
ಮಡಿಕೇರಿ ಜ.3 NEWS DESK : ರಾಜ್ಯಮಟ್ಟದ ಚಿತ್ರಕಲಾ ಸ್ಪರ್ಧೆಯ ಅಂಗವಾಗಿ ರಾಜ್ಯ ಚಿತ್ರಕಲಾ ಪರಿಷತ್, ಅರಣ್ಯ ಇಲಾಖೆಯ ಸಹಯೋಗದಲ್ಲಿ ಕನ್ನಡಪ್ರಭ ಪತ್ರಿಕೆ ವತಿಯಿಂದ ಕಿರಿಯ ಪ್ರಾಥಮಿಕ, ಹಿರಿಯ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ “ಪರಿಸರ ಜಾಗೃತಿ, ವನ್ಯಜೀವಿ” ವಿಷಯದಲ್ಲಿ ಜಿಲ್ಲಾ ಮಟ್ಟದ ಚಿತ್ರಕಲಾ ಸ್ಪರ್ಧೆ ನಡೆಯಿತು. ಮಡಿಕೇರಿಯ ಗಾಂಧಿ ಭವನದಲ್ಲಿ ನಡೆದ ಪ್ರೌಢ ವಿಭಾಗದ ಸ್ಪರ್ಧೆಯಲ್ಲಿ ವಿರಾಜಪೇಟೆಯ ಕಾವೇರಿ ಶಾಲೆಯ ವಿದ್ಯಾರ್ಥಿಗಳಾದ ಹನಿಯ ಎ ಪ್ರಥಮ ಹಾಗೂ ಆರ್ನವ್ ವಿ ತೃತೀಯ ಸ್ಥಾನವನ್ನುಗಳಿಸುವುದರ ಮೂಲಕ ಪ್ರಶಸ್ತಿ ಫಲಕ ಹಾಗೂ ನಗದು ಬಹುಮಾನವನ್ನು ಪಡೆದುಕೊಂಡರು. ಕಿರಿಯ ಪ್ರಾಥಮಿಕ ವಿಭಾಗದ ಸ್ಪರ್ಧೆಯಲ್ಲಿ ಚೋಳಂಡ ಜಿಯಾ ಅಕ್ಕಮ್ಮ ಸಮಾಧಾನಕರ ಪ್ರಶಸ್ತಿ ಪತ್ರ ಪಡೆದುಕೊಂಡರು. ಈ ಸಂದರ್ಭ ಸಹ ಶಿಕ್ಷಕಿ ಲೀನಾ ಸಿ.ಡಿ ಉಪಸ್ಥಿತರಿದ್ದರು. ವಿದ್ಯಾರ್ಥಿಗಳ ಸಾಧನೆಗೆ ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷ ಸುದೇಶ್ ಬಿ.ಎಸ್, ಕಾರ್ಯದರ್ಶಿ ವಿನೋದ್ ಪಿ.ಎನ್, ಮುಖ್ಯ ಶಿಕ್ಷಕಿ ಪಾರ್ವತಿ ಪಿ.ಯು, ಸಂಯೋಜಿಕಿ ಅಮೃತ ಅರ್ಜುನ್, ಬೋಧಕ ಬೋಧಕೇತರ ಸಿಬ್ಬಂದಿ ವರ್ಗದವರು ಪೋಷಕರು ಮೆಚ್ಚುಗೆ ವ್ಯಕ್ತಪಡಿಸಿದರು.









