Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಆನೆ-ಮಾನವ ಸಂಘರ್ಷ ಶಾಶ್ವತ ಪರಿಹಾಕ್ಕೆ ಪ್ರಾಮಾಣಿಕ ಯತ್ನ : ಮಡಿಕೇರಿ 7, ನಾಗರಹೊಳೆ ವಿಭಾಗಕ್ಕೆ 20 ಕಿ.ಮೀ. ರೈಲ್ವೆ ಬ್ಯಾರಿಕೇಡ್ ಮಂಜೂರು : ಸಚಿವ ಈಶ್ವರ ಖಂಡ್ರೆ*
  • *ಅರಣ್ಯ ಸಚಿವರು ತುರ್ತು ಸಭೆ ನಡೆಸಿ ಕಾಡಾನೆ ದಾಳಿ ನಿಯಂತ್ರಿಸದಿದ್ದಲ್ಲಿ ಪ್ರತಿಭಟನೆ : ಮಹಿಳಾ ಬಿಜೆಪಿ ಎಚ್ಚರಿಕೆ*
  • *ಕರ್ನಾಟಕ ಸುವರ್ಣ ಸಮುಚ್ಚಯ ಭವನದ ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಸೂಚನೆ*
  • *ಮಾಯಮುಡಿ ಗ್ರಾ.ಪಂ ಆಡಳಿತಾಧಿಕಾರಿಯಾಗಿ ಪಿ.ಪಿ.ಕವಿತಾ ಅಧಿಕಾರ ಸ್ವೀಕಾರ*
  • *ಜವಾಬ್ದಾರಿ ನಿಭಾಯಿಸಲು ಸಾಧ್ಯವಾಗದಿದ್ದಲ್ಲಿ ಅರಣ್ಯ ಸಚಿವರು ರಾಜೀನಾಮೆ ನೀಡಲಿ : ವಿರಾಜಪೇಟೆ ಬಿಜೆಪಿ ಒತ್ತಾಯ*
  • *ಪರಿಹಾರಕ್ಕಿಂತಲೂ ಅಮೂಲ್ಯವಾದದ್ದು ಮನುಷ್ಯನ ಜೀವ : ಕಾಡಾನೆ ಸೆರೆಗೆ ಶಾಸಕರ ಸೂಚನೆ*
  • *ಹಮ್ಮಿಯಾಲದಲ್ಲಿ ಸಾರಿಗೆ ಸಮಸ್ಯೆ : ಗ್ರಾಮಸ್ಥರ ಮನವಿಗೆ ಸ್ಪಂದಿಸಿದ ಶಾಸಕ ಡಾ.ಮಂತರ್ ಗೌಡ*
  • *ಕೆಎಸ್‌ಐಸಿ ಆವರಣದಲ್ಲಿ ಸ್ಡೇಡಿಯಂ ನಿರ್ಮಾಣ ಯೋಜನೆಗೆ ತಿಲಾಂಜಲಿ : ಸಂಘಟಿತ ಹೋರಾಟಕ್ಕೆ ಸಂದ ಜಯ : ಧನ್ಯವಾದ ಸಲ್ಲಿಸಿದ ಸಂಸದ ಯದುವೀರ್‌ ಒಡೆಯರ್‌*
  • *ಮಡಿಕೇರಿ : ಮಾ.11 ರಂದು ನಗರಸಭೆಯ ಆಯವ್ಯಯ ಸಭೆ*
  • *ಮಾ.12ರ ಹೋರಾಟಕ್ಕೆ ಸಿಪಿಐಎಂ ಪಕ್ಷದ ವಿರಾಜಪೇಟೆ ಘಟಕ ಬೆಂಬಲ : ಕೆ.ಎಸ್ ರಮೇಶ್*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕೊಡಗು : ಮಾಹಿತಿ ಹಕ್ಕು ಕಾಯ್ದೆ ಕುರಿತು ಜಾಗೃತಿ ಕಾರ್ಯಾಗಾರ ಮತ್ತು ಸಂವಾದ : ಮಾಹಿತಿ ಹಕ್ಕು ಕಾಯ್ದೆಯಡಿ ಅರ್ಜಿ ಸಲ್ಲಿಕೆ : 30 ದಿನದೊಳಗೆ ಮಾಹಿತಿ ಒದಗಿಸಲು ಸಲಹೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕೊಡಗು : ಮಾಹಿತಿ ಹಕ್ಕು ಕಾಯ್ದೆ ಕುರಿತು ಜಾಗೃತಿ ಕಾರ್ಯಾಗಾರ ಮತ್ತು ಸಂವಾದ : ಮಾಹಿತಿ ಹಕ್ಕು ಕಾಯ್ದೆಯಡಿ ಅರ್ಜಿ ಸಲ್ಲಿಕೆ : 30 ದಿನದೊಳಗೆ ಮಾಹಿತಿ ಒದಗಿಸಲು ಸಲಹೆ*

ಡಿಸೆಂಬರ್ 20, 20253 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಡಿ.20 NEWS DESK : ಮಾಹಿತಿ ಹಕ್ಕು ಕಾಯ್ದೆಯು ಸರ್ಕಾರಿ ನೌಕರರ ರಕ್ಷಣೆ ಮತ್ತು ಭದ್ರತೆಗೆ ಇದೆ ಎಂದು ಭಾವಿಸಬೇಕೇ ಹೊರತು, ಇದರಿಂದ ಸರ್ಕಾರಿ ಕೆಲಸಕ್ಕೆ ಅಡ್ಡಿ ಎಂದು ತಿಳಿದುಕೊಳ್ಳಬಾರದು ಎಂದು ರಾಜ್ಯ ಮಾಹಿತಿ ಆಯುಕ್ತರಾದ ಬದ್ರುದ್ದೀನ್ ಕೆ. ಮತ್ತು ಡಾ. ಹರೀಶ್ ಕುಮಾರ್ ಅವರು ಪ್ರತಿಪಾದಿಸಿದ್ದಾರೆ. ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆದ ಮಾಹಿತಿ ಹಕ್ಕು ಕಾಯ್ದೆ ಕುರಿತು ಜಾಗೃತಿ ಕಾರ್ಯಾಗಾರ ಹಾಗೂ ಸಂವಾದ ಕಾರ್ಯಕ್ರಮದಲ್ಲಿ ಸುಮಾರು ಎರಡುವರೆ ಗಂಟೆಗಳ ಕಾಲ ಮಾಹಿತಿ ಆಯುಕ್ತರು ಅಧಿಕಾರಿಗಳಿಗೆ ಪಾಠ ಮಾಡಿದರು. ಮಾಹಿತಿ ಆಯುಕ್ತರಾದ ಬದ್ರುದ್ದೀನ್ ಕೆ. ಅವರು ಮಾತನಾಡಿ ಮಾಹಿತಿ ಹಕ್ಕು ಕಾಯ್ದೆಯು ಸರಳವಾಗಿದ್ದರೂ ಸಹ ಗಂಭೀರವಾಗಿದೆ. ಅದನ್ನು ಅರ್ಥಮಾಡಿಕೊಂಡು ಕಚೇರಿಗೆ ಸಲ್ಲಿಕೆಯಾದ ಅರ್ಜಿಗೆ ನಿಯಮಾನುಸಾರ 30 ದಿನದೊಳಗೆ ಮಾಹಿತಿ ಒದಗಿಸಬೇಕು ಎಂದು ಸಲಹೆ ಮಾಡಿದರು. ‘ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸರ್ಕಾರಿ ನೌಕರರು ಉತ್ತರದಾಯಿತ್ವ ಹೊಂದಿರಬೇಕು. ಜೊತೆಗೆ ಪಾರದರ್ಶಕತೆ ಇದ್ದಲ್ಲಿ ವಿಚಲಿರಾಗುವ ಅಗತ್ಯವಿಲ್ಲ. ಆ ದಿಸೆಯಲ್ಲಿ ಪ್ರಾಮಾಣಿಕತೆ ಇರಬೇಕು ಎಂದು ಬದ್ರುದ್ದೀನ್ ಅವರು ಒತ್ತಿ ಹೇಳಿದರು.’ ‘ಎಲ್ಲರೂ ಸಹ ಮನುಷ್ಯರೇ ಆಗಿದ್ದು, ತಪ್ಪುಗಳು ಆಗುತ್ತವೆ. ಅದನ್ನು ತಿದ್ದಿ ನಡೆಯುವುದು ಅತ್ಯಗತ್ಯ. ಅದನ್ನು ಬಿಟ್ಟು ಸುಳ್ಳು ಮಾಹಿತಿ ನೀಡಿ ಪೇಚಿಗೆ ಸಿಲುಕಬಾರದು. ಸತ್ಯದ ಮಾಹಿತಿ ನೀಡಿದ್ದಲ್ಲಿ ಕ್ಷಮೆಗೂ ಅರ್ಹರಿರುತ್ತಾರೆ ಎಂಬುದನ್ನು ಮರೆಯಬಾರದು ಎಂದು ಅವರು ಹೇಳಿದರು.’ ಕೆಡಿಪಿ ಸಭೆಯಲ್ಲಿ ಮಾಹಿತಿ ಹಕ್ಕು ಅರ್ಜಿಗಳ ಸಲ್ಲಿಕೆ, ವಿಲೇವಾರಿ ಮತ್ತಿತರ ಸಂಬಂಧ ಚರ್ಚಿಸಿದ್ದಲ್ಲಿ ಸಮಸ್ಯೆಯನ್ನು ಜಿಲ್ಲಾ ಮಟ್ಟದಲ್ಲಿಯೇ ಪರಿಹರಿಸಿಕೊಳ್ಳಬಹುದು ಎಂದು ಮಾಹಿತಿ ಆಯುಕ್ತರು ಅಭಿಪ್ರಾಯಪಟ್ಟರು. ಸಾರ್ವಜನಿಕ ಜೀವನದಲ್ಲಿ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಲು ಮಾಹಿತಿ ಹಕ್ಕು ಸಹಕಾರಿಯಾಗಿದ್ದು, ಸದಾ ಎಚ್ಚರ ನೀಡುತ್ತದೆ. ಹಾಗಾಗಿ ಅಧಿಕಾರಿಗಳು ಸಾಧ್ಯವಾದಷ್ಟು ಮುನ್ನೆಚ್ಚರದಿಂದ ಕರ್ತವ್ಯ ನಿರ್ವಹಿಸಬೇಕು. ಮಾಹಿತಿ ಹಕ್ಕು ಕಾಯ್ದೆಯನ್ನು ಮನನ ಮಾಡಿಕೊಳ್ಳಬೇಕು ಎಂದು ಹೇಳಿದರು. ‘ಮಾಹಿತಿ ಹಕ್ಕು ಕಾಯ್ದೆಯಡಿ ಅರ್ಜಿ ಸಲ್ಲಿಸಿದವರ ಜೊತೆ ಯಾವುದೇ ಕಾರಣಕ್ಕೂ ಕರೆ ಮಾಡಿ ಮಾತನಾಡಬಾರದು. ಅಡ್ಡದಾರಿ ಹಿಡಿಯಬಾರದು ಎಂದು ಬದ್ರುದ್ದೀನ್ ಅವರು ಸಲಹೆ ಮಾಡಿದರು.’ ನಿಯಮ 4(1)ಎ ಮತ್ತು 4(1) (ಬಿ)ರಡಿ ವೆಬ್‍ಸೈಟ್‍ನಲ್ಲಿ ಮಾಹಿತಿ ಪ್ರಕಟಿಸಬೇಕು. ನಿಖರ, ನಿರ್ದಿಷ್ಟ ಹಾಗೂ ಸ್ಪಷ್ಟವಾಗಿ 150 ಪದಕ್ಕಿಂತ ಕಡಿಮೆ ಮಾಹಿತಿ ಒದಗಿಸಬೇಕು. ಯಾವುದೇ ಕಾರಣಕ್ಕೂ ಕ್ರೋಢೀಕರಿಸಿ ಮಾಹಿತಿ ನೀಡಬಾರದು ಎಂದರು. ಮಾಹಿತಿ ಹಕ್ಕು ಕಾಯ್ದೆಯಡಿ ರಾಷ್ಟ್ರದಲ್ಲಿ 60 ಲಕ್ಷ ಅರ್ಜಿಗಳು ಬಾಕಿ ಇವೆ. ರಾಜ್ಯದಲ್ಲಿ 6 ಲಕ್ಷ ಅರ್ಜಿಗಳು, ಹಾಗೆಯೇ ಜಿಲ್ಲೆಯಲ್ಲಿ 38 ಸಾವಿರ ಅರ್ಜಿಗಳು ಇದ್ದು, ರಾಜ್ಯದಲ್ಲಿ ಕೊಡಗು ಜಿಲ್ಲೆ ಕೊನೆ ಸ್ಥಾನದಲ್ಲಿದೆ. ಇದನ್ನು ಸೊನ್ನೆಗೆ ತರಬೇಕು ಎಂದರು. ಮಾಹಿತಿ ಆಯುಕ್ತರಾದ ಡಾ//ಹರೀಶ್ ಕುಮಾರ್ ಅವರು ಮಾತನಾಡಿ ಸರ್ಕಾರಿ ನೌಕರರನ್ನು ಸಾರ್ವಜನಿಕರು ನೋಡುವ ದೃಷ್ಟಿ, ಸರ್ಕಾರಿ ನೌಕರರು ಸಮಾಜವನ್ನು ನೋಡುವ ದೃಷ್ಟಿ ಎರಡನ್ನು ಗಮನಿಸಬೇಕು ಎಂದರು. ಸ್ವೀಡನ್ ದೇಶದಲ್ಲಿ 1776 ರಲ್ಲಿಯೇ ಮಾಹಿತಿ ಹಕ್ಕು ಕಾಯ್ದೆ ಜಾರಿಗೊಳಿಸಲಾಗಿದೆ. ಕರ್ನಾಟಕ ಇಡೀ ದೇಶದಲ್ಲಿ ಮಾಹಿತಿ ಹಕ್ಕು ಕಾಯ್ದೆಯನ್ನು ಜಾರಿಗೊಳಿಸಿದ ಪ್ರಥಮ ರಾಜ್ಯವಾಗಿದೆ ಎಂದು ತಿಳಿಸಿದರು. ಮಾಹಿತಿ ಹಕ್ಕು ಅಧಿನಿಯಮವು 2005 ರಲ್ಲಿ ಜಾರಿಗೆ ಬಂದಿದ್ದು, ಉತ್ತಮ ಆಡಳಿತ, ದಕ್ಷತೆ ಮತ್ತು ಪಾರದರ್ಶಕತೆ ತರುವುದು ಉದ್ದೇಶವಾಗಿದೆ ಎಂದರು. ಮಾಹಿತಿ ಹಕ್ಕು ಕಾಯ್ದೆ ಇರುವುದರಿಂದ ಅಧಿಕಾರಿಗಳು ಜವಾಬ್ದಾರಿಯಿಂದ ಕಾರ್ಯನಿರ್ವಹಿಸುತ್ತಿದ್ದು, ಇದರಿಂದ ಸರ್ಕಾರಿ ನೌಕರರ ರಕ್ಷಣೆ ಇದೆ ಎಂಬುದನ್ನು ತಿಳಿದುಕೊಳ್ಳಬೇಕು ಎಂದರು. ‘ಮಾಹಿತಿ ಹಕ್ಕು ಕಾಯ್ದೆಯಡಿ ಅರ್ಜಿ ಸಲ್ಲಿಕೆಯಾದ 30 ದಿನದೊಳಗೆ ಮಾಹಿತಿ ನೀಡಬೇಕು. ಮಾಹಿತಿ ನೀಡದಿದ್ದಲ್ಲಿ 25 ಸಾವಿರ ದಂಡ ವಿಧಿಸಲಾಗುತ್ತದೆ. ಜೊತೆಗೆ ತಪ್ಪು ಮಾಡಿದ್ದಲ್ಲಿ 5 ವರ್ಷ ಜೈಲು ಶಿಕ್ಷೆ ಇದೆ. ಆದ್ದರಿಂದ ದಾಖಲೆ ನಿರ್ವಹಣೆ ಅತೀ ಮುಖ್ಯ ಎಂದು ಡಾ.ಹರೀಶ್ ಕುಮಾರ್ ಅವರು ಹೇಳಿದರು.’ ಅರ್ಜಿ ಸಲ್ಲಿಸಿದವರು ಬಿಪಿಎಲ್ ಕಾರ್ಡ್‍ದಾರರಾಗಿದ್ದರೆ 100 ಪುಟಗಳವರೆಗೆ ಉಚಿತವಾಗಿ ಮಾಹಿತಿ ನೀಡಬೇಕು. ಉಳಿದಂತೆ ಪ್ರತಿ ಪುಟಕ್ಕೆ 2 ರೂ.ನಂತೆ ಶುಲ್ಕ ಪಾವತಿಸಿಕೊಂಡು ಮಾಹಿತಿ ಒದಗಿಸಬೇಕು ಎಂದರು. ಮಾಹಿತಿ ಹಕ್ಕು ಕಾಯ್ದೆಯನ್ನು ಜನರು ಹೇಗೆ ಬಳಸುತ್ತಿದ್ದಾರೆ ಎಂಬುದನ್ನು ಗಮನಿಸಬೇಕು. ಮಾಹಿತಿ ಹಕ್ಕು ಕಾಯ್ದೆಯಡಿ ವೈಯಕ್ತಿಕ ವಿವರ ಬೇಕಿಲ್ಲ. ಮಾಹಿತಿ ಹಕ್ಕು ಕಾಯ್ದೆ ಬಲಪಡಿಸುವುದು, ಜೊತೆಗೆ ದುರುಪಯೋಗ ತಡೆಯಲು ಆಯೋಗ ಮುಂದಾಗಿದೆ ಎಂದರು. ಮಾನವ ಹಕ್ಕುಗಳಿಗೆ ಸಂಬಂಧಿಸಿದಂತೆ ಹೆಚ್ಚಿನ ದೂರುಗಳು ಸಹ ಸಲ್ಲಿಕೆಯಾಗುತ್ತಿವೆ. ಸಿಸಿಟಿವಿ ಪೂಟೇಜ್ ಜತನ ಮಾಡಿಕೊಳ್ಳುವಂತಾಗಬೇಕು. ಸಾರ್ವಜನಿಕ ಆಡಳಿತ ಅಧಿಕಾರಿಗಳಲ್ಲಿ ಹೊಣೆಗಾರಿಕೆ ಹೆಚ್ಚಾಗಿದೆ. ಆ ನಿಟ್ಟಿನಲ್ಲಿ ಕರ್ತವ್ಯ ನಿರ್ವಹಿಸಬೇಕು ಎಂದು ಮಾಹಿತಿ ಆಯುಕ್ತರು ವಿವರಿಸಿದರು. ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಮಾತನಾಡಿ ಮಾಹಿತಿ ಹಕ್ಕು ಕಾಯ್ದೆಯು ಸರ್ಕಾರಿ ನೌಕರರಿಗೆ ಕೆಲಸ ಮಾಡಲು ಅಡ್ಡ ಬರುತ್ತದೆ ಎಂದು ಭಾವಿಸದೆ ಪಾರದರ್ಶಕವಾಗಿ ಕರ್ತವ್ಯ ನಿರ್ವಹಿಸಲು ಸಹಕಾರಿಯಾಗಿದೆ ಎಂದು ತಿಳಿದುಕೊಳ್ಳಬೇಕು ಎಂದರು. ಮಾಹಿತಿ ಹಕ್ಕು ಕಾಯ್ದೆ ಬಗ್ಗೆ ಪ್ರತಿಯೊಬ್ಬರಲ್ಲೂ ತಿಳುವಳಿಕೆ ಇರಬೇಕು. ಸಾರ್ವಜನಿಕ ಕೆಲಸ ಮಾಡುವಾಗ ಎಚ್ಚರವಹಿಸಬೇಕು. ಸಾರ್ವಜನಿಕ ಅಧಿಕಾರಿ ಯಾರೇ ಮಾಹಿತಿ ಕೇಳಿದರೂ ಸಹ ನೀಡಬೇಕು ಎಂದರು. ಸಾಧ್ಯವಿದ್ದಲ್ಲಿ ಮಾಹಿತಿಯನ್ನು ವೆಬ್‍ಸೈಟ್‍ನಲ್ಲಿ ಪ್ರಕಟಿಸಬೇಕು. ಕಂದಾಯ ಇಲಾಖೆಗೆ ಸಂಬಂಧಿಸಿದಂತೆ ಭೂಸುರಕ್ಷಾ ಯೋಜನೆಯಡಿ ಡಿಜಿಟಲೀಕರಣವಾಗುತ್ತಿದ್ದು, ರಾಜ್ಯದಲ್ಲಿ ಕೊಡಗು ಪ್ರಥಮ ಜಿಲ್ಲೆಯಾಗಿದೆ. ಮುಂದಿನ ದಿನಗಳಲ್ಲಿ ಶೇಕಡಾವಾರು ಪ್ರಗತಿ ಸಾಧಿಸಲು ಮುಂದಾಗಲಾಗಿದೆ ಎಂದರು. ಮಾಹಿತಿ ಹಕ್ಕು ಕಾಯ್ದೆಯಡಿ ಆನ್‍ಲೈನ್ ಮೂಲಕವೂ ಅರ್ಜಿ ಸಲ್ಲಿಕೆಯಾಗುತ್ತಿದ್ದು, ಈ ಬಗ್ಗೆಯೂ ಸಹ ಗಮನಹರಿಸಬೇಕು ಎಂದು ಬದ್ರುದ್ದೀನ್ ಅವರು ಹೇಳಿದರು. ಸರ್ಕಾರಿ ಕಚೇರಿಗಳಲ್ಲಿ ಇ-ಕಚೇರಿ, ಇ-ಆಡಳಿತ ವ್ಯವಸ್ಥೆ ವೇಗ ಪಡೆಯುತ್ತಿದ್ದು, ಈ ಬಗ್ಗೆ ಗಮನಹರಿಸಬೇಕು ಎಂದು ಹರೀಶ್ ಕುಮಾರ್ ಅವರು ಸಲಹೆ ಮಾಡಿದರು. ಮಾಹಿತಿ ಹಕ್ಕು ಕಾಯ್ದೆಯಡಿ ಅರ್ಜಿ ಸಲ್ಲಿಸುವವರು ಮಾಹಿತಿ ಹಕ್ಕು ಕಾರ್ಯಕರ್ತ ಎಂದು ಬಿಂಭಿಸಿಕೊಳ್ಳುತ್ತಿರುವ ಬಗ್ಗೆ ಗಮನಸೆಳೆದಾಗ ಪ್ರತಿಕ್ರಿಯಿಸಿದ ಬದ್ರುದ್ದೀನ್ ಮಾಹಿತಿ ಹಕ್ಕು ಕಾಯ್ದೆಯಡಿ ಅರ್ಜಿ ಸಲ್ಲಿಸುವವರು ಅವರೊಬ್ಬ ಅರ್ಜಿದಾರರೇ ಹೊರತು ಯಾವುದೇ ವಿಶೇಷ ಪ್ರಾಧಾನ್ಯತೆ ಇಲ್ಲ ಎಂಬುದನ್ನು ತಿಳಿದುಕೊಳ್ಳಬೇಕು ಎಂದರು. ಮಾಹಿತಿ ಹಕ್ಕು ಕಾಯ್ದೆ ಸಂಬಂಧಿಸಿದಂತೆ ವಿವಿಧ ಇಲಾಖೆ ಅಧಿಕಾರಿಗಳು, ಸಿಬ್ಬಂದಿಗಳು ವಿಷಯ ಪ್ರಸ್ತಾಪಿಸಿದರು. ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ದಿನೇಶ್ ಕುಮಾರ್, ಉಪ ವಿಭಾಗಾಧಿಕಾರಿ ನಿತಿನ್ ಚಕ್ಕಿ, ವಿವಿಧ ಇಲಾಖೆಯ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಇದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಆನೆ-ಮಾನವ ಸಂಘರ್ಷ ಶಾಶ್ವತ ಪರಿಹಾಕ್ಕೆ ಪ್ರಾಮಾಣಿಕ ಯತ್ನ : ಮಡಿಕೇರಿ 7, ನಾಗರಹೊಳೆ ವಿಭಾಗಕ್ಕೆ 20 ಕಿ.ಮೀ. ರೈಲ್ವೆ ಬ್ಯಾರಿಕೇಡ್ ಮಂಜೂರು : ಸಚಿವ ಈಶ್ವರ ಖಂಡ್ರೆ*

ಮಾರ್ಚ್ 10, 2026

*ಅರಣ್ಯ ಸಚಿವರು ತುರ್ತು ಸಭೆ ನಡೆಸಿ ಕಾಡಾನೆ ದಾಳಿ ನಿಯಂತ್ರಿಸದಿದ್ದಲ್ಲಿ ಪ್ರತಿಭಟನೆ : ಮಹಿಳಾ ಬಿಜೆಪಿ ಎಚ್ಚರಿಕೆ*

ಮಾರ್ಚ್ 10, 2026

*ಕರ್ನಾಟಕ ಸುವರ್ಣ ಸಮುಚ್ಚಯ ಭವನದ ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಸೂಚನೆ*

ಮಾರ್ಚ್ 10, 2026

*ಅರಣ್ಯ ಸಚಿವರು ತುರ್ತು ಸಭೆ ನಡೆಸಿ ಕಾಡಾನೆ ದಾಳಿ ನಿಯಂತ್ರಿಸದಿದ್ದಲ್ಲಿ ಪ್ರತಿಭಟನೆ : ಮಹಿಳಾ ಬಿಜೆಪಿ ಎಚ್ಚರಿಕೆ*

ಮಾರ್ಚ್ 10, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ NEWS DESK ಮಾ.10 : ಕೊಡಗು ಜಿಲ್ಲೆಯಲ್ಲಿ ನಿರಂತರ ಕಾಡಾನೆ ದಾಳಿಯಿಂದ ಅಮಾಯಕ ಜೀವಗಳು ಬಲಿಯಾಗುತ್ತಿರುವುದರಿಂದ ಅರಣ್ಯ ಸಚಿವರು…

*ಕರ್ನಾಟಕ ಸುವರ್ಣ ಸಮುಚ್ಚಯ ಭವನದ ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಸೂಚನೆ*

ಮಾರ್ಚ್ 10, 2026

*ಮಾಯಮುಡಿ ಗ್ರಾ.ಪಂ ಆಡಳಿತಾಧಿಕಾರಿಯಾಗಿ ಪಿ.ಪಿ.ಕವಿತಾ ಅಧಿಕಾರ ಸ್ವೀಕಾರ*

ಮಾರ್ಚ್ 10, 2026

*ಜವಾಬ್ದಾರಿ ನಿಭಾಯಿಸಲು ಸಾಧ್ಯವಾಗದಿದ್ದಲ್ಲಿ ಅರಣ್ಯ ಸಚಿವರು ರಾಜೀನಾಮೆ ನೀಡಲಿ : ವಿರಾಜಪೇಟೆ ಬಿಜೆಪಿ ಒತ್ತಾಯ*

ಮಾರ್ಚ್ 10, 2026

*ಪರಿಹಾರಕ್ಕಿಂತಲೂ ಅಮೂಲ್ಯವಾದದ್ದು ಮನುಷ್ಯನ ಜೀವ : ಕಾಡಾನೆ ಸೆರೆಗೆ ಶಾಸಕರ ಸೂಚನೆ*

ಮಾರ್ಚ್ 10, 2026

*ಹಮ್ಮಿಯಾಲದಲ್ಲಿ ಸಾರಿಗೆ ಸಮಸ್ಯೆ : ಗ್ರಾಮಸ್ಥರ ಮನವಿಗೆ ಸ್ಪಂದಿಸಿದ ಶಾಸಕ ಡಾ.ಮಂತರ್ ಗೌಡ*

ಮಾರ್ಚ್ 10, 2026

*ಕೆಎಸ್‌ಐಸಿ ಆವರಣದಲ್ಲಿ ಸ್ಡೇಡಿಯಂ ನಿರ್ಮಾಣ ಯೋಜನೆಗೆ ತಿಲಾಂಜಲಿ : ಸಂಘಟಿತ ಹೋರಾಟಕ್ಕೆ ಸಂದ ಜಯ : ಧನ್ಯವಾದ ಸಲ್ಲಿಸಿದ ಸಂಸದ ಯದುವೀರ್‌ ಒಡೆಯರ್‌*

ಮಾರ್ಚ್ 9, 2026

*ಮಡಿಕೇರಿ : ಮಾ.11 ರಂದು ನಗರಸಭೆಯ ಆಯವ್ಯಯ ಸಭೆ*

ಮಾರ್ಚ್ 9, 2026

*ಮಾ.12ರ ಹೋರಾಟಕ್ಕೆ ಸಿಪಿಐಎಂ ಪಕ್ಷದ ವಿರಾಜಪೇಟೆ ಘಟಕ ಬೆಂಬಲ : ಕೆ.ಎಸ್ ರಮೇಶ್*

ಮಾರ್ಚ್ 9, 2026

*ಕ.ಸಾ.ಪ ದತ್ತಿ ಕಾರ್ಯಕ್ರಮ : ಕೊಡಗಿನ ಸಂಸ್ಕೃತಿಯ ಮೂಲ ಸ್ವರೂಪ ಪ್ರಕೃತಿ ಆರಾಧನೆ : ಮಧೋಶ್ ಪೂವಯ್ಯ*

ಮಾರ್ಚ್ 9, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.