Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*
  • *ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*
  • *ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*
  • *ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*
  • *ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*
  • *ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*
  • *2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*
  • *ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*
  • *ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*
  • *ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕೋಕೇರಿ : ನೀಲಿಯಟ್ ಶ್ರೀ ಶಾಸ್ತವು ದೇವರ ಕೊಂಬಾಟ್ ವಾರ್ಷಿಕ ಉತ್ಸವ ಸಂಪನ್ನ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕೋಕೇರಿ : ನೀಲಿಯಟ್ ಶ್ರೀ ಶಾಸ್ತವು ದೇವರ ಕೊಂಬಾಟ್ ವಾರ್ಷಿಕ ಉತ್ಸವ ಸಂಪನ್ನ*

ಡಿಸೆಂಬರ್ 19, 20251 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ನಾಪೋಕ್ಲು ಡಿ.19 NEWS DESK : ಕೋಕೇರಿ ಗ್ರಾಮದ ನೀಲಿಯಟ್ ಶ್ರೀ ಶಾಸ್ತವು ದೇವರ ಕೊಂಬಾಟ್ ವಾರ್ಷಿಕ ಉತ್ಸವವು ಶ್ರದ್ಧಾ ಭಕ್ತಿಯಿಂದ ಸಂಪನ್ನಗೊಂಡಿತ್ತು. ಉತ್ಸವದಲ್ಲಿ ಕೊಂಬಾಟ್, ಪೀಲಿಯಟ್, ಬಿಲ್ಲಾಟ್, ಕತ್ತಿಯಟ್, ತೇಲಾಟ್ ಸೇರಿದಂತೆ 18 ತರದ (ಆಟ್) ಪೂರ್ವ ಪದ್ಧತಿ ಕುಣಿತ ವಿಶೇಷವಾಗಿ ಆಕರ್ಷಣೆಯಾಗಿದೆ. ಪ್ರತಿ ವರ್ಷದಂತೆ ಈ ವರ್ಷವೂ ಮೊದಲು ನೀಲಿಯಟ್ ಶ್ರೀ ಶಾಸ್ತವು ದೇವರ ಸನ್ನಿಧಿಯಲ್ಲಿ ಗ್ರಾಮಸ್ಥರು ಎತ್ತು ಹೇರಟ ಹಾಗೂ ವಿಶೇಷ ಪ್ರಾರ್ಥನೆಯ ಸಲ್ಲಿಸಿದ ಬಳಿಕ ಸಮೀಪದ ಶ್ರೀ ಭಗವತಿ ದೇವಾಲಯಕ್ಕೆ ಬರಲಾಯಿತು. ನಂತರ ಸನ್ನಿಧಿಗೆ ಸಂಬಂಧಪಟ್ಟ ವೃತದಾರಿ ಗ್ರಾಮಸ್ಥರು ವಿಶೇಷ ರೀತಿಯಲ್ಲಿ ಕೆಂಪು ಮತ್ತು ಶ್ವೇತ ವಸ್ತ್ರಗಳನ್ನು, ಗೆಜ್ಜೆ ತೊಟ್ಟುಕೊಂಡು ದೇವಾಲಯದ ಪ್ರಣಾಂಗಣದಲ್ಲಿ ವೃತ್ತಾಕಾರವಾಗಿ ಪಡುವ ಎಂಬ ಚರ್ಮ ವಾದ್ಯಕ್ಕೆ ತಕ್ಕಂತೆ ಲಯಬದ್ಧವಾಗಿ ಹೆಜ್ಜೆ ಹಾಕುವುದು ಅತ್ಯಾಕರ್ಷಕವಾಗಿದ್ದು, ನೆರೆದ ಭಕ್ತಾದಿಗಳು ವೀಕ್ಷಿಸಿ ತನ್ಮಯರಾದರು. ಉತ್ಸವಕ್ಕೆ ಈ ಗ್ರಾಮಕ್ಕೆ ಸಂಬಂಧಿಸಿದ ಗ್ರಾಮಸ್ಥರು 20 ದಿನಗಳ ಕಟ್ಟುನಿಟ್ಟಿನ ವ್ರತ ಆಚರಣೆಯೊಂದಿಗೆ ಪೂರ್ವ ತಯಾರಿ ನಡೆಸಲಾಗುತ್ತದೆ. ಹಬ್ಬದ ದಿನ ನವಿಲು ಗರಿಗಳನ್ನು ಹಿಡಿದು ಕುಣಿಯುವ ಪೀಲಿಯಟ್, ಪ್ರಾಣಿಗಳ ಅಥವಾ ಮರದಿಂದ ಮಾಡಿದ ಕೊಂಬುಗಳನ್ನು ಹಿಡಿದುಕೊಂಡು ಕುಣಿಯುವ ಕೊಂಬಾಟ್, ಬಿಲ್ಲು ಬಾಣಗಳನ್ನು ಹಿಡಿದು ಕುಣಿಯುವ ಬಿಲ್ಲಾಟ್, ಮರದಿಂದ ತಯಾರಿಸಿದ ಕತ್ತಿ ಹಿಡಿದು ಕುಣಿಯುವ ಕತ್ತಿಯಟ್ ಸೇರಿದಂತೆ 18 ತರದ (ಆಟ್) ಕುಣಿತ ಹಬ್ಬದ ದಿನ ಬೆಳಿಗ್ಗೆ ಮತ್ತು ಸಂಜೆ ದೇವಾಲಯದ ವರಣದಲ್ಲಿ ನೆರವೇರಿತು. ದೇವಾಲಯದಲ್ಲಿ ಭಕ್ತಾದಿಗಳು ತಮ್ಮ ಇಷ್ಟಾರ್ಥ ಸಿದ್ಧಿಗಳಿಗೆ ಹರಕೆ ಕಾಣಿಕೆ ಒಪ್ಪಿಸಿ ಪೂಜೆಗಳನ್ನು ನೆರವೇರಿಸಿ ಪುನೀತ ಭಾವ ಹೊಂದಿದರು. ಹಬ್ಬದ ಪ್ರಯುಕ್ತ ವಿವಿಧ ಪೂಜಾ ವಿಧಿ ವಿಧಾನಗಳ ಬಳಿಕ ಮಂಗಳಾರತಿ ಮಹಾಪೂಜೆ ತೀರ್ಥ ಪ್ರಸಾದ ವಿತರಣೆ ಬಳಿಕ ಭಕ್ತಾದಿಗಳಿಗೆ ಅನ್ನದಾನವು ನೆರವೇರಿಸಲಾಯಿತು. ಉತ್ಸವದಲ್ಲಿ ತಕ್ಕ ಮುಖ್ಯಸ್ಥರು ದೇವಾಲಯದ ಆಡಳಿತ ಪದಾಧಿಕಾರಿಗಳು ಹಾಗೂ ಊರ ಮತ್ತು ಪರ ಊರಿನ ಭಕ್ತಾದಿಗಳು ಅಧಿಕ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

ವರದಿ : ದುಗ್ಗಳ ಸದಾನಂದ.

Follow us Follow us
Share. WhatsApp Facebook Twitter Email Telegram Copy Link

Related Posts

*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಸೆ.26: ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್…

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*

ಸೆಪ್ಟೆಂಬರ್ 26, 2026

*ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*

ಸೆಪ್ಟೆಂಬರ್ 26, 2026

*ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*

ಸೆಪ್ಟೆಂಬರ್ 26, 2026

*2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*

ಸೆಪ್ಟೆಂಬರ್ 26, 2026

*ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*

ಸೆಪ್ಟೆಂಬರ್ 26, 2026

*ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*

ಸೆಪ್ಟೆಂಬರ್ 26, 2026

*ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*

ಸೆಪ್ಟೆಂಬರ್ 26, 2026

*36 ವರ್ಷ ಸೇವೆ ಸಲ್ಲಿಸಿದ ಅಂಗನವಾಡಿ ಕಾರ್ಯಕರ್ತೆ ದೇವಮಾಜಿ, ಶಿಕ್ಷಕಿ ಭೋಜಮ್ಮಗೆ ಆತ್ಮೀಯ ಬೀಳ್ಕೊಡುಗೆ*

ಸೆಪ್ಟೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.