Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*
  • *ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*
  • *ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*
  • *ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*
  • *ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*
  • *ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*
  • *2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*
  • *ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*
  • *ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*
  • *ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮಡಿಕೇರಿಯ ಕೊಡಗು ಗೌಡ ಸಮಾಜಕ್ಕೆ 15 ನಿರ್ದೇಶಕರ ಅವಿರೋಧ ಆಯ್ಕೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮಡಿಕೇರಿಯ ಕೊಡಗು ಗೌಡ ಸಮಾಜಕ್ಕೆ 15 ನಿರ್ದೇಶಕರ ಅವಿರೋಧ ಆಯ್ಕೆ*

ಡಿಸೆಂಬರ್ 25, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ NEWS DESK ಡಿ.25 : ಮಡಿಕೇರಿಯ ಕೊಡಗು ಗೌಡ ಸಮಾಜದ ಮೂರು ವರ್ಷಗಳ ಅವಧಿಯ ಆಡಳಿತ ಮಂಡಳಿಗೆ 15 ಮಂದಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ದಂಬೆಕೋಡಿ ಆನಂದ, ಸೂರ್ತಲೆ ಸೋಮಣ್ಣ, ಹುದೇರಿ ರಾಜೇಂದ್ರ, ಕೊಲ್ಯದ ಗಿರೀಶ್,  ಮಂದ್ರಿರ ತೇಜಸ್, ಪುಳಕಂಡ ಸಂದೀಪ್, ಕೊಂಬನ ಪ್ರವೀಣ್, ಪೊನ್ನಚ್ಚನ ಮಧು, ತೋಟಂಬೈಲು ಅನಂತ ಕುಮಾರ್, ಪೈಕೇರ ಮನೋಹರ ಮಾದಪ್ಪ, ಕಾಳೇರಮ್ಮನ ನಂದಕುಮಾರ್, ಆಮೆ ಸೀತಾರಾಮ್, ಪೇರಿಯನ ಘನ ಶ್ಯಾಮ್, ಮಹಿಳಾ ತಂಡದಿಂದ ಚೊಕ್ಕಾಡಿ ಪ್ರೇಮ ರಾಘವಯ್ಯ ಹಾಗೂ ಮೂಲೆಮಜಲು ಅಮಿತಾ ಆಯ್ಕೆಯಾದರು. ಗೌಡ ಸಮಾಜದ ಸಭಾಂಗಣದಲ್ಲಿ ನಡೆದ ಆಯ್ಕೆ ಪ್ರಕ್ರಿಯೆಯಲ್ಲಿ ಚುನಾವಣಾಧಿಕಾರಿಯಾಗಿ ಪಾಣತ್ತಲೆ ಪಳಂಗಪ್ಪ ಕಾರ್ಯನಿರ್ವಹಿಸಿದರೆ ಕೊಡಗು ಗೌಡ ಸಮಾಜಗಳ ಒಕ್ಕೂಟ ಸಹಕಾರ ನೀಡಿತು. ನಿಕಟಪೂರ್ವ ಅಧ್ಯಕ್ಷ ಪೇರಿಯನ ಜಯಾನಂದ, ಕೊಡಗು ಗೌಡ ಸಮಾಜಗಳ ಒಕ್ಕೂಟದ ಅಧ್ಯಕ್ಷ ಆನಂದ ಕರಂದ್ಲಾಜೆ, ಕುಶಾಲನಗರ ಗೌಡ ಸಮಾಜದ ಅಧ್ಯಕ್ಷ ಚಿಲ್ಲನ ಗಣಿ ಪ್ರಸಾದ್ ಮತ್ತಿತರರು ಉಪಸ್ಥಿತರಿದ್ದರು. ನಂತರ ಮಾತನಾಡಿದ ಒಕ್ಕೂಟದ ಅಧ್ಯಕ್ಷ ಆನಂದ ಕರಂದ್ಲಾಜೆ ಅವರು ನಮ್ಮ ಜನಾಂಗದ ಹೆಮ್ಮೆಯ ಪ್ರತಿಷ್ಠಿತ ಮಡಿಕೇರಿಯ ಕೊಡಗು ಗೌಡ ಸಮಾಜದ ಮೂರು ವರ್ಷಗಳ ಅವಧಿಯ ಆಡಳಿತ ಮಂಡಳಿಯ ಆಯ್ಕೆ ಮಾದರಿ ಎಂಬಂತೆ ನಡೆದಿದೆ ಎಂದರು.
ಕೊಡಗು ಗೌಡ ಸಮಾಜಗಳ ಒಕ್ಕೂಟದ ಆಶಯದಂತೆ ಒಂದು ಸಶಕ್ತ ತಂಡ ಆಯ್ಕೆಯಾಗಿದೆ. ಇಂದಿನ ಚುನಾವಣೆ ಪ್ರಕ್ರಿಯೆಯಲ್ಲಿ ನಾಮಪತ್ರ ಸಲ್ಲಿಸಿದ ಎಲ್ಲರೂ ಸೇರಿ ಅವಿರೋಧವಾಗಿ 15 ಮಂದಿಯನ್ನು ಆಯ್ಕೆ ಮಾಡಿ ಒಕ್ಕೂಟದ ಮನವಿಗೆ ಸ್ಪಂದಿಸಿದ್ದಾರೆ. ಯಾವುದೇ ಪಕ್ಷಪಾತವಿಲ್ಲದೇ ಈ ದಿನ ಆಯ್ಕೆ ನಡೆದಿರುವುದು ನಮಗೆ ಇನ್ನಷ್ಟು ಸಂತಸ ತಂದಿದ್ದು, ಹೊಸ ಆಡಳಿತ ಮಂಡಳಿಗೆ ಅಭಿನಂದನೆ ಮತ್ತು ನಮ್ಮ ಮನವಿಗೆ ಮನ್ನಣೆ ನೀಡಿ ನಾಮಪತ್ರಗಳನ್ನು ವಾಪಸ್ಸು ಪಡೆದು ಸಹಕರಿಸಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸುತ್ತೇವೆ ಎಂದು ತಿಳಿಸಿದರು. ಇದುವರೆಗೆ ಸಮಾಜವನ್ನು ಶಕ್ತಿಯುತವಾಗಿ ಮುನ್ನಡೆಸಿ ಇಂದಿನ ಆಯ್ಕೆಗೆ ಸಹಕರಿಸಿದ ನಿಕಟ ಪೂರ್ವ ಅಧ್ಯಕ್ಷ ಪೇರಿಯನ ಜಯಾನಂದ ಹಾಗೂ ಚುನಾವಣಾಧಿಕಾರಿಯಾಗಿ ಕಾರ್ಯನಿರ್ವಹಿಸಿದ ಪಾಣತ್ತಲೆ ಪಳಂಗಪ್ಪ ಅವರುಗಳು ಕಾರ್ಯ ಶ್ಲಾಘನೀಯವೆಂದರು. ಶಕ್ತಿಯುತ  ಮತ್ತು ಸ್ವಾಸ್ಥ್ಯಭರಿತ ಸಮಾಜ ನಿರ್ಮಾಣ ಮಾಡುವತ್ತ ನಾವೆಲ್ಲರೂ ಒಗ್ಗಟ್ಟಿನಿಂದ ಮುನ್ನಡೆಯೋಣ ಎಂದು ಆನಂದ ಕರಂದ್ಲಾಜೆ ಕರೆ ನೀಡಿದರು. ಕೊಡಗು ಗೌಡ ಸಮಾಜ ಮಡಿಕೇರಿಯ ಆಡಳಿತ ಮಂಡಳಿಗೆ ಹಲವು ಆಕಾಂಕ್ಷಿಗಳು ನಾಮಪತ್ರ ಸಲ್ಲಿಸಿರುವುದು ಜನಾಂಗದ ಅಭಿವೃದ್ಧಿಯ ದೃಷ್ಟಿಯಿಂದ ಉತ್ತಮ ಬೆಳವಣಿಗೆಯಾಗಿದೆ. ಎಲ್ಲಾ ಅಭ್ಯರ್ಥಿಗಳು ಕೊಡಗು ಗೌಡ ಸಮಾಜಗಳ ಒಕ್ಕೂಟದ ವಿನಂತಿಗೆ ಸ್ಪಂದಿಸಿ ನಿಷ್ಪಕ್ಷಪಾತದ ಆಡಳಿತ ಮಂಡಳಿ ಆಯ್ಕೆಯಾಗುವಂತೆ ಸಂಪೂರ್ಣ ಸಹಕಾರ ನೀಡಿದ್ದು, ಎಲ್ಲಾ ಅಭ್ಯರ್ಥಿಗಳಿಗೆ ಕೃತಜ್ಞತೆ ಸಲ್ಲಿಸುವುದಾಗಿ ಒಕ್ಕೂಟದ ಉಪಾಧ್ಯಕ್ಷ ಡಾ.ತೇನನ ರಾಜೇಶ್ ಹೇಳಿದರು. ಒಕ್ಕೂಟ ಅವಿರತ ಜವಾಬ್ದಾರಿಯುತವಾಗಿ ಕೆಲಸ ನಿರ್ವಹಿಸುತ್ತದೆ ಎಂಬುವುದಕ್ಕೆ ಇದು ಉದಾಹರಣೆಯಾಗಿದೆ. ನಿಮ್ಮೆಲ್ಲರ ಆತ್ಮವಿಶ್ವಾಸ ಹಾಗೂ ನಂಬಿಕೆಗೆ ನಾವು ಚಿರಋಣಿಗಳಾಗಿದ್ದೇವೆ. ಮುಂದಿನ ದಿನಗಳಲ್ಲಿ ಎಲ್ಲಾ ಗೌಡ ಸಮಾಜಗಳಲ್ಲಿ ಜವಾಬ್ದಾರಿಯುತ ಮತ್ತು ಹುಮ್ಮಸಿನಿಂದ ಕಾರ್ಯನಿರ್ವಹಿಸುವ ಆಡಳಿತ ಮಂಡಳಿ ಆಯ್ಕೆಯಾಗಿ ಬರಲಿ ಎಂದು ಅವರು ಶುಭ ಹಾರೈಸಿದರು. ಆಡಳಿತ ಮಂಡಳಿಗೆ 15 ನಿರ್ದೇಶಕರು ಅವಿರೋಧವಾಗಿ ಆಯ್ಕೆಯಾಗಲು ಒಕ್ಕೂಟ ನಡೆಸಿದ ಪ್ರಯತ್ನವನ್ನು ಕಾರ್ಯದರ್ಶಿ ಪೇರಿಯನ ಉದಯ ಕುಮಾರ್ ಸ್ಮರಿಸಿದರು.

Follow us Follow us
Share. WhatsApp Facebook Twitter Email Telegram Copy Link

Related Posts

*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಸೆ.26: ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್…

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*

ಸೆಪ್ಟೆಂಬರ್ 26, 2026

*ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*

ಸೆಪ್ಟೆಂಬರ್ 26, 2026

*ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*

ಸೆಪ್ಟೆಂಬರ್ 26, 2026

*2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*

ಸೆಪ್ಟೆಂಬರ್ 26, 2026

*ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*

ಸೆಪ್ಟೆಂಬರ್ 26, 2026

*ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*

ಸೆಪ್ಟೆಂಬರ್ 26, 2026

*ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*

ಸೆಪ್ಟೆಂಬರ್ 26, 2026

*36 ವರ್ಷ ಸೇವೆ ಸಲ್ಲಿಸಿದ ಅಂಗನವಾಡಿ ಕಾರ್ಯಕರ್ತೆ ದೇವಮಾಜಿ, ಶಿಕ್ಷಕಿ ಭೋಜಮ್ಮಗೆ ಆತ್ಮೀಯ ಬೀಳ್ಕೊಡುಗೆ*

ಸೆಪ್ಟೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.