Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಕೊಡವ ಅಭಿವೃದ್ಧಿ ನಿಗಮ ಘೋಷಣೆಯಾಗಲಿದೆ : ಶಾಸಕ ಪೊನ್ನಣ್ಣ ಎ.ಎಸ್.ವಿಶ್ವಾಸ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಕೊಡವ ಅಭಿವೃದ್ಧಿ ನಿಗಮ ಘೋಷಣೆಯಾಗಲಿದೆ : ಶಾಸಕ ಪೊನ್ನಣ್ಣ ಎ.ಎಸ್.ವಿಶ್ವಾಸ

ಡಿಸೆಂಬರ್ 29, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಮಡಿಕೇರಿ ಡಿ.29 NEWS DESK : ನೂತನವಾಗಿ ಕೊಡವ ಅಭಿವೃದ್ಧಿ ನಿಗಮ ಸ್ಥಾಪಿಸುವ ಕುರಿತು ಮುಖ್ಯಮಂತ್ರಿಗಳ ಜೊತೆ ವಿಚಾರ ಪ್ರಸ್ತಾಪಿಸಿ ಚರ್ಚಿಸಿದ್ದೇನೆ. ಇದಕ್ಕೆ ಮುಖ್ಯಮಂತ್ರಿಗಳು ಪೂರಕವಾಗಿ ಸ್ಪಂದಿಸಿದ್ದಾರೆ. ಈ ನಿಟ್ಟಿನಲ್ಲಿ ಕೊಡವ ಅಭಿವೃದ್ಧಿ ನಿಗಮ ಶೀಘ್ರದಲ್ಲೇ ಘೋಷಣೆಯಾಗುವ ವಿಶ್ವಾಸವಿದೆ ಎಂದು ಮುಖ್ಯಮಂತ್ರಿಗಳ  ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಹೇಳಿದ್ದಾರೆ. ಕೊಡವ ಅಭಿವೃದ್ಧಿ ನಿಗಮ ಸ್ಥಾಪನೆ ಕುರಿತಂತೆ ಕೊಕ್ಕಲೆಮಾಡ ಮಂಜು ಚಿಣ್ಣಪ್ಪ ನೇತೃತ್ವದ ಯುನೈಟೆಡ್ ಕೊಡವ ಆರ್ಗನೈಸೇಷನ್ – ಯುಕೊ ಸಂಘಟನೆಯ ನಿಯೋಗವು ಶಾಸಕ ಪೊನ್ನಣ್ಣ ಅವರನ್ನು ವಿರಾಜಪೇಟೆಯ ಅವರ ಗೃಹ ಕಚೇರಿಯಲ್ಲಿ ಭೇಟಿಮಾಡಿ ಚರ್ಚಿಸಿತು. ಈ ಸಂದರ್ಭ ಮಾತನಾಡಿದ ಶಾಸಕರು, ಈಗಾಗಲೇ ಯುಕೊ ಸಂಘಟನೆಯ ಮಂಜು ಚಿಣ್ಣಪ್ಪನವರು ಈ ಕುರಿತು ಹೋರಾಟ ನಡೆಸುತ್ತಾ ಬಂದಿದ್ದಾರೆ. ನನ್ನೊಂದಿಗೂ ಹಲವು ಬಾರಿ ಚರ್ಚಿಸಿದ್ದಾರೆ. ಹಾಗೆಯೇ ನನ್ನ ಚುನಾವಣಾ ಪ್ರಣಾಳಿಕೆಯಲ್ಲಿಯೂ ಕೊಡವ ಅಭಿವೃದ್ಧಿ ನಿಗಮ ಸ್ಥಾಪಸುವ ಭರವಸೆ ನೀಡಲಾಗಿತ್ತು. ಹೀಗಾಗಿ ಮುಖ್ಯಮಂತ್ರಿಗಳೊಂದಿಗೆ ವಿಷಯ ಪ್ರಸ್ತಾಪಿಸಿ ಕೊಡವ ಜನಾಂಗಕ್ಕೆ ನೂತನವಾಗಿ ನಿಗಮ ಸ್ಥಾಪಿಸುವ ಅನಿವಾರ್ಯತೆ ಕುರಿತು ಮನವರಿಕೆ ಮಾಡಲಾಗಿದೆ. ಮುಖ್ಯಮಂತ್ರಿಗಳು ಸಹ ಪೂರಕವಾಗಿ ಸ್ಪಂದಿಸಿದ್ದಾರೆ. ಮುಂದಿನ ದಿನಗಳಲ್ಲಿ ಸೂಕ್ತವಾದ ಅನುದಾನ ಮೀಸಲಿರಿಸಿ ನೂತನವಾಗಿ ಕೊಡವ ಅಭಿವೃದ್ಧಿ ನಿಗಮ ಸ್ಥಾಪನೆಯಾಗಲಿದೆ ಎಂದು ಭರವಸೆ ನೀಡಿದರು. ಕೊಡಗಿನ ಕೊಡವರೂ ಸೇರಿದಂತೆ ಎಲ್ಲಾ ಜನಾಂಗದ ಹಿತ ಕಾಪಾಡುವ ನಿಟ್ಟಿನಲ್ಲಿ ಯಾವುದೇ ರಾಜಿಯಿಲ್ಲ, ಅಭಿವೃದ್ಧಿ ವಿಷಯದಲ್ಲಿ ಎಂದಿಗೂ ರಾಜಕೀಯ ಮಾಡುವುದಿಲ್ಲ, ಕೊಡಗಿನ ಎಲ್ಲರ ಸಮಗ್ರ ಅಭಿವೃದ್ಧಿಯ ಚಿಂತನೆಯೊಂದಿಗೆ ನನ್ನ ಸೇವೆಯನ್ನು ಯಾವುದೇ ತಾರತಮ್ಯವಿಲ್ಲದೆ ನಿರ್ವಹಿಸುವುದಾಗಿ ಈ ಸಂಧರ್ಬದಲ್ಲಿ ಅವರು ಹೇಳಿದರು. ಮನವಿ ಸಲ್ಲಿಸಿ ಮಾತನಾಡಿದ ಯುಕೊ ಅಧ್ಯಕ್ಷ ಕೊಕ್ಕಲೆಮಾಡ ಮಂಜು ಚಿಣ್ಣಪ್ಪ, ಪ್ರಸ್ತುತ ಸರ್ಕಾರದ ಯಾವುದೇ ಸವಲತ್ತುಗಳು ಸಮಗ್ರವಾಗಿ ಕೊಡವರನ್ನು ತಲುಪಲು ಸಾಧ್ಯವಾಗುತ್ತಿಲ್ಲ. ಕೊಡವರಲ್ಲಿ ಶೇ. 60 ಹಿಂದುಳಿದವರಿದ್ದಾರೆ, ಶೇ.30 ಬಡತನ ರೇಖೆಗೂ ಕೆಳಗಿದ್ದಾರೆ. ಇಂದಿನ ಪರಿಸ್ಥಿತಿಯಲ್ಲಿ ಸಂಸ್ಕೃತಿ ಹಾಗೂ ಪರಂಪರೆಗಳನ್ನು ಉಳಿಸಿಕೊಂಡು ಒಂದು ಜನಾಂಗದ ಸಮಗ್ರ ಅಭಿವೃದ್ಧಿಯ ಚಿಂತನೆಯೇ ದುಬಾರೀ ಎನಿಸಿಕೊಂಡಿದೆ, ಆದ್ದರಿಂದ ಸರ್ಕಾರವು ಕೊಡವರಂತಹ ಅಲ್ಪಸಂಖ್ಯಾತರ ಸಮಗ್ರ ಏಳಿಗೆಯ ಬಗ್ಗೆ ಗಮನ ಹರಿಸುವುದು ಅನಿವಾರ್ಯವಾಗುತ್ತದೆ ಎಂದು ಹೇಳಿದರು. ಈ ನಿಟ್ಟಿನಲ್ಲಿ ಸರ್ಕಾರವು ಕೊಡವ ಜನಾಂಗದ ಶ್ರೇಯೋಭಿವೃದ್ದಿಯ ಹಿತದೃಷ್ಠಿಯಿಂದ ಮುಂಬರುವ ಬಜೆಟಿನಲ್ಲಿಯೇ ಕೊಡವ ಅಭಿವೃದ್ಧಿ ನಿಗಮವನ್ನು ಸ್ಥಾಪಿಸುವಂತೆ ಸರ್ಕಾರವನ್ನು ಒತ್ತಾಯಿಸಿದರು. ನಿಯೋಗದಲ್ಲಿ ಚೆಪ್ಪುಡಿರ ಸುಜು ಕರುಂಬಯ್ಯ, ನೆಲ್ಲಮಕ್ಕಡ ಜೆಫ್ರಿ ಮಾದಯ್ಯ, ಅಪ್ಪಾರಂಡ ವೇಣು ಪೊನ್ನಪ್ಪ, ಪುದಿಯೊಕ್ಕಡ ದಿನೇಶ್, ಅಜ್ಜಿನಿಕಂಡ ಸೂರಜ್ ತಿಮ್ಮಯ್ಯ, ತೀತಿಮಾಡ ಬೋಸ್ ಅಯ್ಯಪ್ಪ, ಮಚ್ಚಾಮಾಡ ರಮೇಶ್, ಬಾದುಮಂಡ ವಿಷ್ಣು ಕಾರ್ಯಪ್ಪ, ಕಾವಡಿಚಂಡ ದೀಪು ಉತ್ತಯ್ಯ, ಕಡೇಮಾಡ ತಿಮ್ಮಯ್ಯ, ಚೆಪ್ಪುಡಿರ ಪ್ರತಿಮ ಕರುಂಬಯ್ಯ, ಬೊಳ್ಳಚೆಟ್ಟಿರ ಮೈನ ಕಾಳಪ್ಪ, ಕಳ್ಳಿಚಂಡ ದೀನ ಉತ್ತಪ್ಪ, ತನ್ವಿ ಉತ್ತಪ್ಪ, ಕುಂಜಿಲಂಡ ಗ್ರೇಸಿ ಪೂಣಚ್ಚ, ಕೊಣಿಯಂಡ ಕಾವ್ಯ ಸೋಮಯ್ಯ ಉಪಸ್ಥಿತರಿದ್ದರು.

 

Follow us Follow us
Share. WhatsApp Facebook Twitter Email Telegram Copy Link

Related Posts

ನ.11ರಂದು ಕಡಂಗದಲ್ಲಿ ಸಿಎನ್‌ಸಿಯಿಂದ 9ನೇ ಶಾಂತಿಯುತ ಮಾನವ ಸರಪಳಿ ಕಾರ್ಯಕ್ರಮ

ನವೆಂಬರ್ 7, 2026

ನ.11ರಿಂದ ಕೊಡಗು ಜಿಲ್ಲೆಯಲ್ಲಿ ಖಾಸಗಿ ಬಸ್ ಪ್ರಯಾಣ ದರ ಶೇ.15ರಿಂದ 20ರಷ್ಟು ಹೆಚ್ಚಳ

ನವೆಂಬರ್ 7, 2026

ನ.8ರಂದು ನಾಪೋಕ್ಲು ಕೊಡವ ಸಮಾಜದ 26ನೇ ವಾರ್ಷಿಕ ಮಹಾಸಭೆ

ನವೆಂಬರ್ 7, 2026

ನ.11ರಿಂದ ಕೊಡಗು ಜಿಲ್ಲೆಯಲ್ಲಿ ಖಾಸಗಿ ಬಸ್ ಪ್ರಯಾಣ ದರ ಶೇ.15ರಿಂದ 20ರಷ್ಟು ಹೆಚ್ಚಳ

ನವೆಂಬರ್ 7, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ನ.7: ಇಂಧನ ಹಾಗೂ ವಾಹನಗಳ ಬಿಡಿಭಾಗಗಳ ಬೆಲೆ ಏರಿಕೆಯ ಹಿನ್ನೆಲೆಯಲ್ಲಿ ಕೊಡಗು ಜಿಲ್ಲಾ ವ್ಯಾಪ್ತಿಯ ಖಾಸಗಿ…

ನ.8ರಂದು ನಾಪೋಕ್ಲು ಕೊಡವ ಸಮಾಜದ 26ನೇ ವಾರ್ಷಿಕ ಮಹಾಸಭೆ

ನವೆಂಬರ್ 7, 2026

ನ.14ರಿಂದ ಶ್ರೀ ಕ್ಷೇತ್ರ ಕಬ್ಬಳ್ಳಿ ಬಸವೇಶ್ವರ ಸ್ವಾಮಿ ದೇವಸ್ಥಾನದ ಲೋಕಾರ್ಪಣೆ ಹಾಗೂ ಮಹಾಕುಂಭಾಭಿಷೇಕ ಮಹೋತ್ಸವ

ನವೆಂಬರ್ 7, 2026

ರಸ್ತೆ ಅಪಘಾತ ತಡೆಗೆ ಕಠಿಣ ಕ್ರಮ ಕೈಗೊಳ್ಳಿ: ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್

ನವೆಂಬರ್ 7, 2026

ಸುಂಟಿಕೊಪ್ಪಕ್ಕೂ ಕನ್ನಡ ಸಾಹಿತ್ಯ ಕ್ಷೇತ್ರಕ್ಕೂ ಅವಿನಾಭಾವ ಸಂಬಂಧ: ಪಿ.ಎಫ್. ಸೆಬಾಸ್ಟಿನ್

ನವೆಂಬರ್ 7, 2026

ಸೋಮವಾರಪೇಟೆ ಮಾಸ್ಟರ್ ಪ್ಲಾನ್ ರಚನೆಗೆ ಸಾರ್ವಜನಿಕರಿಂದ ಸಲಹೆ ಆಹ್ವಾನ

ನವೆಂಬರ್ 7, 2026

ನಾಂಗಾಲ ಗ್ರಾಮದಲ್ಲಿ ಮಹಿಳಾ ಸಮಾಜದ ನೂತನ ಕಟ್ಟಡಕ್ಕೆ ಭೂಮಿಪೂಜೆ

ನವೆಂಬರ್ 7, 2026

ಕುಶಾಲನಗರದಲ್ಲಿ ಕರ್ಕಶ ಡಿಜೆ ಸೌಂಡ್: ಮೂರು ಪ್ರವಾಸಿ ಬಸ್‌ಗಳಿಗೆ ದಂಡ

ನವೆಂಬರ್ 7, 2026

ಕ.ಸಾ.ಪ.ವತಿಯಿಂದ ಕುಶಾಲನಗರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಗಂಗಮ್ಮ ರಾಚಪ್ಪ ದತ್ತಿನಿಧಿ ಉಪನ್ಯಾಸ; ಕನ್ನಡ ಸಾಹಿತ್ಯಕ್ಕೆ ಕುವೆಂಪು ಅವರ ಕೊಡುಗೆ ಅನನ್ಯ: ಬಿ.ಬಿ.ಹೇಮಲತಾ ಬಣ್ಣನೆ

ನವೆಂಬರ್ 7, 2026

ಕೃಷಿ ಪದ್ಧತಿಗೆ ವಿರುದ್ಧವಾಗಿ ಕಟ್ಟಡಗಳ ನಿರ್ಮಾಣ: ಕೊಡಗಿನ ಭೌಗೋಳಿಕ ಚಿತ್ರಣವೇ ಬದಲು; ಕೃಷಿ ಭೂಮಿಗಳ ಮಾರಾಟದಿಂದ ಪರಿಸರಕ್ಕೆ ಧಕ್ಕೆ: ಅಮ್ಮತ್ತಿ ರೈತ ಸಂಘ ಆತಂಕ

ನವೆಂಬರ್ 7, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.