
ಮಡಿಕೇರಿ ಡಿ.16 NEWS DESK : ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ದಿ ನಿಗಮ ವತಿಯಿಂದ 2025 -26 ನೇ ಸಾಲಿನ ಮತೀಯ ಅಲ್ಪಸಂಖ್ಯಾತರಾದ ಕ್ರಿಶ್ಚಿಯನ್ ಜನಾಂಗದವರಿಗೆ ಶ್ರಮ ಶಕ್ತಿ ಯೋಜನೆ, ವೃತ್ತಿ ಪ್ರೋತ್ಸಾಹ ಯೋಜನೆಗೆ ಸಾಲ ಮತ್ತು ಸಹಾಯಧನ ಹಾಗೂ ವ್ಯಾಪಾರ ಮತ್ತು ಉದ್ಯಮಗಳಿಗೆ ನೇರ ಸಾಲ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆ, ವಿದೇಶಿ ವಿದ್ಯಾಭ್ಯಾಸ ಸಾಲ ಯೋಜನೆ, ಸಾಂತ್ವನ ಯೋಜನೆ ಹಾಗೂ ಮಹಿಳಾ ಸ್ವ ಸಹಾಯ ಸಂಘ ಗುಂಪುಗಳಿಗೆ ಸಹಾಯಧನವನ್ನು ನೀಡಲಾಗುತ್ತದೆ. ಸಾಲ ಹಾಗೂ ಸಹಾಯಧನವನ್ನು ಪಡೆಯಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ವೆಬ್‍ಸೈಟ್ https://kccdclonline.karnataka.gov.in/ ಮೂಲಕ ಆನ್‍ಲೈನ್ ಅರ್ಜಿ ಸಲ್ಲಸಬಹುದು. ಹೆಚ್ಚಿನ ಮಾಹಿತಿ ಪಡೆಯಲು ಜಿಲ್ಲಾ ವ್ಯವಸ್ಥಾಪಕರ ಕಚೇರಿ, ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ದಿ ನಿಗಮ, ಮೌಲಾನಾ ಅಜಾದ್ ಭವನ, ಗ್ರಾಮಾಂತರ ಪೊಲೀಸ್ ಠಾಣೆ ಹತ್ತಿರ, ಎಫ್.ಎಂ.ಸಿ ಕಾಲೇಜು ರಸ್ತೆ, ಮಡಿಕೇರಿ ಇಲ್ಲಿಗೆ ಭೇಟಿ ನೀಡಬಹುದು. ಆನ್‍ಲೈನ್ ಅರ್ಜಿ ಸಲ್ಲಸಲು ಡಿಸೆಂಬರ್, 20 ರಂದು ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ-08272-201449,8277944222, ಜಿಲ್ಲಾ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ 9972799091, 9900731037, 8548068519 ನ್ನು ಸಂಪರ್ಕಿಸಬಹುದು ಎಂದು ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.








