Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ನಂದಿಬೆಟ್ಟದ ಗೇಟ್ ಬಂದ್! ಫೆಬ್ರವರಿ 14 ರಂದು ಪ್ರೇಮಿಗಳ ಪ್ರವೇಶಕ್ಕೆ ನಿರ್ಬಂಧ*
  • *ಮಾರ್ಚ್ 6ಕ್ಕೆ ರಾಜ್ಯ ಬಜೆಟ್ ಮಂಡನೆ: ಗ್ಯಾರಂಟಿ ಯೋಜನೆಗಳ ಕಥೆಯೇನು? ಸಂಪುಟ ಸಭೆಯ ಈ 5 ಪ್ರಮುಖ ನಿರ್ಧಾರಗಳನ್ನು ಮಿಸ್ ಮಾಡ್ಬೇಡಿ!*
  • *ಸಂತೋಷವಾಗಿ ಹೊರಟವರು ಮಸಣ ಸೇರಿದರು! ಪೋಷಕರ ಆಸೆಗಳನ್ನು ಮಣ್ಣು ಮಾಡಿದ ಆ ಒಂದು ಕ್ಷಣದ ಅಚಾತುರ್ಯವೇನು?*
  • *ಚಿನ್ನಾಭರಣ ಪ್ರಿಯರಿಗೆ ಸುವರ್ಣಾವಕಾಶ : ಕುಶಾಲನಗರದ ಜಿ.ಎಲ್‌.ಆಚಾರ್ಯ ಜ್ಯುವೆಲ್ಲರ್ಸ್‌ನಲ್ಲಿ ‘ಓಲ್ಡ್ ಗೋಲ್ಡ್ ಎಕ್ಸ್‌ ಚೇಂಜ್ ಮೇಳ’*
  • *ಡೊನಾಲ್ಡ್ ಟ್ರಂಪ್ ಮೆಚ್ಚಿದ ಆ ‘ಒಂದು’ ನಿರ್ಧಾರ ಯಾವುದು? ಭಾರತಕ್ಕೆ ಸಿಗಲಿದೆ ಅತಿದೊಡ್ಡ ಆರ್ಥಿಕ ಲಾಭ!*
  • *ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*
  • *ಬಿಸಾಡಿದ ಬಾಟಲಿಗಳಿಂದ ಮತ್ತೆ ಗ್ಲಾಸಿಗೆ? ದೆಹಲಿ ಸ್ಟೇಡಿಯಂ ಸಿಬ್ಬಂದಿಯ ಈ ಕರ್ಮಕಾಂಡ ನೋಡಿ ನೀವೂ ವಾಕರಿಕೆ ಮಾಡ್ಕೊತೀರಾ!*
  • *ಚಿನ್ನಸ್ವಾಮಿಯಲ್ಲಿ ಮತ್ತೆ ಮೊಳಗಲಿದೆ RCB.. RCB.. ಸದ್ದು! ಸರ್ಕಾರದ ಗ್ರೀನ್ ಸಿಗ್ನಲ್ ಸಿಕ್ಕಿದ್ದು ಹೇಗೆ? ಅಭಿಮಾನಿಗಳೇ ಈಗಲೇ ರೆಡಿಯಾಗಿ!*
  • *ಕರೆಂಟ್ ಬಿಲ್ ನೋಡಿ ಬೆಚ್ಚಿಬೀಳಬೇಡಿ! ರಾಜ್ಯದಲ್ಲಿ ವಿದ್ಯುತ್ ದರ ಏರಿಕೆಗೆ ಕ್ಷಣಗಣನೆ; ಯಾರಿಗೆ ಎಷ್ಟು ಹೊರೆ?*
  • *ಶಾಲೆ ಪ್ರವಾಸಕ್ಕೆ ಟ್ರಕ್ ಬಳಕೆ: ಪೋಷಕರು ಫುಲ್ ಗರಂ! ಹೆಡ್‌ಮಾಸ್ಟರ್ ಅಮಾನತು ಹಿಂದಿನ ಅಸಲಿ ಕಥೆ ಇಲ್ಲಿದೆ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ಡಾ.ಅಂಬೇಡ್ಕರ್ ಪುತ್ಥಳಿ ನಿರ್ಮಾಣ : ದೇಣಿಗೆ ಸಂಗ್ರಹಕ್ಕೆ ದಸಂಸ ವಿರೋಧ* 
ಇತ್ತೀಚಿನ ಸುದ್ದಿಗಳು

*ಡಾ.ಅಂಬೇಡ್ಕರ್ ಪುತ್ಥಳಿ ನಿರ್ಮಾಣ : ದೇಣಿಗೆ ಸಂಗ್ರಹಕ್ಕೆ ದಸಂಸ ವಿರೋಧ* 

December 31, 20252 Mins Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಮಡಿಕೇರಿ ಡಿ.31 NEWS DESK : ನಗರದ ಸುದರ್ಶನ್ ವೃತ್ತದ ಬಳಿ ಸರ್ಕಾರದ ಅನುದಾನದಲ್ಲಿ  ಡಾ. ಅಂಬೇಡ್ಕರ್ ಪುತ್ಥಳಿ ಸ್ಥಾಪನೆಗೆ ಭೂಮಿ ಪೂಜೆ ನಡೆದಿದೆ. ಈ ಹಂತದಲ್ಲಿ ಕೆಲವರು ಸರ್ಕಾರಿ ನೌಕರರಿಂದ ದೇಣಿಗೆ ಸಂಗ್ರಹಿಸಲು ಹೊರಟಿರುವುದನ್ನು ತೀವ್ರವಾಗಿ ವಿರೋಧಿಸಿರುವ ದಸಂಸ ವಿಭಾಗೀಯ ಸಂಯೋಜಕ ಎಂ.ಎನ್.ರಾಜಪ್ಪ, ಇಂತಹ ದುಸ್ಸಾಹಸಕ್ಕೆ ಕೈಹಾಕಬಾರದೆಂದು ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸುದರ್ಶನ್ ವೃತ್ತದ ಪಕ್ಕದಲ್ಲಿರುವ ನಾಲ್ಕು ಸೆಂಟ್ ಸರ್ಕಾರಿ ಜಾಗದಲ್ಲಿ ಸರ್ಕಾರದ ವತಿಯಿಂದ ಸುಮಾರು 44 ಲಕ್ಷ ರೂಗಳ ವೆಚ್ಚದಲ್ಲಿ ಅಂಬೇಡ್ಕರ್ ಕಂಚಿನ ಪುತ್ಥಳಿ ನಿರ್ಮಾಣ ಮಾಡಲಾಗುತ್ತದೆ. ಅದರ ನಿರ್ವಹಣೆಗಾಗಿ  ಶಾಸಕರು ಕೆಲವು ದಲಿತ ಸಂಘಟನೆಗಳು ಮುಖಂಡರನ್ನು ಮೇಲುಸ್ತುವಾರಿ ಸಮಿತಿ ಮಾಡಿದ್ದಾರೆ. ಇವರುಗಳಿಗೆ ಪುತ್ಥಳಿ ನಿರ್ಮಾಣಕ್ಕೆ ಸಹಕರಿಸುವುದಷ್ಟೇ  ಕೆಲಸ. ಹೀಗಿದ್ದೂ ಇತ್ತೀಚೆಗೆ  ಸಮಿತಿಯ ಕೆಲವು ಸದಸ್ಯರು ಸರ್ಕಾರಿ ನೌಕರರಿಂದ, ಅಧಿಕಾರಿಗಳಿಂದ ದೇಣಿಗೆ ಪಡೆಯಲು ಹೊರಟಿರುವುದು ತಮ್ಮ ಗಮನಕ್ಕೆ ಬಂದಿದೆ. ಇದನ್ನು ಸಹಿಸಲು ಸಾಧ್ಯವಿಲ್ಲವೆಂದು ಹೇಳಿದರು. ಈಗಾಗಲೇ ಸರ್ಕಾರವೇ ಪುತ್ಥಳಿ ನಿರ್ಮಾಣಕ್ಕೆ ಅನುದಾನವನ್ನು ಒದಗಿಸಿರುವಾಗ, ಸರ್ಕಾರಿ ನೌಕರರಿಂದ ದೇಣಿಗೆ ಪಡೆಯುವ ಅವಶ್ಯಕತೆ ಇಲ್ಲ.ರಾಜ್ಯದಲ್ಲಿ ಎಲ್ಲಿಯೂ ದಲಿತ ಸಂಘÀಟನೆಗಳು ಪುತ್ಥಳಿ ನಿರ್ಮಾಣಕ್ಕೆ ದೇಣಿಗೆ ಪಡೆದಿರುವ ಉದಾಹರಣೆ ಇಲ್ಲ. ದೇಣಿಗೆ ಪಡೆಯಲು ಹೊರಟಿರುವವರು ದುಸ್ಸಾಹಸಕ್ಕೆ ಮುಂದಾಗದಿರಲಿ. ಇದು ನಮ್ಮ ಸ್ವಾಭಿಮಾನದ ಪ್ರಶ್ನೆಯೆಂದು ಸ್ಪಷ್ಟಪಡಿಸಿದರು. :: ಮನವಿ :: ಸರ್ಕಾರಿ ಅಧಿಕಾರಿಗಳು ಮತ್ತು ನೌಕರರಿಗೆ ಮನವಿ ಮಾಡಿಕೊಂಡ ರಾಜಪ್ಪ ಅವರು, ಯಾರೂ ಪುತ್ಥಳಿ ನಿರ್ಮಾಣಕ್ಕೆ  ದೇಣಿಗೆ ನೀಡಬಾರದು. ಹಾಗೇನಾದರೂ ದೇಣಿಗೆ ಕೇಳಿದಲ್ಲಿ ನಿರ್ಭೀತಿಯಿಂದ ಜಿಲ್ಲಾಧಿಕಾರಿಗಳು ಅಥವಾ ಜಿಲ್ಲಾ ಸಮಾಜ ಕಲ್ಯಾಣ ಇಲಾಖಾ ಉಪನಿರ್ದೆಶಕರ ಗಮನಕ್ಕೆ ತರಬೇಕು. ಪುತ್ಥಳಿ ನಿರ್ಮಾಣ ಭ್ರಷ್ಟಾಚಾರ ರಹಿತವಾಗಿವಾಗಿರಬೇಕು ಎನ್ನುವುದು  ನಮ್ಮೆಲ್ಲರ ಆಶಯವೆಂದರು. :: ಆರೋಪಿಗಳ ಬಂಧನವಾಗಲಿ :: ಹುಬ್ಬಳ್ಳಿಯ ಇನಾಂ ವೀರಾಂಪುರದಲ್ಲಿ ನಡೆದ ಗರ್ಭಿಣಿಯೊಬ್ಬರ ಮರ್ಯಾದಾ ಹತ್ಯೆ ಪ್ರಕರಣವು ಅತ್ಯಂತ ಖಂಡನೀಯ. ಪ್ರಕರಣದಲ್ಲಿ ಭಾಗಿಯಾಗಿರುವ ಎಲ್ಲಾ ಆರೋಪಿಗಳನ್ನು ಕೂಡಲೇ ಬಂಧಿಸಬೇಕೆಂದು ಒತ್ತಾಯಿಸಿದರು.  ಇತ್ತೀಚೆಗೆ ಬಾಂಗ್ಲಾದೇಶದಲ್ಲಿ ನಡೆದ ಹಿಂದುಗಳ ಹತ್ಯೆ ಬಗ್ಗೆ  ಪ್ರತಿಭಟನೆ ನಡೆಸಿದ ಹಿಂದು ಸಂಘಟನೆಗಳು, ಕರ್ನಾಟಕದಲ್ಲಿ ದಲಿತ ಯುವಕ ಹಾಗೂ ಆತನ ಪತ್ನಿ ಗರ್ಭಿಣಿಯ ಮೇಲೆ ನಡೆದ ಈ ಅಮಾನುಷ ಕೃತ್ಯದ ಬಗ್ಗೆ ದನಿ ಎತ್ತದಿರುವುದು ವಿಷಾದನೀಯವೆಂದರು. ಸುದ್ದಿಗೋಷ್ಠಿಯಲ್ಲಿ ಡಿಎಸ್‍ಎಸ್  ರಾಜ್ಯ ಸಂಘಟನಾ ಸಂಯೋಜಕ ರಾಜಶೇಖರ್,  ಜಿಲ್ಲಾ ಸಮಿತಿ ಸದಸ್ಯ ಎಂ.ಈ.ಪೊನ್ನಪ್ಪ, ಮಂಜುನಾಥ್, ಡೀಲಕ್ಷ, ಸೋಮವಾರಪೇಟೆ ತಾಲ್ಲೂಕು ಸಂಯೋಜಕ ಚಂದ್ರಶೇಖರ್ ಉಪಸ್ಥಿತರಿದ್ದರು.

Share. Facebook Twitter Pinterest LinkedIn Tumblr Email WhatsApp
Previous Article*ಅಮ್ಮತ್ತಿ : ಮಕ್ಕಳ ಶೈಕ್ಷಣಿಕ ಪ್ರಗತಿಗೆ ಸಾಂಸ್ಕೃತಿಕ ಕಾರ್ಯಕ್ರಮ ಸಹಕಾರಿ : ಗಣಪತಿ*
Next Article *ಜ.1 ರಿಂದ ‘ರಸ್ತೆ ಸುರಕ್ಷತಾ ಮಾಸಾಚರಣೆ ಜಾಗೃತಿ ಅಭಿಯಾನ’*

Website design development company services in Mangalore

Forex Trading Teacher in India

Related Posts

*ನಂದಿಬೆಟ್ಟದ ಗೇಟ್ ಬಂದ್! ಫೆಬ್ರವರಿ 14 ರಂದು ಪ್ರೇಮಿಗಳ ಪ್ರವೇಶಕ್ಕೆ ನಿರ್ಬಂಧ*

February 13, 2026

*ಮಾರ್ಚ್ 6ಕ್ಕೆ ರಾಜ್ಯ ಬಜೆಟ್ ಮಂಡನೆ: ಗ್ಯಾರಂಟಿ ಯೋಜನೆಗಳ ಕಥೆಯೇನು? ಸಂಪುಟ ಸಭೆಯ ಈ 5 ಪ್ರಮುಖ ನಿರ್ಧಾರಗಳನ್ನು ಮಿಸ್ ಮಾಡ್ಬೇಡಿ!*

February 13, 2026

*ಸಂತೋಷವಾಗಿ ಹೊರಟವರು ಮಸಣ ಸೇರಿದರು! ಪೋಷಕರ ಆಸೆಗಳನ್ನು ಮಣ್ಣು ಮಾಡಿದ ಆ ಒಂದು ಕ್ಷಣದ ಅಚಾತುರ್ಯವೇನು?*

February 13, 2026

*ಮಾರ್ಚ್ 6ಕ್ಕೆ ರಾಜ್ಯ ಬಜೆಟ್ ಮಂಡನೆ: ಗ್ಯಾರಂಟಿ ಯೋಜನೆಗಳ ಕಥೆಯೇನು? ಸಂಪುಟ ಸಭೆಯ ಈ 5 ಪ್ರಮುಖ ನಿರ್ಧಾರಗಳನ್ನು ಮಿಸ್ ಮಾಡ್ಬೇಡಿ!*

February 13, 2026

ಬೆಂಗಳೂರು: ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ಕುರಿತಾದ ಚರ್ಚೆಗಳ ನಡುವೆಯೇ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ವೃತ್ತಿಜೀವನದ ದಾಖಲೆಯ 17ನೇ ಬಜೆಟ್…

*ಸಂತೋಷವಾಗಿ ಹೊರಟವರು ಮಸಣ ಸೇರಿದರು! ಪೋಷಕರ ಆಸೆಗಳನ್ನು ಮಣ್ಣು ಮಾಡಿದ ಆ ಒಂದು ಕ್ಷಣದ ಅಚಾತುರ್ಯವೇನು?*

February 13, 2026

*ಚಿನ್ನಾಭರಣ ಪ್ರಿಯರಿಗೆ ಸುವರ್ಣಾವಕಾಶ : ಕುಶಾಲನಗರದ ಜಿ.ಎಲ್‌.ಆಚಾರ್ಯ ಜ್ಯುವೆಲ್ಲರ್ಸ್‌ನಲ್ಲಿ ‘ಓಲ್ಡ್ ಗೋಲ್ಡ್ ಎಕ್ಸ್‌ ಚೇಂಜ್ ಮೇಳ’*

February 13, 2026

*ಡೊನಾಲ್ಡ್ ಟ್ರಂಪ್ ಮೆಚ್ಚಿದ ಆ ‘ಒಂದು’ ನಿರ್ಧಾರ ಯಾವುದು? ಭಾರತಕ್ಕೆ ಸಿಗಲಿದೆ ಅತಿದೊಡ್ಡ ಆರ್ಥಿಕ ಲಾಭ!*

February 12, 2026

*ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*

February 12, 2026

*ಬಿಸಾಡಿದ ಬಾಟಲಿಗಳಿಂದ ಮತ್ತೆ ಗ್ಲಾಸಿಗೆ? ದೆಹಲಿ ಸ್ಟೇಡಿಯಂ ಸಿಬ್ಬಂದಿಯ ಈ ಕರ್ಮಕಾಂಡ ನೋಡಿ ನೀವೂ ವಾಕರಿಕೆ ಮಾಡ್ಕೊತೀರಾ!*

February 12, 2026

*ಚಿನ್ನಸ್ವಾಮಿಯಲ್ಲಿ ಮತ್ತೆ ಮೊಳಗಲಿದೆ RCB.. RCB.. ಸದ್ದು! ಸರ್ಕಾರದ ಗ್ರೀನ್ ಸಿಗ್ನಲ್ ಸಿಕ್ಕಿದ್ದು ಹೇಗೆ? ಅಭಿಮಾನಿಗಳೇ ಈಗಲೇ ರೆಡಿಯಾಗಿ!*

February 12, 2026

*ಕರೆಂಟ್ ಬಿಲ್ ನೋಡಿ ಬೆಚ್ಚಿಬೀಳಬೇಡಿ! ರಾಜ್ಯದಲ್ಲಿ ವಿದ್ಯುತ್ ದರ ಏರಿಕೆಗೆ ಕ್ಷಣಗಣನೆ; ಯಾರಿಗೆ ಎಷ್ಟು ಹೊರೆ?*

February 12, 2026

*ಶಾಲೆ ಪ್ರವಾಸಕ್ಕೆ ಟ್ರಕ್ ಬಳಕೆ: ಪೋಷಕರು ಫುಲ್ ಗರಂ! ಹೆಡ್‌ಮಾಸ್ಟರ್ ಅಮಾನತು ಹಿಂದಿನ ಅಸಲಿ ಕಥೆ ಇಲ್ಲಿದೆ*

February 12, 2026

*ಕೊಡಗಿಗೆ ಭೇಟಿ ನೀಡಿದ ಪೊಲೀಸ್ ಮಹಾ ನಿರೀಕ್ಷಕರು*

February 12, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.