Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಎಚ್1-ಎನ್1 : ಅಗತ್ಯ ಮುನ್ನೆಚ್ಚರಿಕೆ ವಹಿಸಲು ಸೂಚನೆ*
  • *ಅರೆಭಾಷೆಗೆ ಸಾಂಸ್ಕೃತಿಕ ನೆಲೆಗಟ್ಟು, ವ್ಯಾಕರಣದ ಶಿಸ್ತು ರೂಢಿಸಿದವರು ಕೋಡಿ ಕುಶಾಲಪ್ಪ ಗೌಡರು : ಸದಾನಂದ ಮಾವಜಿ*
  • *ಅಂತರ ಶಾಲಾ ಶಟಲ್ ಬ್ಯಾಡ್ಮಿಂಟನ್: ಶ್ರೀ ರಾಜರಾಜೇಶ್ವರಿ ಶಾಲೆ ವಿದ್ಯಾರ್ಥಿಗಳ ಸಾಧನೆ*
  • ಕೊಡಗಿನಲ್ಲಿ ಕರವೇ ಸ್ವಾಭಿಮಾನಿ ಸೇನೆಗೆ ನೂತನ ಸದಸ್ಯರ ಸೇರ್ಪಡೆ
  • *ತೀವ್ರಗೊಳಿಸಿದ ಐಇಸಿ ಅಭಿಯಾನ : ಮ್ಯಾರಥಾನ್ ಮೂಲಕ ಎಚ್‌ಐವಿ/ಏಡ್ಸ್ ಜಾಗೃತಿ*
  • *ಮಡಿಕೇರಿಯಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸಭೆ : ಸ್ವಾವಲಂಬಿ ಮಹಿಳಾ ಫಲಾನುಭವಿಗಳ ಗುರುತಿಸಿ ಸನ್ಮಾನಕ್ಕೆ ಕ್ರಮ*
  • *ಶಿಸ್ತುಬದ್ಧ ಶಿಕ್ಷಣದಿಂದಲೇ ಸಮಾಜದ ಯಶಸ್ಸು, ದೇಶದ ಪ್ರಗತಿ : ಶಾಸಕ ಎ.ಎಸ್.ಪೊನ್ನಣ್ಣ*
  • *ಫೀ.ಮಾ. ಕಾರ್ಯಪ್ಪ ಕಾಲೇಜಿನಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆ: ಶಿಸ್ತುಬದ್ಧ ಜೀವನವೇ ಸಾಧನೆಯ ದಾರಿದೀಪ: ಕರ್ನಲ್ ಸಂಜೀವ್ ಕುಮಾರ್*
  • *ಕೊಡಗು ವಿದ್ಯಾಲಯದಲ್ಲಿ ಬ್ರಹ್ಮಗಿರಿ ಸಹೋದಯ ಸಿಬಿಎಸ್ಇ ಶಾಲೆಗಳ ಸಾಂಸ್ಕೃತಿಕ ಸ್ಪರ್ಧೆ*
  • *ಮಡಿಕೇರಿ ನಗರಸಭೆ : ತ್ಯಾಜ್ಯ ನಿರ್ವಹಣೆಗೆ ವೈಜ್ಞಾನಿಕ ವಿಧಾನಕ್ಕೆ ಒತ್ತು : ಶಾಸಕ ಮಂತರ್ ಗೌಡ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕುಶಾಲನಗರ ತಾಲ್ಲೂಕು ಮಟ್ಟದ ಮಕ್ಕಳ ಪ್ರತಿಭಾ ಕಾರಂಜಿ, ಸಾಂಸ್ಕೃತಿಕ ಸ್ಪರ್ಧೆ : ವಿವಿಧ ಶಾಲಾ ವಿದ್ಯಾರ್ಥಿಗಳ ಪ್ರತಿಭೆ ಅನಾವರಣ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕುಶಾಲನಗರ ತಾಲ್ಲೂಕು ಮಟ್ಟದ ಮಕ್ಕಳ ಪ್ರತಿಭಾ ಕಾರಂಜಿ, ಸಾಂಸ್ಕೃತಿಕ ಸ್ಪರ್ಧೆ : ವಿವಿಧ ಶಾಲಾ ವಿದ್ಯಾರ್ಥಿಗಳ ಪ್ರತಿಭೆ ಅನಾವರಣ*

ಡಿಸೆಂಬರ್ 19, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಕುಶಾಲನಗರ NEWS DESK : ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಮತ್ತು ಕ್ಷೇತ್ರ ಸಮನ್ವಯಾಧಿಕಾರಿಗಳ ಕಚೇರಿ ಸೋಮವಾರಪೇಟೆ ಹಾಗೂ ಕುಶಾಲನಗರ ಕ್ಲಸ್ಟರ್ ಕೇಂದ್ರದ ಆಶ್ರಯದಲ್ಲಿ ಬುಧವಾರ ಕುಶಾಲನಗರ ಪಿಎಂಶ್ರೀ ಶಾಲಾ ಸಭಾಂಗಣದಲ್ಲಿ ಏರ್ಪಡಿಸಿದ್ದ ತಾಲ್ಲೂಕು ಮಟ್ಟದ ಪ್ರತಿಭಾ ಕಾರಂಜಿ, ಸಾಂಸ್ಕೃತಿಕ ಸ್ಪರ್ಧೆ ಕಾರ್ಯಕ್ರಮದಲ್ಲಿ ವಿವಿಧ ಶಾಲೆಯ ವಿದ್ಯಾರ್ಥಿಗಳ ಪ್ರತಿಭೆ ಅನಾವರಣಗೊಂಡಿತು.
ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ವಿದ್ಯಾರ್ಥಿಗಳ ವಿವಿಧ ವೈಯಕ್ತಿಕ ಹಾಗೂ ಗುಂಪು ಸ್ಪರ್ಧೆಗಳಲ್ಲಿ ಭಾಗವಹಿಸಿ ಉತ್ತಮ ಪ್ರದರ್ಶನ ನೀಡಿ ಎಲ್ಲರ ಗಮನ ಸೆಳೆದರು. ಮಕ್ಕಳು ಕಂಠಪಾಠ, ಧಾರ್ಮಿಕ ಪಠಣ, ಛದ್ಮವೇಷ ಸ್ಪರ್ಧೆ, ರಸಪ್ರಶ್ನೆ, ರಂಗೋಲಿ, ಜಾನಪದ ಗೀತೆ, ಕವ್ವಾಲಿ, ಕ್ಲೇ ಮಾಡಲಿಂಗ್, ಭಾಷಣ ಮತ್ತು ಪ್ರಬಂಧ ಸ್ಪರ್ಧೆ ಸೇರಿದಂತೆ ಮುಂತಾದ ಸ್ಪರ್ಧೆಗಳಲ್ಲಿ ಮಕ್ಕಳ ಪ್ರತಿಭಾ ಪ್ರದರ್ಶನ ಪ್ರೇಕ್ಷಕರ ಗಮನ ಸೆಳೆಯಿತು. ಕೂಡಿಗೆ ಡಯಟ್ ಪ್ರಾಂಶುಪಾಲ ರಾಮಚಂದ್ರರಾಜೇ ಅರಸ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಶಿಕ್ಷಣ ಅಂದರೆ ಕೇವಲ ಓದು,ಬರಹ,ಪರೀಕ್ಷೆ ,ಅಂಕ,ತೇರ್ಗಡೆ ಇಷ್ಟಕ್ಕೆ ಸೀಮಿತವಾಗದೆ ಮಕ್ಕಳ ಪ್ರತಿಭೆಯನ್ನು ಗುರುತಿಸಿ ಹೊರತರುವುದು.ಜೊತೆಗೆ ಬೇರೆ ಶಾಲೆಯವರೊಂದಿಗೆ ಒಡನಾಟ ಹೊಂದಿ ಹೇಗೆ ಅಭಿವೃದ್ಧಿ ಮಾಡಬೇಕು ಎಂಬುದರ ಬಗ್ಗೆ ಚರ್ಚೆ ಮಾಡಲು ಇಂತಹ ಕಾರ್ಯಕ್ರಮಗಳು ಸುವರ್ಣ ಅವಕಾಶಗಳಾಗಿವೆ ಎಂದರು. ಪ್ರತಿಭಾ ಕಾರಂಜಿ ಸ್ಪರ್ಧೆಯು ಮಕ್ಕಳಲ್ಲಿ ಶಿಕ್ಷಣ, ಮನರಂಜನೆ ಹಾಗೂ ವ್ಯಕ್ತಿತ್ವ ವಿಕಸನಕ್ಕೆ ಉತ್ತಮ ವೇದಿಕೆಯಾಗಿದೆ ಎಂದರು. ಮಕ್ಕಳಲ್ಲಿನ ಗುಪ್ತ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸಬೇಕು. ವಿದ್ಯಾರ್ಥಿಗಳ ಕಲಿಕೆಗೆ ಹಾಗೂ ಹೊಸದಾದ ಜೀವನ ಕೌಶಲ್ಯವನ್ನು ಹೊಂದಲು ವೇದಿಕೆಯಾಗಿದೆ ಎಂದರು. ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಕೃಷ್ಣಪ್ಪ ಮಾತನಾಡಿ,ಮಕ್ಕಳಲ್ಲಿ ಉತ್ತಮ ಪ್ರತಿಭೆಯನ್ನು ಅನಾವರಣಗೊಳಿಸಲು ಶಿಕ್ಷಕರೊಂದಿಗೆ ಪೋಷಕರು ಹೆಚ್ಚಿನ ಪ್ರೋತ್ಸಾಹ ನೀಡಬೇಕು ಎಂದರು.ಪ್ರತಿಭಾ ಕಾರಂಜಿ ಸಾಂಸ್ಕೃತಿಕ ಸ್ಪರ್ಧೆಗಳು ವಿದ್ಯಾರ್ಥಿಗಳಲ್ಲಿನ ಪ್ರತಿಭೆಯನ್ನು ಗುರುತಿಸಿ ಹೊರತರಲು ಉತ್ತಮ ಅವಕಾಶವನ್ನು ನೀಡುತ್ತದೆ. ಇದರೊಂದಿಗೆ ಭಾರತದ ಸಂಸ್ಕೃತಿ ಪರಂಪರೆಯ ಅನಾವರಣಗೊಳ್ಳುತ್ತದೆ ಎಂದರು. ಪಿಎಂಶ್ರೀ ಸರ್ಕಾರಿ ಪ್ರಾಥಮಿಕ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಚಂದನ್ ಅಧ್ಯಕ್ದತೆ ವಹಿಸಿದ್ದರು. ಪಿಎಂಶ್ರೀ ಸರ್ಕಾರಿ ಪ್ರಾಥಮಿಕ ಶಾಲೆ ಮುಖ್ಯ ಶಿಕ್ಷಕ ಸಣ್ಣಸ್ವಾಮಿ,ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಪ್ರಸನ್ನಕುಮಾರ್,ತಾಲ್ಲೂಕು ಪ್ರೌಢಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ರತ್ನಕುಮಾರ್,ಕಾರ್ಯದರ್ಶಿ ಟಿ.ವಿ.ಶೈಲಾ,ತಾಲ್ಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಟಿ.ಕೆ.ಬಸವರಾಜು,ನಿರ್ದೇಶಕರಾದ ಎಸ್.ಕೆ.ಸೌಭಾಗ್ಯ,ಉಮಾದೇವಿ,ಕವಿತಾ,ತಾಲ್ಲೂಕು ದೈಹಿಕ ಶಿಕ್ಷಣ ಪರಿವೀಕ್ಷಕಿ ಸುಕುಮಾರಿ,ಇಸಿಒ ಯಾದಕುಮಾರಿ, ಕ್ಷೇತ್ರ ಸಮನ್ವಯಾಧಿಕಾರಿ ಮಂಜೇಶ್ ,ಸರ್ಕಾರಿ ಮಹಿಳಾ ಪ್ರೌಢಶಾಲೆ ಮುಖ್ಯ ಶಿಕ್ಷಕ ಎಸ್.ಕೆ.ನವೀನ್ ಕುಮಾರ್, ಮೌಲಾನಾ ಆಜಾದ್ ಶಾಲೆಯ ಮುಖ್ಯ ಶಿಕ್ಷಕಿ ಶ್ವೇತಾ,ಗುಡ್ಡೆಹೊಸೂರು ಪ್ರಾಥಮಿಕ ಶಾಲಾಭಿದ್ಧಿ ಸಮಿತಿ ಅಧ್ಯಕ್ಷ ನಾಗೇಂದ್ರ, ಸರ್ಕಾರಿ ನೌಕರರ ಸಂಘದ ನಿರ್ದೇಶಕ ಯಶವಂತ, ಶಶಿಕುಮಾರ್,ಅನುದಾನಿತ ಪ್ರೌಢಶಾಲಾ ಶಿಕ್ಷಕರ ಸಂಘದ ಜಿಲ್ಲಾ ಕಾರ್ಯದರ್ಶಿ ನಾಗರಾಜು,ಸಮೂಹ ಸಂಪನ್ಮೂಲ ವ್ಯಕ್ತಿ ಟಿ.ಇ. ವಿಶ್ವನಾಥ್ ,ಮುಖಂಡರಾದ ಸುರೇಶ್,ಸುಜಾತಾ,ಮಹೇಂದ್ರ,ಶಿವಕುಮಾರ್ ಮತ್ತಿತರರು ಪಾಲ್ಗೊಂಡಿದ್ದರು. ಕ್ಷೇತ್ರ ಸಮನ್ವಯಾಧಿಕಾರಿ ಮಂಜೇಶ್ ಸ್ವಾಗತಿಸಿದರು. ಸಿಆರ್ಪಿ ವಿಶ್ವನಾಥ್ ನಿರೂಪಿಸಿದರು. ಸಿಆರ್ಪಿ ಶಾಂತ ಕುಮಾರ್ ವಂದಿಸಿದರು.ಇದೇ ಸಂದರ್ಭ ಕೂಡಿಗೆ ಡಯಟ್ ಸಂಸ್ಥೆಗೆ ನೂತನ ಪ್ರಾಂಶುಪಾಲರಾಗಿ ಅಧಿಕಾರ ವಹಿಸಿಕೊಂಡ ರಾಮಚಂದ್ರರಾಜೇ ಅರಸ್ ಅವರನ್ನು ಕ್ಷೇತ್ರ ಶಿಕ್ಷಣಾಧಿಕಾರಿ ಕೃಷ್ಣಪ್ಪ ಸನ್ಮಾನಿಸಿದರು.

 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಎಚ್1-ಎನ್1 : ಅಗತ್ಯ ಮುನ್ನೆಚ್ಚರಿಕೆ ವಹಿಸಲು ಸೂಚನೆ*

ಆಗಷ್ಟ್ 29, 2026

*ಅರೆಭಾಷೆಗೆ ಸಾಂಸ್ಕೃತಿಕ ನೆಲೆಗಟ್ಟು, ವ್ಯಾಕರಣದ ಶಿಸ್ತು ರೂಢಿಸಿದವರು ಕೋಡಿ ಕುಶಾಲಪ್ಪ ಗೌಡರು : ಸದಾನಂದ ಮಾವಜಿ*

ಆಗಷ್ಟ್ 29, 2026

*ಅಂತರ ಶಾಲಾ ಶಟಲ್ ಬ್ಯಾಡ್ಮಿಂಟನ್: ಶ್ರೀ ರಾಜರಾಜೇಶ್ವರಿ ಶಾಲೆ ವಿದ್ಯಾರ್ಥಿಗಳ ಸಾಧನೆ*

ಆಗಷ್ಟ್ 29, 2026

*ಅರೆಭಾಷೆಗೆ ಸಾಂಸ್ಕೃತಿಕ ನೆಲೆಗಟ್ಟು, ವ್ಯಾಕರಣದ ಶಿಸ್ತು ರೂಢಿಸಿದವರು ಕೋಡಿ ಕುಶಾಲಪ್ಪ ಗೌಡರು : ಸದಾನಂದ ಮಾವಜಿ*

ಆಗಷ್ಟ್ 29, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, ಆ.29 NEWS DESK : ಅರೆಭಾಷೆಗೆ ಸಾಂಸ್ಕೃತಿಕ ನೆಲೆಗಟ್ಟನ್ನು ಹಾಕಿಕೊಟ್ಟು, ವ್ಯಾಕರಣದ ಶಿಸ್ತನ್ನು ರೂಢಿಸಿದವರು ಭಾಷಾ ವಿಜ್ಞಾನಿ ಡಾ.…

*ಅಂತರ ಶಾಲಾ ಶಟಲ್ ಬ್ಯಾಡ್ಮಿಂಟನ್: ಶ್ರೀ ರಾಜರಾಜೇಶ್ವರಿ ಶಾಲೆ ವಿದ್ಯಾರ್ಥಿಗಳ ಸಾಧನೆ*

ಆಗಷ್ಟ್ 29, 2026

ಕೊಡಗಿನಲ್ಲಿ ಕರವೇ ಸ್ವಾಭಿಮಾನಿ ಸೇನೆಗೆ ನೂತನ ಸದಸ್ಯರ ಸೇರ್ಪಡೆ

ಆಗಷ್ಟ್ 29, 2026

*ತೀವ್ರಗೊಳಿಸಿದ ಐಇಸಿ ಅಭಿಯಾನ : ಮ್ಯಾರಥಾನ್ ಮೂಲಕ ಎಚ್‌ಐವಿ/ಏಡ್ಸ್ ಜಾಗೃತಿ*

ಆಗಷ್ಟ್ 29, 2026

*ಮಡಿಕೇರಿಯಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸಭೆ : ಸ್ವಾವಲಂಬಿ ಮಹಿಳಾ ಫಲಾನುಭವಿಗಳ ಗುರುತಿಸಿ ಸನ್ಮಾನಕ್ಕೆ ಕ್ರಮ*

ಆಗಷ್ಟ್ 29, 2026

*ಶಿಸ್ತುಬದ್ಧ ಶಿಕ್ಷಣದಿಂದಲೇ ಸಮಾಜದ ಯಶಸ್ಸು, ದೇಶದ ಪ್ರಗತಿ : ಶಾಸಕ ಎ.ಎಸ್.ಪೊನ್ನಣ್ಣ*

ಆಗಷ್ಟ್ 29, 2026

*ಫೀ.ಮಾ. ಕಾರ್ಯಪ್ಪ ಕಾಲೇಜಿನಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆ: ಶಿಸ್ತುಬದ್ಧ ಜೀವನವೇ ಸಾಧನೆಯ ದಾರಿದೀಪ: ಕರ್ನಲ್ ಸಂಜೀವ್ ಕುಮಾರ್*

ಆಗಷ್ಟ್ 29, 2026

*ಕೊಡಗು ವಿದ್ಯಾಲಯದಲ್ಲಿ ಬ್ರಹ್ಮಗಿರಿ ಸಹೋದಯ ಸಿಬಿಎಸ್ಇ ಶಾಲೆಗಳ ಸಾಂಸ್ಕೃತಿಕ ಸ್ಪರ್ಧೆ*

ಆಗಷ್ಟ್ 29, 2026

*ಮಡಿಕೇರಿ ನಗರಸಭೆ : ತ್ಯಾಜ್ಯ ನಿರ್ವಹಣೆಗೆ ವೈಜ್ಞಾನಿಕ ವಿಧಾನಕ್ಕೆ ಒತ್ತು : ಶಾಸಕ ಮಂತರ್ ಗೌಡ*

ಆಗಷ್ಟ್ 29, 2026

*ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಕುಂದುಕೊರತೆ ಸಭೆ : ಪರಿಶಿಷ್ಟರ ಸಮಸ್ಯೆಗಳನ್ನು ಕಾಲಮಿತಿಯಲ್ಲಿ ಪರಿಹರಿಸುವುದು ಆದ್ಯ ಕೆಲಸವಾಗಿದೆ : ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಎನ್.ಬಿಂದುಮಣಿ*

ಆಗಷ್ಟ್ 29, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.