Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*
  • *ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*
  • *ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*
  • *ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*
  • *ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*
  • *ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*
  • *2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*
  • *ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*
  • *ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*
  • *ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕೊಡವ ಮಕ್ಕಡ ಕೂಟದ 123ನೇ ಪುಸ್ತಕ “ನೊಂದ ಜೀವ” ಬಿಡುಗಡೆ : ಹೊಸ ಬರಹಗಾರರಿಗೆ ಪ್ರೋತ್ಸಾಹದ ಅಗತ್ಯವಿದೆ : ಅವರೆಮಾದಂಡ ಶರಣ್ ಪೂಣಚ್ಚ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕೊಡವ ಮಕ್ಕಡ ಕೂಟದ 123ನೇ ಪುಸ್ತಕ “ನೊಂದ ಜೀವ” ಬಿಡುಗಡೆ : ಹೊಸ ಬರಹಗಾರರಿಗೆ ಪ್ರೋತ್ಸಾಹದ ಅಗತ್ಯವಿದೆ : ಅವರೆಮಾದಂಡ ಶರಣ್ ಪೂಣಚ್ಚ*

ಜನವರಿ 1, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜ.1 NEWS DESK : ಇಂದಿನ ತಂತ್ರಜ್ಞಾನದ ಯುಗದಲ್ಲಿ ಬರಹಗಾರರ ಸಂಖ್ಯೆ ಕ್ಷೀಣಿಸುತ್ತಿದ್ದು, ಹೊಸ ಬರಹಗಾರರಿಗೆ ಪ್ರೋತ್ಸಾಹ ಮತ್ತು ದಾನಿಗಳ ಸಹಕಾರದ ಅಗತ್ಯವಿದೆ ಎಂದು ಸಮಾಜ ಸೇವಕ ಅವರೆಮಾದಂಡ ಶರಣ್ ಪೂಣಚ್ಚ ಅವರು ತಿಳಿಸಿದ್ದಾರೆ. ನಗರದ ಪತ್ರಿಕಾ ಭವನದಲ್ಲಿ ಹೊಸ ವರ್ಷದ ಪ್ರಯುಕ್ತ ಕೊಡವ ಮಕ್ಕಡ ಕೂಟದ 123ನೇ ಪುಸ್ತಕ ಹಾಗೂ ಲೇಖಕಿ ಕರವಂಡ ಸೀಮಾ ಗಣಪತಿ ಅವರ ಮೂರನೇ ಪುಸ್ತಕ “ನೊಂದ ಜೀವ” ಬಿಡುಗಡೆ ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಪಾಲ್ಗೊಂಡು ಅವರು ಮಾತನಾಡಿದರು. ಸಾಮಾಜಿಕ ಜಾಲತಾಣಗಳು ಪ್ರಭಾವ ಬೀರಿರುವ ಈ ಯುಗದಲ್ಲಿ ಬರಹಗಾರರನ್ನು ಗುರುತಿಸುವುದು ಅಪರೂಪವೆನಿಸಿದೆ. ಪರಿಸ್ಥಿತಿ ಹೀಗಿದ್ದರೂ ಲೇಖಕಿ ಕರವಂಡ ಸೀಮಾ ಗಣಪತಿ ಅವರು, ತಮ್ಮ ಕಾರ್ಯದ ನಡುವೆಯೂ ಪುಸ್ತಕವನ್ನು ಹೊರತಂದಿದ್ದಾರೆ. ಆ ಮೂಲಕ ಲೇಖಕರಿಗೆ ತಾಳ್ಮೆ ಮುಖ್ಯ ಎನ್ನುವುದನ್ನು ಸಮಾಜಕ್ಕೆ ತೋರಿಸಿಕೊಟ್ಟಿದ್ದಾರೆ ಎಂದು ಹೇಳಿದರು. ಅಂತರಾಷ್ಟ್ರೀಯ ಬ್ಯಾಡ್ಮಿಂಟನ್ ಪಟು ತಾತಪಂಡ ಜ್ಯೋತಿ ಸೋಮಯ್ಯ ಅವರು ಮಾತನಾಡಿ, ತಮ್ಮ ಕಾರ್ಯಚಟುವಟಿಕೆಯ ನಡುವೆಯೂ ಕಾದಂಬರಿ ಬರೆದು ಓದುಗರ ಮುಂದಿಡುವುದು ಸವಾಲಿನ ಕೆಲಸ. ಓದುಗರ ಸಂಖ್ಯೆ ಕಡಿಮೆ ಇದ್ದರೂ ದಾನಿಗಳು ಲೇಖಕರಿಗೆ ಪ್ರೋತ್ಸಾಹ ನೀಡುತ್ತಿರುವುದು ಶ್ಲಾಘನೀಯ ಎಂದರು. *ದಾಖಲೀಕರಣ ಪುಸ್ತಕ ಬರಲಿ* ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಕೊಡವ ಮಕ್ಕಡ ಕೂಟದ ಅಧ್ಯಕ್ಷ ಬೊಳ್ಳಜಿರ ಬಿ.ಅಯ್ಯಪ್ಪ ಅವರು ಕೊಡಗಿನಲ್ಲಿ ಸಾಧಕರಿಗೆ ಕೊರತೆ ಇಲ್ಲ, ಇಲ್ಲಿ ಇತಿಹಾಸ ನಿರ್ಮಿಸಿದ ದೊಡ್ಡ ಸಂಖ್ಯೆಯ ಸಾಧಕರಿದ್ದಾರೆ. ಇವರುಗಳ ಇತಿಹಾಸವನ್ನು ಸಂಗ್ರಹಿಸಿ ಪುಸ್ತಕದ ರೂಪದಲ್ಲಿ ದಾಖಲೀಕರಿಸಬೇಕು. ಇದು ಸಂಶೋಧಕರಿಗೆ ಸಹಕಾರಿಯಾಗಲಿದೆ. ಈ ಕಾರ್ಯಕ್ಕೆ ಬರಹಗಾರರು ಮುಂದಾದಲ್ಲಿ ಕೊಡವ ಮಕ್ಕಡ ಕೂಟ ಸಂಪೂರ್ಣ ಸಹಕಾರ ನೀಡಲಿದೆ ಎಂದು ಭರವಸೆ ನೀಡಿದರು. ಪ್ರಸ್ತುತ ದಿನಗಳಲ್ಲಿ ಮೊಬೈಲ್‍ಗಳ ಬಳಕೆಯಿಂದ ಮಕ್ಕಳಲ್ಲಿ ಓದುವ ಹವ್ಯಾಸ ಕಡಿಮೆಯಾಗಿದೆ. ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಗಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳುವ ಅಗತ್ಯವಿದೆ. ಈ ಬಗ್ಗೆ ಪೋಷಕರು ಹೆಚ್ಚಿನ ಗಮನ ಹರಿಸಬೇಕು ಎಂದು ಸಲಹೆ ನೀಡಿದರು. *ಯೋಧರಿಗೆ ಅಪಮಾನ* ಜಿಲ್ಲಾ ಕೇಂದ್ರ ಮಡಿಕೇರಿಯಲ್ಲಿರುವ ಸೈನಿಕರ ಪ್ರತಿಮೆಗಳಿಗೆ ಕೆಲವರು ಹೂವಿನ ಹಾರವನ್ನು ಹಾಕಿ, ಕಾರ್ಯಕ್ರಮದ ನಂತರ ಅದನ್ನು ತೆಗೆಯದೆ ಅಪಮಾನ ಮಾಡುತ್ತಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದ ಬೊಳ್ಳಜಿರ ಬಿ.ಅಯ್ಯಪ್ಪ, ಹೂವಿನ ಹಾರಗಳನ್ನು ಎರಡು ಮೂರು ದಿನಗಳು ಕಳೆದರೂ ತೆಗೆಯದೇ ಇರುವುದರಿಂದ ಸೇನಾನಿಗಳಿಗೆ ಗೌರವ ಸಲ್ಲಿಸುವ ಬದಲು ಅಪಮಾನ ಮಾಡಿದಂತಾಗುತ್ತದೆ. ತೋರ್ಪಡಿಕೆಯ ಗೌರವ ಬೇಡ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಸರಕಾರದ ಯಾವುದೇ ಅನುದಾನವಿಲ್ಲದೆ ಜಿಲ್ಲೆಯ ಹಲವು ಬರಹಗಾರರು, ಸಾಹಿತಿಗಳು ಬರೆದ ಕೊಡವ, ಕನ್ನಡ, ಇಂಗ್ಲೀಷ್, ಹಿಂದಿ ಸೇರಿದಂತೆ ಮಹತ್ವಾಕಾಂಕ್ಷೆಯ 123 ಪುಸ್ತಕವನ್ನು ಸಾಹಿತ್ಯ ಕ್ಷೇತ್ರಕ್ಕೆ ಸಮರ್ಪಿಸಲಾಗಿದ್ದು, ಐದು ಪುಸ್ತಕಗಳಿಗೆ ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಲಭಿಸಿದೆ. ಅಲ್ಲದೆ ಹೊಸ ಬರಹಗಾರರಿಗೆ ಪ್ರೋತ್ಸಾಹ ನೀಡುವ ಮೂಲಕ ಅವರ ಪ್ರಥಮ ಪುಸ್ತಕವನ್ನು ಕೊಡವ ಮಕ್ಕಡ ಕೂಟದ ವತಿಯಿಂದ ಹೊರತರಲಾಗಿದೆ ಎಂದರು. ಕೊಡವ ಮಕ್ಕಡ ಕೂಟದ ವಾರ್ಷಿಕೋತ್ಸವದ ನೆನಪಿಗಾಗಿ ಫೆ.18 ರಂದು 125 ಮತ್ತು 126ನೇ ಪುಸ್ತಕವನ್ನು ಲೋಕಾರ್ಪಣೆ ಮಾಡಲಿದ್ದೇವೆ ಎಂದು ತಿಳಿಸಿದರು. ನೊಂದ ಜೀವ ಪುಸ್ತಕದ ಲೇಖಕಿ ಕರವಂಡ ಸೀಮಾ ಗಣಪತಿ ಮಾತನಾಡಿ, ಓದುಗರ ಸಂಖ್ಯೆ ಹೆಚ್ಚಾದರೆ, ಬರಹಗಾರರ ಸಂಖ್ಯೆ ಹೆಚ್ಚಾಗುತ್ತದೆ. ಲೇಖಕರು ತಮ್ಮ ಕಾರ್ಯಚಟುವಟಿಕೆಯ ನಡುವೆಯೂ ಬರಹಗಳಿಗೆ ಒತ್ತು ನೀಡುತ್ತಾರೆ. ಅದಕ್ಕೆ ಓದುಗರ ಸಹಕಾರ ಅಗತ್ಯ ಎಂದರು. ಇದು ನನ್ನ ಮೂರನೇ ಪುಸ್ತಕವಾಗಿದ್ದು, ಮೂರು ಪುಸ್ತಕಗಳಿಗೆ ಕೊಡವ ಮಕ್ಕಡ ಕೂಟ ಸಹಕಾರ ನೀಡಿದೆ. ಪುಸ್ತಕ ಬಿಡುಗಡೆಗೆ ಸಹಕಾರ ನೀಡಿದ ದಾನಿಗಳು ಹಾಗೂ ಕುಟುಂಬಸ್ಥರಿಗೆ ಧನ್ಯವಾದ ಸಲ್ಲಿಸುವುದಾಗಿ ಹೇಳಿದರು. ಕೊಡವ ಮಕ್ಕಡ ಕೂಟದ ಪ್ರಧಾನ ಕಾರ್ಯದರ್ಶಿ ಪುತ್ತರಿರ ಕರುಣ್ ಕಾಳಯ್ಯ ಮಾತನಾಡಿ, “ನೊಂದ ಜೀವ” ಪುಸ್ತಕವು ಹೆಣ್ಣುಮಗಳ ಜೀವನದ ಕಥಾ ಹಂದರವನ್ನು ಒಳಗೊಂಡಿದೆ. ತಾಯಿ ಇಲ್ಲದೆ ತಾನೊಬ್ಬಳೆ ಸಮಾಜ ಹಾಗೂ ಕುಟುಂಬದ ಸವಾಲುಗಳನ್ನು ಎದುರಿಸುವ ಕುರಿತು ಪುಸ್ತಕದಲ್ಲಿ ಮನೋಜ್ಞವಾಗಿ ಚಿತ್ರಿಸಲಾಗಿದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಪುಸ್ತಕಗಳು ಹೊರಬರುವಂತಾಗಲಿ ಎಂದು ಹಾರೈಸಿದರು. ಸಮಾಜ ಸೇವಕ ಮಂಡೇಪಂಡ ರತನ್ ಕುಟ್ಟಯ್ಯ ಪುಸ್ತಕ ಬಿಡುಗಡೆ ಮಾಡಿ ಶುಭ ಹಾರೈಸಿದರು.

Follow us Follow us
Share. WhatsApp Facebook Twitter Email Telegram Copy Link

Related Posts

*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಸೆ.26: ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್…

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*

ಸೆಪ್ಟೆಂಬರ್ 26, 2026

*ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*

ಸೆಪ್ಟೆಂಬರ್ 26, 2026

*ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*

ಸೆಪ್ಟೆಂಬರ್ 26, 2026

*2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*

ಸೆಪ್ಟೆಂಬರ್ 26, 2026

*ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*

ಸೆಪ್ಟೆಂಬರ್ 26, 2026

*ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*

ಸೆಪ್ಟೆಂಬರ್ 26, 2026

*ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*

ಸೆಪ್ಟೆಂಬರ್ 26, 2026

*36 ವರ್ಷ ಸೇವೆ ಸಲ್ಲಿಸಿದ ಅಂಗನವಾಡಿ ಕಾರ್ಯಕರ್ತೆ ದೇವಮಾಜಿ, ಶಿಕ್ಷಕಿ ಭೋಜಮ್ಮಗೆ ಆತ್ಮೀಯ ಬೀಳ್ಕೊಡುಗೆ*

ಸೆಪ್ಟೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.