Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*
  • *ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*
  • *ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*
  • *ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*
  • *ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*
  • *ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*
  • *2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*
  • *ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*
  • *ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*
  • *ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕರ್ನಾಟಕ ಭೂ ಕಂದಾಯ ತಿದ್ದುಪಡಿ ವಿಧೇಯಕ ಮಂಡನೆ : ಕೊಡಗಿನ ಜಮ್ಮಾ ಬಾಣೆ ಸಮಸ್ಯೆ ಇತ್ಯರ್ಥಕ್ಕೆ ಪೂರಕ : ಶಾಸಕ ಎ.ಎಸ್.ಪೊನ್ನಣ್ಣ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕರ್ನಾಟಕ ಭೂ ಕಂದಾಯ ತಿದ್ದುಪಡಿ ವಿಧೇಯಕ ಮಂಡನೆ : ಕೊಡಗಿನ ಜಮ್ಮಾ ಬಾಣೆ ಸಮಸ್ಯೆ ಇತ್ಯರ್ಥಕ್ಕೆ ಪೂರಕ : ಶಾಸಕ ಎ.ಎಸ್.ಪೊನ್ನಣ್ಣ

ಡಿಸೆಂಬರ್ 16, 20251 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಬೆಳಗಾವಿ ಡಿ.16 NEWS DESK : ಕೊಡಗು ಜಿಲ್ಲೆಯ ಬಹುಕಾಲದ ಬೇಡಿಕೆಯಾದ ಪಟ್ಟೆದಾರರ ಹೆಸರನ್ನು ಪಹಣಿಯಲ್ಲಿ ನಮೂದಿಸಿರುವ ಸಮಸ್ಯೆಗೆ ಕರ್ನಾಟಕ ಭೂ ಕಂದಾಯ ತಿದ್ದುಪಡಿ ವಿಧೇಯಕವು ಪರಿಹಾರವಾಗಲಿದೆ ಎಂದು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ತಿಳಿಸಿದರು. 2025ನೇ ಸಾಲಿನ ಕರ್ನಾಟಕ ಭೂ ಕಂದಾಯ ತಿದ್ದುಪಡಿ ವಿಧೇಯಕವನ್ನು ಪರಿಶೀಲನಾ ಸಮಿತಿ ಶಿಫಾರಸು ಮಾಡಿದಂತೆ, ಬೆಳಗಾವಿಯ ಅಧಿವೇಶನದಲ್ಲಿ ಕಂದಾಯ ಸಚಿವರಾದ ಕೃಷ್ಣ ಭೈರೇಗೌಡ ಅವರು ಮಂಡಿಸಿದರು. ಈ ಸಂದರ್ಭ ಮಾತನಾಡಿದ ಶಾಸಕ ಎ.ಎಸ್.ಪೊನ್ನಣ್ಣ ವಿಧೇಯಕವನ್ನು ಸ್ವಾಗತಿಸುವುದಾಗಿ ಹೇಳಿದರು, ಕೊಡಗಿನ ಬಹಳಷ್ಟು ವರ್ಷಗಳ ಅತ್ಯಂತ ಜಟಿಲವಾದ ಸಮಸ್ಯೆ ಇದರಿಂದ ಪರಿಹಾರವಾಗಲಿದೆ ಎಂದು ಬಣ್ಣಿಸಿದರು. ಕಂದಾಯ ಸಚಿವರ ಇಚ್ಚಾ ಶಕ್ತಿ ಹಾಗೂ ಕಾಳಜಿಯಿಂದ ಈ ಕಾಯ್ದೆ ಜಾರಿಯಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸುತ್ತಾ, ಕೊಡಗಿನ ಜನತೆಯ ಪರವಾಗಿ ಸಚಿವರಿಗೆ ಹಾಗೂ ಪರಿಶೀಲನಾ ಸಮಿತಿಯ ಎಲ್ಲಾ ಸದಸ್ಯರಿಗೆ ಅಭಿನಂದನೆಗಳನ್ನು ಸಲ್ಲಿಸಿದರಲ್ಲದೆ, ಈ ಕಾಯ್ದೆಯನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಬೇಕು ಎಂದು ಹೇಳಿದರು. ಪರಿಶೀಲನಾ ಸಮಿತಿ ಸಭೆಯಲ್ಲಿ ಪರಿಶೀಲನೆಯಾಗಿ ಪೊನ್ನಣ್ಣನವರ ಶ್ರಮದಿಂದ ಈ ತಿದ್ದುಪಡಿ ಕಾಯ್ದೆ ಬಂದಿದೆ ಎಂದು ಆರ್ ಅಶೋಕ್ ಹೇಳಿದರು, ಹಾಗೆಯೇ ಪರಿಹಾರದ ಮಾರ್ಗೋಪಾಯಗಳನ್ನು ಕಾಯ್ದೆಯಲ್ಲಿ ತಿಳಿಸಬೇಕು ಎಂದರು. ಜಮ್ಮಬಾಣೆ ಬಹಳ ವರ್ಷದ ಸಮಸ್ಯೆಯಾಗಿದೆ, ಪೊನ್ನಣ್ಣ ಅವರ ಒತ್ತಡದ ಮೇಲೆ ಮತ್ತು ಕೊಡಗು ಜನರ ಒತ್ತಾಯದ ಮೇಲೆ ಮಾಡಿದ್ದೀರಿ, ನಾನು ಬಿಲ್ಲನ್ನು ಸ್ವಾಗತ ಮಾಡುತ್ತೇನೆ ಎಂದು ಅರಗ ಜ್ಞಾನೇಂದ್ರ ಹೇಳಿದರು. ಪರಿಶೀಲನಾ ಸಮಿತಿ ಸದಸ್ಯರಾದ ಅರವಿಂದ್ ಬೆಲ್ಲದ್ ಅವರು ಮಾತನಾಡಿ, ಕೊಡಗು ಜಿಲ್ಲೆಯ ಜನರ ತೊಂದರೆಯನ್ನು ಅನುಭವಿಸುತ್ತಿರುವುದನ್ನು ಕೂಲಂಕುಶವಾಗಿ ಸಮಿತಿ ಸಭೆಯಲ್ಲಿ ಚರ್ಚಿಸಿ ಉತ್ತಮವಾದ ಬದಲಾವಣೆಯನ್ನು ಈ ಬಿಲ್ ನಲ್ಲಿ ತೆಗೆದುಕೊಂಡು ಬಂದಿದ್ದಾರೆ. ಇದನ್ನು ಸ್ವಾಗತಿಸುತ್ತೇನೆ. ಕಾನೂನು ಉದ್ದೇಶ ಒಳ್ಳೆಯದಾಗಿರುತ್ತದೆ. ಪೊನ್ನಣ್ಣ ಅವರು ಹೇಳಿದಂತೆ ಕಾನೂನು ನಿಯಮಾವಳಿಗಳು ರೂಪಿಸುವ ಮೊದಲು ಪರಿಶೀಲನಾ ಸಮಿತಿ ಪರಿಶೀಲಿಸಿದ ನಂತರ ಜಾರಿಗೆ ಬಂದರೆ ಜನರಿಗೆ ಒಳ್ಳೆಯದಾಗುತ್ತದೆ ಎಂದರು.

 

Follow us Follow us
Share. WhatsApp Facebook Twitter Email Telegram Copy Link

Related Posts

*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಸೆ.26: ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್…

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*

ಸೆಪ್ಟೆಂಬರ್ 26, 2026

*ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*

ಸೆಪ್ಟೆಂಬರ್ 26, 2026

*ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*

ಸೆಪ್ಟೆಂಬರ್ 26, 2026

*2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*

ಸೆಪ್ಟೆಂಬರ್ 26, 2026

*ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*

ಸೆಪ್ಟೆಂಬರ್ 26, 2026

*ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*

ಸೆಪ್ಟೆಂಬರ್ 26, 2026

*ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*

ಸೆಪ್ಟೆಂಬರ್ 26, 2026

*36 ವರ್ಷ ಸೇವೆ ಸಲ್ಲಿಸಿದ ಅಂಗನವಾಡಿ ಕಾರ್ಯಕರ್ತೆ ದೇವಮಾಜಿ, ಶಿಕ್ಷಕಿ ಭೋಜಮ್ಮಗೆ ಆತ್ಮೀಯ ಬೀಳ್ಕೊಡುಗೆ*

ಸೆಪ್ಟೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.