Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಡೊನಾಲ್ಡ್ ಟ್ರಂಪ್ ಮೆಚ್ಚಿದ ಆ ‘ಒಂದು’ ನಿರ್ಧಾರ ಯಾವುದು? ಭಾರತಕ್ಕೆ ಸಿಗಲಿದೆ ಅತಿದೊಡ್ಡ ಆರ್ಥಿಕ ಲಾಭ!*
  • *ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*
  • *ಬಿಸಾಡಿದ ಬಾಟಲಿಗಳಿಂದ ಮತ್ತೆ ಗ್ಲಾಸಿಗೆ? ದೆಹಲಿ ಸ್ಟೇಡಿಯಂ ಸಿಬ್ಬಂದಿಯ ಈ ಕರ್ಮಕಾಂಡ ನೋಡಿ ನೀವೂ ವಾಕರಿಕೆ ಮಾಡ್ಕೊತೀರಾ!*
  • *ಚಿನ್ನಸ್ವಾಮಿಯಲ್ಲಿ ಮತ್ತೆ ಮೊಳಗಲಿದೆ RCB.. RCB.. ಸದ್ದು! ಸರ್ಕಾರದ ಗ್ರೀನ್ ಸಿಗ್ನಲ್ ಸಿಕ್ಕಿದ್ದು ಹೇಗೆ? ಅಭಿಮಾನಿಗಳೇ ಈಗಲೇ ರೆಡಿಯಾಗಿ!*
  • *ಕರೆಂಟ್ ಬಿಲ್ ನೋಡಿ ಬೆಚ್ಚಿಬೀಳಬೇಡಿ! ರಾಜ್ಯದಲ್ಲಿ ವಿದ್ಯುತ್ ದರ ಏರಿಕೆಗೆ ಕ್ಷಣಗಣನೆ; ಯಾರಿಗೆ ಎಷ್ಟು ಹೊರೆ?*
  • *ಶಾಲೆ ಪ್ರವಾಸಕ್ಕೆ ಟ್ರಕ್ ಬಳಕೆ: ಪೋಷಕರು ಫುಲ್ ಗರಂ! ಹೆಡ್‌ಮಾಸ್ಟರ್ ಅಮಾನತು ಹಿಂದಿನ ಅಸಲಿ ಕಥೆ ಇಲ್ಲಿದೆ*
  • *ಕೊಡಗಿಗೆ ಭೇಟಿ ನೀಡಿದ ಪೊಲೀಸ್ ಮಹಾ ನಿರೀಕ್ಷಕರು*
  • *ಕುಶಾಲನಗರದಲ್ಲಿ ಒಣ ಕಸ ಸಂಗ್ರಹ ಘಟಕ ಉದ್ಘಾಟನೆ*
  • *ಭ್ರಷ್ಟಾಚಾರದ ಪ್ರಮಾಣ ಹೆಚ್ಚಾಗಿದೆ : ಗುತ್ತಿಗೆದಾರರ ಸಂಘ ಗಂಭೀರ ಆರೋಪ*
  • *ಕೇಂದ್ರ ಸರಕಾರದ ವಿರುದ್ಧ ಮಡಿಕೇರಿಯಲ್ಲಿ ಕಾರ್ಮಿಕ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ವಾಸವಿ ಸಪ್ತಾಹ : ಯುವ ಸಮೂಹಕ್ಕೆ ಮಾದಕ ವಸ್ತುಗಳ ಜಾಗೃತಿ ಅಗತ್ಯ : ಶಾಸಕ ಡಾ.ಮಂತರ್ ಗೌಡ*
ಇತ್ತೀಚಿನ ಸುದ್ದಿಗಳು

*ವಾಸವಿ ಸಪ್ತಾಹ : ಯುವ ಸಮೂಹಕ್ಕೆ ಮಾದಕ ವಸ್ತುಗಳ ಜಾಗೃತಿ ಅಗತ್ಯ : ಶಾಸಕ ಡಾ.ಮಂತರ್ ಗೌಡ*

January 2, 20262 Mins Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಕುಶಾಲನಗರ ಜ.2 NEWS DESK : ಯುವ ಪೀಳಿಗೆ ದುಶ್ಚಟಗಳಿಗೆ ದಾಸರಾಗದಂತೆ ಸಂಘ ಸಂಸ್ಥೆಗಳ ಮೂಲಕ ಅರಿವು, ಜಾಗೃತಿ ಮೂಡಿಸುವ ಕೆಲಸ ನಿರಂತರವಾಗಿ ನಡೆಯಬೇಕಿದೆ ಎಂದು ಮಡಿಕೇರಿ ಕ್ಷೇತ್ರ ಶಾಸಕ ಡಾ.ಮಂತರ್ ಗೌಡ ಅವರು ಕರೆ ನೀಡಿದರು. ಕುಶಾಲನಗರದ ಶ್ರೀ ವಾಸವಿ ಕನ್ನಿಕಾ ಪರಮೇಶ್ವರಿ ಟ್ರಸ್ಟ್ ಹಾಗೂ ಆರ್ಯವೈಶ್ಯ ಮಂಡಳಿಯಿಂದ ಶ್ರೀ ವಾಸವಿ ಕನ್ನಿಕಾ ಪರಮೇಶ್ವರಿ ದೇವಸ್ಥಾನದ ಬ್ರಹ್ಮಕಲಶೋತ್ಸವ ಅಂಗವಾಗಿ ವಿವಿಧ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಹಮ್ಮಿಕೊಂಡ  ವಾಸವಿ ಸಪ್ತಾಹದ ಮೊದಲ ಕಾರ್ಯಕ್ರಮ ಮಾದಕ ವ್ಯಸನ‌ಮುಕ್ತ ಸಮಾಜ ನಿರ್ಮಾಣ ಹಿನ್ನೆಲೆಯಲ್ಲಿ ನಡೆದ ವಾಕಥಾನ್, ಸೈಕ್ಲಾಥಾನ್ ಗೆ  ಚಾಲನೆ ನೀಡಿ ಅವರು ಮಾತನಾಡಿದರು.  ಪೋಷಕರು ತಮ್ಮ ಮಕ್ಕಳ ಬಗ್ಗೆ ಸದಾ ನಿಗಾವಹಿಸಬೇಕಿದೆ. ಮಾದಕ ವ್ಯಸನಕ್ಕೆ ತುತ್ತಾಗಿ ಜೀವನ ಹಾಳುಮಾಡಿಕೊಳ್ಳಬಾರದು. ಮಾದಕ ವಸ್ತುಗಳನ್ನು ಹತ್ತಿಕ್ಕುವ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ಕೂಡ ಹೆಚ್ಚಿನ ಜವಬ್ದಾರಿ ತೋರಬೇಕಿದೆ ಎಂದು ಕರೆ ನೀಡಿದರು. ಕುಶಾಲನಗರ ತಾಲ್ಲೂಕು ಗ್ಯಾರೆಂಟಿ ಯೋಜನೆಗಳ‌ ಅನುಷ್ಠಾನ ಸಮಿತಿ ಅಧ್ಯಕ್ಷ ವಿ.ಪಿ.ಶಶಿಧರ್ ಮಾತನಾಡಿ, ಕುಶಾಲನಗರದ ಅಭಿವೃದ್ಧಿಯಲ್ಲಿ ಆರ್ಯವೈಶ್ಯ ಸಮಾಜದ ಕೊಡುಗೆ ಅಪಾರವಿದೆ ಎಂದರು. ಶೈಕ್ಷಣಿಕ ಕೇಂದ್ರಗಳ ಸ್ಥಾಪನೆ ಅಪಾರ ಪ್ರಮಾಣದ ಭೂಮಿ ಒದಗಿಸಿ ಊರನ್ನು ಕಟ್ಟುವ ‌ಕೆಲಸ‌ ಮಾಡಿದ್ದಾರೆ. ಇಂದು ಕೂಡ ಆರ್ಯವೈಶ್ಯ ಸಮಾಜ ಹಲವು ಸಮಾಜಮುಖಿ ಕಾರ್ಯಚಟುವಟಿಕೆಗಳನ್ನು ಹಮ್ಮಿಕೊಳ್ಳುತ್ತಿರುವ ಶ್ಲಾಘನೀಯ ವಿಚಾರ ಎಂದರು. ವಾಸವಿ ಸಪ್ತಾಹ ಕಾರ್ಯಕ್ರಮ ಆಯೋಜಕರು ಹಾಗೂ ಆರ್ಯವೈಶ್ಯ ಮಂಡಳಿ ಅಧ್ಯಕ್ಷರಾದ ಬಿ.ಆರ್.ನಾಗೇಂದ್ರ ಪ್ರಸಾದ್ ಪ್ರಾಸ್ತಾವಿಕವಾಗಿ ಮಾತನಾಡಿ ವಾಸವಿ ಸಪ್ತಾಹ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ಒದಗಿಸಿದರು. ಶಕ್ತಿ ಸಲಹಾ ಸಂಪಾದಕರಾದ ಬಿ.ಜಿ.ಅನಂತಶಯನ ಮತ್ತು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಉಪಾಧ್ಯಕ್ಷರಾದ ಅಜ್ಜಮಾಡ ರಮೇಶ್ ಕುಟ್ಟಪ್ಪ , ಕೊಡಗು ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷರಾದ ಹೆಚ್.ಟಿ.ಅನಿಲ್  ಮಾತನಾಡಿದರು. ಕುಶಾಲನಗರದ ರೋಟರಿ, ಲಯನ್ಸ್, ಜೆಸಿಐ, ಕಾರ್ಯನಿರತ ಪತ್ರಕರ್ತರ ಸಂಘ, ಪೊಲೀಸ್ ಇಲಾಖೆ, ಸ್ಕೌಟ್ಸ್ ಅಂಡ್ ಗೈಡ್ಸ್, ಸ್ಟೂಡೆಂಟ್ ಪೊಲೀಸ್ ಕೆಡೆಟ್ಸ್, ಕೊಡಗು ಅಭಿವೃದ್ಧಿ ಸಮಿತಿ, ನಿವೃತ್ತ ಸೈನಿಕರ ಸಂಘ, ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ, ಆರ್ಯವೈಶ್ಯ ಮಂಡಳಿ ಅಂಗಸಂಸ್ಥೆಗಳು ಸೇರಿದಂತೆ ವಿವಿಧ ಸಂಘಸಂಸ್ಥೆಗಳ ಪದಾಧಿಕಾರಿಗಳು, ಸದಸ್ಯರು ಕಾರ್ಯಕ್ರಮಕ್ಕೆ ಕೈಜೋಡಿಸಿ ನಡಿಗೆಯಲ್ಲಿ ಪಾಲ್ಗೊಂಡರು.  ಸರಕಾರಿ ಪಾಲಿಟೆಕ್ನಿಕ್ ಬಳಿಯಿಂದ ಕುಶಾಲನಗರ ತನಕ ನಡೆದ ವಾಕಥಾನ್, ಸೈಕ್ಲಥಾನ್ ಸಂದರ್ಭ ಮಾದಕ ವಸ್ತುಗಳ ದುಷ್ಪರಿಣಾಮ, ವ್ಯಸನ ಮುಕ್ತ ಸಮಾಜ ನಿರ್ಮಿಸುವ ಘೋಷಣೆಗಳುಳ್ಳ ಜಾಗೃತಿ ಫಲಕಗಳನ್ನು ಹಿಡಿದು ಜಾಗೃತಿ‌ ಮೂಡಿಸಲಾಯಿತು. ಕುಶಾಲನಗರ ಗಣಪತಿ ದೇವಾಲಯ ಬಳಿ ಸೇರಿ ಸ್ವಲ್ಪಕಾಲ ಮಾನವ ಸರಪಳಿ ರಚಿಸಿ ಮಾದಕ ವಸ್ತು ಬಳಕೆ ವಿರುದ್ಧ ಘೋಷಣೆ ಕೂಗಿ ಸಾರ್ವಜನಿಕರಿಗೆ ಅರಿವು ಮೂಡಿಸಲಾಯಿತು. ನಂತರ ಕೊಡಗು ವೈದ್ಯಕೀಯ ವಿಜ್ಞಾನಿಗಳ ಸಂಸ್ಥೆ, ಬೋಧಕ ಆಸ್ಪತ್ರೆ, ವಾಸವಿ ಯುವಜನ ಚಾರಿಟೇಬಲ್ ಟ್ರಸ್ಟ್ ಮತ್ತು ವಾಸವಿ ಯುವಜನ ಸಂಘದ ಸಹಯೋಗದೊಂದಿಗೆ ಕನ್ನಿಕಾ ಕನ್ವೆನ್ಷನ್ ಸೆಂಟರ್‌ನಲ್ಲಿ ಆರೋಗ್ಯ ತಪಾಸಣಾ ಉಚಿತ ಶಿಬಿರ ಮತ್ತು ರಕ್ತದಾನ ಶಿಬಿರ ನಡೆಯಿತು. ಮಾಜಿ ಶಾಸಕ ಅಪ್ಪಚ್ಚು ರಂಜನ್ ಶಿಬಿರ ಮತ್ತು ಮಡಿಕೇರಿ ಕ್ಷೇತ್ರ ಶಾಸಕ ಡಾ.ಮಂತರ್ ಗೌಡ ಅವರು ಶಿಬಿರದ ರಕ್ತದಾನ ಕೇಂದ್ರ ಉದ್ಘಾಟಿಸಿ ಮಾತನಾಡಿದರು. ಶ್ರೀ ವಾಸವಿ ಕನ್ನಿಕಾ ಪರಮೇಶ್ವರಿ ಟ್ರಸ್ಟ್ ಮತ್ತು ಆರ್ಯವೈಶ್ಯ ಮಂಡಳಿ ಅಧ್ಯಕ್ಷ ಬಿ.ಆರ್.ನಾಗೇಂದ್ರಪ್ರಸಾದ್ ಅಧ್ಯಕ್ಷತೆ ವಹಿಸಿದ್ದರು. ಟ್ರಸ್ಟ್ ಮತ್ತು‌ ಮಂಡಳಿ ಪ್ರಮುಖರಾದ ಕೆ.ಪ್ರವೀಣ್, ಪಿ.ಎಸ್.ಪ್ರಶಾಂತ್, ಬಿ.ಎಲ್.ಅಶೋಕ್ ಕುಮಾರ್,ಬಿ.ಆರ್.ನಟರಾಜ್, ಕೆ.ಜೆ.ಸತೀಶ್, ಎ.ಎಸ್.ಕುಮಾರ್, ಬಿ.ಎನ್.ಅಂಜನ್, ಅಮೃತ್ ರಾಜ್, ವೈಶಾಖ್ ಮಹಿಳಾ ಸಂಘಟನೆ ಪ್ರಮುಖರು ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಸದಸ್ಯರು ಇದ್ದರು. ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಡಾ. ನಂಜುಂಡಯ್ಯ ಅವರ ನೇತೃತ್ವದಲ್ಲಿ  ವೈದ್ಯರು ಮತ್ತು ವೈದ್ಯಕೀಯ ಸಿಬ್ಬಂದಿಗಳು ಸೇರಿದಂತೆ ಒಟ್ಟು 60 ಮಂದಿ ಶಿಬಿರವನ್ನು ನಡೆಸಿಕೊಟ್ಟರು.

 

Share. Facebook Twitter Pinterest LinkedIn Tumblr Email WhatsApp
Previous Article*ರಾಷ್ಟ್ರೀಯ ಮಿಕ್ಸ್ ಬಾಕ್ಸಿಂಗ್ ನಲ್ಲಿ ಕರ್ನಾಟಕಕ್ಕೆ 3ನೇ ಸ್ಥಾನ*
Next Article *ಶ್ರೀ ಭಗಂಡೇಶ್ವರ ದೇವಾಲಯ : ಜ.3 ರಂದು ಸಾಮೂಹಿಕ ಸತ್ಯನಾರಾಯಣ ಪೂಜೆ*

Recommended: Website design development company services in Mangalore Forex Trading Teacher in India

Related Posts

*ಡೊನಾಲ್ಡ್ ಟ್ರಂಪ್ ಮೆಚ್ಚಿದ ಆ ‘ಒಂದು’ ನಿರ್ಧಾರ ಯಾವುದು? ಭಾರತಕ್ಕೆ ಸಿಗಲಿದೆ ಅತಿದೊಡ್ಡ ಆರ್ಥಿಕ ಲಾಭ!*

February 12, 2026

*ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*

February 12, 2026

*ಬಿಸಾಡಿದ ಬಾಟಲಿಗಳಿಂದ ಮತ್ತೆ ಗ್ಲಾಸಿಗೆ? ದೆಹಲಿ ಸ್ಟೇಡಿಯಂ ಸಿಬ್ಬಂದಿಯ ಈ ಕರ್ಮಕಾಂಡ ನೋಡಿ ನೀವೂ ವಾಕರಿಕೆ ಮಾಡ್ಕೊತೀರಾ!*

February 12, 2026

*ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*

February 12, 2026

ಸಿಯಾಟಲ್ (ಅಮೆರಿಕಾ): ಕಳೆದ ಎರಡು ವರ್ಷಗಳಿಂದ ಇಡೀ ಜಗತ್ತಿನ ಗಮನ ಸೆಳೆದಿದ್ದ ಭಾರತೀಯ ವಿದ್ಯಾರ್ಥಿನಿ ಜಾಹ್ನವಿ ಕಂದುಲಾ ಅವರ ಸಾವಿನ…

*ಬಿಸಾಡಿದ ಬಾಟಲಿಗಳಿಂದ ಮತ್ತೆ ಗ್ಲಾಸಿಗೆ? ದೆಹಲಿ ಸ್ಟೇಡಿಯಂ ಸಿಬ್ಬಂದಿಯ ಈ ಕರ್ಮಕಾಂಡ ನೋಡಿ ನೀವೂ ವಾಕರಿಕೆ ಮಾಡ್ಕೊತೀರಾ!*

February 12, 2026

*ಚಿನ್ನಸ್ವಾಮಿಯಲ್ಲಿ ಮತ್ತೆ ಮೊಳಗಲಿದೆ RCB.. RCB.. ಸದ್ದು! ಸರ್ಕಾರದ ಗ್ರೀನ್ ಸಿಗ್ನಲ್ ಸಿಕ್ಕಿದ್ದು ಹೇಗೆ? ಅಭಿಮಾನಿಗಳೇ ಈಗಲೇ ರೆಡಿಯಾಗಿ!*

February 12, 2026

*ಕರೆಂಟ್ ಬಿಲ್ ನೋಡಿ ಬೆಚ್ಚಿಬೀಳಬೇಡಿ! ರಾಜ್ಯದಲ್ಲಿ ವಿದ್ಯುತ್ ದರ ಏರಿಕೆಗೆ ಕ್ಷಣಗಣನೆ; ಯಾರಿಗೆ ಎಷ್ಟು ಹೊರೆ?*

February 12, 2026

*ಶಾಲೆ ಪ್ರವಾಸಕ್ಕೆ ಟ್ರಕ್ ಬಳಕೆ: ಪೋಷಕರು ಫುಲ್ ಗರಂ! ಹೆಡ್‌ಮಾಸ್ಟರ್ ಅಮಾನತು ಹಿಂದಿನ ಅಸಲಿ ಕಥೆ ಇಲ್ಲಿದೆ*

February 12, 2026

*ಕೊಡಗಿಗೆ ಭೇಟಿ ನೀಡಿದ ಪೊಲೀಸ್ ಮಹಾ ನಿರೀಕ್ಷಕರು*

February 12, 2026

*ಕುಶಾಲನಗರದಲ್ಲಿ ಒಣ ಕಸ ಸಂಗ್ರಹ ಘಟಕ ಉದ್ಘಾಟನೆ*

February 12, 2026

*ಭ್ರಷ್ಟಾಚಾರದ ಪ್ರಮಾಣ ಹೆಚ್ಚಾಗಿದೆ : ಗುತ್ತಿಗೆದಾರರ ಸಂಘ ಗಂಭೀರ ಆರೋಪ*

February 12, 2026

*ಕೇಂದ್ರ ಸರಕಾರದ ವಿರುದ್ಧ ಮಡಿಕೇರಿಯಲ್ಲಿ ಕಾರ್ಮಿಕ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ*

February 12, 2026

*ಮಾಂದಲ್ ಪಟ್ಟಿ; ಸಾರ್ವಜನಿಕರು ಮತ್ತು ಪ್ರವಾಸಿಗರ ಗಮನಕ್ಕೆ*

February 12, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.