರ್ಶಿ ಪಿ.ಎಂ.ರಂಜಿತ್ ಕಾರ್ಯಪ್ಪ, ಕಂಬಿಬಾಣೆ ಸರಕಾರಿ ಮಾದರಿ ಪ್ರಾಥಮಿಕ ಶಾಲೆಯ ಮುಖ್ಯೋಪಾದ್ಯಾಯನಿ ನಯನ,ಗಿರಿಧರ್ ಮತ್ತು ಧರ್ಮಪ್ಪ ಉಪಸ್ಥಿತರಿದ್ದರು. ಶಾಲಾ ಮುಖ್ಯೋಪಾದ್ಯಾಯನಿ ಕೆ.ಎ.ಇಂದಿರಾ ಸ್ವಾಗತಿಸಿ, ಶಾಲಾ ವಾರ್ಷಿಕ ವರದಿಯನ್ನು ವಾಚಿಸಿದರು. ಶಾಲಾ ಶಿಕ್ಷಕ ಶಿವಪ್ಪ ಗುರ್ಕಿ ಕಾರ್ಯಕ್ರಮ ನಿರೂಪಿಸಿದಉ, ಶಾಲಾ ಶಿಕ್ಷಕಿ ಎಂ.ಎಸ್.ದಿನೇಶ್ ಬಹುಮಾನಿತರ ವಿವರವನ್ನು ನೀಡಿದರು. ಶಿಕ್ಷಕ ಅಡ್ಡಮನಿ ವಂದಿಸಿದರು. ನಂತರ ನಡೆದ ಮಕ್ಕಳ ಸಾಂಸ್ಕøತಿಕ ಕಾರ್ಯಕ್ರಮ ನೆರೆದವರ ಮನಸೂರೆಗೊಳಿಸಿತು.

Follow us Follow us
Share. WhatsApp Facebook Twitter Email Telegram Copy Link

Related Posts

*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಸೆ.26: ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್…

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*

ಸೆಪ್ಟೆಂಬರ್ 26, 2026

*ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*

ಸೆಪ್ಟೆಂಬರ್ 26, 2026

*ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*

ಸೆಪ್ಟೆಂಬರ್ 26, 2026

*2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*

ಸೆಪ್ಟೆಂಬರ್ 26, 2026

*ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*

ಸೆಪ್ಟೆಂಬರ್ 26, 2026

*ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*

ಸೆಪ್ಟೆಂಬರ್ 26, 2026

*ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*

ಸೆಪ್ಟೆಂಬರ್ 26, 2026

*36 ವರ್ಷ ಸೇವೆ ಸಲ್ಲಿಸಿದ ಅಂಗನವಾಡಿ ಕಾರ್ಯಕರ್ತೆ ದೇವಮಾಜಿ, ಶಿಕ್ಷಕಿ ಭೋಜಮ್ಮಗೆ ಆತ್ಮೀಯ ಬೀಳ್ಕೊಡುಗೆ*

ಸೆಪ್ಟೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.