Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮಾ.8 ರಂದು ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ*
  • *ಮಾ.8 ರಂದು ಬಿಟ್ಟಂಗಾಲದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ*
  • *ಕೊಡವ ಅಭಿವೃದ್ಧಿ ನಿಗಮ ಘೋಷಣೆ : ಯುಕೊ ಸಂಭ್ರಮಾಚರಣೆ : ಶಾಸಕ ಪೊನ್ನಣ್ಣ, ಮಂಜು ಚಿಣ್ಣಪ್ಪಗೆ ಸನ್ಮಾನ
  • *ಜಾತಿಧರ್ಮಗಳ ಹೆಸರಿನಲ್ಲಿ ಸಮಾಜವನ್ನು ಒಡೆಯುವ ಪ್ರಯತ್ನಗಳ ಬಗ್ಗೆ ಜಾಗೃತರಾಗಿರಿ : ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ*
  • *ತಿತಿಮತಿ : ರೈಲ್ವೆ ಬ್ಯಾರಿಕೆಡ್ ಅಳವಡಿಸುವ ಕಾಮಗಾರಿ ಶಾಸಕ ಎ.ಎಸ್.ಪೊನ್ನಣ್ಣ ಚಾಲನೆ*
  • *ಪ್ರೊ.ಅಶೋಕ ಸಂಗಪ್ಪ ಆಲೂರ ಅವರಿಗೆ ಭಾರತರತ್ನ ಡಾ.ಸರ್.ಎಂ.ವಿಶ್ವೇಶ್ವರಯ್ಯ ವಿಜ್ಞಾನ ಪುರಸ್ಕಾರ*
  • *ಸುಂಟಿಕೊಪ್ಪ : ಮಕ್ಕಳಲ್ಲಿ ಸಾಹಿತ್ಯ ಅಭಿರುಚಿಯನ್ನು ಹೆಚ್ಚಿಸಬೇಕು : ಎಸ್.ಐ.ಮುನಿರ್‍ಅಹ್ಮದ್*
  • *ವಿರಾಜಪೇಟೆಯ ಸೈಂಟ್ ಆನ್ಸ್ ಪದವಿ ಕಾಲೇಜಿನ ಎನ್ ಎಸ್ ಎಸ್ ಎಸ್ ವಾರ್ಷಿಕ ಶಿಬಿರದಲ್ಲಿ ವಿದ್ಯಾರ್ಥಿಗಳಿಂದ ಗ್ರಾಮ ಸ್ವಚ್ಛತಾ ಅಭಿಯಾನ*
  • *ಹವ್ಯಕ ಅಕಾಡೆಮಿ, ಕೊಡವ ನಿಗಮ : ಸಾಂಸ್ಕೃತಿಕ ಪರಂಪರೆಯ ರಕ್ಷಣೆ ಮತ್ತು ಸಮುದಾಯದ ಅಭಿವೃದ್ಧಿಯನ್ನು ಉತ್ತೇಜಿಸುವ ಮಹತ್ವದ ಹೆಜ್ಜೆ : ಸರಕಾರದ ಕ್ರಮವನ್ನು ಸ್ವಾಗತಿಸಿದ ಸಿಎನ್‌ಸಿ*
  • *ಆದಿವಾಸಿಗಳ ವಿವಿಧ ಬೇಡಿಕೆ ಆಲಿಸಿದ ಜಿಲ್ಲಾಧಿಕಾರಿ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಶಾಮನೂರು ಶಿವಶಂಕರಪ್ಪರ ಬದುಕು ನಿಜಕ್ಕೂ ಸಾರ್ಥಕ, ಅವರ ಕೊಡುಗೆಗಳ ಮೂಲಕ ನೆನೆಯೋಣ : ಮುಖ್ಯಮಂತ್ರಿ ಸಿದ್ದರಾಮಯ್ಯ*
ಇತ್ತೀಚಿನ ಸುದ್ದಿಗಳು ಕರ್ನಾಟಕ

*ಶಾಮನೂರು ಶಿವಶಂಕರಪ್ಪರ ಬದುಕು ನಿಜಕ್ಕೂ ಸಾರ್ಥಕ, ಅವರ ಕೊಡುಗೆಗಳ ಮೂಲಕ ನೆನೆಯೋಣ : ಮುಖ್ಯಮಂತ್ರಿ ಸಿದ್ದರಾಮಯ್ಯ*

ಡಿಸೆಂಬರ್ 27, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ದಾವಣಗೆರೆ ಡಿ.27 NEWS DESK : ಶಾಮನೂರು ಶಿವಶಂಕರಪ್ಪ ಅವರು ಬಡವರು, ಕಷ್ಟದಲ್ಲಿರುವವರಿಗೆ ಟ್ರಸ್ಟ್ ಮೂಲಕ ನೆರವಾಗುವ ಕೊಡುಗೈದಾನಿಯಾಗಿದ್ದರು. ಪ್ರತಿಯೊಬ್ಬರಿಗೂ ಹುಟ್ಟು ಆಕಸ್ಮಿಕ, ಆದರೆ ಸಾವು ಖಚಿತ, ಈ ನಡುವಿನ ಪಯಣದಲ್ಲಿ ಬದುಕಿನ ಸಾರ್ಥಕತೆ ಕಂಡುಕೊಳ್ಳುವುದು ಮುಖ್ಯ. ದು:ಖದಲ್ಲಿರುವವರಿಗೆ ಸದಾ ನೆರವಾಗುವ ಅವರ ಬದುಕು ನಿಜಕ್ಕೂ ಸಾರ್ಥಕ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ. ದಾವಣಗೆರೆಯ ಶ್ರೀ ಕಲ್ಲೇಶ್ವರ ರೈಸ್ ಮಿಲ್ ಆವರಣದಲ್ಲಿ ಆಯೋಜಿಸಿದ್ದ ಹಿರಿಯ ಶಾಸಕರು, ಮಾಜಿ‌ ಸಚಿವರು ಆದ ಲಿಂಗೈಕ್ಯ ಶಾಮನೂರು ಶಿವಶಂಕರಪ್ಪ ಅವರ ಶಿವಗಣಾರಾಧನೆ ಹಾಗೂ ನುಡಿನಮನ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಪಾಲ್ಗೊಂಡು, ಅಗಲಿದ ಅಜಾತಶತ್ರುವಿಗೆ ನಮಿಸಿದರು. ಶಾಮನೂರು ಶಿವಶಂಕರಪ್ಪ ಅವರು ದೇಶ ಕಂಡ ಹಿರಿಯ ಶಾಸಕ, ಮಾಜಿ ಮಂತ್ರಿ ಹಾಗೂ ದಾವಣಗೆರೆಯ ನಗರಸಭೆ ಅಧ್ಯಕ್ಷರಾಗಿದ್ದರು. ಕಾಂಗ್ರೆಸ್ ಪಕ್ಷದಲ್ಲಿ ಖಜಾಂಚಿಯಾಗಿ ಸುಧೀರ್ಘ ಸೇವೆ ಸಲ್ಲಿಸಿದ್ದರು. ಇತ್ತೀಚೆಗೆ ಅವರ ಜನ್ಮದಿನಾಚರಣೆಯಲ್ಲಿ ಹಾಗೂ ದಾಲ್ ಮಿಲ್ ಉದ್ಘಾಟನೆಯಲ್ಲಿ ಪಾಲ್ಗೊಂಡಿದ್ದೆ. ಶ್ರೀಯುತರು ಶತಾಯುಷಿಗಳಾಗುತ್ತಾರೆ ಎಂಬ ನಂಬಿಕೆಯಿತ್ತು. ಅವರ ಅಗಲಿಕೆಯಿಂದ ನಾಡಿಗೆ ಮತ್ತು ಕಾಂಗ್ರೆಸ್ ಪಕ್ಷಕ್ಕೆ ತುಂಬಲಾರದ ನಷ್ಟವುಂಟಾಗಿದೆ. ತಮ್ಮ ಇಳಿವಯಸ್ಸಿನಲ್ಲಿಯೂ ಅವರು ಅತ್ಯಂತ ಕ್ರೀಯಾಶೀಲರಾಗಿದ್ದರು ಎಂದರು. ಅವರು ವೀರಶೈವ ಮಹಾಸಭಾದ ರಾಷ್ಟ್ರಧ್ಯಕ್ಷರಾಗಿದ್ದ ಸಂದರ್ಭದಲ್ಲಿ ಸನ್ಮಾನ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದೆ. ಸರ್ಕಾರಿ ಕಚೇರಿಗಳಲ್ಲಿ ಜಗದ್ಗುರು ಬಸವಣ್ಣನವರ ಛಾಯಾಚಿತ್ರ ಕಡ್ಡಾಯಗೊಳಿಸುವ ನಮ್ಮ ತೀರ್ಮಾನವನ್ನು ಅಭಿನಂದಿಸಲು ನನಗೆ ಸನ್ಮಾನ ಕಾರ್ಯಕ್ರಮ ಇಟ್ಟುಕೊಂಡಿದ್ದರು. ಶಿವಶಂಕರಪ್ಪ ಅವರೊಬ್ಬ ಜಾತ್ಯತೀತ ಹಾಗೂ ಜನಪ್ರಿಯ ನಾಯಕ. ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಲಿಂಗಾಯತ ಸಮುದಾಯ ಪ್ರಬಲ್ಯವಿಲ್ಲದಿದ್ದರೂ, ಆ ಕ್ಷೇತ್ರದಲ್ಲಿ ಜನಮನ್ನಣೆಗೆ ಪಾತ್ರರಾಗಿದ್ದರಲ್ಲದೇ, ಆರು ಬಾರಿ ಸತತವಾಗಿ ಆಯ್ಕೆಯಾಗಿದ್ದರು. ಸದಾ ಚೈತನ್ಯಶೀಲರಾಗಿದ್ದ ಶಾಮನೂರು ಶಿವಶಂಕರಪ್ಪನವರು ಮುಂದಿನ ಚುನಾವಣೆಯಲ್ಲಿಯೂ ಭಾಗವಹಿಸುವ ಹುರುಪನ್ನು ತೋರಿದ್ದರು. ಎಲ್ಲ ರಾಜಕೀಯ ಪಕ್ಷದವರೊಂದಿಗೂ ಉತ್ತಮ ಬಾಂಧವ್ಯ ಹೊಂದಿದ್ದ ಅಜಾತಶತ್ರುಎಂದು ಬಣ್ಣಿಸಿದರು.  ಕೇವಲ ಜವಳಿ ಕೇಂದ್ರವಾಗಿದ್ದ ದಾವಣಗೆರೆಯನ್ನು ವಿದ್ಯಾಕಾಶಿ ಮಾಡಿದ ಕೀರ್ತಿ ಶ್ರೀಯುತರಿಗೆ ಸಲ್ಲುತ್ತದೆ. ಬಾಪೂಜಿ ವಿದ್ಯಾಸಂಸ್ಥೆಯನ್ನು ಸ್ಥಾಪಿಸಿ ಸಹಸ್ರಾರು ಜನರ ಬದುಕಿಗೆ ದಾರಿದೀಪವಾಗಿದ್ದರು. ಉದ್ಯಮಿಯಾಗಿ, ಕೈಗಾರಿಕೋದ್ಯಮಿಯಾಗಿ, ವಿದ್ಯಾ ಸಂಸ್ಥೆಗಳ ಸಂಸ್ಥಾಪಕರಾಗಿ, ರಾಜಕಾರಣಿಯಾಗಿ ಸುದೀರ್ಘ ಸೇವೆ ಸಲ್ಲಿಸಿರುವುದು ಶ್ಲಾಘನೀಯ. ಮಹಾನ್ ಚೇತನ ಶಾಮನೂರು ಶಿವಶಂಕರಪ್ಪನವರ ಆತ್ಮಕ್ಕೆ ಶಾಂತಿ ದೊರೆಯಲಿ ಹಾಗೂ ಅವರ ಅಗಲಿಕೆಯ ದು:ಖವನ್ನು ಭರಿಸುವ ಶಕ್ತಿಯನ್ನು ಅವರ ಕುಟುಂಬವರ್ಗ ಹಾಗೂ ಅಭಿಮಾನಿ ವರ್ಗಕ್ಕೆ ದೊರೆಯಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ ಎಂದು ಹೇಳಿದರು. ಸಮಾರಂಭದಲ್ಲಿ ಉಪಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್, ನಾಡಿನ ವಿವಿಧ ಮಠಗಳ ಪೂಜನೀಯ ಶ್ರೀಗಳು, ಶಿವಶಂಕರಪ್ಪನವರ ಕುಟುಂಬ ಸದಸ್ಯರು ಹಾಗೂ ಸಾವಿರಾರು ಮಂದಿ ಶಿವಶಂಕರಪ್ಪನವರ ಅಭಿಮಾನಿಗಳು ಹಾಜರಿದ್ದರು.

 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಮಾ.8 ರಂದು ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ*

ಮಾರ್ಚ್ 7, 2026

*ಮಾ.8 ರಂದು ಬಿಟ್ಟಂಗಾಲದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ*

ಮಾರ್ಚ್ 7, 2026

*ಕೊಡವ ಅಭಿವೃದ್ಧಿ ನಿಗಮ ಘೋಷಣೆ : ಯುಕೊ ಸಂಭ್ರಮಾಚರಣೆ : ಶಾಸಕ ಪೊನ್ನಣ್ಣ, ಮಂಜು ಚಿಣ್ಣಪ್ಪಗೆ ಸನ್ಮಾನ

ಮಾರ್ಚ್ 7, 2026

*ಮಾ.8 ರಂದು ಬಿಟ್ಟಂಗಾಲದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ*

ಮಾರ್ಚ್ 7, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ ಮಾ.7 NEWS DESK : ನ್ಯಾಷನಲ್ ಮೆಡಿಕೋಸ್ ಆರ್ಗನೈಸೇಶನ್, ಸೇವಾ ಭಾರತಿ ಕೊಡಗು ಸಂಯುಕ್ತ ಆಶ್ರಯದಲ್ಲಿ ಮಾ.8 ರಂದು…

*ಕೊಡವ ಅಭಿವೃದ್ಧಿ ನಿಗಮ ಘೋಷಣೆ : ಯುಕೊ ಸಂಭ್ರಮಾಚರಣೆ : ಶಾಸಕ ಪೊನ್ನಣ್ಣ, ಮಂಜು ಚಿಣ್ಣಪ್ಪಗೆ ಸನ್ಮಾನ

ಮಾರ್ಚ್ 7, 2026

*ಜಾತಿಧರ್ಮಗಳ ಹೆಸರಿನಲ್ಲಿ ಸಮಾಜವನ್ನು ಒಡೆಯುವ ಪ್ರಯತ್ನಗಳ ಬಗ್ಗೆ ಜಾಗೃತರಾಗಿರಿ : ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ*

ಮಾರ್ಚ್ 7, 2026

*ತಿತಿಮತಿ : ರೈಲ್ವೆ ಬ್ಯಾರಿಕೆಡ್ ಅಳವಡಿಸುವ ಕಾಮಗಾರಿ ಶಾಸಕ ಎ.ಎಸ್.ಪೊನ್ನಣ್ಣ ಚಾಲನೆ*

ಮಾರ್ಚ್ 7, 2026

*ಪ್ರೊ.ಅಶೋಕ ಸಂಗಪ್ಪ ಆಲೂರ ಅವರಿಗೆ ಭಾರತರತ್ನ ಡಾ.ಸರ್.ಎಂ.ವಿಶ್ವೇಶ್ವರಯ್ಯ ವಿಜ್ಞಾನ ಪುರಸ್ಕಾರ*

ಮಾರ್ಚ್ 7, 2026

*ಸುಂಟಿಕೊಪ್ಪ : ಮಕ್ಕಳಲ್ಲಿ ಸಾಹಿತ್ಯ ಅಭಿರುಚಿಯನ್ನು ಹೆಚ್ಚಿಸಬೇಕು : ಎಸ್.ಐ.ಮುನಿರ್‍ಅಹ್ಮದ್*

ಮಾರ್ಚ್ 7, 2026

*ವಿರಾಜಪೇಟೆಯ ಸೈಂಟ್ ಆನ್ಸ್ ಪದವಿ ಕಾಲೇಜಿನ ಎನ್ ಎಸ್ ಎಸ್ ಎಸ್ ವಾರ್ಷಿಕ ಶಿಬಿರದಲ್ಲಿ ವಿದ್ಯಾರ್ಥಿಗಳಿಂದ ಗ್ರಾಮ ಸ್ವಚ್ಛತಾ ಅಭಿಯಾನ*

ಮಾರ್ಚ್ 7, 2026

*ಹವ್ಯಕ ಅಕಾಡೆಮಿ, ಕೊಡವ ನಿಗಮ : ಸಾಂಸ್ಕೃತಿಕ ಪರಂಪರೆಯ ರಕ್ಷಣೆ ಮತ್ತು ಸಮುದಾಯದ ಅಭಿವೃದ್ಧಿಯನ್ನು ಉತ್ತೇಜಿಸುವ ಮಹತ್ವದ ಹೆಜ್ಜೆ : ಸರಕಾರದ ಕ್ರಮವನ್ನು ಸ್ವಾಗತಿಸಿದ ಸಿಎನ್‌ಸಿ*

ಮಾರ್ಚ್ 7, 2026

*ಆದಿವಾಸಿಗಳ ವಿವಿಧ ಬೇಡಿಕೆ ಆಲಿಸಿದ ಜಿಲ್ಲಾಧಿಕಾರಿ*

ಮಾರ್ಚ್ 7, 2026

*ಬೆಂಗಳೂರಿನ ವಾಯುಪಡೆ ತಾಂತ್ರಿಕ ಕಾಲೇಜಿನಲ್ಲಿ ನಡೆದ ತಾಂತ್ರಿಕ ಅಧಿಕಾರಿಗಳ ಪದವಿ ಪರೇಡ್*

ಮಾರ್ಚ್ 7, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.