Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*
  • *ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*
  • *ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*
  • *ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*
  • *ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*
  • *ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*
  • *2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*
  • *ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*
  • *ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*
  • *ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಜಿಲ್ಲಾ ನೀರು ಮತ್ತು ನೈರ್ಮಲ್ಯ ಸಮಿತಿ ಸಭೆ : ಜೆಜೆಎಂ ಕಾಮಗಾರಿ ಶೀಘ್ರ ಪೂರ್ಣಗೊಳಿಸಿ : ಜಿ.ಪಂ. ಸಿಇಒ ಆನಂದ್ ಪ್ರಕಾಶ್ ಮೀನಾ ಸೂಚನೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಜಿಲ್ಲಾ ನೀರು ಮತ್ತು ನೈರ್ಮಲ್ಯ ಸಮಿತಿ ಸಭೆ : ಜೆಜೆಎಂ ಕಾಮಗಾರಿ ಶೀಘ್ರ ಪೂರ್ಣಗೊಳಿಸಿ : ಜಿ.ಪಂ. ಸಿಇಒ ಆನಂದ್ ಪ್ರಕಾಶ್ ಮೀನಾ ಸೂಚನೆ*

ಡಿಸೆಂಬರ್ 20, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಡಿ.20 NEWS DESK : ಬೇಸಿಗೆ ಅವಧಿಯಲ್ಲಿ ನವೋದಯ ಶಾಲೆಯಲ್ಲಿ ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯವಾಗಲಿದ್ದು, ಈ ಬಗ್ಗೆ ಗಮನಹರಿಸುವಂತೆ ಸಂಬಂಧಪಟ್ಟ ಅಧಿಕಾರಿಗಳು ಮತ್ತು ಎಂಜಿನಿಯರ್‍ಗೆ ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ ಅವರು ಸೂಚಿಸಿದ್ದಾರೆ. ನಗರದ ಜಿ.ಪಂ.ಸಿಇಒ ಅವರ ಕಚೇರಿಯಲ್ಲಿ ಶುಕ್ರವಾರ ನಡೆದ ಜಲಜೀವನ್ ಮಿಷನ್ ಯೋಜನೆಯಡಿ ಜಿಲ್ಲಾ ನೀರು ಮತ್ತು ನೈರ್ಮಲ್ಯ ಮಿಷನ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಫೆಬ್ರವರಿಯಿಂದಲೇ ನವೋದಯ ಶಾಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉಲ್ಬನಗೊಳ್ಳುವುದರಿಂದ ಪರೀಕ್ಷೆ ಅವಧಿಯಲ್ಲಿ ವಿದ್ಯಾರ್ಥಿಗಳಿಗೆ ತೊಂದರೆಯಾಗಲಿದೆ. ಆದ್ದರಿಂದ ಕುಡಿಯುವ ನೀರು ಪೂರೈಕೆ ಸಂಬಂಧ ಎಚ್ಚರವಹಿಸುವಂತೆ ಸಿಇಒ ಅವರು ಸೂಚಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಕಾರ್ಯಪಾಲಕ ಎಂಜಿನಿಯರ್ ಆರ್.ಭಾಸ್ಕರ್ ಅವರು ಕೂಟುಹೊಳೆಯಿಂದ ಪೂರೈಕೆಯಾಗುವ ಮಾರ್ಗದಲ್ಲಿ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ನವೋದಯ ಶಾಲೆಗೂ ಕುಡಿಯುವ ನೀರು ಪೂರೈಸುವಂತೆ ನಗರಸಭೆಗೆ ಮನವಿ ಮಾಡಲಾಗಿದೆ ಎಂದು ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ನಗರಾಭಿವೃದ್ಧಿ ಯೋಜನಾ ಶಾಖೆಯ ಯೋಜನಾ ನಿರ್ದೇಶಕರಾದ ಬಿ.ಬಸಪ್ಪ ಅವರು ಈ ಬಗ್ಗೆ ಜಿಲ್ಲಾಧಿಕಾರಿ ಅವರ ಗಮನಕ್ಕೆ ತರುವುದರ ಜೊತೆಗೆ ನಗರಸಭೆ ಸಾಮಾನ್ಯ ಸಭೆಯಲ್ಲೂ ಚರ್ಚಿಸಿ ಮುಂದಿನ ಕ್ರಮವಹಿಸಬಹುದಾಗಿದೆ ಎಂದು ಅವರು ಸಲಹೆ ಮಾಡಿದರು. ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ ಅವರು ಮಾತನಾಡಿ, ಜಿಲ್ಲಾಧಿಕಾರಿ ಅವರ ಜೊತೆ ಚರ್ಚಿಸಲಾಗುವುದು ಎಂದು ಅವರು ಹೇಳಿದರು. ನವೋದಯ ಶಾಲೆಯ ಪ್ರಾಂಶುಪಾಲರಾದ ಸಿ.ವಿ.ಪ್ರಮೀಳಾ ಅವರು ಬೇಸಿಗೆ ಅವಧಿಯಲ್ಲಿ ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯವಾಗಲಿದ್ದು, ಕುಡಿಯುವ ನೀರು ಪೂರೈಕೆಗೆ ಸಹಕರಿಸಬೇಕಾಗಿ ಕೋರಿದರು. ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಕಾರ್ಯಪಾಲಕ ಎಂಜಿನಿಯರ್ ಆರ್.ಭಾಸ್ಕರ್ ಅವರು ಮಾತನಾಡಿ ಜಿಲ್ಲೆಯ 457 ಜನವಸತಿ ಪ್ರದೇಶದಲ್ಲಿ ಜೆಜೆಎಂ ಯೋಜನೆಯಡಿ ಕುಡಿಯುವ ನೀರು ಪೂರೈಸಲು ಮುಂದಾಗಲಾಗಿದೆ. ಇದರಲ್ಲಿ 352 ಕಾಮಗಾರಿ ಪೂರ್ಣಗೊಂಡಿದ್ದು, 179 ಜನವಸತಿ ಪ್ರದೇಶದಲ್ಲಿನ ಕಾಮಗಾರಿಯನ್ನು ಗ್ರಾಮ ಪಂಚಾಯತ್‍ಗೆ ಈಗಾಗಲೇ ಪ್ರಯೋಗಿಕವಾಗಿ ಚಾಲನೆ ನೀಡಿ ಹಸ್ತಾಂತರಿಸಲಾಗಿದೆ. ಉಳಿದ ಕಾಮಗಾರಿಗಳು ಪ್ರಗತಿಯಲ್ಲಿದೆ ಎಂದು ಅವರು ವಿವರಿಸಿದರು.’ ಜಿಲ್ಲೆಯ ಗ್ರಾಮೀಣ ಪ್ರದೇಶದ ಅಂಗನವಾಡಿ, ಶಾಲಾ ಕಾಲೇಜುಗಳು, ಆರೋಗ್ಯ ಕೇಂದ್ರಗಳು ಸೇರಿದಂತೆ ವಿವಿಧ ಸರ್ಕಾರಿ ಕಚೇರಿಗಳು ಸೇರಿದಂತೆ ಎಲ್ಲೆಡೆ ಜಲಜೀವನ್ ಮಿಷನ್ ಯೋಜನೆ ತಲುಪಬೇಕು. ಆ ನಿಟ್ಟಿನಲ್ಲಿ ಜಲಜೀವನ್ ಯೋಜನೆಯಡಿ ‘ನಲ್ಲಿ ನೀರು’ ಸಂಪರ್ಕ ಹೊಂದಬೇಕು ಎಂದು ಜಿ.ಪಂ.ಸಿಇಒ ಅವರು ಹೇಳಿದರು. ಯಾವುದೇ ಸರ್ಕಾರಿ ಸಂಸ್ಥೆಗಳಲ್ಲಿ ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯವಾಗಬಾರದು. ಆ ನಿಟ್ಟಿನಲ್ಲಿ ಕ್ರಮವಹಿಸುವಂತೆ ಸೂಚಿಸಿದರು. ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯವಿದ್ದಲ್ಲಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಎಂಜಿನಿಯರ್ ಅವರ ಗಮನಕ್ಕೆ ತರುವಂತಾಗಬೇಕು ಎಂದು ಆನಂದ್ ಪ್ರಕಾಶ್ ಮೀನಾ ಅವರು ನಿರ್ದೇಶನ ನೀಡಿದರು. ಜಲಜೀವನ್ ಮಿಷನ್ ಯೋಜನಾ ಕಾಮಗಾರಿ ಸಂಬಂಧಿಸಿದಂತೆ ಮಾಹಿತಿ ಪಡೆದ ಜಿ.ಪಂ.ಸಿಇಒ ಅವರು ಬಾಕಿ ಇರುವ ಕಾಮಗಾರಿಗಳನ್ನು ಫೆಬ್ರುವರಿ ಅಂತ್ಯದೊಳಗೆ ಪೂರ್ಣಗೊಳಿಸುವಂತೆ ನಿರ್ದೇಶನ ನೀಡಿದರು. ಮಡಿಕೇರಿ ತಾಲ್ಲೂಕಿನ 9 ಶಾಲೆಗಳಲ್ಲಿ ಕುಡಿಯುವ ನೀರಿನ ಪೂರೈಕೆಯಲ್ಲಿ ವ್ಯತ್ಯಯ ಇದ್ದು, ನಲ್ಲಿ ನೀರು ಸಂಪರ್ಕ ಕಲ್ಪಿಸಬೇಕಿದೆ ಎಂದು ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಬಸವರಾಜು ಅವರು ಹೇಳಿದರು. ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ಕಾರ್ಯಾಚರಣೆ ಮತ್ತು ನಿರ್ವಹಣೆ ನೀತಿಯನ್ನು ಅಳವಡಿಸಿ ಒ ಮತ್ತು ಎಂ ಹಾಗೂ ನೀರಿನ ಆಯವ್ಯಯ ಸಿದ್ದಪಡಿಸಿ ಕೇಂದ್ರ ಕಚೇರಿಗೆ ಸಲ್ಲಿಸುವುದು. ಜೊತೆಗೆ ನೀರು ಮತ್ತು ನೈರ್ಮಲ್ಯ(ವಿಡಬ್ಲ್ಯುಎಸ್‍ಸಿ) ಬ್ಯಾಂಕ್ ಖಾತೆಗೆ ನೀರಿನ ಕರ ಜಮೆ ಮಾಡುವುದು ಹಾಗೂ ಫಲಾನುಭವಿಗಳ ಆಧಾರ್ ಕಾರ್ಡ್ ನಮೂದಿಸುವಂತೆ ಜಿ.ಪಂ.ಸಿಇಒ ಅವರು ಸಲಹೆ ಮಾಡಿದರು.ಸ್ವಚ್ಛಭಾರತ್ ಮಿಷನ್ ಯೋಜನೆಯಡಿ ಗ್ರಾ.ಪಂ.ವ್ಯಾಪ್ತಿಗಳಲ್ಲಿ ಸ್ವಚ್ಚತೆಗೆ ಒತ್ತು ನೀಡಬೇಕು. ಆ ನಿಟ್ಟಿನಲ್ಲಿ ಕಸವಿಲೇವಾರಿ ಘಟಕ ನಿರ್ಮಾಣ, ಪ್ಲಾಸ್ಟಿಕ್ ಬಳಸದಂತೆ ಅರಿವು ಮೂಡಿಸುವುದು ಮತ್ತಿತರ ಬಗ್ಗೆ ಅಗತ್ಯ ಕ್ರಮಕೈಗೊಳ್ಳುವಂತೆ ಸೂಚಿಸಿದರು. ಕೃಷಿ ಇಲಾಖೆಯ ಜಂಟಿ ನಿರ್ದೇಶಕರಾದ ಚಂದ್ರಶೇಖರ್, ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ವೀರೇಂದ್ರ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆರ್‍ಸಿಎಚ್ ಅಧಿಕಾರಿ ಡಾ.ಮಧುಸೂದನ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರಾದ ಪ್ರಸನ್ನಕುಮಾರ್, ಡಿಪಿಎಂ ಪುಟ್ಟಸ್ವಾಮಿ, ಸಹಾಯಕ ಎಂಜಿನಿಯರ್, ಕಿರಿಯ ಎಂಜಿನಿಯರ್‍ಗಳು, ಕಾಮಗಾರಿ ಗುಣಮಟ್ಟ ತಪಾಸಣಾ ಸಂಸ್ಥೆಯ ಎಂಜಿನಿಯರ್‍ಗಳು ಇತರರು ಇದ್ದರು.

Follow us Follow us
Share. WhatsApp Facebook Twitter Email Telegram Copy Link

Related Posts

*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಸೆ.26: ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್…

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*

ಸೆಪ್ಟೆಂಬರ್ 26, 2026

*ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*

ಸೆಪ್ಟೆಂಬರ್ 26, 2026

*ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*

ಸೆಪ್ಟೆಂಬರ್ 26, 2026

*2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*

ಸೆಪ್ಟೆಂಬರ್ 26, 2026

*ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*

ಸೆಪ್ಟೆಂಬರ್ 26, 2026

*ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*

ಸೆಪ್ಟೆಂಬರ್ 26, 2026

*ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*

ಸೆಪ್ಟೆಂಬರ್ 26, 2026

*36 ವರ್ಷ ಸೇವೆ ಸಲ್ಲಿಸಿದ ಅಂಗನವಾಡಿ ಕಾರ್ಯಕರ್ತೆ ದೇವಮಾಜಿ, ಶಿಕ್ಷಕಿ ಭೋಜಮ್ಮಗೆ ಆತ್ಮೀಯ ಬೀಳ್ಕೊಡುಗೆ*

ಸೆಪ್ಟೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.