Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕೊಡಗಿನಲ್ಲಿ ಮೋಡಬಿತ್ತನೆ ಬೇಡ ಬಿಜೆಪಿ ಕೃಷಿಮೋರ್ಚಾ ಒತ್ತಾಯ*
  • *ಶ್ರೀರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ರೋಟರಿ ನಮನ*
  • *ಮಡಿಕೇರಿ ಬ್ರಹ್ಮಾಕುಮಾರಿ ಲೈಟ್ ಹೌಸ್ ನಲ್ಲಿ ರಕ್ತದಾನ ಶಿಬಿರ*
  • *ಎಸ್‍ಐಆರ್ ಪ್ರಕ್ರಿಯೆ, ಸೆ.23 ರ ವರೆಗೆ ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಕೆಗೆ ಅವಕಾಶ : ಕರಡು ಮತದಾರರ ಪಟ್ಟಿ : ಜಿಲ್ಲೆಯಲ್ಲಿ 4,05,803 ಮಂದಿ ಮತದಾರರು : ಡಿಸಿ ಮಾಹಿತಿ *
  • *ಪೊನ್ನಾಡ್ ರೈತ ಉತ್ಪಾದಕ ಸಂಸ್ಥೆ(ಎಫ್‌ಪಿಓ)ಗೆ ಮಾರುಕಟ್ಟೆ ವಿಭಾಗದಲ್ಲಿ ರಾಜ್ಯ ಮಟ್ಟದ ಶ್ರೇಷ್ಠತಾ ಪ್ರಶಸ್ತಿ*
  • *ಪೂಂಪುಹಾರ್ ವರೆಗೆ 16ನೇ ವರ್ಷದ ಕಾವೇರಿ ಜಾಗೃತಿ ರಥಯಾತ್ರೆ : ಅ.26ರಿಂದ ತಲಕಾವೇರಿಯಿಂದ ಆರಂಭ*
  • *ಕಟ್ಟೆಮಾಡು ಸಕಾ೯ರಿ ಶಾಲೆಯಲ್ಲಿ ಹಿರಿಯ ಜೀವಿಗಳಿಗೆ ಗೌರವ ನಮನ*
  • *ಬುಡಕಟ್ಟು ಸಾಂಸ್ಕೃತಿಕ ಕಾರ್ಯಕ್ರಮ, ವೈದ್ಯಕೀಯ ತಪಾಸಣೆ ಹಾಗೂ ರಕ್ತದಾನ ಶಿಬಿರ : ಸಂಸ್ಕೃತಿ ಉಳಿಸಿ ಬೆಳೆಸುವಲ್ಲಿ ಯುವಜನರ ಪಾತ್ರ ಮಹತ್ವದ್ದು : ಶಾಸಕ ಎ.ಎಸ್.ಪೊನ್ನಣ್ಣ*
  • *ಹಿರಿಯ ಜೀವಿಗಳಿಗೆ  ಮರಗೋಡು ಸಕಾ೯ರಿ ಶಾಲೆಯಲ್ಲಿ ಗೌರವ ನಮನ*
  • *ಪಾರಾಣೆಯ ಸಕಾ೯ರಿ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ಗೌರವ ಸಲ್ಲಿಕೆ ; ಕನ್ನಡದಲ್ಲಿ ಓದಿಯೂ ಉತ್ತಮ ಹುದ್ದೆಗೇರಲು ಸಾಧ್ಯ – ಕೆ.ಎ.ಉಮ್ಮರ್*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಕರ್ನಾಟಕ»*ಉಡುಪಿಯಲ್ಲಿ ಪ್ರೋತ್ಸಾಹಧನದೊಂದಿಗೆ ಪಿ.ಯು ಶಿಕ್ಷಣ ಪಡೆಯುವ ಅವಕಾಶ*
ಕರ್ನಾಟಕ ಕೊಡಗು ಜಿಲ್ಲೆ

*ಉಡುಪಿಯಲ್ಲಿ ಪ್ರೋತ್ಸಾಹಧನದೊಂದಿಗೆ ಪಿ.ಯು ಶಿಕ್ಷಣ ಪಡೆಯುವ ಅವಕಾಶ*

ಡಿಸೆಂಬರ್ 19, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಉಡುಪಿ ಡಿ.19 NEWS DESK : ಶಿಕ್ಷಣ ಕ್ಷೇತ್ರದ ಮಹೋನ್ನತ ಗುರಿಯೊಂದಿಗೆ ಏಳು ಜನ ಅತ್ಯಂತ ಅನುಭವಿ ಉಪನ್ಯಾಸಕರುಗಳೇ ಸೇರಿ ಸ್ಥಾಪಿಸಿದ ಕಾರ್ಕಳದ ಕ್ರಿಯೇಟಿವ್ ಶಿಕ್ಷಣ ಸಂಸ್ಥೆ 2022ರಲ್ಲಿ ತನ್ನ ಶಿಕ್ಷಣ ಸೇವೆಯನ್ನು ಉಡುಪಿಗೂ ವಿಸ್ತರಿಸುವ ಯೋಜನೆಯೊಂದಿಗೆ ಕಲ್ಯಾಣ ಪುರದ ತ್ರಿಶಾ ಪ.ಪೂ.ಕಾಲೇಜಿನ ಶೈಕ್ಷಣಿಕ ಸಹಭಾಗಿತ್ವ ವಹಿಸಿಕೊಂಡಿತು. ಈಗಾಗಲೇ ಪಿ.ಯು ಫಲಿತಾಂಶದಲ್ಲಿ ಆರಂಭಿಕ ವರ್ಷದಲ್ಲೇ ರಾಜ್ಯದ ಗಮನ ಸೆಳೆದ ಕ್ರಿಯೇಟಿವ್ ಸಂಸ್ಥೆ ಉಡುಪಿಯ ಶಾಖೆಯಲ್ಲೂ ಆ ಯಶಸ್ಸನ್ನು ಮುಂದುವರೆಸಿದೆ. ತನ್ನ ಪ್ರಥಮ ವರ್ಷದ ಫಲಿತಾಂಶದಲ್ಲೇ ಶೇ.100 ಗಳಿಸುವುದರ ಜೊತೆಗೆ ಪಿ.ಯು. ಪರೀಕ್ಷೆಯಲ್ಲಿ ರಾಜ್ಯಕ್ಕೆ 8ನೇ ರ್ಯಾಂಕ್ ಗಳಿಸುವ ಮೂಲಕ ಸಂಸ್ಥೆ ಕೀರ್ತಿ ಗಳಿಸಿದೆ. 94 ಮಕ್ಕಳೊಂದಿಗೆ ಪ್ರಾರಂಭವಾದ ವಿದ್ಯಾಸಂಸ್ಥೆಯಲ್ಲಿ ಇಂದು 400ಕ್ಕೂ ಅಧಿಕ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ವಿದ್ಯಾರ್ಥಿಗಳಲ್ಲಿ ಕೇವಲ ಅಂಕ ಗಳಿಕೆಯ ಹಸಿವನ್ನು ಮಾತ್ರ ಬೆಳೆಸದೆ ಜೀವನ ಮೌಲ್ಯಗಳು, ನೈತಿಕತೆ, ಸದ್ವಿಚಾರಗಳನ್ನು ಪ್ರತಿನಿತ್ಯ ಬೋಧಿಸುತ್ತಿರುವುದು ಸಂಸ್ಥೆಯ ಗುಣಮಟ್ಟದ ಶಿಕ್ಷಣಕ್ಕೆ ಸಾಕ್ಷಿಯಾಗಿದೆ. :: ಉಡುಪಿಯಲ್ಲಿ ಕ್ರಿಯೇಟಿವ್ ಸಂಸ್ಥೆಯ ಯಶಸ್ಸಿನ ಪಯಣ :: ಸಂಸ್ಥೆ ಪ್ರಾರಂಭದ ವರ್ಷದಲ್ಲೇ ಶೇ.100 ರಷ್ಟು ಫಲಿತಾಂಶ, ಉತ್ತಮ ವ್ಯವಸ್ಥಿತವಾದ ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಯರ ವಸತಿ ನಿಲಯಗಳು, ಪ್ರತ್ಯೇಕಅಧ್ಯಯನ ಕೊಠಡಿಗಳು, ಪೌಷ್ಠಿಕಾಂಶಯುಕ್ತ ಆಹಾರ, ಹಿತವೆನಿಸುವ ತಿಂಡಿ ತಿನಿಸುಗಳು, ಪ್ರತೀ ವಾರವೂ ಮಾದರಿ ಸ್ಪರ್ಧಾತ್ಮಕ ಪರೀಕ್ಷೆಗಳು, ಅತ್ಯುತ್ತಮ ಸಂಗ್ರಹ ಹೊಂದಿರುವ ಗ್ರಂಥಾಲಯ, ಪ್ರತಿ ದಿನವೂ ಉಪನ್ಯಾಸಕರೊಂದಿಗೆ ಸಂದೇಹ ನಿವಾರಣಾ ಅವಧಿಗಳು, ಸ್ಫರ್ಧಾತ್ಮಕ ಪರೀಕ್ಷೆಯ ತರಬೇತಿಗಾಗಿ ಅತ್ಯಂತ ಅನುಭವಿ ಉಪನ್ಯಾಸಕ ವರ್ಗ. ಅತೀ ಹೆಚ್ಚು ವಿದ್ಯಾರ್ಥಿಗಳು ಸರ್ಕಾರಿ ಕೋಟಾದಡಿ ವೈದ್ಯಕೀಯ ಶಿಕ್ಷಣಕ್ಕೆ ಪ್ರವೇಶಾತಿ ಪಡೆಯುವಜೊತೆಗೆ, AIIMS, JIPMER ನಂತಹ ರಾಷ್ಟ್ರ ಮಟ್ಟದ ಮೆಡಿಕಲ್ ಸಂಸ್ಥೆಯಲ್ಲೂ ಅರ್ಹತೆ ಗಳಿಸಿದ್ದಾರೆ.B.E ಕೋರ್ಸ್‍ಗಾಗಿ ದೇಶದ ಉನ್ನತ ಸಂಸ್ಥೆಗಳಾಗಿರುವ IIT, NIT ನಂತಹ ಸಂಸ್ಥೆಗೂ ಪ್ರವೇಶಾತಿ ಪಡೆಯುವ ಮೂಲಕ ಸ್ಫರ್ಧಾತ್ಮಕ ಪರೀಕ್ಷೆಯಲ್ಲಿ ಸಂಸ್ಥೆ ಅತ್ಯುತ್ತಮ ಯಶಸ್ಸನ್ನು ಸಾಧಿಸಿದೆ. NEET, JEE, CET ಪರೀಕ್ಷೆಯಲ್ಲಿ ವಿದ್ಯಾರ್ಥಿಗಳು ಉನ್ನತರ್ಯಾಂಕ್ ಗಳಿಸುವ ಜೊತೆಗೆ NDA, NATA, IISER, UCEED, VIT ನಂತಹ ಪರೀಕ್ಷೆಗಳಲ್ಲೂ ಮೇಲುಗೈ ಸಾಧಿಸಿರುವುದು ಹೆಮ್ಮೆಯ ವಿಚಾರ. ಕ್ರಿಯೇಟಿವ್ ಸಂಸ್ಥೆ ಸಮಾಜದ ಎಲ್ಲಾ ಸ್ತರದ ವಿದ್ಯಾರ್ಥಿಗಳಿಗೂ ಉನ್ನತ ವ್ಯವಸ್ಥೆಯಡಿಯಲ್ಲಿ ಹೈಟೆಕ್ ಸೌಲಭ್ಯದೊಂದಿಗೆಪಿ. ಯು. ಶಿಕ್ಷಣ ಹಾಗೂ ಸ್ಫರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿದೊರಕಿಸಿಕೊಡಬೇಕೆಂಬ ಮಹಾದಾಸೆಯಿಂದ ‘ಕ್ರಿಯೇಟಿವ್ ಹೊಂಗಿರಣ’ಯೋಜನೆಯನ್ನು ರೂಪಿಸುತ್ತಿದೆ. ಉತ್ತರ ಕರ್ನಾಟಕ ಭಾಗದ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಈ ಯೋಜನೆಯಅರ್ಹತಾ ಪರೀಕ್ಷೆಯನ್ನು ಡಿ.21 ರಂದು ಅಥಣಿಯ ಶ್ರೀ ಶಾರದಾ ಮಾತಾ ಇಂಗ್ಲೀಷ್ ಮೀಡಿಯಂ ಹೈಸ್ಕೂಲ್ (ನವೋದಯ ಶಾಲೆ) ಕನಕನಗರ ಮತ್ತು 28-12-2025 ಭಾನುವಾರದಂದು ಸರ್ಕಾರಿ ಪ್ರೌಢ ಶಾಲೆ, ಚಿಕ್ಕೋಡಿ ಬಿ.ಓ. ಕಛೇರಿಆವರಣ, ತಾಲೂಕು ಪಂಚಾಯತ್ ಎದುರು(ತಾಲೂಕು ಶಾಲೆ), ಶ್ರೀ ಚನ್ನಬಸವೇಶ್ವರ ವಿದ್ಯಾಪೀಠ ಕನ್ನಡ ಹಾಗೂ ಇಂಗ್ಲೀಷ್ ಮಾಧ್ಯಮ ಶಾಲೆಗಳು( ಬ್ಯಾಳಿ ಕಟ್ಟ) ವಾಲ್ಮೀಕಿ ವೃತ್ತ, ಗೋಕಾಕ್ ಹಾಗೂ ಕನಕದಾಸ ಶಿಕ್ಷಣ ಸಮಿತಿಯ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಶಿಕ್ಷಣ ಮಹಾವಿದ್ಯಾಲಯ(ವಿ.ಎಡ್, ಕಾಲೇಜು) ನೆಹರು ನಗರ, ಬೆಳಗಾವಿಯಲ್ಲಿ ಆಯೋಜಿಸಲಾಗಿದೆ. ಆಯ್ಕೆಯಾದ 150 ಅರ್ಹ ವಿದ್ಯಾರ್ಥಿಗಳು ಕ್ರಿಯೇಟಿವ್ ಸಂಸ್ಥೆಯ ಉಡುಪಿ ಶಾಖೆಯಲ್ಲಿ ಸಂಪೂರ್ಣ ಉಚಿತ ಶಿಕ್ಷಣ ಅಥವಾ ಪ್ರೋತ್ಸಾಹಧನದೊಂದಿಗೆ ಪಿ.ಯು ಶಿಕ್ಷಣ ಪಡೆಯುವ ಅವಕಾಶವಿರುತ್ತದೆ. ಈ ಯೋಜನೆಗೆ ವಿಜ್ಞಾನ ವಿಭಾಗ ಸೇರಲಿಚ್ಛಿಸುವ ಯಾವುದೇ ವಿದ್ಯಾರ್ಥಿ www.creativeedu.in ಮೂಲಕ ಅರ್ಜಿ ಸಲ್ಲಿಸಬಹುದು. ನೇರವಾಗಿ ಸಮಯ 9.30ಕ್ಕೆ ಸರಿಯಾಗಿ ತಮ್ಮ ಹತ್ತಿರದ ಪರೀಕ್ಷಾ ಕೇಂದ್ರಕ್ಕೆ ಬಂದು ಹಾಜರಾಗಬಹುದು ಎಂದು ಸಂಸ್ಥೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ. ಹೆಚ್ಚಿನ ಮಾಹಿತಿಗಾಗಿ +919606906468 ಸಂಪರ್ಕಿಸಬಹುದಾಗಿದೆ.

 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕೊಡಗಿನಲ್ಲಿ ಮೋಡಬಿತ್ತನೆ ಬೇಡ ಬಿಜೆಪಿ ಕೃಷಿಮೋರ್ಚಾ ಒತ್ತಾಯ*

ಆಗಷ್ಟ್ 24, 2026

*ಶ್ರೀರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ರೋಟರಿ ನಮನ*

ಆಗಷ್ಟ್ 24, 2026

*ಮಡಿಕೇರಿ ಬ್ರಹ್ಮಾಕುಮಾರಿ ಲೈಟ್ ಹೌಸ್ ನಲ್ಲಿ ರಕ್ತದಾನ ಶಿಬಿರ*

ಆಗಷ್ಟ್ 24, 2026

*ಶ್ರೀರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ರೋಟರಿ ನಮನ*

ಆಗಷ್ಟ್ 24, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಆ.24 : ನಾಪೋಕ್ಲುವಿನ ಶ್ರೀರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆ ನಾಪೋಕ್ಲು, ರೋಟರಿ ಮಿಸ್ಟಿ ಹಿಲ್ಸ್…

*ಮಡಿಕೇರಿ ಬ್ರಹ್ಮಾಕುಮಾರಿ ಲೈಟ್ ಹೌಸ್ ನಲ್ಲಿ ರಕ್ತದಾನ ಶಿಬಿರ*

ಆಗಷ್ಟ್ 24, 2026

*ಎಸ್‍ಐಆರ್ ಪ್ರಕ್ರಿಯೆ, ಸೆ.23 ರ ವರೆಗೆ ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಕೆಗೆ ಅವಕಾಶ : ಕರಡು ಮತದಾರರ ಪಟ್ಟಿ : ಜಿಲ್ಲೆಯಲ್ಲಿ 4,05,803 ಮಂದಿ ಮತದಾರರು : ಡಿಸಿ ಮಾಹಿತಿ *

ಆಗಷ್ಟ್ 24, 2026

*ಪೊನ್ನಾಡ್ ರೈತ ಉತ್ಪಾದಕ ಸಂಸ್ಥೆ(ಎಫ್‌ಪಿಓ)ಗೆ ಮಾರುಕಟ್ಟೆ ವಿಭಾಗದಲ್ಲಿ ರಾಜ್ಯ ಮಟ್ಟದ ಶ್ರೇಷ್ಠತಾ ಪ್ರಶಸ್ತಿ*

ಆಗಷ್ಟ್ 24, 2026

*ಪೂಂಪುಹಾರ್ ವರೆಗೆ 16ನೇ ವರ್ಷದ ಕಾವೇರಿ ಜಾಗೃತಿ ರಥಯಾತ್ರೆ : ಅ.26ರಿಂದ ತಲಕಾವೇರಿಯಿಂದ ಆರಂಭ*

ಆಗಷ್ಟ್ 24, 2026

*ಕಟ್ಟೆಮಾಡು ಸಕಾ೯ರಿ ಶಾಲೆಯಲ್ಲಿ ಹಿರಿಯ ಜೀವಿಗಳಿಗೆ ಗೌರವ ನಮನ*

ಆಗಷ್ಟ್ 24, 2026

*ಬುಡಕಟ್ಟು ಸಾಂಸ್ಕೃತಿಕ ಕಾರ್ಯಕ್ರಮ, ವೈದ್ಯಕೀಯ ತಪಾಸಣೆ ಹಾಗೂ ರಕ್ತದಾನ ಶಿಬಿರ : ಸಂಸ್ಕೃತಿ ಉಳಿಸಿ ಬೆಳೆಸುವಲ್ಲಿ ಯುವಜನರ ಪಾತ್ರ ಮಹತ್ವದ್ದು : ಶಾಸಕ ಎ.ಎಸ್.ಪೊನ್ನಣ್ಣ*

ಆಗಷ್ಟ್ 24, 2026

*ಹಿರಿಯ ಜೀವಿಗಳಿಗೆ  ಮರಗೋಡು ಸಕಾ೯ರಿ ಶಾಲೆಯಲ್ಲಿ ಗೌರವ ನಮನ*

ಆಗಷ್ಟ್ 24, 2026

*ಪಾರಾಣೆಯ ಸಕಾ೯ರಿ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ಗೌರವ ಸಲ್ಲಿಕೆ ; ಕನ್ನಡದಲ್ಲಿ ಓದಿಯೂ ಉತ್ತಮ ಹುದ್ದೆಗೇರಲು ಸಾಧ್ಯ – ಕೆ.ಎ.ಉಮ್ಮರ್*

ಆಗಷ್ಟ್ 24, 2026

*ಮಳೆಗಾಗಿ ಸಚಿವರಿಂದ ವಿಶೇಷ ಪೂಜೆ*

ಆಗಷ್ಟ್ 23, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.