
ನಾಪೋಕ್ಲು ಜ.3 NEWS DESK : ವಿದ್ಯಾರ್ಥಿಗಳು ತಮ್ಮ ಪ್ರತಿಭೆಯನ್ನು ಪ್ರದರ್ಶಿಸಲು ವಾರ್ಷಿಕೋತ್ಸವವು ಉತ್ತಮ ವೇದಿಕೆಯಾಗಿದೆ ಎಂದು ಕಕ್ಕಬ್ಬೆ ಕೇಂದ್ರ ವಿದ್ಯಾ ಸಂಸ್ಥೆಯ ಅಧ್ಯಕ್ಷ ಕೇಟೋಳಿರ ಪಿ.ಕುಟ್ಟಪ್ಪ ಹೇಳಿದರು. ಕಕ್ಕಬ್ಬೆ ಪ್ರೌಢಶಾಲೆ ಮತ್ತು ಹಿರಿಯ ಪ್ರಾಥಮಿಕ ಶಾಲೆಯ ವಾರ್ಷಿಕೋತ್ಸವ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿ ಅವರು ಮಾತನಾಡಿದರು. ಕಾರ್ಯಕ್ರಮದಲ್ಲಿ ಉಪಾಧ್ಯಕ್ಷ ಪೈಯಡಿ ಹಂಸ, ಬಾತ್ಮೀದಾರ ಕಲ್ಯಾಟಂಡ ಸುಧಾ ಗಣಪತಿ, ನಿರ್ದೇಶಕರಾದ ಬೊಳಿಯಾಡಿರ ಸಂತು ಸುಬ್ರಮಣಿ, ಅಂಜಪರವಂಡ ಎ.ಕುಶಾಲಪ್ಪ, ಮುಕ್ಕಾಟಿರ ರಮೇಶ್, ಕೋಟೆರ ನೈಲ್ ಚಂಗಪ್ಪ, ಪರದಂಡ ಪ್ರಮೀಳಾ ಪೆಮ್ಮಯ್ಯ, ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕಿ ಕೆ.ಬಿ.ಲೀಲಾವತಿ ಉಪಸ್ಥಿತರಿದ್ದರು. ಸಭಾ ಕಾರ್ಯಕ್ರಮಕ್ಕೂ ಮುನ್ನ ನಡೆದ ಧ್ವಜಾರೋಹಣವನ್ನು ಕಕ್ಕಬ್ಬೆ-ಕುಂಜಿಲ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶಿಲ್ಪ ಲೋಕೇಶ್ ನೆರವೇರಿಸಿದರು. ಪ್ರೌಢಶಾಲಾ ವಿದ್ಯಾರ್ಥಿನಿಯರು ಪ್ರಾರ್ಥಿಸಿದರು. ನಿರ್ದೇಶಕ ಬೊಳಿಯಾಡಿರ ಸಂತುಸುಬ್ರಮಣಿ ಸ್ವಾಗತಿಸಿದರು. ಮುಖ್ಯ ಶಿಕ್ಷಕ ಅನಿಲ್ ರಾಜ್ ವರದಿ ವಾಚಿಸಿದರು. ಶಿಕ್ಷಕಿ ಪಿ.ಸಿ.ಬಬಿತ ಕಾರ್ಯಕ್ರಮ ನಿರೂಪಿಸಿದರು. ಶಿಕ್ಷಕ ಶರತ್ ವಂದಿಸಿದರು.
ವರದಿ : ದುಗ್ಗಳ ಸದಾನಂದ.









