Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕೆಎಸ್‌ಐಸಿ ಆವರಣದಲ್ಲಿ ಸ್ಡೇಡಿಯಂ ನಿರ್ಮಾಣ ಯೋಜನೆಗೆ ತಿಲಾಂಜಲಿ : ಸಂಘಟಿತ ಹೋರಾಟಕ್ಕೆ ಸಂದ ಜಯ : ಧನ್ಯವಾದ ಸಲ್ಲಿಸಿದ ಸಂಸದ ಯದುವೀರ್‌ ಒಡೆಯರ್‌*
  • *ಮಡಿಕೇರಿ : ಮಾ.11 ರಂದು ನಗರಸಭೆಯ ಆಯವ್ಯಯ ಸಭೆ*
  • *ಮಾ.12ರ ಹೋರಾಟಕ್ಕೆ ಸಿಪಿಐಎಂ ಪಕ್ಷದ ವಿರಾಜಪೇಟೆ ಘಟಕ ಬೆಂಬಲ : ಕೆ.ಎಸ್ ರಮೇಶ್*
  • *ಕ.ಸಾ.ಪ ದತ್ತಿ ಕಾರ್ಯಕ್ರಮ : ಕೊಡಗಿನ ಸಂಸ್ಕೃತಿಯ ಮೂಲ ಸ್ವರೂಪ ಪ್ರಕೃತಿ ಆರಾಧನೆ : ಮಧೋಶ್ ಪೂವಯ್ಯ*
  • *ಪಂಜರಪೇಟೆ ಕೊಡವ ಕೇರಿಯಿಂದ ವೃದ್ಧಾಶ್ರಮಕ್ಕೆ ಭೇಟಿ*
  • *ಕೊಡವ ಕೂಟಾಳಿಯಡ ಕೂಟದಿಂದ ಸಾಧಕ ಮಹಿಳೆಯರಿಗೆ ಸನ್ಮಾನ*
  • *ಆಫ್ ರೋಡ್ ಚಾಲೆಂಜರ್ಸ್ ಸ್ಪರ್ಧೆ : ಮಡಿಕೇರಿಯ ಜತೀನ್ ಕರ್ಕೆರ ಹಾಗೂ ಹಾರ್ಧಿಕ್ ಕರ್ಕೆರ ದ್ವಿತೀಯ*
  • *ಸೋಮವಾರಪೇಟೆಯಲ್ಲಿ ಬಿಜೆಪಿ ಮಂಡಲ ಯುವ ಮೋರ್ಚಾದಿಂದ ಪ್ರತಿಭಟನೆ*
  • *ಕಾಡಾನೆ ದಾಳಿಗೆ ಗ್ರಾ.ಪಂ ಮಾಜಿ ಸದಸ್ಯೆ ಬಲಿ*
  • *ಅನಾರೋಗ್ಯದಿಂದ ಅಭಿ ಸಾವು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಸೋಮವಾರಪೇಟೆ ತಾಲ್ಲೂಕು ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ತಯಾರಿ : ಅಗತ್ಯ ಸಹಕಾರದ ಭರವಸೆ ನೀಡಿದ ಶಾಸಕ ಡಾ.ಮಂತರ್ ಗೌಡ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಸೋಮವಾರಪೇಟೆ ತಾಲ್ಲೂಕು ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ತಯಾರಿ : ಅಗತ್ಯ ಸಹಕಾರದ ಭರವಸೆ ನೀಡಿದ ಶಾಸಕ ಡಾ.ಮಂತರ್ ಗೌಡ*

ಜನವರಿ 4, 20263 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ NEWS DESK ಜ.4 : ಸೋಮವಾರಪೇಟೆಯ ಐಗೂರಿನಲ್ಲಿ ನಡೆಯಲಿರುವ ಸೋಮವಾರಪೇಟೆ ತಾಲ್ಲೂಕು 9 ನೇ ಕನ್ನಡ ಸಾಹಿತ್ಯ ಸಮ್ಮೇಳನವು ಅತ್ಯಂತ ಅಚ್ಚುಕಟ್ಟಾಗಿ ಎಲ್ಲರೂ ನೆನಪಿಸಿಕೊಳ್ಳುವಂತ ರೀತಿಯಲ್ಲಿ ನಡೆಸಬೇಕು. ಅದಕ್ಕೆ ಬೇಕಾದ ಎಲ್ಲ ತಯಾರಿಯನ್ನು ಮಾಡಿಕೊಳ್ಳಿ ಎಂದು ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರು ಮತ್ತು ಸಮ್ಮೇಳನದ ಗೌರವಾಧ್ಯಕ್ಷರೂ ಆದ ಡಾ. ಮಂತರ್ ಗೌಡ ನುಡಿದರು. ಅವರು ಐಗೂರಿನ ಸಹಕಾರ ಸಂಘದ ಸಭಾಂಗಣದಲ್ಲಿ ಸೋಮವಾರಪೇಟೆ ತಾಲೂಕು 9ನೇ ಕನ್ನಡ ಸಾಹಿತ್ಯ ಸಮ್ಮೇಳನದ ವಿವಿಧ ಉಪಸಮಿತಿಗಳ ಸಮ್ಮೇಳನದ ತಯಾರಿ ಕುರಿತು ವಿವರಣೆ ಪಡೆದರು. ಹಣಕಾಸು ಸಮಿತಿಯ ಅಧ್ಯಕ್ಷ ಕೆ ಪಿ ರಾಯ್, ಆಹಾರ ಸಮಿತಿಯ ಅಧ್ಯಕ್ಷ ಮಚ್ಚಂಡ ಅಶೋಕ್, ಮೆರವಣಿಗೆ ಸಮಿತಿಯ ಅಧ್ಯಕ್ಷ ಡಿ.ಎಸ್. ಚಂಗಪ್ಪ, ವೇದಿಕೆ ತಯಾರಿ ಸಮಿತಿಯ ಅಧ್ಯಕ್ಷ ಸಿ.ಕೆ. ರೋಹಿತ್, ಅಲಂಕಾರ ಸಮಿತಿಯ ಅಧ್ಯಕ್ಷ ಕೆ.ಪಿ ದಿನೇಶ್, ಸ್ಮರಣ ಸಂಚಿಕೆಯ ಸಂಪಾದಕ ಎಸ್.ಎಂ ಚಂಗಪ್ಪ, ಸಾಂಸ್ಕೃತಿಕ ಸಮಿತಿಯ ಅಧ್ಯಕ್ಷ ಸಮ್ಮೇಳನದ ಹೆಚ್.ಕೆ ಉಮೇಶ್ ತಯಾರಿಗಳ ಕುರಿತು ಮಾಹಿತಿ ನೀಡಿದರು. ಇದು ತಾಲೂಕು ಸಮ್ಮೇಳನವಾದರೂ ಐಗೂರು ಮತ್ತು ಸುತ್ತಮುತ್ತಲ ಹಳ್ಳಿಗಳ ಮನೆಯ ಉತ್ಸವವಾಗಬೇಕು ಎಲ್ಲರೂ ಇದರಲ್ಲಿ ಪಾಲ್ಗೊಳ್ಳುವಂತಾಗಲು ಸಮಿತಿಯವರು ಎಲ್ಲಾ ಗ್ರಾಮಗಳಲ್ಲಿ ಸಭೆ ಸೇರಿ ಸಾಹಿತ್ಯ ಸಮ್ಮೇಳನದಲ್ಲಿ ಎಲ್ಲರೂ ಪಾಲ್ಗೊಳ್ಳುವಂತೆ ಮನವಿ ಮಾಡಬೇಕು. ಅಲ್ಲದೆ ತಾಲೂಕಿನ ಎಲ್ಲ ಗ್ರಾಮಗಳಲ್ಲಿ ಮತ್ತು ಗಡಿಭಾಗದಲ್ಲಿ ಪ್ರಚಾರದ ಬ್ಯಾನರ್ ಗಳನ್ನು ಅಳವಡಿಸಬೇಕು ಎಂದು ಶಾಸಕರು ನುಡಿದರು. ಸಾಹಿತ್ಯ ಸಮ್ಮೇಳನದ ವಿವಿಧ ಉಪಸಮಿತಿಗಳಲ್ಲಿರುವ 200ಕ್ಕೂ ಹೆಚ್ಚು ಸದಸ್ಯರು ಸ್ವತಃ ಸಮ್ಮೇಳನಕ್ಕೆ ಅಗತ್ಯ ಸಹಕಾರ ನೀಡಬೇಕು. ಕೊನೆಯ ಪಕ್ಷ ಪ್ರತಿಯೊಬ್ಬ ಸದಸ್ಯರು ತಮ್ಮ ಕೈಲಾಗುವ ಹಣ ನೀಡುವ ಮೂಲಕ ಸಮ್ಮೇಳನವನ್ನು ಯಶಸ್ವಿಗೊಳಿಸಿಕೊಡಬೇಕು ಎಂದು ಹಣಕಾಸು ಸಮಿತಿ ಅಧ್ಯಕ್ಷ ಕೆ.ಪಿ.ರಾಯ್ ಮನವಿ ಮಾಡಿದರು. ಮಧ್ಯಾಹ್ನ ಮತ್ತು ರಾತ್ರಿ ಸೇರಿ ಸುಮಾರು 6,000 ಜನರಿಗೆ ಊಟ ಉಪಹಾರಗಳ ವ್ಯವಸ್ಥೆ ಮಾಡಲಿರುವುದಾಗಿ ಆಹಾರ ಸಮಿತಿಯ ಅಧ್ಯಕ್ಷ ಮಚ್ಚಂಡ ಅಶೋಕ್ ನುಡಿದರು. ಮಡಿಕೇರಿ ಸೋಮವಾರಪೇಟೆ ರಸ್ತೆಯ ಸಂಪರ್ಕ ಸೇತುವೆಯಾಗಿದ್ದ ಕಬ್ಬಿಣದ ಸೇತುವೆಯನ್ನು ಬದಲಾಯಿಸುವ ಕೆಲಸ ನಡೆಯುತ್ತಿದ್ದು ಮೆರವಣಿಗೆಯನ್ನು ಸಾಂಕೇತಿಕವಾಗಿ ಐಗೂರಿನಲ್ಲಿ ನಡೆಸಿ ನಂತರ ಕಾಜೂರು ಜಂಕ್ಷನ್ ನಿಂದ ಸಮ್ಮೇಳನ ನಡೆಯುವ ಸರಕಾರಿ ಪ್ರಾಥಮಿಕ ಶಾಲೆಯವರೆಗೆ ಸಮ್ಮೇಳನದ ಅಧ್ಯಕ್ಷರ ಮೆರವಣಿಗೆಯನ್ನು ವಿವಿಧ ಕಲಾತಂಡಗಳು, ಡೊಳ್ಳು ಕುಣಿತ, ಕಳಸ ಹೊತ್ತ ಮಹಿಳೆಯರು, ಸ್ತ್ರೀಶಕ್ತಿ, ಧರ್ಮಸ್ಥಳ ಗ್ರಾಮೀಣ ಅಭಿವೃದ್ಧಿ ಸಂಘ, ಅಂಗನವಾಡಿ ಕಾರ್ಯಕರ್ತೆಯರು, ಶಾಲಾ ವಿದ್ಯಾರ್ಥಿಗಳು ಕನ್ನಡ ಅಭಿಮಾನಿಗಳು ಕನ್ನಡ ಸಾಹಿತ್ಯ ಪರಿಷತ್ತಿನ ಸದಸ್ಯರನ್ನು ಒಳಗೊಂಡಂತೆ ಮೆರವಣಿಗೆಯ ಮೂಲಕ ಸಮ್ಮೇಳನದ ವೇದಿಕೆಗೆ ಕರೆದುಕೊಂಡು ಹೋಗಲಾಗುವುದು ಎಂದು ಮೆರವಣಿಗೆ ಸಮಿತಿ ಅಧ್ಯಕ್ಷರಾದ ಡಿ.ಎಸ್.ಚಂಗಪ್ಪ ನುಡಿದರು. ಆಕರ್ಷಣೀಯವಾದ ವೇದಿಕೆ ಮತ್ತು 2,000 ಜನ ಕುಳಿತುಕೊಳ್ಳುವಂತಹ ಸಭಾಂಗಣವನ್ನು ರಚಿಸಲಾಗುವುದು. ವೇದಿಕೆಯಲ್ಲಿ ಎಲ್.ಇ.ಡಿ ಪರದೆಯನ್ನು ಹಾಕಲಾಗುವುದು ಮತ್ತು ಸಮ್ಮೇಳನದಲ್ಲಿ ಪುಸ್ತಕ ಮಳಿಗೆ ಜನಪದ ಪಾರಂಪರಿಕ ವಸ್ತುಗಳ ಮಳಿಗೆಗಳನ್ನು ರಚಿಸಲಾಗುವುದು ಎಂದು ಮೆರವಣಿಗೆ ಸಮಿತಿ ಅಧ್ಯಕ್ಷರಾದ ಸಿ.ಕೆ.ರೋಹಿತ್ ನುಡಿದರು. ಸೋಮವಾರಪೇಟೆ ತಾಲೂಕಿನ 9ನೇ ಕನ್ನಡ ಸಾಹಿತ್ಯ ಸಮ್ಮೇಳನದ ನೆನಪಿಗೆ ನಾಡಿಗೆ ಸೇವೆ ಸಲ್ಲಿಸಿ ಮರೆಯಾದ 9 ಹಿರಿಯರ ನೆನಪಿನ ದ್ವಾರಗಳನ್ನು ರಚಿಸಲಾಗುವುದು ಮತ್ತು ನಗರ ಅಲಂಕಾರ ಮತ್ತು ಮೆರವಣಿಗೆ ನಡೆಯುವ ಸ್ಥಳವನ್ನು ಸುಂದರವಾಗಿ ಸಜ್ಜುಗೊಳಿಸಲಾಗುವುದು ಎಂದು ಅಲಂಕಾರ ಸಮಿತಿ ಅಧ್ಯಕ್ಷ ಕೆ.ಪಿ ದಿನೇಶ್ ನುಡಿದರು. ಸ್ಮರಣ ಸಂಚಿಕೆಯ ಸಂಪಾದಕ ಎಸ್.ಎಮ್ ಚಂಗಪ್ಪ ರವರು ಮಾತನಾಡುತ್ತಾ ಸ್ಮರಣ ಸಂಚಿಕೆಯಲ್ಲಿ ನಾಡಿನ ಹಿರಿಯರ, ಶಾಸಕರ ಸಂದೇಶಗಳನ್ನು ಅಳವಡಿಸಲಾಗುವುದು. ಸೋಮವಾರಪೇಟೆ ತಾಲೂಕಿನ ಐತಿಹ್ಯ ಮತ್ತು ಪ್ರವಾಸೋದ್ಯಮ ಸ್ಥಳಗಳ ಕುರಿತು ಲೇಖನಗಳನ್ನು ಮತ್ತು ಕಾರ್ಯಕ್ರಮದ ಫೋಟೋಗಳನ್ನು ಕೂಡ ಅಳವಡಿಸಲಾಗುವುದು ಎಂದರು. ಸಾಂಸ್ಕೃತಿಕ ಸಮಿತಿಯ ಅಧ್ಯಕ್ಷ ಎಚ್.ಕೆ ಉಮೇಶ್  ಸೋಮವಾರಪೇಟೆ ತಾಲೂಕಿನ ಎಲ್ಲಾ ಶಾಲೆ ಕಾಲೇಜುಗಳಿಗೆ ಮತ್ತು ಕಲಾವಿದರಿಗೆ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಭಾಗವಹಿಸಲು ಅವಕಾಶ ನೀಡಲಾಗುವುದು. ಆದರೆ ಐಗೂರು ಸುತ್ತು ಮುತ್ತಲ ಪ್ರದೇಶದ ವಿದ್ಯಾರ್ಥಿಗಳಿಗೆ ಮತ್ತು ಕಲಾವಿದರಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದರು. ಐಗೂರು ಗ್ರಾಮ ಪಂಚಾಯಿತಿಯ ಅಧ್ಯಕ್ಷ ಜಿ.ಕೆ ವಿನೋದ್ ಮಾತನಾಡುತ್ತಾ ನಮ್ಮ ಗ್ರಾಮದಲ್ಲಿ ಆಗುತ್ತಿರುವ ಈ ಸಮ್ಮೇಳನ ನಮ್ಮೆಲ್ಲರ ಪ್ರತಿಷ್ಠೆಯಾಗಿದ್ದು ಇದನ್ನು ಸುಸೂತ್ರವಾಗಿ ನಡೆಸಿಕೊಂಡು ಹೋಗಲು ಪಂಚಾಯಿತಿಯಿಂದ ಎಲ್ಲ ರೀತಿಯ ಸಹಕಾರವನ್ನು ನೀಡಲಾಗುವುದು ಮತ್ತು ಗ್ರಾಮಸ್ಥರು ಸಹ ತನು ಮನ ಧನ ಸಹಾಯ ನೀಡುವ ಮೂಲಕ ಸಮ್ಮೇಳನವನ್ನು ಯಶಸ್ವಿ ಮಾಡಿಕೊಡಬೇಕು ಎಂದರು. ವೇದಿಕೆಯಲ್ಲಿ ಉಪಸ್ಥಿತರಿದ್ದ ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಹಾಗೂ ಸಮ್ಮೇಳನದ ಮಹಾಪೋಷಕ ಟಿ.ಪಿ ರಮೇಶ್ ರವರು ಮಾತನಾಡುತ್ತಾ ಕಾರ್ಯಕ್ರಮ ನಡೆಯುವ ವೇದಿಕೆಗೆ ತಾಲೂಕಿನ ಹಿರಿಯ ಸಾಹಿತಿಯ ಹೆಸರನ್ನು ಇಡಬೇಕು. ನಂತರ ಸಭಾಂಗಣ, ಪುಸ್ತಕ ಮಳಿಗೆ, ಮಹಾದ್ವಾರ ಗಳಿಗೆ ಐಗೂರು ಸುತ್ತು ಮುತ್ತಲ ದಾನಿಗಳ, ಹಿರಿಯರ ಹೆಸರುಗಳನ್ನು ಇಡಬೇಕು ಮೆರವಣಿಗೆ ಮತ್ತು ಊಟದ ವ್ಯವಸ್ಥೆಯಲ್ಲಿ ಯಾವುದೇ ರೀತಿಯ ಲೋಪ ಬರದಂತೆ ಮುಂಜಾಗುರುಕತೆ ವಹಿಸಿಕೊಂಡು ಕಾರ್ಯಕ್ರಮವನ್ನು ಯಶಸ್ವಿ ಮಾಡಿಕೊಡಬೇಕು ಎಂದು ವಿವಿಧ ಸಮಿತಿಗಳಲ್ಲಿ ಮನವಿ ಮಾಡಿದರು. ವೇದಿಕೆಯಲ್ಲಿ ಉಪಸ್ಥಿತರಿದ್ದ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಹಾಗೂ ಸಮ್ಮೇಳನದ ಗೌರವಾಧ್ಯಕ್ಷ ಎಂ.ಪಿ ಕೇಶವ ಕಾಮತ್ ಮಾತನಾಡುತ್ತಾ ಐಗೂರು ಸಾಹಿತ್ಯ ಸಮ್ಮೇಳನವು ಇಲ್ಲಿವರೆಗೆ ನಡೆದಂತಹ ಎಲ್ಲಾ ಸಮ್ಮೇಳನಕ್ಕಿಂತಲೂ  ಉತ್ತಮ ರೀತಿಯಲ್ಲಿ ನಡೆಯಬೇಕು. ಸಮ್ಮೇಳನದ ನೆನಪಿಗಾಗಿ ರಚಿಸುವ ಸ್ಮರಣ ಸಂಚಿಕೆಯಲ್ಲಿ ಇಲ್ಲಿ ರಚಿಸುವ 9 ದ್ವಾರಗಳಲ್ಲಿ ನೆನಪಿಸಿಕೊಳ್ಳುವ ಹಿರಿಯರ ಕುರಿತು ಲೇಖನಗಳ ಅಳವಡಿಸಬೇಕು ಮತ್ತು ಸಮ್ಮೇಳನದಲ್ಲಿ ಸನ್ಮಾನಿಸಲ್ಪಡುವ ಸಾಧಕರ ಪರಿಚಯವನ್ನು ಆ ಪುಸ್ತಕದಲ್ಲಿ ಅಳವಡಿಸುವ ಮೂಲಕ ಸಂಗ್ರಹ ಯೋಗ್ಯ ಕೃತಿಯನ್ನಾಗಿಸಬೇಕು ಎಂದರು ವೇದಿಕೆಯಲ್ಲಿ ಸೋಮವಾರಪೇಟೆ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಹಾಗೂ ಸಮ್ಮೇಳನದ ಕಾರ್ಯಾಧ್ಯಕ್ಷ ಎಸ್.ಡಿ ವಿಜೇತ್, ಐಗೂರು ಹೋಬಳಿ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಹಾಗೂ ಸಮ್ಮೇಳನ ಸಮಿತಿಯ ಕಾರ್ಯದರ್ಶಿ ನಂಗಾರು ಕೀರ್ತಿ ಪ್ರಸಾದ್, ಮಾಜಿ ತಾಲೂಕು  ಅಧ್ಯಕ್ಷ ಜೆ‌.ಸಿ ಶೇಖರ್, ನಿಕಟಪೂರ್ವ ಅಧ್ಯಕ್ಷ ಜವರಪ್ಪ,ಗೌರವ ಕಾರ್ಯದರ್ಶಿ ವೀರರಾಜು ಉಪಸ್ಥಿತರಿದ್ದರು. ಸೋಮವಾರಪೇಟೆ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ ಜ್ಯೋತಿ ಅರುಣ್ ಎಲ್ಲರನ್ನೂ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕೆಎಸ್‌ಐಸಿ ಆವರಣದಲ್ಲಿ ಸ್ಡೇಡಿಯಂ ನಿರ್ಮಾಣ ಯೋಜನೆಗೆ ತಿಲಾಂಜಲಿ : ಸಂಘಟಿತ ಹೋರಾಟಕ್ಕೆ ಸಂದ ಜಯ : ಧನ್ಯವಾದ ಸಲ್ಲಿಸಿದ ಸಂಸದ ಯದುವೀರ್‌ ಒಡೆಯರ್‌*

ಮಾರ್ಚ್ 9, 2026

*ಮಡಿಕೇರಿ : ಮಾ.11 ರಂದು ನಗರಸಭೆಯ ಆಯವ್ಯಯ ಸಭೆ*

ಮಾರ್ಚ್ 9, 2026

*ಮಾ.12ರ ಹೋರಾಟಕ್ಕೆ ಸಿಪಿಐಎಂ ಪಕ್ಷದ ವಿರಾಜಪೇಟೆ ಘಟಕ ಬೆಂಬಲ : ಕೆ.ಎಸ್ ರಮೇಶ್*

ಮಾರ್ಚ್ 9, 2026

*ಮಡಿಕೇರಿ : ಮಾ.11 ರಂದು ನಗರಸಭೆಯ ಆಯವ್ಯಯ ಸಭೆ*

ಮಾರ್ಚ್ 9, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಮಾ.9 NEWS DESK : ನಗರಸಭೆಯ 2026-27ನೇ ಸಾಲಿನ ಆಯವ್ಯಯ ಮಂಜೂರಾತಿಗೆ ಮಾರ್ಚ್, 11 ರಂದು ಬೆಳಗ್ಗೆ 11.30…

*ಮಾ.12ರ ಹೋರಾಟಕ್ಕೆ ಸಿಪಿಐಎಂ ಪಕ್ಷದ ವಿರಾಜಪೇಟೆ ಘಟಕ ಬೆಂಬಲ : ಕೆ.ಎಸ್ ರಮೇಶ್*

ಮಾರ್ಚ್ 9, 2026

*ಕ.ಸಾ.ಪ ದತ್ತಿ ಕಾರ್ಯಕ್ರಮ : ಕೊಡಗಿನ ಸಂಸ್ಕೃತಿಯ ಮೂಲ ಸ್ವರೂಪ ಪ್ರಕೃತಿ ಆರಾಧನೆ : ಮಧೋಶ್ ಪೂವಯ್ಯ*

ಮಾರ್ಚ್ 9, 2026

*ಪಂಜರಪೇಟೆ ಕೊಡವ ಕೇರಿಯಿಂದ ವೃದ್ಧಾಶ್ರಮಕ್ಕೆ ಭೇಟಿ*

ಮಾರ್ಚ್ 9, 2026

*ಕೊಡವ ಕೂಟಾಳಿಯಡ ಕೂಟದಿಂದ ಸಾಧಕ ಮಹಿಳೆಯರಿಗೆ ಸನ್ಮಾನ*

ಮಾರ್ಚ್ 9, 2026

*ಆಫ್ ರೋಡ್ ಚಾಲೆಂಜರ್ಸ್ ಸ್ಪರ್ಧೆ : ಮಡಿಕೇರಿಯ ಜತೀನ್ ಕರ್ಕೆರ ಹಾಗೂ ಹಾರ್ಧಿಕ್ ಕರ್ಕೆರ ದ್ವಿತೀಯ*

ಮಾರ್ಚ್ 9, 2026

*ಸೋಮವಾರಪೇಟೆಯಲ್ಲಿ ಬಿಜೆಪಿ ಮಂಡಲ ಯುವ ಮೋರ್ಚಾದಿಂದ ಪ್ರತಿಭಟನೆ*

ಮಾರ್ಚ್ 9, 2026

*ಕಾಡಾನೆ ದಾಳಿಗೆ ಗ್ರಾ.ಪಂ ಮಾಜಿ ಸದಸ್ಯೆ ಬಲಿ*

ಮಾರ್ಚ್ 9, 2026

*ಅನಾರೋಗ್ಯದಿಂದ ಅಭಿ ಸಾವು*

ಮಾರ್ಚ್ 9, 2026

*ಕಾಡಾನೆ ಹಾವಳಿ ನಿಯಂತ್ರಿಸಲು ಸರ್ಕಾರ ವಿಫಲ : ಕೂಡಲೇ ಕೊಡಗಿಗೆ ಅರಣ್ಯ ಸಚಿವರು ಭೇಟಿ ನೀಡಲಿ : ಎಡಿಕೇರಿ ಪ್ರಸನ್ನ ಒತ್ತಾಯ*

ಮಾರ್ಚ್ 9, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.