Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಎಚ್1-ಎನ್1 : ಅಗತ್ಯ ಮುನ್ನೆಚ್ಚರಿಕೆ ವಹಿಸಲು ಸೂಚನೆ*
  • *ಅರೆಭಾಷೆಗೆ ಸಾಂಸ್ಕೃತಿಕ ನೆಲೆಗಟ್ಟು, ವ್ಯಾಕರಣದ ಶಿಸ್ತು ರೂಢಿಸಿದವರು ಕೋಡಿ ಕುಶಾಲಪ್ಪ ಗೌಡರು : ಸದಾನಂದ ಮಾವಜಿ*
  • *ಅಂತರ ಶಾಲಾ ಶಟಲ್ ಬ್ಯಾಡ್ಮಿಂಟನ್: ಶ್ರೀ ರಾಜರಾಜೇಶ್ವರಿ ಶಾಲೆ ವಿದ್ಯಾರ್ಥಿಗಳ ಸಾಧನೆ*
  • ಕೊಡಗಿನಲ್ಲಿ ಕರವೇ ಸ್ವಾಭಿಮಾನಿ ಸೇನೆಗೆ ನೂತನ ಸದಸ್ಯರ ಸೇರ್ಪಡೆ
  • *ತೀವ್ರಗೊಳಿಸಿದ ಐಇಸಿ ಅಭಿಯಾನ : ಮ್ಯಾರಥಾನ್ ಮೂಲಕ ಎಚ್‌ಐವಿ/ಏಡ್ಸ್ ಜಾಗೃತಿ*
  • *ಮಡಿಕೇರಿಯಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸಭೆ : ಸ್ವಾವಲಂಬಿ ಮಹಿಳಾ ಫಲಾನುಭವಿಗಳ ಗುರುತಿಸಿ ಸನ್ಮಾನಕ್ಕೆ ಕ್ರಮ*
  • *ಶಿಸ್ತುಬದ್ಧ ಶಿಕ್ಷಣದಿಂದಲೇ ಸಮಾಜದ ಯಶಸ್ಸು, ದೇಶದ ಪ್ರಗತಿ : ಶಾಸಕ ಎ.ಎಸ್.ಪೊನ್ನಣ್ಣ*
  • *ಫೀ.ಮಾ. ಕಾರ್ಯಪ್ಪ ಕಾಲೇಜಿನಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆ: ಶಿಸ್ತುಬದ್ಧ ಜೀವನವೇ ಸಾಧನೆಯ ದಾರಿದೀಪ: ಕರ್ನಲ್ ಸಂಜೀವ್ ಕುಮಾರ್*
  • *ಕೊಡಗು ವಿದ್ಯಾಲಯದಲ್ಲಿ ಬ್ರಹ್ಮಗಿರಿ ಸಹೋದಯ ಸಿಬಿಎಸ್ಇ ಶಾಲೆಗಳ ಸಾಂಸ್ಕೃತಿಕ ಸ್ಪರ್ಧೆ*
  • *ಮಡಿಕೇರಿ ನಗರಸಭೆ : ತ್ಯಾಜ್ಯ ನಿರ್ವಹಣೆಗೆ ವೈಜ್ಞಾನಿಕ ವಿಧಾನಕ್ಕೆ ಒತ್ತು : ಶಾಸಕ ಮಂತರ್ ಗೌಡ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕೊಡಗು : ಜನನ ಮತ್ತು ಮರಣ ನಾಗರಿಕ ನೋಂದಣಿ ನಿಖರವಾಗಿ ದಾಖಲಿಸಿ : ಜಿಲ್ಲಾಧಿಕಾರಿ ವೆಂಕಟ್ ರಾಜಾ ಸೂಚನೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕೊಡಗು : ಜನನ ಮತ್ತು ಮರಣ ನಾಗರಿಕ ನೋಂದಣಿ ನಿಖರವಾಗಿ ದಾಖಲಿಸಿ : ಜಿಲ್ಲಾಧಿಕಾರಿ ವೆಂಕಟ್ ರಾಜಾ ಸೂಚನೆ*

ಡಿಸೆಂಬರ್ 16, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಡಿ.16 NEWS DESK : ಜನನ ಮತ್ತು ಮರಣ ನಾಗರಿಕ ನೋಂದಣಿ ಪದ್ಧತಿಯನ್ನು ನಿಖರವಾಗಿ ದಾಖಲಿಸುವಂತೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಸೂಚಿಸಿದ್ದಾರೆ. ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ನಡೆದ ಜನನ ಮತ್ತು ಮರಣ ನಾಗರಿಕ ನೋಂದಣಿ ಪದ್ಧತಿಯ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ರಾಷ್ಟ್ರದ ನಾಗರಿಕ ನೋಂದಣಿ ಜನನ ಮತ್ತು ಮರಣ ಅಧಿನಿಯಮ 1960 ರನ್ವಯ ಕರ್ನಾಟಕ ಜನನ ಮತ್ತು ಮರಣ ನೋಂದಣಿ 1970 ಮತ್ತು ಪುನರ್ ರಚಿತ ಕರ್ನಾಟಕ ಜನನ ಮರಣ ನೋಂದಣಿ ಕಾಯ್ದೆ ನಿಯಮ 1990 ರ ರನ್ವಯ ಜನನ ಮತ್ತು ಮರಣ ನೋಂದಣಿ ಕಡ್ಡಾಯವಾಗಿದ್ದು, ಆ ನಿಟ್ಟಿನಲ್ಲಿ ಕಾಲ ಕಾಲಕ್ಕೆ ಈ ಕಾರ್ಯ ಆಗಬೇಕು ಎಂದು ಸ್ಪಷ್ಟ ನಿರ್ದೇಶನ ನೀಡಿದರು. ಪ್ರಸ್ತುತ ಜನನ ಮತ್ತು ಮರಣ ನೋಂದಣಿಯನ್ನು ಗ್ರಾಮೀಣ ಭಾಗದಲ್ಲಿ 2015 ರ ಏ.1 ರಿಂದ ಮತ್ತು ನಗರ ಸ್ಥಳೀಯ ಸಂಸ್ಥೆಗಳಲ್ಲಿ ಇ-ಜನ್ಮ ತಂತ್ರಾಂಶದ ಮೂಲಕ ಆನ್‍ಲೈನ್ ನೋಂದಣಿಯನ್ನು ನಿರ್ವಹಿಸಲಾಗುತ್ತಿದ್ದು, ಈ ಕಾರ್ಯದ ಪ್ರಗತಿಯನ್ನು ಸಾಧಿಸುವಂತೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಸೂಚಿಸಿದರು. ಜನನ ಮತ್ತು ಮರಣ ನೋಂದಣಿ ಸಂಬಂಧಿಸಿದಂತೆ ಆಯಾಯ ಕಾಲದಲ್ಲಿ ಪಡೆಯುವಂತಾಗಲು ಸಾರ್ವಜನಿಕರಲ್ಲಿ ಅರಿವು ಮೂಡಿಸಬೇಕು. ಜನನ ಮತ್ತು ಮರಣ ಪ್ರಮಾಣ ಪತ್ರವನ್ನು ಆಯಾಯ ಕಾಲದಲ್ಲಿಯೇ ಪಡೆದುಕೊಳ್ಳುವಂತಾಗಬೇಕು ಎಂದು ಸಲಹೆ ಮಾಡಿದರು. ಈಗಾಗಲೇ ಜನನ ಮತ್ತು ಮರಣ ನೋಂದಣಿಯನ್ನು ಗ್ರಾ.ಪಂ.ಕಾರ್ಯದರ್ಶಿಯವರನ್ನು ಉಪ ನೋಂದಣಾಧಿಕಾರಿಯಾಗಿ ನೇಮಿಸಲಾಗಿದೆ. ಆ ನಿಟ್ಟಿನಲ್ಲಿ ಗ್ರಾ.ಪಂ.ವ್ಯಾಪ್ತಿಯಲ್ಲಿ 30 ದಿನದೊಳಗೆ ಜನನ ಮತ್ತು ಮರಣ ನೋಂದಣಿ ಮಾಡಬೇಕು. 30 ದಿನದ ನಂತರ ಗ್ರಾಮ ಆಡಳಿತ ಅಧಿಕಾರಿಯನ್ನು ನೋಂದಣಿ ಅಧಿಕಾರಿಯಾಗಿ ನೇಮಿಸಲಾಗಿದ್ದು, ಈ ನೋಂದಣಿಯನ್ನು 30 ದಿನದೊಳಗೆ ಇ-ಜನ್ಮ ತಂತ್ರಾಂಶದಲ್ಲಿ ದಾಖಲು ಮಾಡಬೇಕು ಎಂದರು. ಈಗಾಗಲೇ ದತ್ತು ಮಕ್ಕಳ ಜನನ ಪ್ರಮಾಣ ಪತ್ರವನ್ನು 2022 ರ ಸೆಕ್ಷನ್ 40 ಮತ್ತು 48 ರಂತೆ ತಿದ್ದುಪಡಿ ಮಾಡಲಾಗಿದ್ದು, ಯಾವುದೇ ಏಜೆನ್ಸಿಗಳು ದತ್ತು ಮಕ್ಕಳನ್ನು ಪಡೆಯಲು ಅರ್ಜಿ ಸಲ್ಲಿಸಿ ನೋಂದಣಿ ಮಾಡಿಕೊಂಡು ಜನನ ಪ್ರಮಾಣ ಪತ್ರವನ್ನು ನಿಯಮಾನುಸಾರ ಪಡೆಯಬಹುದಾಗಿದೆ ಎಂದು ಜಿಲ್ಲಾಧಿಕಾರಿ ಅವರು ಹೇಳಿದರು. ಜನನ ಮತ್ತು ಮರಣ ನೋಂದಣಿ ವ್ಯವಸ್ಥೆಯಲ್ಲಿ ಸರಳೀಕರಣಗೊಳಿಸುವ ಮತ್ತು ನಾಗರಿಕ ಸ್ನೇಹಿ ಮಾಡುವಲ್ಲಿ ಮುಂದಾಗಲಾಗಿದ್ದು, ಎಲ್ಲಾ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಯಲ್ಲಿ ಜನಿಸುವ ಮಗುವಿನ ಜನನ ಪ್ರಮಾಣ ಪತ್ರವನ್ನು ಎರಡು ಮೂರು ದಿನದೊಳಗೆ ಪಡೆಯಬಹುದಾಗಿದೆ ಎಂದು ಹೇಳಿದರು. ಸ್ಥಳೀಯ ಸಂಸ್ಥೆ ವ್ಯಾಪ್ತಿಯಲ್ಲಿ ಆರೋಗ್ಯ ಅಧಿಕಾರಿಯವರು ನೋಂದಣಿ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸಲಿದ್ದಾರೆ ಎಂದು ಜಿಲ್ಲಾಧಿಕಾರಿ ಅವರು ಹೇಳಿದರು. ಜಿಲ್ಲಾ ಸಾಂಖ್ಯಿಕ ಇಲಾಖೆಯ ಅಧಿಕಾರಿ ನಾರಾಯಣ ಅವರು ಮಾತನಾಡಿ ಜನನ ಮತ್ತು ಮರಣವನ್ನು ವಿವಿಧ ಹಂತದಲ್ಲಿ ದಾಖಲಿಸಲಾಗುತ್ತದೆ ಎಂದರು. 2025 ರ ಜ.1 ರಿಂದ ನವೆಂಬರ್ ಅಂತ್ಯದ ವರೆಗೆ ಕೊಡಗು ಜಿಲ್ಲೆಯಲ್ಲಿ ಒಟ್ಟು ಗ್ರಾಮೀಣ ಪ್ರದೇಶದಲ್ಲಿ 330 ಮತ್ತು ನಗರ ಪ್ರದೇಶದಲ್ಲಿ 8 ಒಟ್ಟು 338 ನೋಂದಣಿ ಘಟಕಗಳನ್ನು ಆರಂಭಿಸಲಾಗಿದೆ ಎಂದು ಅವರು ಹೇಳಿದರು. ಈ ಅವಧಿಯಲ್ಲಿ 2963 ಗಂಡು, 2907 ಹೆಣ್ಣು ಒಟ್ಟು 5,870 ಮಕ್ಕಳ ಜನನವಾಗಿದೆ. ಹಾಗೆಯೇ ಮರಣ ಪ್ರಮಾಣ 2539 ಗಂಡು, 1734 ಹೆಣ್ಣು ಒಟ್ಟು 4,283 ಮಂದಿ ಮೃತಪಟ್ಟಿದ್ದಾರೆ ಎಂದು ನಾರಾಯಣ ಅವರು ವಿವರಿಸಿದರು. ಸರ್ಕಾರಿ ಆಸ್ಪತ್ರೆಗಳಲ್ಲಿ ಜನನ ಮರಣ ಉಪ ನೋಂದಣಿ ಘಟಕವನ್ನು ಸ್ಥಾಪಿಸಿ ಈ ಸಂಸ್ಥೆಗಳಲ್ಲಿ ಸಂಭವಿಸುವ ಜನನ ಮತ್ತು ಮರಣ ಘಟನೆಗಳನ್ನು ನೋಂದಣಿ ಮಾಡಿ, ಅರ್ಜಿದಾರರಿಗೆ ನಿಗದಿತ ಸಮಯದಲ್ಲಿ ಪ್ರಮಾಣ ಪತ್ರಗಳನ್ನು ವಿತರಿಸಲು ಕ್ರಮವಹಿಸಲಾಗಿದೆ ಎಂದರು. ಖಾಸಗಿ ಆಸ್ಪತ್ರೆಗಳಲ್ಲಿ ಸಂಭವಿಸುವ ಘಟನೆಗಳನ್ನು 21 ದಿನದೊಳಗೆ ನೋಂದಣಿ ಮಾಡಲು ಅನುಕೂಲವಾಗುವಂತೆ ಸಂಬಂಧಿಸಿದ ಜನನ ಮತ್ತು ಮರಣ ನೋಂದಣಾಧಿಕಾರಿಗಳಿಗೆ ವರದಿ ಮಾಡಲು ತಿಳಿಸಲಾಗಿದೆ ಎಂದು ನಾರಾಯಣ ಅವರು ಹೇಳಿದರು. ಉಪ ವಿಭಾಗಾಧಿಕಾರಿ ನಿತಿನ್ ಚಕ್ಕಿ, ಕೃಷಿ ಇಲಾಖೆಯ ಜಂಟಿ ನಿರ್ದೇಶಕರಾದ ಚಂದ್ರಶೇಖರ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕರಾದ ಪ್ರಸನ್ನ ಕುಮಾರ್, ತೋಟಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕರಾದ ಮುತ್ತಪ್ಪ, ಕುಶಾಲನಗರ ಪುರಸಭೆ ಮುಖ್ಯಾಧಿಕಾರಿ ಗಿರೀಶ್, ಸಹಾಯಕ ಸಾಂಖ್ಯಿಕ ಅಧಿಕಾರಿ ಟಿ.ವೆಂಕಟೇಶ್, ಬಿ.ಎಂ.ಗಾನವಿ, ಇತರರು ಇದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಎಚ್1-ಎನ್1 : ಅಗತ್ಯ ಮುನ್ನೆಚ್ಚರಿಕೆ ವಹಿಸಲು ಸೂಚನೆ*

ಆಗಷ್ಟ್ 29, 2026

*ಅರೆಭಾಷೆಗೆ ಸಾಂಸ್ಕೃತಿಕ ನೆಲೆಗಟ್ಟು, ವ್ಯಾಕರಣದ ಶಿಸ್ತು ರೂಢಿಸಿದವರು ಕೋಡಿ ಕುಶಾಲಪ್ಪ ಗೌಡರು : ಸದಾನಂದ ಮಾವಜಿ*

ಆಗಷ್ಟ್ 29, 2026

*ಅಂತರ ಶಾಲಾ ಶಟಲ್ ಬ್ಯಾಡ್ಮಿಂಟನ್: ಶ್ರೀ ರಾಜರಾಜೇಶ್ವರಿ ಶಾಲೆ ವಿದ್ಯಾರ್ಥಿಗಳ ಸಾಧನೆ*

ಆಗಷ್ಟ್ 29, 2026

*ಅರೆಭಾಷೆಗೆ ಸಾಂಸ್ಕೃತಿಕ ನೆಲೆಗಟ್ಟು, ವ್ಯಾಕರಣದ ಶಿಸ್ತು ರೂಢಿಸಿದವರು ಕೋಡಿ ಕುಶಾಲಪ್ಪ ಗೌಡರು : ಸದಾನಂದ ಮಾವಜಿ*

ಆಗಷ್ಟ್ 29, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, ಆ.29 NEWS DESK : ಅರೆಭಾಷೆಗೆ ಸಾಂಸ್ಕೃತಿಕ ನೆಲೆಗಟ್ಟನ್ನು ಹಾಕಿಕೊಟ್ಟು, ವ್ಯಾಕರಣದ ಶಿಸ್ತನ್ನು ರೂಢಿಸಿದವರು ಭಾಷಾ ವಿಜ್ಞಾನಿ ಡಾ.…

*ಅಂತರ ಶಾಲಾ ಶಟಲ್ ಬ್ಯಾಡ್ಮಿಂಟನ್: ಶ್ರೀ ರಾಜರಾಜೇಶ್ವರಿ ಶಾಲೆ ವಿದ್ಯಾರ್ಥಿಗಳ ಸಾಧನೆ*

ಆಗಷ್ಟ್ 29, 2026

ಕೊಡಗಿನಲ್ಲಿ ಕರವೇ ಸ್ವಾಭಿಮಾನಿ ಸೇನೆಗೆ ನೂತನ ಸದಸ್ಯರ ಸೇರ್ಪಡೆ

ಆಗಷ್ಟ್ 29, 2026

*ತೀವ್ರಗೊಳಿಸಿದ ಐಇಸಿ ಅಭಿಯಾನ : ಮ್ಯಾರಥಾನ್ ಮೂಲಕ ಎಚ್‌ಐವಿ/ಏಡ್ಸ್ ಜಾಗೃತಿ*

ಆಗಷ್ಟ್ 29, 2026

*ಮಡಿಕೇರಿಯಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸಭೆ : ಸ್ವಾವಲಂಬಿ ಮಹಿಳಾ ಫಲಾನುಭವಿಗಳ ಗುರುತಿಸಿ ಸನ್ಮಾನಕ್ಕೆ ಕ್ರಮ*

ಆಗಷ್ಟ್ 29, 2026

*ಶಿಸ್ತುಬದ್ಧ ಶಿಕ್ಷಣದಿಂದಲೇ ಸಮಾಜದ ಯಶಸ್ಸು, ದೇಶದ ಪ್ರಗತಿ : ಶಾಸಕ ಎ.ಎಸ್.ಪೊನ್ನಣ್ಣ*

ಆಗಷ್ಟ್ 29, 2026

*ಫೀ.ಮಾ. ಕಾರ್ಯಪ್ಪ ಕಾಲೇಜಿನಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆ: ಶಿಸ್ತುಬದ್ಧ ಜೀವನವೇ ಸಾಧನೆಯ ದಾರಿದೀಪ: ಕರ್ನಲ್ ಸಂಜೀವ್ ಕುಮಾರ್*

ಆಗಷ್ಟ್ 29, 2026

*ಕೊಡಗು ವಿದ್ಯಾಲಯದಲ್ಲಿ ಬ್ರಹ್ಮಗಿರಿ ಸಹೋದಯ ಸಿಬಿಎಸ್ಇ ಶಾಲೆಗಳ ಸಾಂಸ್ಕೃತಿಕ ಸ್ಪರ್ಧೆ*

ಆಗಷ್ಟ್ 29, 2026

*ಮಡಿಕೇರಿ ನಗರಸಭೆ : ತ್ಯಾಜ್ಯ ನಿರ್ವಹಣೆಗೆ ವೈಜ್ಞಾನಿಕ ವಿಧಾನಕ್ಕೆ ಒತ್ತು : ಶಾಸಕ ಮಂತರ್ ಗೌಡ*

ಆಗಷ್ಟ್ 29, 2026

*ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಕುಂದುಕೊರತೆ ಸಭೆ : ಪರಿಶಿಷ್ಟರ ಸಮಸ್ಯೆಗಳನ್ನು ಕಾಲಮಿತಿಯಲ್ಲಿ ಪರಿಹರಿಸುವುದು ಆದ್ಯ ಕೆಲಸವಾಗಿದೆ : ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಎನ್.ಬಿಂದುಮಣಿ*

ಆಗಷ್ಟ್ 29, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.