Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*
  • *ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*
  • *ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*
  • *ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*
  • *ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*
  • *ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*
  • *2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*
  • *ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*
  • *ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*
  • *ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮಡಿಕೇರಿ : ಪುಟಾಣಿನಗರ ಅಂಗನವಾಡಿ ಮಕ್ಕಳ ಆರೋಗ್ಯ ತಪಾಸಣೆ* 
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮಡಿಕೇರಿ : ಪುಟಾಣಿನಗರ ಅಂಗನವಾಡಿ ಮಕ್ಕಳ ಆರೋಗ್ಯ ತಪಾಸಣೆ* 

ಜನವರಿ 3, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜ.3 NEWS DESK  : ಆರ್‌ಬಿಎಸ್‌ಕೆ ತಂಡದಿಂದ ನಗರದ ಪುಟಾಣಿನಗರ ಅಂಗನವಾಡಿ ಕೇಂದ್ರದಲ್ಲಿ ಅನೀಮಿಯ ಹಾಗೂ ಆರೋಗ್ಯ ತಪಾಸಣೆ ನಡೆಯಿತು. ಪ್ರಭಾರ ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಮೇಪಾಡಂಡ ಸವಿತಾ ಕೀರ್ತನ್ ಅನಿಮಿಯ ತಪಾಸಣೆ ಕುರಿತು ಪೋಷಕರಿಗೆ ಮಾಹಿತಿ ನೀಡಿದರು. ಜನವರಿ 2026 ರಿಂದ ವರ್ಷದಲ್ಲಿ ಎರಡು ಬಾರಿ ಅಂಗನವಾಡಿ ಕೇಂದ್ರದ ವ್ಯಾಪ್ತಿಗೆ ಒಳಪಡುವ ಆರು ತಿಂಗಳಿಂದ 5 ವರ್ಷದವರೆಗಿನ ಮಕ್ಕಳಿಗೆ ಅನಿಮಿಯ ತಪಾಸಣೆಯನ್ನು ಮಾಡಿ ರಕ್ತಹೀನತೆ ತಡೆಗಟ್ಟುವ ಪ್ರಯತ್ನವನ್ನು ಆರೋಗ್ಯ ಇಲಾಖೆ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಹಕಾರದೊಂದಿಗೆ ಪ್ರಾರಂಭಿಸಲಾಗಿದೆ ಎಂದು ತಿಳಿಸಿದರು. ಐವತ್ತೊಂಭತ್ತು ತಿಂಗಳ ವಯಸ್ಸಿನ ಮಕ್ಕಳಲ್ಲಿ ಹಿಮೋಗ್ಲೋಬಿನ್ ಸಾಂದ್ರತೆ ಕಡಿಮೆ ಇದ್ದರೆ ರಕ್ತಹೀನತೆ ಎಂದು ಪರಿಗಣಿ ಈ ಬಗ್ಗೆ ಪೋಷಕರಿಗೆ ಸಭೆಯ ಮೂಲಕ ತಿಳುವಳಿಕೆ ಮೂಡಿಸಿ, ನಂತರ ಮಗುವಿನ ಆಹಾರ ಪದ್ಧತಿ ಮಾಹಿತಿ ಪಡೆದು ಸ್ಕ್ರೀನಿಂಗ್ ಮಾಡಲಾಗುವುದು ಎಂದು ಹೇಳಿದರು. ರಕ್ತಹೀನತೆಗೆ ಒಳಗಾಗಿದ್ದ ಮಕ್ಕಳ ಚಿಕಿತ್ಸೆ, 6-12 ತಿಂಗಳ ಮಕ್ಕಳಿಗೆ ಪ್ರತಿದಿನ 1 ಎಂಎಲ್ ಐರನ್ ಸಿರಪ್, 1-3 ವರ್ಷದ ಮಕ್ಕಳಿಗೆ ಪ್ರತಿದಿನ 1.5 ಎಂಎಲ್, 3-5 ವರ್ಷದ ಮಕ್ಕಳಿಗೆ ಪ್ರತಿದಿನ 2 ಎಂಎಲ್, ಎರಡು ತಿಂಗಳ ಅವಧಿಗೆ ಪ್ರತಿ 14 ದಿನಗಳಿಗೊಮ್ಮೆ ಐ ಎಫ್ ಎ ಸಿರಪ್ ನ ಅನುಸರಣೆಗಾಗಿ ಆಶಾ ಮೂಲಕ ಮೇಲ್ವಿಚಾರಣೆ ಮಾಡಲಾಗುತ್ತದೆ ಎಂದರು. ಹಿಮೋಗ್ಲೋಬಿನ್ ಸಾಮಾನ್ಯ ಮಟ್ಟಕ್ಕೆ ಸುಧಾರಿಸಿದರೆ ಚಿಕಿತ್ಸೆ ನಿಲ್ಲಿಸಲಾಗುವುದು. ಆದರೆ ರೋಗನಿರೋಧಕ ಐಎಫ್‍ಎ ಡೋಸ್‍ಗಳು ಮುಂದುವರಿಸಲಾಗುವುದು (ವಾರಕ್ಕೊಮ್ಮೆ), ಎರಡು ತಿಂಗಳಲ್ಲಿ ರಕ್ತಹೀನತೆ ಚಿಕಿತ್ಸೆಗೆ ಮಗು ಪ್ರತಿಕ್ರಿಸದಿದ್ದಲ್ಲಿ ಹೆಚ್ಚಿನ ತಪಾಸಣೆಗಾಗಿ ಶಿಶುವೈದ್ಯರ ಬಳಿಗೆ ಜಿಲ್ಲಾಸ್ಪತ್ರೆಗೆ  ರೆಫರ್ ಮಾಡಲಾಗುವುದು ಎಂದು ಹೇಳಿದರು. ಮಕ್ಕಳಲ್ಲಿ ಪೋಷಕಾಂಶದ ಕೊರತೆ, ಜಂತುಹುಳು ಭಾದೆ, ಸ್ವಚ್ಛತೆಗೆ ಗಮನ ಹರಿಸದೆ ಇರುವುದರಿಂದ ರಕ್ತಹೀನತೆ ಉಂಟಾಗುತ್ತದೆ. ಸುಸ್ತು, ತಲೆ ಸುತ್ತುವಿಕೆ, ಕೈ ಕಾಲು ಸೆಳೆಯುವಿಕೆ, ಏಕಾಗ್ರತೆಯ ಕೊರತೆ, ಹಸಿವಾಗದೆ ಇರುವುದು ಇವೆಲ್ಲ ತೊಂದರೆಗಳಿಂದ ಮಕ್ಕಳ ಬೆಳವಣಿಗೆ ಕುಂಠಿತವಾಗುತ್ತದೆ ಎಂದು ತಿಳಿಸಿದರು. ಪೋಷಕರ ಒಪ್ಪಿಗೆ ಪಡೆದು 35 ಮಕ್ಕಳ ಅನಿಮಿಯಾ ತಪಾಸಣೆಯನ್ನು ವೈದ್ಯಾಧಿಕಾರಿ ಶೈಮಾ, ಆರೋಗ್ಯ ಕಾರ್ಯಕರ್ತರಾದ ಮಮತಾ ನೆರವೇರಿಸಿದರು. ಮಕ್ಕಳನ್ನು ಸಮಯಕ್ಕೆ ಸರಿಯಾಗಿ ಆರೋಗ್ಯ ತಪಾಸಣೆ ಮತ್ತು ಅನಿಮಿಯ ತಪಾಸಣೆಗೆ ಒಳಪಡಿಸುವಲ್ಲಿ ಅಂಗನವಾಡಿ ಕಾರ್ಯಕರ್ತೆ ಉಮಾವತಿ ಮತ್ತು ಸಹಾಯಕಿ ದೈವಣಿ ರವರು ಶ್ರಮಿಸಿದ್ದು ಅಧಿಕಾರಿಯವರಿಂದ ಪ್ರಶಂಸೆಗೆ ಒಳಪಟ್ಟರು.

 

Follow us Follow us
Share. WhatsApp Facebook Twitter Email Telegram Copy Link

Related Posts

*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಸೆ.26: ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್…

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*

ಸೆಪ್ಟೆಂಬರ್ 26, 2026

*ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*

ಸೆಪ್ಟೆಂಬರ್ 26, 2026

*ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*

ಸೆಪ್ಟೆಂಬರ್ 26, 2026

*2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*

ಸೆಪ್ಟೆಂಬರ್ 26, 2026

*ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*

ಸೆಪ್ಟೆಂಬರ್ 26, 2026

*ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*

ಸೆಪ್ಟೆಂಬರ್ 26, 2026

*ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*

ಸೆಪ್ಟೆಂಬರ್ 26, 2026

*36 ವರ್ಷ ಸೇವೆ ಸಲ್ಲಿಸಿದ ಅಂಗನವಾಡಿ ಕಾರ್ಯಕರ್ತೆ ದೇವಮಾಜಿ, ಶಿಕ್ಷಕಿ ಭೋಜಮ್ಮಗೆ ಆತ್ಮೀಯ ಬೀಳ್ಕೊಡುಗೆ*

ಸೆಪ್ಟೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.