Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*
  • *ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*
  • *ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*
  • *ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*
  • *ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*
  • *ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*
  • *2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*
  • *ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*
  • *ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*
  • *ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕೊಡಗು : ಜಿಲ್ಲಾ ಮಟ್ಟದ ಕೃಷಿ ಅಂಕಿ ಅಂಶಗಳ ಹಾಗೂ 11ನೇ ಹಂತದ ಕೃಷಿ ಗಣತಿಯ ಸಮನ್ವಯ ಸಮಿತಿ ಸಭೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕೊಡಗು : ಜಿಲ್ಲಾ ಮಟ್ಟದ ಕೃಷಿ ಅಂಕಿ ಅಂಶಗಳ ಹಾಗೂ 11ನೇ ಹಂತದ ಕೃಷಿ ಗಣತಿಯ ಸಮನ್ವಯ ಸಮಿತಿ ಸಭೆ*

ಡಿಸೆಂಬರ್ 17, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಡಿ.17 NEWS DESK : ಪ್ರಸಕ್ತ ಸಾಲಿನ ಜಿಲ್ಲಾ ಮಟ್ಟದ ಕೃಷಿ ಅಂಕಿ ಅಂಶಗಳ ಹಾಗೂ 11 ನೇ ಹಂತದ ಕೃಷಿ ಗಣತಿಯ ಸಮನ್ವಯ ಸಮಿತಿ ಸಭೆಯು ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ 2024-25 ನೇ ಸಾಲಿನ ಬೇಸಿಗೆ ಋತುವಿನ ಬೆಳೆ ಕ್ಷೇತ್ರ ಮರು ಹೊಂದಾಣಿಕೆ ಬಗ್ಗೆ ವರದಿ ನೀಡುವಂತೆ ಜಿಲ್ಲಾಧಿಕಾರಿ ಅವರು ನಿರ್ದೇಶನ ನೀಡಿದರು. ಬೆಳೆ ಸಮೀಕ್ಷೆ ಪರಿಶೀಲನೆ ಸಂಬಂಧಿಸಿದಂತೆ ಮಾಹಿತಿ ನೀಡುವುದು, 11 ನೇ ಕೃಷಿ ಗಣತಿಯ ಮೂರನೇ ಹಂತದ ಬಗ್ಗೆ ಮಾಹಿತಿ ಒದಗಿಸುವುದು ಹಾಗೆಯೇ ಪ್ರಸಕ್ತ ಸಾಲಿನ ಬೆಳೆ ಕಟಾವು ಸಂಬಂಧಿಸಿದಂತೆ ನಿಖರ ಮಾಹಿತಿ ಒದಗಿಸುವಂತೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಸೂಚಿಸಿದರು. ಈ ಬಗ್ಗೆ ಮಾಹಿತಿ ನೀಡಿದ ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿ ಡಿ.ನಾರಾಯಣ ಅವರು 2024-25ನೇ ಸಾಲಿನ ಬೇಸಿಗೆ ಋತುವಿನ ಸಿಎಸ್‍ಎಸ್‍ಟಿ ವರದಿಯಂತೆ ಗ್ರಾಮಾವಾರು, ಹೋಬಳಿವಾರು ಪರಿಶೀಲಿಸಿ ವೆಬ್ ತಂತ್ರಾಂಶದಲ್ಲಿ ಮರು ಹೊಂದಾಣಿಕೆ ಕಾರ್ಯವನ್ನು ಪೂರ್ಣಗೊಳಿಸಲಾಗಿದೆ ಎಂದರು. ತಾಲ್ಲೂಕು ಮಟ್ಟದ ಕೃಷಿ ಅಧಿಕಾರಿಗಳಿಂದ ದೃಢೀಕರಿಸಿ ಮರು ಹೊಂದಾಣಿಕೆ ಆಧಾರದ ಮೇಲೆ ಜಿಲ್ಲಾ ವರದಿಯನ್ನು ತಯಾರಿಸಿ ಕೇಂದ್ರ ಕಚೇರಿಗೆ ಸಲ್ಲಿಸಲಾಗಿದೆ ಎಂದು ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿ ಅವರು ಹೇಳಿದರು. 2025-26ನೇ ಸಾಲಿನ ಮುಂಗಾರು ಋತುವಿನ ಬೆಳೆ ಸಮೀಕ್ಷೆ ಯೋಜನೆಯಡಿ ಜಿಲ್ಲೆಗೆ ಹಂಚಿಕೆಯಡಿ 525 ಗ್ರಾಮಗಳ ಪೈಕಿ 102 ಗ್ರಾಮಗಳಲ್ಲಿ ಸಕಾಲಿಕ ಯೋಜನೆಯಡಿ ಶೇ.1 ರಷ್ಟು ಮುಂಗಾರು ಬೆಳೆ ಸಮೀಕ್ಷೆ ಹಂಚಿಕೆಯಾಗಿದ್ದು, ಸಮೀಕ್ಷೆಯನ್ನು ಸಾಂಖ್ಯಿಕ, ಕೃಷಿ ಮತ್ತು ತೋಟಗಾರಿಕೆ ಇಲಾಖೆ ಸಹಯೋಗದೊಂದಿಗೆ ಪೂರ್ಣಗೊಳಿಸಲಾಗಿದೆ ಎಂದು ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿ ಅವರು ತಿಳಿಸಿದರು. ಪ್ರಸಕ್ತ ಸಾಲಿನ ಹಿಂಗಾರು ಋತುವಿನ ಬೆಳೆ ಸಮೀಕ್ಷೆಯ ತರಬೇತಿ ಕಾರ್ಯ ಪೂರ್ಣಗೊಂಡಿದ್ದು, ಕ್ಷೇತ್ರ ಕಾರ್ಯ ಜನವರಿ ಅಂತ್ಯದೊಳಗೆ ಪೂರ್ಣಗೊಳಿಸಲಾಗುವುದು ಎಂದು ಡಿ.ನಾರಾಯಣ ಅವರು ಮಾಹಿತಿ ನೀಡಿದರು. ‘11ನೇ ಕೃಷಿ ಗಣತಿಯ ಮೂರನೇ ಹಂತದ ಕ್ಷೇತ್ರ ಕಾರ್ಯಕ್ಕೆ ಜಿಲ್ಲೆಯ 26 ಗ್ರಾಮಗಳು ಆಯ್ಕೆಯಾಗಿದ್ದು, ಎಲ್ಲಾ 26 ಗ್ರಾಮಗಳ ಕ್ಷೇತ್ರ ಕಾರ್ಯ ಪೂರ್ಣಗೊಂಡಿದೆ. ಈ 26 ಗ್ರಾಮಗಳ ಕ್ರೋಢೀಕೃತ ವರದಿಯನ್ನು ಗಮನಿಸಿದಾಗ 558 ಹಿಡುವಳಿದಾರರು ಇದ್ದು, 2794 ಹೆಕ್ಟೇರ್ ಹಿಡುವಳಿ ಪ್ರದೇಶ ಹೊಂದಿದೆ ಎಂದು ಡಿ.ನಾರಾಯಣ ಅವರು ಹೇಳಿದರು.’ ಜಿಲ್ಲೆಯಲ್ಲಿ ಪಿಎಂ.ಕಿಸಾನ್ ಯೋಜನೆಯಡಿ 299 ರೈತರು ಉಪಯೋಗ ಪಡೆದಿದ್ದಾರೆ. 169 ರೈತರು ಮಣ್ಣಿನ ಆರೋಗ್ಯ ಕಾರ್ಡ್ ಪಡೆದಿದ್ದಾರೆ. ಹಾಗೆಯೇ 349 ಮಂದಿ ಕಿಸಾನ್ ಕ್ರೆಡಿಟ್ ಕಾರ್ಡ್ ಹೊಂದಿದ್ದಾರೆ ಎಂದು ಡಿ.ನಾರಾಯಣ ಅವರು ತಿಳಿಸಿದರು. 2025-26ನೇ ಸಾಲಿನ ಕರ್ನಾಟಕ ರೈತ ಸುರಕ್ಷಾ, ಪ್ರಧಾನಮಂತ್ರಿ ಫಸಲ್ ಭಿಮಾ(ವಿಮೆ) ಯೋಜನೆಯಡಿ 476 ಬೆಳೆ ಕಟಾವು ಪ್ರಯೋಗಗಳ ಹಂಚಿಕೆಯಾಗಿದ್ದು, ಇವುಗಳ ಪೈಕಿ ಭತ್ತ(ಮಳೆಯಾಶ್ರಿತ) 336, ಭತ್ತ(ನೀರಾವರಿ) 20, ಮುಸುಕಿನ ಜೋಳ(ಮಳೆಯಾಶ್ರಿತ) 30 ಪ್ರಯೋಗಗಳ ಹಂಚಿಕೆಯಾಗಿದೆ ಎಂದು ಹೇಳಿದರು. ಇಳುವರಿಗೆ ಒಳಪಡದ ಬೆಳೆಗಳಲ್ಲಿ ಶುಂಠಿ(ಮಳೆಯಾಶ್ರಿತ) 60 ಪ್ರಯೋಗಗಳು, ಸಿಹಿಗೆಣಸು(ಮಳೆಯಾಶ್ರಿತ) 30 ಪ್ರಯೋಗಗಳು, ಇವುಗಳ ಪೈಕಿ 250 ಪ್ರಯೋಗಗಳು ಪೂರ್ಣಗೊಂಡಿದ್ದು, ಉಳಿದ 226 ಪ್ರಯೋಗಗಳನ್ನು ಡಿಸೆಂಬರ್ ಅಂತ್ಯದೊಳಗೆ ಪೂರ್ಣಗೊಳಿಸಲಾಗುವುದು ಎಂದು ನಾರಾಯಣ ಅವರು ಹೇಳಿದರು. ಉಪ ವಿಭಾಗಾಧಿಕಾರಿ ನಿತಿನ್ ಚಕ್ಕಿ, ಕೃಷಿ ಇಲಾಖೆ ಜಂಟಿ ನಿರ್ದೇಶಕರಾದ ಚಂದ್ರಶೇಖರ್, ತೋಟಗಾರಿಕೆ ಇಲಾಖೆ ಸಹಾಯಕ ನಿರ್ದೇಶಕರಾದ ಮುತ್ತಪ್ಪ, ಸಹಾಯಕ ಸಾಂಖ್ಯಿಕ ಅಧಿಕಾರಿಗಳಾದ ವೆಂಕಟೇಶ್, ಬಿ.ಎಂ.ಗಾನವಿ, ಇತರರು ಇದ್ದರು.

 

Follow us Follow us
Share. WhatsApp Facebook Twitter Email Telegram Copy Link

Related Posts

*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಸೆ.26: ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್…

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*

ಸೆಪ್ಟೆಂಬರ್ 26, 2026

*ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*

ಸೆಪ್ಟೆಂಬರ್ 26, 2026

*ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*

ಸೆಪ್ಟೆಂಬರ್ 26, 2026

*2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*

ಸೆಪ್ಟೆಂಬರ್ 26, 2026

*ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*

ಸೆಪ್ಟೆಂಬರ್ 26, 2026

*ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*

ಸೆಪ್ಟೆಂಬರ್ 26, 2026

*ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*

ಸೆಪ್ಟೆಂಬರ್ 26, 2026

*36 ವರ್ಷ ಸೇವೆ ಸಲ್ಲಿಸಿದ ಅಂಗನವಾಡಿ ಕಾರ್ಯಕರ್ತೆ ದೇವಮಾಜಿ, ಶಿಕ್ಷಕಿ ಭೋಜಮ್ಮಗೆ ಆತ್ಮೀಯ ಬೀಳ್ಕೊಡುಗೆ*

ಸೆಪ್ಟೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.