Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಎಚ್1-ಎನ್1 : ಅಗತ್ಯ ಮುನ್ನೆಚ್ಚರಿಕೆ ವಹಿಸಲು ಸೂಚನೆ*
  • *ಅರೆಭಾಷೆಗೆ ಸಾಂಸ್ಕೃತಿಕ ನೆಲೆಗಟ್ಟು, ವ್ಯಾಕರಣದ ಶಿಸ್ತು ರೂಢಿಸಿದವರು ಕೋಡಿ ಕುಶಾಲಪ್ಪ ಗೌಡರು : ಸದಾನಂದ ಮಾವಜಿ*
  • *ಅಂತರ ಶಾಲಾ ಶಟಲ್ ಬ್ಯಾಡ್ಮಿಂಟನ್: ಶ್ರೀ ರಾಜರಾಜೇಶ್ವರಿ ಶಾಲೆ ವಿದ್ಯಾರ್ಥಿಗಳ ಸಾಧನೆ*
  • ಕೊಡಗಿನಲ್ಲಿ ಕರವೇ ಸ್ವಾಭಿಮಾನಿ ಸೇನೆಗೆ ನೂತನ ಸದಸ್ಯರ ಸೇರ್ಪಡೆ
  • *ತೀವ್ರಗೊಳಿಸಿದ ಐಇಸಿ ಅಭಿಯಾನ : ಮ್ಯಾರಥಾನ್ ಮೂಲಕ ಎಚ್‌ಐವಿ/ಏಡ್ಸ್ ಜಾಗೃತಿ*
  • *ಮಡಿಕೇರಿಯಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸಭೆ : ಸ್ವಾವಲಂಬಿ ಮಹಿಳಾ ಫಲಾನುಭವಿಗಳ ಗುರುತಿಸಿ ಸನ್ಮಾನಕ್ಕೆ ಕ್ರಮ*
  • *ಶಿಸ್ತುಬದ್ಧ ಶಿಕ್ಷಣದಿಂದಲೇ ಸಮಾಜದ ಯಶಸ್ಸು, ದೇಶದ ಪ್ರಗತಿ : ಶಾಸಕ ಎ.ಎಸ್.ಪೊನ್ನಣ್ಣ*
  • *ಫೀ.ಮಾ. ಕಾರ್ಯಪ್ಪ ಕಾಲೇಜಿನಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆ: ಶಿಸ್ತುಬದ್ಧ ಜೀವನವೇ ಸಾಧನೆಯ ದಾರಿದೀಪ: ಕರ್ನಲ್ ಸಂಜೀವ್ ಕುಮಾರ್*
  • *ಕೊಡಗು ವಿದ್ಯಾಲಯದಲ್ಲಿ ಬ್ರಹ್ಮಗಿರಿ ಸಹೋದಯ ಸಿಬಿಎಸ್ಇ ಶಾಲೆಗಳ ಸಾಂಸ್ಕೃತಿಕ ಸ್ಪರ್ಧೆ*
  • *ಮಡಿಕೇರಿ ನಗರಸಭೆ : ತ್ಯಾಜ್ಯ ನಿರ್ವಹಣೆಗೆ ವೈಜ್ಞಾನಿಕ ವಿಧಾನಕ್ಕೆ ಒತ್ತು : ಶಾಸಕ ಮಂತರ್ ಗೌಡ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಎಬಿವಿಪಿ ದಕ್ಷಿಣ ಪ್ರಾಂತದ 45ನೇ ಸಮ್ಮೇಳನ : ರಾಷ್ಟ್ರದ ಏಕತೆ ಮತ್ತು ಅಖಂಡತೆಗೆ ಧಕ್ಕೆ ತರುವ ಪ್ರಯತ್ನಗಳು ನಡೆಯುತ್ತಿದೆ : ಬಾಲಕೃಷ್ಣ ಎಸ್.*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಎಬಿವಿಪಿ ದಕ್ಷಿಣ ಪ್ರಾಂತದ 45ನೇ ಸಮ್ಮೇಳನ : ರಾಷ್ಟ್ರದ ಏಕತೆ ಮತ್ತು ಅಖಂಡತೆಗೆ ಧಕ್ಕೆ ತರುವ ಪ್ರಯತ್ನಗಳು ನಡೆಯುತ್ತಿದೆ : ಬಾಲಕೃಷ್ಣ ಎಸ್.*

ಡಿಸೆಂಬರ್ 17, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಡಿ.17 NEWS DESK : ಭಾರತದ ‘ಮೇಕಿಂಗ್ ಇಂಡಿಯಾ’ ಎನ್ನುವ ವಿಶಾಲ ಚಿಂತನೆಯ ಪ್ರಯತ್ನಗಳನ್ನು ಮುರಿಯುವ ಮೂಲಕ ರಾಷ್ಟ್ರದ ಏಕತೆ ಮತ್ತು ಅಖಂಡತೆಗೆ ಧಕ್ಕೆ ತರುವ ಪ್ರಯತ್ನಗಳು ನಡೆಯುತ್ತಿದೆ ಎಂದು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ತಿನ ರಾಷ್ಟ್ರೀಯ ಸಹ ಸಂಘಟನಾ ಕಾರ್ಯದರ್ಶಿ ಬಾಲಕೃಷ್ಣ ಎಸ್. ಅವರು ಆರೋಪಿಸಿದ್ದಾರೆ. ನಗರದ ಕೊಡಗು ಗೌಡ ಸಮಾಜದಲ್ಲಿ ಇಂದಿನಿಂದ ಮೂರು ದಿನಗಳ ಕಾಲ ನಡೆಯುತ್ತಿರುವ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ತಿನ ದಕ್ಷಿಣ ಪ್ರಾಂತದ 45ನೇ ಸಮ್ಮೇಳನದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಅವರು ಮಾತನಾಡಿದರು. ‘ರಾಷ್ಟ್ರ’ ಪ್ರಥಮ ಎನ್ನುವ ಉದಾತ್ತ ಚಿಂತನೆಯನ್ನು ಮೈಗೂಡಿಸಿಕೊಂಡ ಯುವ ಸಮೂಹವು, ಪಾಶ್ಚಿಮಾತ್ಯ ಶಕ್ತಿಗಳ ಒತ್ತಡಗಳನ್ನು ಮೀರಿ ಭಾರತದ ಅಭ್ಯುದಯಕ್ಕೆ ಶ್ರಮಿಸುತ್ತಿದೆ. ಇಂದಿನ ಯುವ ಸಮೂಹ ಸನಾತನ ಸಂಸ್ಕøತಿಯ ಮಹತ್ವವನ್ನು ಅರಿತು, ಅದರ ತಳಹದಿಯ ಮೇಲೆ ರಾಷ್ಟ್ರದ ಪುನರ್ ನಿರ್ಮಾಣಕ್ಕೆ ತÀನ್ನದೇ ಆದ ಕೊಡುಗೆಯನ್ನು ನೀಡುತ್ತಿದೆ. ಇದಕ್ಕೆ ಬೆನ್ನೆಲುಬಾಗಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕಾರ್ಯನಿರ್ವಹಿಸುತ್ತಿದೆ ಎಂದರು. ವಿಶ್ವದ ಬಲಾಢ್ಯ ದೇಶಗಳೆಂದು ಗುರುತಿಸಿಕೊಂಡಿರುವ ಅಮೇರಿಕಾ, ಚೈನಾ ಮೊದಲಾದ ರಾಷ್ಟ್ರಗಳು ಭಾರತವನ್ನು ಮುರಿಯುವ ಪ್ರಯತ್ನಗಳನ್ನು ಮಾಡುತ್ತಲೆ ಬರುತ್ತಿವೆ. ಇದರ ಭಾಗವಾಗಿ ಎಂಬಂತೆ ಅಮೇರಿಕಾ ಅಧ್ಯಕ್ಷ ಟ್ರಂಪ್ ಅವರು, ಭಾರತದ ಆರ್ಥಿಕತೆ ‘ಡೆಡ್ ಎಕಾನಮಿ’ ಎಂದು ತಿಳಿಸಿದ್ದಾರೆ. ದೀಪಾವಳಿಯ ಒಂದು ದಿನದಂದು ಭಾರತದಲ್ಲಿ ನಡೆಯುವ ವ್ಯಾಪಾರ ವಹಿವಾಟುಗಳ ಒಟ್ಟು ಮೊತ್ತ ಎಷ್ಟೋ ರಾಷ್ಟ್ರಗಳ ವಾರ್ಷಿಕ ಖರ್ಚುವೆಚ್ಚಗಳಷ್ಟಾಗುತ್ತದೆ. ಹೀಗಿದ್ದ ಮೇಲೆ ಭಾರತÀದ್ದು ಡೆಡ್ ಎಕಾನಮಿ ಹೇಗಾಗುತ್ತದೆ ಎಂದು ಪ್ರಶ್ನಿಸಿದರು. ರಾಷ್ಟ್ರದ ಅಭಿವೃದ್ಧಿಗೆ ಪೂರಕವಾಗಿ ಕಾರ್ಯನಿರ್ವಹಿಸುತ್ತಿರುವ ರಾಷ್ಟ್ರ ಭಕ್ತ ಆರ್‍ಎಸ್‍ಎಸ್ ಸಂಸ್ಥೆ 100 ವರ್ಷಗಳನ್ನು ಪೂರೈಸಿದ್ದರೆ, ಬ್ರ್ರಿಟೀಷರ ಪಾರತಂತ್ರ ವ್ಯವಸ್ಥೆಯಿಂದ ಹೊರ ಬರುವ ನಿಟ್ಟಿನಲ್ಲಿ ನಡೆದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಪ್ರೇರಣಾ ಶಕ್ತಿಯಾಗಿ ಕಾರ್ಯನಿರ್ವಹಿಸಿದ ‘ವಂದೇ ಮಾತರಂ’ಗೆ 150 ವರ್ಷ, ಬ್ರ್ರಿಟೀಷರ ವಿರುದ್ಧ ಹೋರಾಟಗಳನ್ನು ಮಾಡಿದ ರಾಣಿ ಅಬ್ಬಕ್ಕ ಅವರ 500ನೇ ವರ್ಷಾಚರಣೆಯು ನಡೆದಿದ್ದು, ಇದು ಪರಿವರ್ತನೆಯ ದಿನಮಾನಗಳಾಗಿದೆ. ಇಂತಹ ಅವಧಿಯಲ್ಲಿನ ಎಐ ತಂತ್ರಜ್ಞಾನ, ಚಾಟ್ ಜಿಪಿಸಿ ಮೊದಲಾದ ಸಾಮಾಜಿಕ ಜಾಲತಾಣದ ಪ್ರಭಾವಗಳಿಂದ ಮುಕ್ತವಾಗಿ ಪರಸ್ಪರ ವಿಶ್ವಾಸದ ಮೂಲಕ ಭಾರತದ ಪುನರ್ ನಿರ್ಮಾಣದ ಪ್ರಯತ್ನಗಳಲ್ಲಿ ಎಬಿವಿಪಿ ಸದಾ ತನ್ನನ್ನು ತೊಡಗಿಸಿಕೊಂಡಿರುವುದಾಗಿ ಬಾಲಕೃಷ್ಣ ತಿಳಿಸಿದರು. ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದ ರಾಷ್ಟ್ರೀಯ ಮಟ್ಟದ ಅಥ್ಲಿಟ್ ತೀತಮಾಡ ಅರ್ಜುನ್ ದೇವಯ್ಯ ಅವರು ಯಾವುದೇ ವಿಚಾರಗಳು ಮತ್ತು ತತ್ತ್ವಗಳಿಂದ ಜನರ ಬದಲಾವಣೆ ಸಾಧ್ಯವಾಗಲಾರದು. ಬದಲಾಗಿ, ಮಹಾನ್ ವ್ಯಕ್ತಿಗಳ ತತ್ತ್ವಾದರ್ಶಗಳ ಅಧ್ಯಯನ, ಪಾಲನೆ, ಅಭ್ಯಾಸಗಳಿಂದ ಮಾತ್ರ ಬದಲಾವಣೆ ಸಾಧ್ಯವಾಗುತ್ತದೆ. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳು ತಮ್ಮ ಚಿಂತನೆಯನ್ನು ಹರಿಸಬೇಕೆಂದು ಕರೆ ನೀಡಿದರು. ನಿಮ್ಮ ಮನಸು ಗಟ್ಟಿಯಾಗಿದ್ದು, ಚಿಂತನೆಗಳು ಎಂದಿಗೂ ಚಂಚಲವಾಗದಿರಲಿ ಎಂದು ಕಿವಿ ಮಾತುಗಳನ್ನಾಡಿದ ಅವರು, ತಾನು ಸಮಾಜದಲ್ಲಿ ಏನನ್ನು ಸಾಧಿಸಬೇಕೆನ್ನುವುದನ್ನು ಮೊದಲು ಅರಿತು ಆ ನಿಟ್ಟಿನಲ್ಲಿ ಅವಿಶ್ರಾಂತವಾದ ಪ್ರಯತ್ನಗಳಿಗೆ ನಿಮ್ಮನ್ನು ನೀವು ತೆರೆದುಕೊಳ್ಳಬೇಕೆಂದು ತಿಳಿಸಿದರಲ್ಲದೆ, ಅಧ್ಯಯನವನ್ನು ಚಿತ್ತ ಚಾಂಚಲ್ಯಕ್ಕೆ ಒಳಗಾಗದೆ ನಡೆಸುವ ಪ್ರತಿಯೊಬ್ಬ ವಿದ್ಯಾರ್ಥಿಯೂ ಐಎಎಸ್ ಮೊದಲಾದ ಉನ್ನತ ಶಿಕ್ಷಣವನ್ನು ಪಡೆದು ಉನ್ನತ ಹುದ್ದೆಗಳನ್ನು ಅಲಂಕರಿಸಬಹುದು. ಇಂತಹ ಹುದ್ದೆಗಳನ್ನು ಯುವ ಸಮೂಹ ಅಲಂಕರಿಸಬೇಕು ಮತ್ತು ಆ ಮೂಲಕ ಸಮಾಜದ ಭ್ರಷ್ಟತೆಯನ್ನು ತೆಡೆಯುವ ಪ್ರಯತ್ನಗಳಿಗೆ ಮುಂದಾಗಬೇಎಂದು ಸಲಹೆಯನ್ನಿತ್ತರು. ಎಬಿಸಿಪಿ ದಕ್ಷಿಣ ಪ್ರಾಂತ ಅಧ್ಯಕ್ಷರಾದ ಡಾ.ರವಿ ಮಂಡ್ಯ ಅವರು ಮಾತನಾಡಿ, ಎಬಿವಿಪಿ ರಾಷ್ಟ್ರದಾದ್ಯಂತ 76.96 ಲಕ್ಷ ಸದಸ್ಯರನ್ನು ಹೊಂದುವ ಮೂಲಕ ವಿಶ್ವದ ಏಕೈಕ ಬೃಹತ್ ಸಂಘಟನೆಯಾಗಿದೆ. ಇದರ 1300 ಕ್ಕೂ ಹೆಚ್ಚಿನ ಶಾಖೆಗಳು ರಾಷ್ಟ್ರವ್ಯಾಪಿ ಕಾರ್ಯಾಚರಿಸುತ್ತಿವೆ. ಆಯಾ ಕಾಲ ಘಟ್ಟದ ಶಿಕ್ಷಣ ವ್ಯವಸ್ಥೆಯಲ್ಲಿನ ಸಂಕಷ್ಟಗಳು, ದೇಶ ಎದುರಿಸಿದ ಸಮಸ್ಯೆ, ಸಂಕಷ್ಟಗಳಿಗೆ ಸ್ಪಂದಿಸುತ್ತ ಎಬಿವಿಪಿ ಕಾರ್ಯನಿರ್ವಹಿಸಿಕೊಂಡು ಬಂದಿರುವುದಾಗಿ ತಿಳಿಸಿದರು. ಪ್ರಾಂತ ಸಮ್ಮೇಳದ ಸ್ವಾಗತ ಸಮಿತಿ ಅಧ್ಯಕ್ಷರಾದ ಎಂ.ಈಶ್ವರ ಭಟ್ ಪ್ರಾಸ್ತಾವಿಕವಾಗಿ ಮಾತನಾಡಿದರು. ವೇದಿಕೆಯಲ್ಲಿ ಸ್ವಾಗತ ಸಮಿತಿಯ ಪ್ರಧಾನ ಕಾರ್ಯದರ್ಶಿ ರಮೇಶ್ ಹೊಳ್ಳ, ಎಬಿವಿಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಮಿತಿ ಸದಸ್ಯರಾದ ಮಂಧಾರ, ದಕ್ಷಿಣ ಪ್ರಾಂತದ ಕಾರ್ಯದರ್ಶಿ ಗೋಪಿ ರಂಗಸ್ವಾಮಿ ಉಪಸ್ಥಿತರಿದ್ದರು. :: ಪ್ರದರ್ಶನ ಉದ್ಘಾಟನೆ :: ಸಮಾವೇಶದ ಉದ್ಘಾಟನೆಗೂ ಮುನ್ನ ಬೆಳಗ್ಗೆ ಪದ್ಮಶ್ರೀ ರಾಣಿ ಮಾಚಯ್ಯ ಅವರು, ಫೀ.ಮಾ.ಕೆ.ಎಂ. ಕಾರ್ಯಪ್ಪ, ಜನರಲ್ ಕೆ.ಎಸ್.ತಿಮ್ಮಯ್ಯ ಅವರ ಕುರಿತು ಹಾಗೂ ಎಬಿವಿಪಿ ಕಾರ್ಯಚಟುವಟಿಕೆಗಳ ಬಗ್ಗೆ ಮಾಹಿತಿ ನೀಡುವ ಪ್ರದರ್ಶನವನ್ನು ಉದ್ಘಾಟಿಸಿದರು.

 

 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಎಚ್1-ಎನ್1 : ಅಗತ್ಯ ಮುನ್ನೆಚ್ಚರಿಕೆ ವಹಿಸಲು ಸೂಚನೆ*

ಆಗಷ್ಟ್ 29, 2026

*ಅರೆಭಾಷೆಗೆ ಸಾಂಸ್ಕೃತಿಕ ನೆಲೆಗಟ್ಟು, ವ್ಯಾಕರಣದ ಶಿಸ್ತು ರೂಢಿಸಿದವರು ಕೋಡಿ ಕುಶಾಲಪ್ಪ ಗೌಡರು : ಸದಾನಂದ ಮಾವಜಿ*

ಆಗಷ್ಟ್ 29, 2026

*ಅಂತರ ಶಾಲಾ ಶಟಲ್ ಬ್ಯಾಡ್ಮಿಂಟನ್: ಶ್ರೀ ರಾಜರಾಜೇಶ್ವರಿ ಶಾಲೆ ವಿದ್ಯಾರ್ಥಿಗಳ ಸಾಧನೆ*

ಆಗಷ್ಟ್ 29, 2026

*ಅರೆಭಾಷೆಗೆ ಸಾಂಸ್ಕೃತಿಕ ನೆಲೆಗಟ್ಟು, ವ್ಯಾಕರಣದ ಶಿಸ್ತು ರೂಢಿಸಿದವರು ಕೋಡಿ ಕುಶಾಲಪ್ಪ ಗೌಡರು : ಸದಾನಂದ ಮಾವಜಿ*

ಆಗಷ್ಟ್ 29, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, ಆ.29 NEWS DESK : ಅರೆಭಾಷೆಗೆ ಸಾಂಸ್ಕೃತಿಕ ನೆಲೆಗಟ್ಟನ್ನು ಹಾಕಿಕೊಟ್ಟು, ವ್ಯಾಕರಣದ ಶಿಸ್ತನ್ನು ರೂಢಿಸಿದವರು ಭಾಷಾ ವಿಜ್ಞಾನಿ ಡಾ.…

*ಅಂತರ ಶಾಲಾ ಶಟಲ್ ಬ್ಯಾಡ್ಮಿಂಟನ್: ಶ್ರೀ ರಾಜರಾಜೇಶ್ವರಿ ಶಾಲೆ ವಿದ್ಯಾರ್ಥಿಗಳ ಸಾಧನೆ*

ಆಗಷ್ಟ್ 29, 2026

ಕೊಡಗಿನಲ್ಲಿ ಕರವೇ ಸ್ವಾಭಿಮಾನಿ ಸೇನೆಗೆ ನೂತನ ಸದಸ್ಯರ ಸೇರ್ಪಡೆ

ಆಗಷ್ಟ್ 29, 2026

*ತೀವ್ರಗೊಳಿಸಿದ ಐಇಸಿ ಅಭಿಯಾನ : ಮ್ಯಾರಥಾನ್ ಮೂಲಕ ಎಚ್‌ಐವಿ/ಏಡ್ಸ್ ಜಾಗೃತಿ*

ಆಗಷ್ಟ್ 29, 2026

*ಮಡಿಕೇರಿಯಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸಭೆ : ಸ್ವಾವಲಂಬಿ ಮಹಿಳಾ ಫಲಾನುಭವಿಗಳ ಗುರುತಿಸಿ ಸನ್ಮಾನಕ್ಕೆ ಕ್ರಮ*

ಆಗಷ್ಟ್ 29, 2026

*ಶಿಸ್ತುಬದ್ಧ ಶಿಕ್ಷಣದಿಂದಲೇ ಸಮಾಜದ ಯಶಸ್ಸು, ದೇಶದ ಪ್ರಗತಿ : ಶಾಸಕ ಎ.ಎಸ್.ಪೊನ್ನಣ್ಣ*

ಆಗಷ್ಟ್ 29, 2026

*ಫೀ.ಮಾ. ಕಾರ್ಯಪ್ಪ ಕಾಲೇಜಿನಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆ: ಶಿಸ್ತುಬದ್ಧ ಜೀವನವೇ ಸಾಧನೆಯ ದಾರಿದೀಪ: ಕರ್ನಲ್ ಸಂಜೀವ್ ಕುಮಾರ್*

ಆಗಷ್ಟ್ 29, 2026

*ಕೊಡಗು ವಿದ್ಯಾಲಯದಲ್ಲಿ ಬ್ರಹ್ಮಗಿರಿ ಸಹೋದಯ ಸಿಬಿಎಸ್ಇ ಶಾಲೆಗಳ ಸಾಂಸ್ಕೃತಿಕ ಸ್ಪರ್ಧೆ*

ಆಗಷ್ಟ್ 29, 2026

*ಮಡಿಕೇರಿ ನಗರಸಭೆ : ತ್ಯಾಜ್ಯ ನಿರ್ವಹಣೆಗೆ ವೈಜ್ಞಾನಿಕ ವಿಧಾನಕ್ಕೆ ಒತ್ತು : ಶಾಸಕ ಮಂತರ್ ಗೌಡ*

ಆಗಷ್ಟ್ 29, 2026

*ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಕುಂದುಕೊರತೆ ಸಭೆ : ಪರಿಶಿಷ್ಟರ ಸಮಸ್ಯೆಗಳನ್ನು ಕಾಲಮಿತಿಯಲ್ಲಿ ಪರಿಹರಿಸುವುದು ಆದ್ಯ ಕೆಲಸವಾಗಿದೆ : ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಎನ್.ಬಿಂದುಮಣಿ*

ಆಗಷ್ಟ್ 29, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.