Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • ಕೊಡಗಿನಲ್ಲಿ ಕರವೇ ಸ್ವಾಭಿಮಾನಿ ಸೇನೆಗೆ ನೂತನ ಸದಸ್ಯರ ಸೇರ್ಪಡೆ
  • *ತೀವ್ರಗೊಳಿಸಿದ ಐಇಸಿ ಅಭಿಯಾನ : ಮ್ಯಾರಥಾನ್ ಮೂಲಕ ಎಚ್‌ಐವಿ/ಏಡ್ಸ್ ಜಾಗೃತಿ*
  • *ಮಡಿಕೇರಿಯಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸಭೆ : ಸ್ವಾವಲಂಬಿ ಮಹಿಳಾ ಫಲಾನುಭವಿಗಳ ಗುರುತಿಸಿ ಸನ್ಮಾನಕ್ಕೆ ಕ್ರಮ*
  • *ಶಿಸ್ತುಬದ್ಧ ಶಿಕ್ಷಣದಿಂದಲೇ ಸಮಾಜದ ಯಶಸ್ಸು, ದೇಶದ ಪ್ರಗತಿ : ಶಾಸಕ ಎ.ಎಸ್.ಪೊನ್ನಣ್ಣ*
  • *ಫೀ.ಮಾ. ಕಾರ್ಯಪ್ಪ ಕಾಲೇಜಿನಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆ: ಶಿಸ್ತುಬದ್ಧ ಜೀವನವೇ ಸಾಧನೆಯ ದಾರಿದೀಪ: ಕರ್ನಲ್ ಸಂಜೀವ್ ಕುಮಾರ್*
  • *ಕೊಡಗು ವಿದ್ಯಾಲಯದಲ್ಲಿ ಬ್ರಹ್ಮಗಿರಿ ಸಹೋದಯ ಸಿಬಿಎಸ್ಇ ಶಾಲೆಗಳ ಸಾಂಸ್ಕೃತಿಕ ಸ್ಪರ್ಧೆ*
  • *ಮಡಿಕೇರಿ ನಗರಸಭೆ : ತ್ಯಾಜ್ಯ ನಿರ್ವಹಣೆಗೆ ವೈಜ್ಞಾನಿಕ ವಿಧಾನಕ್ಕೆ ಒತ್ತು : ಶಾಸಕ ಮಂತರ್ ಗೌಡ*
  • *ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಕುಂದುಕೊರತೆ ಸಭೆ : ಪರಿಶಿಷ್ಟರ ಸಮಸ್ಯೆಗಳನ್ನು ಕಾಲಮಿತಿಯಲ್ಲಿ ಪರಿಹರಿಸುವುದು ಆದ್ಯ ಕೆಲಸವಾಗಿದೆ : ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಎನ್.ಬಿಂದುಮಣಿ*
  • *ಕೊಡಗು ವಿದ್ಯಾಲಯದಲ್ಲಿ  ರಕ್ಷಾ ಬಂಧನ*
  • *ಹಾಕತ್ತೂರು ಸಹಕಾರ ಸಂಘದಿಂದ ಪ್ರತಿಭಾವಂತ ಮಕ್ಕಳಿಗೆ ಪ್ರೋತ್ಸಾಹ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕಾವೇರಿ ನದಿ ಸಂರಕ್ಷಣೆಗೆ ಆಗ್ರಹಿಸಿ ಮಡಿಕೇರಿಯಲ್ಲಿ ಪ್ರತಿಭಟನೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕಾವೇರಿ ನದಿ ಸಂರಕ್ಷಣೆಗೆ ಆಗ್ರಹಿಸಿ ಮಡಿಕೇರಿಯಲ್ಲಿ ಪ್ರತಿಭಟನೆ*

ಡಿಸೆಂಬರ್ 29, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ NEWS DESK ಡಿ.29 : ಜೀವನದಿ ಕಾವೇರಿಯ ಸಂರಕ್ಷಣೆಗೆ ಸರಕಾರ ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಕೊಡಗು ಅಭಿವೃದ್ಧಿ ಸಮಿತಿಯ ನೇತೃತ್ವದಲ್ಲಿ ವಿವಿಧ ಸಂಘಟನೆಗಳು ಮಡಿಕೇರಿಯಲ್ಲಿ ಪ್ರತಿಭಟನೆ ನಡೆಸಿತು. ನಗರದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿದ ಕೊಡಗು ಅಭಿವೃದ್ಧಿ ಸಮಿತಿ, ಕರ್ನಾಟಕ ರಕ್ಷಣಾ ವೇದಿಕೆ, ಕರ್ನಾಟಕ ಯುವ ರಕ್ಷಣಾ ವೇದಿಕೆ ಮತ್ತಿತರ ಸಂಘಟನೆಗಳ ಪ್ರಮುಖರು, ಕಾವೇರಿ ನದಿ ಕಲುಷಿತಗೊಳ್ಳುವುದನ್ನು ಮತ್ತು ನದಿದಂಡೆ ಒತ್ತುವರಿಯಾಗುವುದನ್ನು ತಡೆಯಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ಈ ಸಂದರ್ಭ ಕೊಡಗು ಅಭಿವೃದ್ಧಿ ಸಮಿತಿ ಜಿಲ್ಲಾಧ್ಯಕ್ಷ ಪ್ರಸನ್ನ ಭಟ್ ಮಾತನಾಡಿ, ಕೊಡಗು ಜಿಲ್ಲೆಯ ವಿವಿಧ ಭಾಗಗಳಲ್ಲಿ ಹಾಗೂ ಕಾವೇರಿ ನದಿ ಹರಿಯುವ ಪ್ರದೇಶಗಳಲ್ಲಿ ಘನ ತ್ಯಾಜ್ಯ, ಪ್ಲಾಸ್ಟಿಕ್ ವಸ್ತುಗಳು, ಹೊಟೇಲ್ ಹಾಗೂ ವ್ಯಾಪಾರಿಕ ತ್ಯಾಜ್ಯಗಳನ್ನು ನದಿಗೆ ಹಾಗೂ ನದಿ ತೀರದ ಪ್ರದೇಶಗಳಿಗೆ ಅಕ್ರಮವಾಗಿ ಎಸೆಯುತ್ತಿರುವುದು ಅತ್ಯಂತ ವಿಷಾದನೀಯ ಎಂದರು. ಇದು ಪರಿಸರ, ಸಾರ್ವಜನಿಕ ಆರೋಗ್ಯ ಮತ್ತು ಭವಿಷ್ಯದ ನೀರಿನ ಭದ್ರತೆಗೆ ಗಂಭೀರ ಅಪಾಯವನ್ನುಂಟು ಮಾಡಲಿದ್ದು, ಕಾವೇರಿ ನದಿಗೆ ತ್ಯಾಜ್ಯ ಎಸೆಯುತ್ತಿರುವವರ ವಿರುದ್ಧ ತಕ್ಷಣ ಕಠಿಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು.
ಕೋಟ್ಯಾಂತರ ಜನರಿಗೆ ಕುಡಿಯುವ ನೀರನ್ನು ಒದಗಿಸುವ ಕಾವೇರಿ ನದಿಯ ಸಂರಕ್ಷಣೆಯ ವಿಚಾರದಲ್ಲಿ ಯಾವುದೇ ಕಾರಣಕ್ಕೂ ಸರಕಾರ ನಿರ್ಲಕ್ಷ್ಯ ತೋರಬಾರದು, ಕಾವೇರಿ ನದಿಗೆ ಶುದ್ಧೀಕರಿಸದ ತ್ಯಾಜ್ಯ ನೀರು ಬಿಡುತ್ತಿರುವ ಅಕ್ರಮಗಳು, ನದಿ ತೀರದ ಒತ್ತುವರಿಗೆಳು ಹಾಗೂ ಈ ಸಂಬಂಧ ಆಡಳಿತಾತ್ಮಕ ನಿರ್ಲಕ್ಷ್ಯದ ವಿರುದ್ಧ ತುರ್ತು ಕ್ರಮ ಕೈಗೊಳ್ಳಬೇಕು, ಸಂಬಂಧಪಟ್ಟ ನಗರಸಭೆ, ಪುರಸಭೆ, ಪಂಚಾಯತ್ ಅಧಿಕಾರಿಗಳಿಗೆ ಸ್ಪಷ್ಟ ಹಾಗೂ ಕಟ್ಟುನಿಟ್ಟಿನ ನಿರ್ದೇಶನ ನೀಡಬೇಕು, ನದಿ ತೀರ ಪ್ರದೇಶದಲ್ಲಿ ನಿರಂತರ ಪರಿಶೀಲನೆ ಹಾಗೂ ನಿಗಾ ವ್ಯವಸ್ಥೆ ಜಾರಿ ಮಾಡಬೇಕು, ತಪ್ಪಿತಸ್ಥರ ಮೇಲೆ ಭಾರೀ ದಂಡ ಹಾಗೂ ಕ್ರಿಮಿನಲ್ ಪ್ರಕರಣ ದಾಖಲಿಸುವ ಕ್ರಮವನ್ನು ಕಟ್ಟುನಿಟ್ಟಾಗಿ ಜಾರಿಗೆ ತರಬೇಕೆಂದು ಪ್ರಸನ್ನ ಭಟ್ ಆಗ್ರಹಿಸಿದರು. ತಪ್ಪಿದಲ್ಲಿ ಸಾರ್ವಜನಿಕರ ಸಹಕಾರದೊಂದಿಗೆ ಮುಂದಿನ ದಿನಗಳಲ್ಲಿ ಪ್ರತಿಭಟನೆಯನ್ನು ತೀವ್ರಗೊಳಿಸುವುದಾಗಿ ಎಚ್ಚರಿಸಿದರು. ಕರ್ನಾಟಕ ಯುವ ರಕ್ಷಣಾ ವೇದಿಕೆ ಕೊಡಗು ಜಿಲ್ಲಾ ಉಸ್ತುವಾರಿ ಹಾಗೂ ರಾಜ್ಯ ಕಾರ್ಯದರ್ಶಿ ಎಂ.ಎಂ.ದಾವೂದ್, ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ಅಣ್ಣಯ್ಯ, ಸೇರಿದಂತೆ ಕೊಡಗು ಅಭಿವೃದ್ಧಿ ಸಮಿತಿ ಪ್ರಧಾನ ಕಾರ್ಯದರ್ಶಿ ಲವ, ಕಾರ್ಯದರ್ಶಿ ಪ್ರಮೋದ್ ಸೇರಿದಂತೆ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. ಪ್ರತಿಭಟನಾಕಾರರು ಜಿಲ್ಲಾಡಳಿತದ ಮೂಲಕ ಸರಕಾರಕ್ಕೆ ಮನವಿ ಪತ್ರ ಸಲ್ಲಿಸಿದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

ಕೊಡಗಿನಲ್ಲಿ ಕರವೇ ಸ್ವಾಭಿಮಾನಿ ಸೇನೆಗೆ ನೂತನ ಸದಸ್ಯರ ಸೇರ್ಪಡೆ

ಆಗಷ್ಟ್ 29, 2026

*ತೀವ್ರಗೊಳಿಸಿದ ಐಇಸಿ ಅಭಿಯಾನ : ಮ್ಯಾರಥಾನ್ ಮೂಲಕ ಎಚ್‌ಐವಿ/ಏಡ್ಸ್ ಜಾಗೃತಿ*

ಆಗಷ್ಟ್ 29, 2026

*ಮಡಿಕೇರಿಯಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸಭೆ : ಸ್ವಾವಲಂಬಿ ಮಹಿಳಾ ಫಲಾನುಭವಿಗಳ ಗುರುತಿಸಿ ಸನ್ಮಾನಕ್ಕೆ ಕ್ರಮ*

ಆಗಷ್ಟ್ 29, 2026

*ತೀವ್ರಗೊಳಿಸಿದ ಐಇಸಿ ಅಭಿಯಾನ : ಮ್ಯಾರಥಾನ್ ಮೂಲಕ ಎಚ್‌ಐವಿ/ಏಡ್ಸ್ ಜಾಗೃತಿ*

ಆಗಷ್ಟ್ 29, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

  ಮಡಿಕೇರಿ, ಆ.29 NEWS DESK : ಜಿಲ್ಲಾ ಏಡ್ಸ್ ನಿಯಂತ್ರಣ ಘಟಕದ ವತಿಯಿಂದ ತೀವ್ರಗೊಳಿಸಿದ ಐಇಸಿ ಅಭಿಯಾನದ ಅಂಗವಾಗಿ…

*ಮಡಿಕೇರಿಯಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸಭೆ : ಸ್ವಾವಲಂಬಿ ಮಹಿಳಾ ಫಲಾನುಭವಿಗಳ ಗುರುತಿಸಿ ಸನ್ಮಾನಕ್ಕೆ ಕ್ರಮ*

ಆಗಷ್ಟ್ 29, 2026

*ಶಿಸ್ತುಬದ್ಧ ಶಿಕ್ಷಣದಿಂದಲೇ ಸಮಾಜದ ಯಶಸ್ಸು, ದೇಶದ ಪ್ರಗತಿ : ಶಾಸಕ ಎ.ಎಸ್.ಪೊನ್ನಣ್ಣ*

ಆಗಷ್ಟ್ 29, 2026

*ಫೀ.ಮಾ. ಕಾರ್ಯಪ್ಪ ಕಾಲೇಜಿನಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆ: ಶಿಸ್ತುಬದ್ಧ ಜೀವನವೇ ಸಾಧನೆಯ ದಾರಿದೀಪ: ಕರ್ನಲ್ ಸಂಜೀವ್ ಕುಮಾರ್*

ಆಗಷ್ಟ್ 29, 2026

*ಕೊಡಗು ವಿದ್ಯಾಲಯದಲ್ಲಿ ಬ್ರಹ್ಮಗಿರಿ ಸಹೋದಯ ಸಿಬಿಎಸ್ಇ ಶಾಲೆಗಳ ಸಾಂಸ್ಕೃತಿಕ ಸ್ಪರ್ಧೆ*

ಆಗಷ್ಟ್ 29, 2026

*ಮಡಿಕೇರಿ ನಗರಸಭೆ : ತ್ಯಾಜ್ಯ ನಿರ್ವಹಣೆಗೆ ವೈಜ್ಞಾನಿಕ ವಿಧಾನಕ್ಕೆ ಒತ್ತು : ಶಾಸಕ ಮಂತರ್ ಗೌಡ*

ಆಗಷ್ಟ್ 29, 2026

*ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಕುಂದುಕೊರತೆ ಸಭೆ : ಪರಿಶಿಷ್ಟರ ಸಮಸ್ಯೆಗಳನ್ನು ಕಾಲಮಿತಿಯಲ್ಲಿ ಪರಿಹರಿಸುವುದು ಆದ್ಯ ಕೆಲಸವಾಗಿದೆ : ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಎನ್.ಬಿಂದುಮಣಿ*

ಆಗಷ್ಟ್ 29, 2026

*ಕೊಡಗು ವಿದ್ಯಾಲಯದಲ್ಲಿ  ರಕ್ಷಾ ಬಂಧನ*

ಆಗಷ್ಟ್ 29, 2026

*ಹಾಕತ್ತೂರು ಸಹಕಾರ ಸಂಘದಿಂದ ಪ್ರತಿಭಾವಂತ ಮಕ್ಕಳಿಗೆ ಪ್ರೋತ್ಸಾಹ*

ಆಗಷ್ಟ್ 29, 2026

*ವಿದ್ಯುತ್ ಸ್ಥಾವರದ ಸ್ಥಳಾಂತರಕ್ಕೆ ಕೊಡಗು ರೋಮನ್ ಕ್ಯಾಥೋಲಿಕ್ ಅಸೋಸಿಯೇಷನ್ ಮನವಿ*

ಆಗಷ್ಟ್ 29, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.