Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*
  • *ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*
  • *ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*
  • *ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*
  • *ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*
  • *ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*
  • *2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*
  • *ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*
  • *ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*
  • *ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಶಾಸಕ ಎ.ಎಸ್.ಪೊನ್ನಣ್ಣರಿಗೆ ‘ಯುಕೊ’ಅಭಿನಂದನೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಶಾಸಕ ಎ.ಎಸ್.ಪೊನ್ನಣ್ಣರಿಗೆ ‘ಯುಕೊ’ಅಭಿನಂದನೆ*

ಡಿಸೆಂಬರ್ 23, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಡಿ.23 NEWS DESK : ದಶಕಗಳ ಸಮಸ್ಯೆಯಾಗಿ ಕೊಡಗಿನ ಜಮ್ಮಾ ಹಿಡುವಳಿದಾರರನ್ನು ಕಾಡಿದ್ದ ಜಮ್ಮಾ ಸಮಸ್ಯೆಗೆ ಶಾಶ್ವತ ಪರಿಹಾರವನ್ನು ಒದಗಿಸುವ ನಿಟ್ಟಿನಲ್ಲಿ, ಕರ್ನಾಟಕ ಭೂಕಂದಾಯ ಕಾಯ್ದೆಯ ತಿದ್ದುಪಡಿ ವಿದೇಯಕವನ್ನು ಸದನದಲ್ಲಿ ಮಂಡಿಸಿ, ಯಶಸ್ವೀಯಾಗಿ ಅನುಮೋದನೆ ಪಡೆಯುವಲ್ಲಿ ನಿರ್ಣಾಯಕ ಪಾತ್ರ ನಿರ್ವಹಿಸಿದ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ  ಅವರಿಗೆ ಯುನೈಟೆಡ್ ಕೊಡವ ಆರ್ಗನೈಸೇಷನ್ – ಯುಕೊ ಸಂಘಟನೆಯ ಸದಸ್ಯರು ಅಭಿನಂದನೆ ಸಲ್ಲಿಸಿದರು. ಶಾಸಕ ಗೃಹ ಕಚೇರಿಯಲ್ಲಿ ಭೇಟಿ ಮಾಡಿ ಸ್ಮರಣಿಕೆ ನೀಡಿ ಅಭಿನಂದಿಸಿದರು. ನಂತರ ಮಾತನಾಡಿದ ಯುಕೊ ಸಂಘಟನೆಯ ಅಧ್ಯಕ್ಷರಾದ ಕೊಕ್ಕಲೆಮಾಡ ಮಂಜು ಚಿಣ್ಣಪ್ಪ, ಸುಮಾರು 7 ದಶಕಗಳಿಂದ ಜೀವಂತವಾಗಿರುವ ಕೊಡಗಿನ ಈ ಸಮಸ್ಯೆಯು ಜಮ್ಮಾ ಹಿಡುವಳಿದಾರರ ಜೀವ ಹಿಂಡಿತ್ತು, ಕೊಡವರಿಗೆ ಜಮ್ಮಾ ಯಾರೂ ನೀಡಿದ ಜಾಗವಲ್ಲ, ಕೊಡವರ ಜಾಗಕ್ಕೆ ಭೂದಾಖಲಾತಿ ವ್ವಸ್ಥೆ ಜಾರಿಗೆ ಬಂದಾಗ ಜಮ್ಮಾ ಎಂದು ವರ್ಗೀಕರಣ ಮಾಡಲಾಯಿತಲ್ಲದೆ, ರಾಜನರಾಗಲಿ, ಬ್ರಿಟಿಷರು ನೀಡಿರುವ ಬಳುವಳಿ ಆಸ್ತಿಯಲ್ಲ. 1956 ರ ವರೆಗೆ ಕೂರ್ಗ್ ಲ್ಯಾಂಡ್ ರೆವೆನ್ಯೂ ಆಕ್ಟ್ ಜಾರಿಯಲ್ಲಿತ್ತು, ಆನಂತರ ಕೊಡಗು ಕರ್ನಾಟಕದೊಂದಿಗೆ ವಿಲೀನವಾದ ನಂತರ ಕೂರ್ಗ್ ಲ್ಯಾಂಡ್ ರೆವೆನ್ಯೂ ಆಕ್ಟ್ ರದ್ದುಗೊಂಡು ಕರ್ನಾಟಕ ಲ್ಯಾಂಡ್ ರೆವ್ನ್ಯೂ ಆಕ್ಟ್ ಜಾರಿಯಾದಾಗ, ಸಮಸ್ಯೆಗೆ ಕಾರಣವಾಯಿತು. ಅಲ್ಲಿಂದ ಇಲ್ಲಿಯವರೆಗೆ ಸಮಸ್ಯೆ ಜೀವಂತವಾಗಿಯೇ ಉಳಿದುಕೊಂಡು ಬಂದಿದೆ. ಇದಕ್ಕೆ ಕೆಲವು ತಾಂತ್ರಿಕವಾದ ಕಾರಣಗಳೂ ಇರುವುದರಿಂದ ಹಾಗೂ ಶಾಸಕಾಂಗ ಮತ್ತು ನಾಯಾಯಾಂಗ ಮತ್ತು ಕಾರ್ಯಾಂಗದ ಸಮನ್ವಯತೆಯ ಕೊರತೆಯ ಕಾರಣದಿಂದ ಎಷ್ಟೇ ಪ್ರಯತ್ನಿಸಿದರೂ ಇದು ಗೊಂದಲಮಯವಾಗಿಯೇ ಮುಂದುವರಿದುಕೊಂಡು ಬಂದಿದ್ದು ಪರಿಹಾರ ಕಠಿಣ ಸವಾಲಾಗಿತ್ತು. ಇದೀಗ ಎಲ್ಲಾ ಸವಾಲುಗಳನ್ನು ಮೆಟ್ಟಿ ನಿಂತು, ಶಾಸಕಾಂಗ, ನಾಯಾಯಾಂಗ ಮತ್ತು ಕಾರ್ಯಾಂಗಗಳ ಸಮನ್ವಯತೆಯೊಂದಿಗೆ ಸಮಸ್ಯೆ ಪರಿಹಾರಕ್ಕೆ ಪ್ರಯತ್ನಿಸಿರುವುದು ಸಾಮಾನ್ಯದ ಕೆಲಸವಲ್ಲ. ಶಾಸಕ ಪೊನ್ನಣ್ಣನವರ, ಕಾನೂನಿನ ಪರಿಣತೆ, ಸಂವಿದಾನ ಹಾಗೂ ಶಾಸಕಾಂಗದ ಕುರಿತು ಇರುವ ಅಪಾರ ಜ್ಞಾನ, ಮತ್ತು ತನ್ನಲ್ಲಿರುವ ಇಚ್ಛಾಶಕ್ತಿ, ಬದ್ಧತೆಯ ಪರಿಣಾಮ ತಿದ್ದುಪಡಿ ಮಸೂದೆಯನ್ನು ಹೆಚ್ಚು ಪರಿಣಾಮಕಾರಿಯಾಗಿ ಮಂಡಿಸಿ ಸದನದ ಬೆಂಬಲ ಪಡೆಯಲು ಸಾಧ್ಯವಾಯಿತು ಎಂದು ಹೇಳಿದರು. ಪಟ್ಟೆದಾರ ಎಂಬುವುದು ಕಂದಾಯ ಇಲಾಖೆಗೆ ಸಂಬಂದಿಸಿದ ಪದವಾಗಿದ್ದು ಅವಿಭಕ್ತ ಕುಟುಂಬ ವ್ಯವಸ್ಥೆಯಲ್ಲಿ ಕೊಡವ ಕುಟುಂಬದ ಕೊರವುಕಾರರನ್ನು ಪಟ್ಟೆದಾರರನ್ನಾಗಿ ನೇಮಿಸಿ ಕಂದಾಯ ಕುರಿತ ವ್ಯವಹಾರಕ್ಕೆ ಇವರನ್ನು ಹೊಣೆಗಾರರನ್ನಾಗಿ ಮಾಡಲಾಯಿತು. ಇದು ಕೇವಲ ಭೂಮಿ ಮತ್ತು ಕಂದಾಯದ ವಿಷಯಕ್ಕೆ ಸೀಮಿತವಾದ ಪದವಾಗಿದೆ. ಆದರೆ ಕ್ರಮೇಣ ಕೊರವುಕಾರ ಎಂಬ ಪದವು ಪಟ್ಟೆದಾರರಾಗಿ ಪರಿವರ್ತನೆಗೊಂಡು ಕೊರವುಕಾರ ಪದವೇ ಮರೆಯಾಗುತ್ತಾ ಬಂದಿದೆ. ಕೊಡವರ ಕುಲದ ಮುಖ್ಯಸ್ಥರ ಪಾರಂಪರಿಕವಾದ ಪದನಾಮ ಇಂದಿಗೂ ಕೊರವುಕಾರ ಎಂದೇ ಆಗಿದೆ. ಸರಾಕಾರದ ಮಟ್ಟದಲ್ಲಿ ಯಾರ ಹೆಸರಿಗೆ ಭೂಮಿಯ ಪಟ್ಟೆ ಇದೆಯೋ ಅವರೆಲ್ಲಾ ಪಟ್ಟೆದಾರರೇ ಎಂಬ ಅರ್ಥ ಬರುತ್ತದೆ. ಈ ವಿಚಾರದಲ್ಲಿ, ಕೊಡವರಲ್ಲದ ಕೊಡಗಿನ ಇತರೆ ಜಮ್ಮಾ ಹಿಡುವಳಿದಾರರಿಗೂ ಪಟ್ಟೆದಾರರಿದ್ದಾರೆ. ಹಾಗೆಯೇ ಕರ್ನಾಟಕದ ಬೇರೆ ಬೇರೆ ಹಿಡುವಳಿದಾರರಿಗೂ ಪಟ್ಟಿದಾರ ಪದ ಬಳಕೆಯಾಗುತ್ತಿದೆ. ಇಲ್ಲಿ ಗೊಂದಲಗಳಿಗಿಂತ ಸಮಸ್ಯೆ ಬಗೆಹರಿಯುವುದು ಮುಖ್ಯವಾಗುತ್ತದೆ ಎಂದು ಅವರು ಅಬಿಪ್ರಾಯ ವ್ಯಕ್ತಪಡಿಸಿದರು. ಈ ನಿಟ್ಟಿನಲ್ಲಿ, ಸರ್ಕಾರ, ಕಂದಾಯ ಸಚಿವರು, ಸದನಸಮಿತಿ ಹಾಗೂ ವಿರೋಧಪಕ್ಷದ ನಾಯಕರುಗಳ ನಡುವೆ ಸಮನ್ವಯ ಸಾದಿಸಿ, ಎಲ್ಲರ ವಿಶ್ವಾಸವನ್ನುಗಳಿಸಿ, ಸದನದಲ್ಲಿ ಹಾಗು ಸದನ ಸಮಿತಿಯ ಮುಂದೆ ವಿಷಯ ಮಂಡಿಸಿ ವಿಧಾನ ಭೆಯಲ್ಲಿ ತಿದ್ದುಪಡಿ ಮಸೂದೆಯು ಅವಿರೋಧವಾಗಿ ಅನುಮೋದನೆಯಾಗುವಂತೆ ಅಚ್ಚುಕಟ್ಟಾಗಿ ತಮ್ಮ ಜವಾಬ್ದಾರಿ ನಿಬಾಯಿಸಿದ ನಮ್ಮ ಶಾಸಕ ಎ. ಎಸ್ ಅಬಿನಂದನಾರ್ಹರು ಹಾಗೂ ಅವರನ್ನು ಅಭಿನಂದಿಸುವುದು ನಮ್ಮ ಕರ್ತವ್ಯಕೂಡ ಹೌದು ಎಂದು ಅವರು ತಿಳಿಸಿದರು. ಇದೇ ಸಂದರ್ಭ ಮುಖ್ಯಮಂತ್ರಿ ಸಿದ್ಧರಾಮಯ್ಯ, ಕಂದಾಯ ಸಚಿವ ಕೃಷ್ಣಾಬೈರೇಗೌಡ, ವಿರೋಧ ಪಕ್ಷದ ನಾಯಕರಾದ ಆರ್.ಅಶೋಕ್, ಮಡಿಕೇರಿ ಶಾಸಕರಾದ ಡಾ. ಡಾ.ಮಂತರ್‌ಗೌಡ ಹಾಗೂ ಪ್ರತ್ಯಕ್ಷ ಪರೋಕ್ಷವಾಗಿ ಸಹಕರಿಸಿದ ಎಲ್ಲರಿಗೂ
ಅಭಿನಂದನೆ ಸಲ್ಲಿಸುವುದಾಗಿ ಅವರು ತಿಳಿಸಿದರು. ಯುಕೊ ಸದಸ್ಯರಾದ ಚೆಪ್ಪುಡಿರ ಸುಜು ಕರುಂಬಯ್ಯ, ನೆಲ್ಲಮಕ್ಕಡ ಮಾದಯ್ಯ,
ಅಜ್ಜಿನಿಕಂಡ ತಿಮ್ಮಯ್ಯ, ತೀತಿಮಾಡ ಬೋಸ್ ಅಯ್ಯಪ್ಪ, ಬಾದುಮಂಡ ವಿಷ್ಣು ಕಾರ್ಯಪ್ಪ, ಕೊಡವ ಸಾಹಿತ್ಯ ಅಕಾಡೆಮಿ ಸದಸ್ಯರಾದ ಚೊಟ್ಚೆಯಂಡ ಸಂಜು ಕಾವೇರಪ್ಪ, ಮೂರ್ನಾಡು ಕೊಡವ ಸಮಾಜದ ಅದ್ಯಕ್ಷರಾದ ತೇಲಪಂಡ ಸುಬ್ಬಯ್ಯ, ನಿರ್ದೇಶಕರಾದ ಚಂಗಂಡ ಸೂರಜ್, ಅಮ್ಮಾಟಂಡ ದೇವಯ್ಯ, ಸಮಾಜ ಸೇವಕ ಪಾಲೇಂಗಡ ಅಮಿತ್, ಕಾಂಗ್ರೆಸ್ ಪೊನ್ನಂಪೇಟೆ ಬ್ಲಾಕ್ ಅಧ್ಯಕ್ಷರಾದ ಮೀದೇರಿರ ನವೀನ್ ಉಪಸ್ಥಿತರಿದ್ದರು.

 

Follow us Follow us
Share. WhatsApp Facebook Twitter Email Telegram Copy Link

Related Posts

*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಸೆ.26: ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್…

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*

ಸೆಪ್ಟೆಂಬರ್ 26, 2026

*ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*

ಸೆಪ್ಟೆಂಬರ್ 26, 2026

*ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*

ಸೆಪ್ಟೆಂಬರ್ 26, 2026

*2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*

ಸೆಪ್ಟೆಂಬರ್ 26, 2026

*ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*

ಸೆಪ್ಟೆಂಬರ್ 26, 2026

*ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*

ಸೆಪ್ಟೆಂಬರ್ 26, 2026

*ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*

ಸೆಪ್ಟೆಂಬರ್ 26, 2026

*36 ವರ್ಷ ಸೇವೆ ಸಲ್ಲಿಸಿದ ಅಂಗನವಾಡಿ ಕಾರ್ಯಕರ್ತೆ ದೇವಮಾಜಿ, ಶಿಕ್ಷಕಿ ಭೋಜಮ್ಮಗೆ ಆತ್ಮೀಯ ಬೀಳ್ಕೊಡುಗೆ*

ಸೆಪ್ಟೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.