Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಎಚ್1-ಎನ್1 : ಅಗತ್ಯ ಮುನ್ನೆಚ್ಚರಿಕೆ ವಹಿಸಲು ಸೂಚನೆ*
  • *ಅರೆಭಾಷೆಗೆ ಸಾಂಸ್ಕೃತಿಕ ನೆಲೆಗಟ್ಟು, ವ್ಯಾಕರಣದ ಶಿಸ್ತು ರೂಢಿಸಿದವರು ಕೋಡಿ ಕುಶಾಲಪ್ಪ ಗೌಡರು : ಸದಾನಂದ ಮಾವಜಿ*
  • *ಅಂತರ ಶಾಲಾ ಶಟಲ್ ಬ್ಯಾಡ್ಮಿಂಟನ್: ಶ್ರೀ ರಾಜರಾಜೇಶ್ವರಿ ಶಾಲೆ ವಿದ್ಯಾರ್ಥಿಗಳ ಸಾಧನೆ*
  • ಕೊಡಗಿನಲ್ಲಿ ಕರವೇ ಸ್ವಾಭಿಮಾನಿ ಸೇನೆಗೆ ನೂತನ ಸದಸ್ಯರ ಸೇರ್ಪಡೆ
  • *ತೀವ್ರಗೊಳಿಸಿದ ಐಇಸಿ ಅಭಿಯಾನ : ಮ್ಯಾರಥಾನ್ ಮೂಲಕ ಎಚ್‌ಐವಿ/ಏಡ್ಸ್ ಜಾಗೃತಿ*
  • *ಮಡಿಕೇರಿಯಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸಭೆ : ಸ್ವಾವಲಂಬಿ ಮಹಿಳಾ ಫಲಾನುಭವಿಗಳ ಗುರುತಿಸಿ ಸನ್ಮಾನಕ್ಕೆ ಕ್ರಮ*
  • *ಶಿಸ್ತುಬದ್ಧ ಶಿಕ್ಷಣದಿಂದಲೇ ಸಮಾಜದ ಯಶಸ್ಸು, ದೇಶದ ಪ್ರಗತಿ : ಶಾಸಕ ಎ.ಎಸ್.ಪೊನ್ನಣ್ಣ*
  • *ಫೀ.ಮಾ. ಕಾರ್ಯಪ್ಪ ಕಾಲೇಜಿನಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆ: ಶಿಸ್ತುಬದ್ಧ ಜೀವನವೇ ಸಾಧನೆಯ ದಾರಿದೀಪ: ಕರ್ನಲ್ ಸಂಜೀವ್ ಕುಮಾರ್*
  • *ಕೊಡಗು ವಿದ್ಯಾಲಯದಲ್ಲಿ ಬ್ರಹ್ಮಗಿರಿ ಸಹೋದಯ ಸಿಬಿಎಸ್ಇ ಶಾಲೆಗಳ ಸಾಂಸ್ಕೃತಿಕ ಸ್ಪರ್ಧೆ*
  • *ಮಡಿಕೇರಿ ನಗರಸಭೆ : ತ್ಯಾಜ್ಯ ನಿರ್ವಹಣೆಗೆ ವೈಜ್ಞಾನಿಕ ವಿಧಾನಕ್ಕೆ ಒತ್ತು : ಶಾಸಕ ಮಂತರ್ ಗೌಡ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಚೇನಂಡ ಹಾಕಿ ಉತ್ಸವದ ಪ್ರಯುಕ್ತ ಮೂರ್ನಾಡಿನಲ್ಲಿ ಜಿಲ್ಲಾ ಮಟ್ಟದ ಹಾಕಿ ಪಂದ್ಯಾವಳಿ : 30 ಪ್ರತಿಭಾವಂತ ಹಾಕಿ ಪ್ರತಿಭೆಗಳ ಆಯ್ಕೆ ಮತ್ತು ತರಬೇತಿ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಚೇನಂಡ ಹಾಕಿ ಉತ್ಸವದ ಪ್ರಯುಕ್ತ ಮೂರ್ನಾಡಿನಲ್ಲಿ ಜಿಲ್ಲಾ ಮಟ್ಟದ ಹಾಕಿ ಪಂದ್ಯಾವಳಿ : 30 ಪ್ರತಿಭಾವಂತ ಹಾಕಿ ಪ್ರತಿಭೆಗಳ ಆಯ್ಕೆ ಮತ್ತು ತರಬೇತಿ*

ಡಿಸೆಂಬರ್ 24, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಡಿ.24 NEWS DESK : ಮುಂದಿನ ವರ್ಷ ಏಪ್ರಿಲ್ ತಿಂಗಳಿನಲ್ಲಿ ನಡೆಯುವ ಕೊಡವ ಕುಟುಂಬಗಳ ನಡುವಿನ ‘ಚೇನಂಡ ಕಪ್ ಹಾಕಿ ಉತ್ಸವ’ದ ಅಂಗವಾಗಿ ಪ್ರತಿಭಾವಂತ ಯುವ ಹಾಕಿ ಪಟುಗಳನ್ನು ಬೆಳಕಿಗೆ ತರುವ ಪ್ರಯತ್ನವಾಗಿ ಜ.1 ರಿಂದ 4 ರವರೆಗೆ ಮೂರ್ನಾಡುವಿನಲ್ಲಿ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳ ಜಿಲ್ಲಾ ಮಟ್ಟದ ಹಾಕಿ ಪಂದ್ಯಾವಳಿ ನಡೆಯಲಿದೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಚೇನಂಡ ಕಪ್ ಹಾಕಿ ಉತ್ಸವದ ಆಯೋಜನಾ ಸಮಿತಿಯ ಅಧ್ಯಕ್ಷ ಚೇನಂಡ ಕಂಬಣಿ ಕರುಂಬಯ್ಯ ಅವರು 4ನೇ ತರಗತಿಯಿಂದ 7ನೇ ತರಗತಿವರೆಗಿನ ಪ್ರಾಥಮಿಕ ವಿಭಾಗ ಮತ್ತು 8 ರಿಂದ 10ನೇ ತರಗತಿವರೆಗಿನ ಪ್ರೌಢಶಾಲಾ ವಿಭಾಗದ ಬಾಲಕ ಬಾಲಕಿಯರಿಗಾಗಿ ಮೂರ್ನಾಡು ಪ್ರಥಮ ದರ್ಜೆ ಕಾಲೇಜು ಮೈದಾನದಲ್ಲಿ ಪಂದ್ಯಾವಳಿಯನ್ನು ಆಯೋಜಿಸಲಾಗಿದೆ. ಈ ಪಂದ್ಯಾವಳಿ ಯಾವುದೇ ಒಂದು ಸಮೂಹಕ್ಕೆ ಸೀಮಿತವಾಗಿಲ್ಲ, ಮುಕ್ತವಾಗಿರುತ್ತದೆ ಎಂದು ಸ್ಪಷ್ಟಪಡಿಸಿದರು.
ಪಂದ್ಯಾವಳಿಗೆ ಕೊಡಗಿನ ಎಲ್ಲಾ ಪಾಥಮಿಕ ಮತ್ತು ಪೌಢಶಾಲಾ ಶಾಲೆಗಳ ಪ್ರಮುಖರು ತಮ್ಮ ಶಾಲೆಯ ಹಾಕಿ ತಂಡಗಳನ್ನು ಕಳುಹಿಸಿ ಕೊಡಬೇಕು. ಯಾವುದೇ ಶಾಲೆಯಲ್ಲಿ ಎರಡು ಮೂರು ಹಾಕಿ ಆಟಗಾರರಿದ್ದು, ತಂಡ ಇಲ್ಲದಿದ್ದಲ್ಲಿ, ಅಂತಹ ಆಟಗಾರರಿಗೂ ಪಂದ್ಯಾವಳಿಯಲ್ಲಿ ಪಾಲ್ಗೊಳ್ಳಲು ಅವಕಾಶವನ್ನು ನೀಡಲಾಗುತ್ತದೆ. ಕ್ರೀಡಾ ಪ್ರತಿಭೆಗಳು ಇದರ ಸದುಪಯೋಗ ಪಡೆದುಕೊಳ್ಳುವಂತೆ ಮನವಿ ಮಾಡಿದರು. ಹಾಕಿ ಪಂದ್ಯಗಳನ್ನು ಹಾಕಿ ಕೂರ್ಗ್‍ನ ನುರಿತ ತೀರ್ಪುಗಾರರು ನಡೆಸಿಕೊಡಲಿದ್ದಾರೆ. ವಿಜೇತರಿಗೆ ಮತ್ತು ರನ್ನರ್ಸ್ ಅಪ್ ತಂಡಕ್ಕೆ ಆಕರ್ಷಕ ಬಹುಮಾನ ಹಾಗೂ ಹಾಕಿ ಕೂರ್ಗ್ ವತಿಯಿಂದ ಪ್ರಶಸ್ತಿ ಪತ್ರವನ್ನು ವಿತರಿಸಲಾಗುತ್ತದೆ ಎಂದು ಹೇಳಿದರು. ವಿದ್ಯಾರ್ಥಿಗಳು ಹೆಸರು ನೋಂದಾಯಿಸಿಕೊಳ್ಳಲು ಡಿ.28 ಕೊನೆಯ ದಿನವಾಗಿದೆ. ಈ ಅವಧಿಯ ಒಳಗಾಗಿ ಹರ್ಷ ಅಯ್ಯಣ್ಣ ಮೊ.8762349951, ದೀನಾ ಚಂಗಪ್ಪ ಮೊ.9481114095 ಹಾಗೂ ವಿಪಿನ್ ಗಣಪತಿ ಮೊ.9035198434 ನ್ನು ಸಂಪರ್ಕಿಸಬೇಕೆಂದು ಚೇನಂಡ ಕಂಬಣಿ ಕರುಂಬಯ್ಯ ತಿಳಿಸಿದರು. *30 ಆಟಗಾರರ ಆಯ್ಕೆ* ಶಾಲಾ ಮಕ್ಕಳ ಈ ಪಂದ್ಯಾವಳಿಯಲ್ಲಿ ಪ್ರತಿಭಾವಂತ 30 ಹಾಕಿ ಆಟಗಾರರನ್ನು ಅಂತರಾಷ್ಟ್ರೀಯ ಮಟ್ಟದ ನಿವೃತ್ತ ಒಲಂಪಿಯನ್‍ಗಳು ಆಯ್ಕೆ ಮಾಡಲಿದ್ದಾರೆ. ಆಯ್ಕೆಯಾದ ಆಟಗಾರರಿಗೆ ಏ.5 ರಿಂದ ಮೇ 2ರವರೆಗೆ ನಾಪೋಕ್ಲುವಿನಲ್ಲಿ ನಡೆಯಲಿರುವ ಚೇನಂಡ ಕಪ್ ಹಾಕಿ ಉತ್ಸವದ ಸಂದರ್ಭ ಉಚಿತವಾಗಿ ತರಬೇತಿಯನ್ನು ನೀಡಲಾಗುತ್ತದೆ. ತರಬೇತಿಯ ಅವಧಿಯಲ್ಲಿ ಅಂತಿಮವಾಗಿ ಆಯ್ಕೆಯಾಗುವ 12 ಮಂದಿ ಆಟಗಾರರಿಗೆ ‘ಕ್ರೀಡಾ ಕಿಟ್’ಗಳನ್ನು ಒದಗಿಸಲಾಗುತ್ತದೆ, ಅಲ್ಲದೆ ಕ್ರೀಡಾ ವಸತಿ ಶಾಲೆಯ ಪ್ರವೇಶಕ್ಕೆ ನೆರವಾಗುವುದರೊಂದಿಗೆ ಅವರನ್ನು ರಾಷ್ಟ್ರ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ರೀಡಾಪಟುಗಳಾಗಿ ರೂಪಿಸಲು ಅಗತ್ಯ ಪ್ರೋತ್ಸಾಹ ಬೆಂಬಲವನ್ನು ನೀಡಲಾಗುತ್ತದೆ ಎಂದರು. ಸುದ್ದಿಗೋಷ್ಠಿಯಲ್ಲಿ ಚೇನಂಡ ಕಪ್ ಹಾಕಿ ಉತ್ಸವ ಸಮಿತಿ ಆಯೋಜನಾ ಸಮಿತಿಯ ಕಾರ್ಯದರ್ಶಿ ಚೇನಂಡ ಮಧು ಮಾದಯ್ಯ, ವಕ್ತಾರ ಚೇನಂಡ ಸುರೇಶ್ ನಾಣಯ್ಯ, ನಿರ್ದೇಶಕರಾದ ಚೇನಂಡ ನಂದಾ ಜಗದೀಶ್ ಹಾಗೂ ಚೇನಂಡ ಸಂಪತ್ ಭೀಮಯ್ಯ ಉಪಸ್ಥಿತರಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಎಚ್1-ಎನ್1 : ಅಗತ್ಯ ಮುನ್ನೆಚ್ಚರಿಕೆ ವಹಿಸಲು ಸೂಚನೆ*

ಆಗಷ್ಟ್ 29, 2026

*ಅರೆಭಾಷೆಗೆ ಸಾಂಸ್ಕೃತಿಕ ನೆಲೆಗಟ್ಟು, ವ್ಯಾಕರಣದ ಶಿಸ್ತು ರೂಢಿಸಿದವರು ಕೋಡಿ ಕುಶಾಲಪ್ಪ ಗೌಡರು : ಸದಾನಂದ ಮಾವಜಿ*

ಆಗಷ್ಟ್ 29, 2026

*ಅಂತರ ಶಾಲಾ ಶಟಲ್ ಬ್ಯಾಡ್ಮಿಂಟನ್: ಶ್ರೀ ರಾಜರಾಜೇಶ್ವರಿ ಶಾಲೆ ವಿದ್ಯಾರ್ಥಿಗಳ ಸಾಧನೆ*

ಆಗಷ್ಟ್ 29, 2026

*ಅರೆಭಾಷೆಗೆ ಸಾಂಸ್ಕೃತಿಕ ನೆಲೆಗಟ್ಟು, ವ್ಯಾಕರಣದ ಶಿಸ್ತು ರೂಢಿಸಿದವರು ಕೋಡಿ ಕುಶಾಲಪ್ಪ ಗೌಡರು : ಸದಾನಂದ ಮಾವಜಿ*

ಆಗಷ್ಟ್ 29, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, ಆ.29 NEWS DESK : ಅರೆಭಾಷೆಗೆ ಸಾಂಸ್ಕೃತಿಕ ನೆಲೆಗಟ್ಟನ್ನು ಹಾಕಿಕೊಟ್ಟು, ವ್ಯಾಕರಣದ ಶಿಸ್ತನ್ನು ರೂಢಿಸಿದವರು ಭಾಷಾ ವಿಜ್ಞಾನಿ ಡಾ.…

*ಅಂತರ ಶಾಲಾ ಶಟಲ್ ಬ್ಯಾಡ್ಮಿಂಟನ್: ಶ್ರೀ ರಾಜರಾಜೇಶ್ವರಿ ಶಾಲೆ ವಿದ್ಯಾರ್ಥಿಗಳ ಸಾಧನೆ*

ಆಗಷ್ಟ್ 29, 2026

ಕೊಡಗಿನಲ್ಲಿ ಕರವೇ ಸ್ವಾಭಿಮಾನಿ ಸೇನೆಗೆ ನೂತನ ಸದಸ್ಯರ ಸೇರ್ಪಡೆ

ಆಗಷ್ಟ್ 29, 2026

*ತೀವ್ರಗೊಳಿಸಿದ ಐಇಸಿ ಅಭಿಯಾನ : ಮ್ಯಾರಥಾನ್ ಮೂಲಕ ಎಚ್‌ಐವಿ/ಏಡ್ಸ್ ಜಾಗೃತಿ*

ಆಗಷ್ಟ್ 29, 2026

*ಮಡಿಕೇರಿಯಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸಭೆ : ಸ್ವಾವಲಂಬಿ ಮಹಿಳಾ ಫಲಾನುಭವಿಗಳ ಗುರುತಿಸಿ ಸನ್ಮಾನಕ್ಕೆ ಕ್ರಮ*

ಆಗಷ್ಟ್ 29, 2026

*ಶಿಸ್ತುಬದ್ಧ ಶಿಕ್ಷಣದಿಂದಲೇ ಸಮಾಜದ ಯಶಸ್ಸು, ದೇಶದ ಪ್ರಗತಿ : ಶಾಸಕ ಎ.ಎಸ್.ಪೊನ್ನಣ್ಣ*

ಆಗಷ್ಟ್ 29, 2026

*ಫೀ.ಮಾ. ಕಾರ್ಯಪ್ಪ ಕಾಲೇಜಿನಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆ: ಶಿಸ್ತುಬದ್ಧ ಜೀವನವೇ ಸಾಧನೆಯ ದಾರಿದೀಪ: ಕರ್ನಲ್ ಸಂಜೀವ್ ಕುಮಾರ್*

ಆಗಷ್ಟ್ 29, 2026

*ಕೊಡಗು ವಿದ್ಯಾಲಯದಲ್ಲಿ ಬ್ರಹ್ಮಗಿರಿ ಸಹೋದಯ ಸಿಬಿಎಸ್ಇ ಶಾಲೆಗಳ ಸಾಂಸ್ಕೃತಿಕ ಸ್ಪರ್ಧೆ*

ಆಗಷ್ಟ್ 29, 2026

*ಮಡಿಕೇರಿ ನಗರಸಭೆ : ತ್ಯಾಜ್ಯ ನಿರ್ವಹಣೆಗೆ ವೈಜ್ಞಾನಿಕ ವಿಧಾನಕ್ಕೆ ಒತ್ತು : ಶಾಸಕ ಮಂತರ್ ಗೌಡ*

ಆಗಷ್ಟ್ 29, 2026

*ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಕುಂದುಕೊರತೆ ಸಭೆ : ಪರಿಶಿಷ್ಟರ ಸಮಸ್ಯೆಗಳನ್ನು ಕಾಲಮಿತಿಯಲ್ಲಿ ಪರಿಹರಿಸುವುದು ಆದ್ಯ ಕೆಲಸವಾಗಿದೆ : ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಎನ್.ಬಿಂದುಮಣಿ*

ಆಗಷ್ಟ್ 29, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.