Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕೊಡಗು ಜಿಲ್ಲೆಯ 102 ಗ್ರಾ.ಪಂ ಗಳಲ್ಲಿ 1200 ಸದಸ್ಯ ಸ್ಥಾನ ನಿಗದಿ :  ಆಕ್ಷೇಪಣೆ ಇದ್ದಲ್ಲಿ ಸಲ್ಲಿಸಲು ಅವಕಾಶ*
  • *ಕೊಡಗು : ವಿದೇಶಿ ಮಹಿಳೆ ಮೇಲಿನ ದೌರ್ಜನ್ಯ ಪ್ರಕರಣ : ಸಮಗ್ರ ತನಿಖೆಗೆ ಸಚಿವ ಭೋಸರಾಜು ಸೂಚನೆ*
  • *ವಿರಾಜಪೇಟೆ : ಏ.26 ರಂದು ಗ್ರಾಮೀಣ ಕ್ರೀಡಾಕೂಟ*
  • *ವಿದ್ಯುತ್ ಕಂಬಕ್ಕೆ ಆಟೋ ಡಿಕ್ಕಿ : ಚಾಲಕ ಸಾವು*
  • *ಸೋಮವಾರಪೇಟೆಯಲ್ಲಿ ಕುಂದುಕೊರತೆ ಸಭೆ : ಪರಿಶಿಷ್ಟರು ಸೇರಿದಂತೆ ಎಲ್ಲಾ ಜನರ ಶ್ರೇಯೋಭಿವೃದ್ಧಿಗೆ ಅಧಿಕಾರಿಗಳು ಇಚ್ಚಾಶಕ್ತಿಯಿಂದ ಕರ್ತವ್ಯ ನಿರ್ವಹಿಸಿ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್*
  • *ಸೋಮವಾರಪೇಟೆ : ಬಸವೇಶ್ವರ ದೇವಾಲಯದಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ವಿಶೇಷ ಪೂಜೆ*
  • *ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಏ.23 ರಂದು ನಡೆಯುವ ಪಂದ್ಯಗಳು*
  • *ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಏ.22 ರಂದು ಗೆಲುವು ಸಾಧಿಸಿದ ತಂಡಗಳು*
  • *ರಾಜ್ಯ ಮಟ್ಟದ ಮೊಗೇರ ಕ್ರೀಡಾಕೂಟಕ್ಕೆ ಮಡಿಕೇರಿಯಲ್ಲಿ ಸಂಭ್ರಮದ ತೆರೆ : ಮೊಗೇರ ಸಮಾಜಕ್ಕೆ ಸಮುದಾಯ ಭವನ : ಶಾಸಕ ಎ.ಎಸ್.ಪೊನ್ನಣ್ಣ ಭರವಸೆ*
  • *ಮೇ 1 ರಂದು ಶ್ರೀ ಯೋಗಿ ನಾರಾಯಣ ಕೊಡಗು ಜಿಲ್ಲಾ ಬಲಿಜ ಸಮಾಜದ ವಾರ್ಷಿಕ ಮಹಾಸಭೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕೊಡಗು : ಕಾಫಿಕೊಯ್ಲು ಮಾಡಿ ಸಂಭ್ರಮಿಸಿದ ಪತ್ರಕರ್ತರು*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕೊಡಗು : ಕಾಫಿಕೊಯ್ಲು ಮಾಡಿ ಸಂಭ್ರಮಿಸಿದ ಪತ್ರಕರ್ತರು*

ಜನವರಿ 5, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜ.5 NEWS DESK  : ಸದಾ ಸುದ್ದಿ ಹಿಂದೆ ಬೀಳುತ್ತಿದ್ದ ಪತ್ರಕರ್ತರಿಂದು ಕಾಫಿಕೊಯ್ಲಿನಲ್ಲಿ ತೊಡಗಿಸಿಕೊಂಡು ಸಂಭ್ರಮಿಸಿದರು. ತಾ ಮುಂದು ನಾ ಮುಂದು ಎನ್ನುತ್ತ ಕೆಜಿಗಟ್ಟಲೇ ಕಾಫಿಕುಯ್ದು ಬಹುಮಾನಕ್ಕಾಗಿ ತೀವ್ರ ಪೈಪೋಟಿಯೊಡ್ಡಿದರು. ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಕುಟ್ಟಂದಿ ಬಳಿಯ ಚೇರಂಡ ಜಗನ್ ಅವರ ತೋಟದಲ್ಲಿ ಪತ್ರಕರ್ತರಿಗಾಗಿ ಕಾಫಿಕೊಯ್ಲು ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಬೆಳಿಗ್ಗಿನ ವೇಳೆಯಲ್ಲಿ ಕಾರ್ಮಿಕರ ರೀತಿಯಲ್ಲಿಯೇ ತೋಟಕ್ಕೆ ಆಗಮಿಸಿದ ಪತ್ರಕರ್ತರು ಶಿಸ್ತುಬದ್ಧವಾಗಿ ಕೆಲಸ ಆರಂಭಿಸಿದರು. ಅರ್ಧ ಗಂಟೆಗಳ ಸಮಯವನ್ನು ಕಾಫಿಕೊಯ್ಲಿಗಾಗಿ ನೀಡಲಾಯಿತು. ತಲಾ 2 ಪತ್ರಕರ್ತರಿರುವ 8 ತಂಡಗಳು ಸ್ಪರ್ಧೆಯಲ್ಲಿ ಪಾಲ್ಗೊಂಡವು. ಕೃಷಿ ಸಂಬಂಧಿತ ವರದಿಗಳ ಮೂಲಕ ರೈತರ ಸಮಸ್ಯೆಗಳನ್ನು ಜನರಿಗೆ ಮುಟ್ಟಿಸುತ್ತಿದ್ದ ಪತ್ರಕರ್ತರು ಸ್ವತಃಕಾರ್ಮಿಕರು, ಬೆಳೆಗಾರರ ಅನುಭವಿಸುವ ಸಂಕಷ್ಟಗಳನ್ನು ಕಾಫಿಕೊಯ್ಲು ಮೂಲಕ ತಿಳಿದುಕೊಳ್ಳುವ ಪ್ರಯತ್ನ ಮಾಡಿದರು. ಮುಖ್ಯಮಂತ್ರಿ ಕಾನೂನು ಸಲಹೆಗಾರ, ವೀರಾಜಪೇಟೆ ಶಾಸಕ ಎ.ಎಸ್.ಪೊನ್ನಣ್ಣ ಸ್ಪರ್ಧೆಯನ್ನು ಕಾಫಿಕೊಯ್ಲು ಮಾಡುವ ಮೂಲಕ ಉದ್ಘಾಟಿಸಿ ಮಾತನಾಡಿ, ಇದು ಕಾಫಿ ಕೊಯ್ಲು ಸಮಯ. ಬೆಳೆಗಾರು ಇದರಲ್ಲಿ ತೊಡಗಿಸಿಕೊಂಡಿದ್ದಾರೆ. ಜಿಲ್ಲೆಯ ರೈತರಿಗೆ ಉತ್ತಮ ಫಸಲು ಹಾಗೂ ಬೆಲೆ ದೊರೆಯಲಿ. ಕಾಫಿದರ ಹೆಚ್ಚಾಗಿದೆ. ಇದು ಹೀಗೆ ಮುಂದುವರೆಯಲಿ. ಬ್ರ್ರೆಜಿಲ್ ಭಾಗದಲ್ಲಿ ಕಾಫಿ ಕೃಷಿ ಚೇತರಿಕೆ ಕಾಣಲು ಇನ್ನೂ ಕೆಲವು ವರ್ಷಗಳು ಬೇಕಾಗಿದೆ. ಭಾರತೀಯ ಮಾರುಕಟ್ಟೆಗೆ ಮತ್ತಷ್ಟು ಉತ್ತೇಜನ ಸಿಗುವ ನಿರೀಕ್ಷೆ ಇದೆ ಎಂದರು. :: ಬಹುಮಾನ ವಿತರಣೆ :: ಕುಟ್ಟಂದಿ ಬಳಿಯ ಇನಿಕಾ ರೆಸಾರ್ಟ್‍ನಲ್ಲಿ ಬಹುಮಾನ ವಿತರಣಾ ಸಮಾರಂಭ ನಡೆಯಿತು. ಸ್ಪರ್ಧೆಯಲ್ಲಿ 40,850 ಕೆಜಿ ಕಾಫಿ ಕೊಯ್ಲು ಮಾಡಿದ ಪಳೆಯಂಡ ಪಾರ್ಥ ಚಿಣ್ಣಪ್ಪ ಹಾಗೂ ಮಂಡೇಡ ಅಶೋಕ್ ಜೋಡಿ ಪ್ರಥಮ ಸ್ಥಾನ ಪಡೆದು ಒಟ್ಟು ರೂ.10 ಸಾವಿರ ಬಹುಮಾನ ಗಳಿಸಿಕೊಂಡಿತು. ಅಜ್ಜಮಾಡ ರಮೇಶ್ ಕುಟ್ಟಪ್ಪ ಹಾಗೂ ಸುನಿಲ್ ಪೊನ್ನೇಟಿ, ಬಾಚರಣಿಯಂಡ ಅನು ಕಾರ್ಯಪ್ಪ ಹಾಗೂ ರಿಜ್ವಾನ್ ಹುಸೇನ್ ತಂಡ 35,800 ಕೆಜಿಕಾಫಿ ಕೊಯ್ಲು ಮಾಡಿ ಸಮಬಲ ಸಾಧಿಸಿದ ಹಿನ್ನೆಲೆದ್ವಿತೀಯ ಬಹುಮಾನವಾಗಿ ಉಭಯ ತಂಡಗಳಿಗೆ ಒಟ್ಟುರೂ. 7,5000 ನಗದು ಬಹುಮಾನ ನೀಡಲಾಯಿತು. ಸಮಾಧಾನಕರ ಬಹುಮಾನಗಳನ್ನು ಶಿವಕುಮಾರ್-ದಿವಾಕರ್‍ಜಾಕಿ (33 ಕೆಜಿ), ವಿಶ್ವ-ಚಂದ್ರಮೋಹನ್ (28 ಕೆಜಿ), ಪ್ರಭುದೇವ್-ವಾಸು (26 ಕೆಜಿ), ತೇಜಸ್-ಪುತ್ತಂ ಪ್ರದೀಪ್ (25 ಕೆಜಿ), ಚಿತನ್-ವಿನೋದ್ (21 ಕೆಜಿ) ಪಡೆದುಕೊಂಡರು. ಬಹುಮಾನ ವಿತರಣಾ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದ ಬಿ.ಶೆಟ್ಟಿಗೇರಿ ಗ್ರಾ.ಪಂ. ಅಧ್ಯಕ್ಷ ಕೊಲ್ಲೀರ ಬೋಪಣ್ಣ ಅವರು, ಕಾರ್ಯನಿರತ ಪತ್ರಕರ್ತರ ಸಂಘದಿಂದಕಾಫಿಕೊಯ್ಲುಕಾರ್ಯಕ್ರಮ ಆಯೋಜಿಸಿರುವುದು ಶ್ಲಾಘನೀಯ, ಈ ಮೂಲಕ ರೈತರ ನೋವು-ನಲಿವು ಪತ್ರಕರ್ತರು ತಿಳಿದುಕೊಂಡಂತಾಗಿದೆ. ಕೊಡಗಿನ ಪತ್ರಕರ್ತರು ಅತ್ಯಂತ ಬದ್ಧತೆಯಿಂದ ಕಾರ್ಯನಿರ್ವಹಿಸುತ್ತಿದ್ದಾರೆ. ಜಿಲ್ಲೆಯಜ್ವಲಂತ ಸಮಸ್ಯೆ ಪರಿಹರಿಸುವಲ್ಲಿಯೂ ಪತ್ರಕರ್ತರ ಪಾತ್ರದೊಡ್ಡದಿದೆ ಎಂದರು. ತಾ.ಪಂ. ಮಾಜಿಅಧ್ಯಕ್ಷ ನಾಳಿಯಮಂಡ ಉಮೇಶ್ ಕೇಚಮಯ್ಯ ಮಾತನಾಡಿ, ನ್ಯಾಯಾಂಗ, ಶಾಸಕಾಂಗ ಹಾಗೂ ಕಾರ್ಯಾಂಗದೊಂದಿಗೆ ಪತ್ರಿಕಾಂಗ ಅತ್ಯಂತ ಮಹತ್ತರ ಜವಾಬ್ದಾರಿಯನ್ನು ಹೊಂದಿದೆ. ಪತ್ರಿಕೆಗಳಲ್ಲಿ ಕೃಷಿ ಸಂಬಂಧಿತ ವಿಶೇಷ ಪುಟಗಳ ಮೂಲಕ ರೈತರಿಗೆ ಸಹಾಯವಾಗುತ್ತಿದೆ. ಮಾಧ್ಯಮಗಳು ರೈತರಿಗೆ ನೆರವಾಗುತ್ತಿದೆ ಎಂದು ಅಭಿಪ್ರಾಯಿಸಿದ ಅವರು, ಸದಾಜಂಜಾಟದಲ್ಲಿರುವ ಪತ್ರಕರ್ತರಿಗೆ ಈ ರೀತಿಕಾರ್ಯಕ್ರಮ ಮನೋಲ್ಲಾಸ ನೀಡುತ್ತದೆ ಎಂದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಬಾಚರಣಿಯಂಡ ಅನು ಕಾರ್ಯಪ್ಪ, ಈ ಮೊದಲು ಸಂಘದ ವತಿಯಿಂದ ಕಾಫಿಕೊಯ್ಲು ಕಾರ್ಯಕ್ರಮ ನಡೆಯುತ್ತಿತ್ತು. ಕಾರಣಾಂತರಗಳಿಂದ ಸ್ಥಗಿತಗೊಂಡಿತ್ತು. ಇದೀಗ ಮರು ಆರಂಭವಾಗಿದೆ. ಇದರಿಂದ ರೈತರು ಅನುಭವಿಸುವ ಸಂಕಷ್ಟ ಪತ್ರಕರ್ತರಿಗೆ ಅರಿವಾಗುತ್ತದೆ ಎಂದರು. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಉಪಾಧ್ಯಕ್ಷ ಅಜ್ಜಮಾಡ ರಮೇಶ್‍ಕುಟ್ಟಪ್ಪ, ರಾಜ್ಯ ನಿರ್ದೇಶಕಿ ಬಿ.ಆರ್.ಸವಿತಾರೈ ಮಾತನಾಡಿದರು. ವೇದಿಕೆಯಲ್ಲಿ ಕೊಡಗು ಪ್ರೆಸ್‍ಕ್ಲಬ್‍ಅಧ್ಯಕ್ಷ ಬೊಳ್ಳಜಿರ ಅಯ್ಯಪ್ಪ, ವೀರಾಜಪೇಟೆ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ರೆಜಿತ್‍ಕುಮಾರ್‍ಗುಹ್ಯ ಉಪಸ್ಥಿತರಿದ್ದರು. ಪ್ರಧಾನ ಕಾರ್ಯದರ್ಶಿ ಸ್ವಾಗತಿಸಿ, ನಿರೂಪಿಸಿದರು. ಖಜಾಂಚಿ ಸುನಿಲ್ ಪೊನ್ನೇಟಿ ವಂದಿಸಿದರು.

 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕೊಡಗು ಜಿಲ್ಲೆಯ 102 ಗ್ರಾ.ಪಂ ಗಳಲ್ಲಿ 1200 ಸದಸ್ಯ ಸ್ಥಾನ ನಿಗದಿ :  ಆಕ್ಷೇಪಣೆ ಇದ್ದಲ್ಲಿ ಸಲ್ಲಿಸಲು ಅವಕಾಶ*

ಏಪ್ರಿಲ್ 22, 2026

*ಕೊಡಗು : ವಿದೇಶಿ ಮಹಿಳೆ ಮೇಲಿನ ದೌರ್ಜನ್ಯ ಪ್ರಕರಣ : ಸಮಗ್ರ ತನಿಖೆಗೆ ಸಚಿವ ಭೋಸರಾಜು ಸೂಚನೆ*

ಏಪ್ರಿಲ್ 22, 2026

*ವಿರಾಜಪೇಟೆ : ಏ.26 ರಂದು ಗ್ರಾಮೀಣ ಕ್ರೀಡಾಕೂಟ*

ಏಪ್ರಿಲ್ 22, 2026

*ಕೊಡಗು : ವಿದೇಶಿ ಮಹಿಳೆ ಮೇಲಿನ ದೌರ್ಜನ್ಯ ಪ್ರಕರಣ : ಸಮಗ್ರ ತನಿಖೆಗೆ ಸಚಿವ ಭೋಸರಾಜು ಸೂಚನೆ*

ಏಪ್ರಿಲ್ 22, 2026 ಇತ್ತೀಚಿನ ಸುದ್ದಿಗಳು ಕರ್ನಾಟಕ ಕೊಡಗು ಜಿಲ್ಲೆ ಪೊಲೀಸ್ ನ್ಯೂಸ್

ಬೆಂಗಳೂರು NEWS DESK ಏ.22 : ಕೊಡಗು ಜಿಲ್ಲೆಯ ಕುಟ್ಟ ಪ್ರದೇಶದಲ್ಲಿರುವ ಖಾಸಗಿ ಹೋಂಸ್ಟೇಯಲ್ಲಿ (𝗛𝗼𝗺𝗲𝘀𝘁𝗮𝘆) ಅಮೆರಿಕಾ ಮೂಲದ ಮಹಿಳೆಯೊಬ್ಬರ…

*ವಿರಾಜಪೇಟೆ : ಏ.26 ರಂದು ಗ್ರಾಮೀಣ ಕ್ರೀಡಾಕೂಟ*

ಏಪ್ರಿಲ್ 22, 2026

*ವಿದ್ಯುತ್ ಕಂಬಕ್ಕೆ ಆಟೋ ಡಿಕ್ಕಿ : ಚಾಲಕ ಸಾವು*

ಏಪ್ರಿಲ್ 22, 2026

*ಸೋಮವಾರಪೇಟೆಯಲ್ಲಿ ಕುಂದುಕೊರತೆ ಸಭೆ : ಪರಿಶಿಷ್ಟರು ಸೇರಿದಂತೆ ಎಲ್ಲಾ ಜನರ ಶ್ರೇಯೋಭಿವೃದ್ಧಿಗೆ ಅಧಿಕಾರಿಗಳು ಇಚ್ಚಾಶಕ್ತಿಯಿಂದ ಕರ್ತವ್ಯ ನಿರ್ವಹಿಸಿ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್*

ಏಪ್ರಿಲ್ 22, 2026

*ಸೋಮವಾರಪೇಟೆ : ಬಸವೇಶ್ವರ ದೇವಾಲಯದಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ವಿಶೇಷ ಪೂಜೆ*

ಏಪ್ರಿಲ್ 22, 2026

*ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಏ.23 ರಂದು ನಡೆಯುವ ಪಂದ್ಯಗಳು*

ಏಪ್ರಿಲ್ 22, 2026

*ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಏ.22 ರಂದು ಗೆಲುವು ಸಾಧಿಸಿದ ತಂಡಗಳು*

ಏಪ್ರಿಲ್ 22, 2026

*ರಾಜ್ಯ ಮಟ್ಟದ ಮೊಗೇರ ಕ್ರೀಡಾಕೂಟಕ್ಕೆ ಮಡಿಕೇರಿಯಲ್ಲಿ ಸಂಭ್ರಮದ ತೆರೆ : ಮೊಗೇರ ಸಮಾಜಕ್ಕೆ ಸಮುದಾಯ ಭವನ : ಶಾಸಕ ಎ.ಎಸ್.ಪೊನ್ನಣ್ಣ ಭರವಸೆ*

ಏಪ್ರಿಲ್ 22, 2026

*ಮೇ 1 ರಂದು ಶ್ರೀ ಯೋಗಿ ನಾರಾಯಣ ಕೊಡಗು ಜಿಲ್ಲಾ ಬಲಿಜ ಸಮಾಜದ ವಾರ್ಷಿಕ ಮಹಾಸಭೆ*

ಏಪ್ರಿಲ್ 22, 2026

*ಬಿಸಿಲಿನ ತೀವ್ರತೆಯ ಪರಿಣಾಮ : ದೇಹದ ತಾಪಮಾನ ಅಸಮರ್ಪಕವಾದಾಗ ಹೀಟ್ ಸ್ಟ್ರೋಕ್ ಉಂಟಾಗಬಹುದು : ಯಾರಿಗೆ ಹೆಚ್ಚು ಅಪಾಯ?…. : ಬರಹ : ಡಾ|| ಕೆ.ಬಿ.ಸೂರ್ಯ ಕುಮಾರ್, ಮಡಿಕೇರಿ*

ಏಪ್ರಿಲ್ 22, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.