Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*
  • *ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*
  • *ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*
  • *ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*
  • *ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*
  • *ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*
  • *2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*
  • *ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*
  • *ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*
  • *ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮಡಿಕೇರಿಯಲ್ಲಿ ಮಹಿಳಾ ಸರ್ವಧರ್ಮ ಸಮ್ಮೇಳನ : ಪರಸ್ಪರ ಗೌರವ, ಸಹಬಾಳ್ವೆಯ ಜೀವನ ನಡೆಸಲು ಗಣ್ಯರ ಕರೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮಡಿಕೇರಿಯಲ್ಲಿ ಮಹಿಳಾ ಸರ್ವಧರ್ಮ ಸಮ್ಮೇಳನ : ಪರಸ್ಪರ ಗೌರವ, ಸಹಬಾಳ್ವೆಯ ಜೀವನ ನಡೆಸಲು ಗಣ್ಯರ ಕರೆ*

ಡಿಸೆಂಬರ್ 15, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಡಿ.15 NEWS DESK : ಅಹ್ಮದಿಯಾ ಮುಸ್ಲಿಂ ಜಮಾತ್‍ನ ಮಹಿಳಾ ವಿಭಾಗದ ವತಿಯಿಂದ ನಗರದ ಬಾಲಭವನದಲ್ಲಿ “ಮಹಿಳಾ ಸರ್ವಧರ್ಮ ಸಮ್ಮೇಳನ” ನಡೆಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದ ನಗರಸಭೆ ಅಧ್ಯಕ್ಷೆ ಪಿ.ಕಲಾವತಿ, ಎಲ್ಲರ ದೇಹದಲ್ಲಿ ಹರಿಯುವ ರಕ್ತ ಒಂದೇ, ನಾವು ಎಲ್ಲರೂ ಶಾಂತಿಗಾಗಿ ಒಟ್ಟಾಗಿ ಸೇರಿ ಸಹಬಾಳ್ವೆ ನಡೆಸಬೇಕೆಂದು ಹೇಳಿದರು. ಲಜ್ನಾ ಇಮಾಇಲ್ಲಾಹ್ ಸದಸ್ಯರಾದ ಡಾ.ಅಫ್ರೀನ್ ಮೆಲ್ವಿನ್ ಮಾತನಾಡಿ ಬಹುಧರ್ಮೀಯ ಹಾಗೂ ಬಹುಸಾಂಸ್ಕೃತಿಕ ಸಮಾಜದಲ್ಲಿ ಜೀವಿಸುತ್ತಿರುವುದರಿಂದ ಪರಸ್ಪರ ಧರ್ಮಗಳ ಸಂಪ್ರದಾಯಗಳು ಮತ್ತು ನಂಬಿಕೆಗಳನ್ನು ತಿಳಿದುಕೊಳ್ಳಲು ಸಾಧ್ಯವಾಗುತ್ತದೆ ಎಂದರು. ಲಜ್ನಾ ಇಮಾಇಲ್ಲಾಹ್ ಸಂಸ್ಥೆಯ ಅಧ್ಯಕ್ಷೆ ಜೀನತ್ ಜಫ್ರುಲ್ಲಾ ಅವರು “ಇಸ್ಲಾಂನಲ್ಲಿ ಮಹಿಳೆಯ ಸ್ಥಾನಮಾನ” ವಿಷಯದ ಕುರಿತು ಮಾತನಾಡಿ, ಇಸ್ಲಾಂ ಮಹಿಳೆಯರಿಗೆ ಸಂಪೂರ್ಣ ಸ್ವಾತಂತ್ರ್ಯ, ಸಮಾನತೆ, ಘನತೆ, ಗೌರವ, ರಕ್ಷಣೆ ಹಾಗೂ ಸೂಕ್ತ ಸ್ಥಾನಮಾನವನ್ನು ನೀಡುತ್ತದೆ ಎಂದು ವಿವರಿಸಿದರು. ಶಿಕ್ಷಣ, ಉದ್ಯೋಗ, ಆರ್ಥಿಕ ಹಕ್ಕುಗಳು, ಭದ್ರತೆ ಹಾಗೂ ಸಂರಕ್ಷಣೆ, ವಿವಾಹ ಮತ್ತು ವಿಚ್ಛೇದನ ಸೇರಿದಂತೆ ಜೀವನದ ಎಲ್ಲಾ ವಲಯಗಳಲ್ಲಿ ಮಹಿಳೆಯರಿಗೆ ಹಕ್ಕುಗಳನ್ನು ನೀಡಿರುವುದನ್ನು ಹಲವಾರು ಉದಾಹರಣೆಗಳ ಮೂಲಕ ವಿವರಿಸಿದರು. ಮೀನುಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕಿ ಮಿಲನ ಕೆ.ಭರತ್ ಅವರು ಮಾತನಾಡಿ, ಧರ್ಮ ಎಂದರೆ ಕೇವಲ ಮಾತಿನಲ್ಲಿ ಉಳಿಯದೇ, ನಮ್ಮೊಳಗೆ ನೆಲೆಸಿದ್ದು, ದಿನನಿತ್ಯದ ಜೀವನದಲ್ಲಿ ಅಳವಡಿಸಿಕೊಳ್ಳಬೇಕಾದದ್ದು ಅಗತ್ಯ ಎಂದು ಹೇಳಿದರು. ಮಹಿಳೆಯರಲ್ಲಿ ಅಪಾರ ಶಕ್ತಿ ಇದೆ. ಸೌಹಾರ್ದತೆ, ಶಾಂತಿ ಮತ್ತು ಏಕತೆಯ ಉದ್ದೇಶದೊಂದಿಗೆ ಮಹಿಳೆಯರು ಒಟ್ಟಾಗಿ ಬಂದರೆ ಯಾವುದೇ ಸಾಧನೆಯನ್ನು ಮಾಡಬಹುದು ಎಂದು ಹೇಳಿದರು.
ಮಡಿಕೇರಿಯ ಸೈಂಟ್ ಮೈಕಲ್ ವಿದ್ಯಾಸಂಸ್ಥೆಯ ಮುಖ್ಯೋಪಾಧ್ಯಾಯಿನಿ ಸಿಸ್ಟರ್ ಸಿಸಿಲಿಯಾ ಅವರು ಮಾತನಾಡಿ, ಲೋಕದಲ್ಲಿ ಒಂದೇ ಒಂದು ಧರ್ಮವಿದ್ದು ಅದು ಮಾನವೀಯತೆಯ ಧರ್ಮ ಎಂದು ಹೇಳಿದರು. ಪ್ರೀತಿ, ಕ್ಷಮೆ, ತ್ಯಾಗ ಮತ್ತು ಸಹನಶೀಲತೆಯ ಮೂಲಕ ಶಾಂತಿಯ ಮೂಲಭೂತ ಮಾನವ ಸಂಬಂಧಗಳು ಗಟ್ಟಿಯಾಗುತ್ತವೆ ಎಂದು ಅಭಿಪ್ರಾಯಪಟ್ಟರು. ಲಜ್ನಾ ಇಮಾಇಲ್ಲಾಹ್ ದಕ್ಷಿಣ ವಲಯದ ಅಧ್ಯಕ್ಷ ರೂಮಾನ್ ರಿಝ್ವಾನ್ ಅವರು ಮಾತನಾಡಿ, ಇಸ್ಲಾಂ ಧರ್ಮ ಹಾಗೂ ಇತರ ಧರ್ಮಗಳೊಂದಿಗೆ ಪರಸ್ಪರ ಗೌರವ, ಸಹಬಾಳ್ವೆ ಮತ್ತು ಸಾಮರಸ್ಯದ ಅಗತ್ಯತೆಯನ್ನು ವಿವರಿಸಿದರು.
ಇಸ್ಲಾಂ ಎಂಬ ಪದದ ಅರ್ಥವೇ ಶಾಂತಿ, ಎಲ್ಲಾ ಧರ್ಮಗಳನ್ನು ಗೌರವಿಸುವುದು ಅತ್ಯಂತ ಮಹತ್ವದ್ದು ಎಂದು ಹೇಳಿದರು. ಸಂಘಟನೆಯ ಅಧ್ಯಕ್ಷರಾದ ಜೀನತ್ ಜಫ್ರುಲ್ಲಾ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಸರ್ವಧರ್ಮ ಸಮ್ಮೇಳನದಲ್ಲಿ ವಿವಿಧ ಧರ್ಮಗಳ ಪ್ರತಿನಿಧಿಗಳು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು. ಕಾರ್ಯಕ್ರಮವು ಪವಿತ್ರ ಕುರ್‍ಆನ್ ಪಾರಾಯಣದೊಂದಿಗೆ ಆರಂಭಗೊಂಡಿತು. “ಹಿಂದೂ, ಮುಸ್ಲಿಂ, ಕ್ರೈಸ್ತರೆಲ್ಲರೂ ಒಂದೇ, ನಮ್ಮ ದೇಹದಲ್ಲಿ ಹರಿಯುವ ರಕ್ತ ಒಂದೇ” ಎಂಬ ಸಂದೇಶ ಸಾರುವ ಮೈತ್ರಿಗಾನವನ್ನು ನಸೀರಾ ಹಾಡಿದರು. ಕಾರ್ಯಕ್ರಮದಲ್ಲಿ ಲಜ್ನಾ ಇಮಾಇಲ್ಲಾಹ್ ಸಂಸ್ಥೆಯು 100 ವರ್ಷಗಳ ಪೂರೈಸಿರುವ ವಿಶೇಷ ಸಾಕ್ಷ್ಯಚಿತ್ರವನ್ನು ಪ್ರದರ್ಶಿಸಲಾಯಿತು. ಇದರಲ್ಲಿ ಸಂಸ್ಥೆಯ ಇತಿಹಾಸ, ಉದ್ದೇಶಗಳು ಹಾಗೂ ಮಡಿಕೇರಿ ಶಾಖೆಯು ಸಮಾಜದ ಮಾನವ ಕಲ್ಯಾಣಕ್ಕಾಗಿ ನಡೆಸುತ್ತಿರುವ ವಿವಿಧ ಸೇವಾ ಕಾರ್ಯಗಳ ದೃಶ್ಯಾವಳಿಗಳನ್ನು ಪ್ರದರ್ಶಿಸಲಾಯಿತು. ಕಾರ್ಯಕ್ರಮದ ಅಂಗವಾಗಿ ಸಮೂಹಗಾನವನ್ನು ನಾದಿಯಾ, ಆರಿಫಾ ಮತ್ತು ಆತಿಫಾ ಹಾಡಿದರು. ಇದೇ ಸಂದರ್ಭ ಎಲ್ಲಾ ಗಣ್ಯರನ್ನು ಸನ್ಮಾನಿಸಲಾಯಿತು. ಸಾಲಿಹಾ ಬಾಸಿತಾ ಕಾರ್ಯಕ್ರಮವನ್ನು ನಿರೂಪಿಸಿದರು. ಫಿದಾ ಅನ್ವರ್ ಕುರ್‍ಆನ್ ಪಾರಾಯಣ ಹಾಗೂ ಅರ್ಥವಾಚನ ಮಾಡಿದರು. ಝರೀನಾ ಮುಜೀಬ್ ಸ್ವಾಗತಿಸಿದರು. ಮುಬಶಿರ್ ಆಯೂಬ್ ವಂದಿಸಿದರು.

 

Follow us Follow us
Share. WhatsApp Facebook Twitter Email Telegram Copy Link

Related Posts

*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಸೆ.26: ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್…

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*

ಸೆಪ್ಟೆಂಬರ್ 26, 2026

*ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*

ಸೆಪ್ಟೆಂಬರ್ 26, 2026

*ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*

ಸೆಪ್ಟೆಂಬರ್ 26, 2026

*2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*

ಸೆಪ್ಟೆಂಬರ್ 26, 2026

*ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*

ಸೆಪ್ಟೆಂಬರ್ 26, 2026

*ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*

ಸೆಪ್ಟೆಂಬರ್ 26, 2026

*ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*

ಸೆಪ್ಟೆಂಬರ್ 26, 2026

*36 ವರ್ಷ ಸೇವೆ ಸಲ್ಲಿಸಿದ ಅಂಗನವಾಡಿ ಕಾರ್ಯಕರ್ತೆ ದೇವಮಾಜಿ, ಶಿಕ್ಷಕಿ ಭೋಜಮ್ಮಗೆ ಆತ್ಮೀಯ ಬೀಳ್ಕೊಡುಗೆ*

ಸೆಪ್ಟೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.