Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*
  • *ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*
  • *ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*
  • *ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*
  • *ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*
  • *ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*
  • *2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*
  • *ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*
  • *ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*
  • *ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಏ.27 ರಿಂದ ಮೇ 17ರ ವರೆಗೆ ‘ಗೌಡ ಕುಟುಂಬಗಳ’ ಸಮ್ಮಿಲನ ಕ್ರೀಡಾಕೂಟ ಮತ್ತು ವೈವಿಧ್ಯಮಯ ಕಾರ್ಯಕ್ರಮ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಏ.27 ರಿಂದ ಮೇ 17ರ ವರೆಗೆ ‘ಗೌಡ ಕುಟುಂಬಗಳ’ ಸಮ್ಮಿಲನ ಕ್ರೀಡಾಕೂಟ ಮತ್ತು ವೈವಿಧ್ಯಮಯ ಕಾರ್ಯಕ್ರಮ*

ಜನವರಿ 5, 20263 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜ.5 NEWS DESK : ಕೊಡಗು ಗೌಡ ಯುವ ವೇದಿಕೆ ವತಿಯಿಂದ ಏ.27 ರಿಂದ ಮೇ 17ರವರೆಗೆ ‘ಗೌಡ ಕುಟುಂಬಗಳ’ ಸಮ್ಮಿಲನ ಕ್ರೀಡಾಕೂಟ ಮತ್ತು ವೈವಿಧ್ಯಮಯ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ ಎಂದು ಕೊಡಗು ಗೌಡ ಯುವ ವೇದಿಕೆಯ ಕಾರ್ಯದರ್ಶಿ ಪುದಿಯನೆರವನ ರಿಶಿತ್ ಮಾದಯ್ಯ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಗೌಡ ಜನಾಂಗದ ಒಗ್ಗಟ್ಟು, ಅಭಿವೃದ್ಧಿ, ಹಕ್ಕೊತ್ತಾಯ, ಕ್ರೀಡೆ, ಸಾಮಾಜಿಕ ಮತ್ತು ಸಾಂಸ್ಕೃತಿಕ ಬೆಳವಣಿಗೆಗಾಗಿ ಕಳೆದ ಹಲವು ವರ್ಷಗಳಿಂದ ವೈವಿಧ್ಯಮಯ ಕಾರ್ಯಕ್ರಮಗಳನ್ನು ಆಯೋಜಿಸುತ್ತಾ ಬರಲಾಗುತ್ತಿದೆ. ಇದೀಗ ಬಾಳಾಡಿ ಮನೋಜ್ ಕುಮಾರ್ ಅವರ ಅಧ್ಯಕ್ಷತೆಯಲ್ಲಿ ಕೊಡಗು ಗೌಡ ವೇದಿಕೆಯ ನೂತನ ಸಮಿತಿ ರಚನೆಯಾಗಿದ್ದು, ಈ ಸಮಿತಿ ವತಿಯಿಂದ ಹಲವು ವಿಭಿನ್ನ ಕಾರ್ಯಕ್ರಮಗಳನ್ನು ಕೈಗೆತ್ತಿಕೊಳ್ಳಲು ಯೋಜನೆ ರೂಪಿಸಲಾಗಿದೆ ಎಂದರು. 10 ಕುಟುಂಬ 18 ಗೋತ್ರದ ಗೌಡ ಜನಾಂಗದ 27ನೇ ವರ್ಷದ ‘ಗೌಡ ಕುಟುಂಬಗಳ’ ಸಮ್ಮಿಲನ ಕ್ರೀಡಾಕೂಟವು ಏ.27 ರಿಂದ ಮೇ 17ರವರೆಗೆ ಮಡಿಕೇರಿಯ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿದೆ. ಕ್ರೀಡಾಕೂಟದಲ್ಲಿ ಕುಟುಂಬವಾರು ಟೆನ್ನಿಸ್ ಬಾಲ್ ಕ್ರಿಕೆಟ್ ಪಂದ್ಯಾವಳಿ ಹಾಗೂ ಗೌಡ ಜನಾಂಗಬಾಂಧವರಿಗೆ ಕುಟುಂಬವಾರು “ಸೂಪರ್ 5 ರಿಂಕ್ ಹಾಕಿ” ಕ್ರೀಡಾಕೂಟ, ಗುಂಡು ಹೊಡೆಯುವ ಸ್ಪರ್ಧೆ ಮತ್ತು ಮಿಸ್ಟರ್ ಗೌಡ, ಮಿಸ್ ಗೌಡತಿ ಎಂಬ ಸಾಂಸ್ಕೃತಿಕ ಕಲರವವನ್ನು ಹಮ್ಮಿಕೊಳ್ಳಲಾಗಿದೆ ಎಂದು ರಿಶಿತ್ ಮಾದಯ್ಯ ಹೇಳಿದರು. ಕಳೆದ ವರ್ಷ ನಡೆದ ಗೌಡ ಜನಾಂಗದ ಕ್ರಿಕೆಟ್ ಪಂದ್ಯಾವಳಿಯಲ್ಲಿ 292 ಕುಟುಂಬಗಳು ಭಾಗವಹಿಸಿದ್ದವು. ಈ ಬಾರಿ 300ಕ್ಕೂ ಹೆಚ್ಚು ಕುಟುಂಬ ತಂಡಗಳು ಪಾಲ್ಗೊಳ್ಳುವ ನಿರೀಕ್ಷೆ ಇದೆ ಎಂದರು. ಇದೇ ಪ್ರಪ್ರಥಮ ಬಾರಿಗೆ ಗೌಡ ಜನಾಂಗಬಾಂಧವರಿಗೆ ಕುಟುಂಬವಾರು ಹಾಕಿ ಕ್ರೀಡಾಕೂಟವನ್ನು ಆಯೋಜನೆ ಮಾಡಲಾಗಿದೆ. ಇದು ಐದು ಆಟಗಾರರನ್ನು ಒಳಗೊಂಡ ರಿಂಕ್ ಹಾಕಿ ಮಾದರಿಯಲ್ಲಿ ನಡೆಯಲಿದೆ. ಸುಮಾರು 100 ಕುಟುಂಬಗಳು ಭಾಗವಹಿಸುವ ನಿರೀಕ್ಷೆ ಇದೆ ಎಂದು ತಿಳಿಸಿದರು. ಗೌಡ ಜನಾಂಗದ ಸಾಂಸ್ಕೃತಿಕ ಕ್ರೀಡೆಯಾದ ಕಾಯಿಗೆ ಗುಂಡು ಹೊಡೆಯುವ ಸ್ಪರ್ಧೆಯನ್ನು 12ತ್ ಬೋರ್, 0.22 ರೈಫಲ್ ಮತ್ತು ಏರ್ ರೈಫಲ್ ಎಂಬ ಮೂರು ವಿಭಾಗದಲ್ಲಿ ಆಯೋಜನೆ ಮಾಡಲಾಗಿದೆ. ಇದೇ ಮೊದಲ ಬಾರಿಗೆ ಗೌಡ ಜನಾಂಗದ ಯುವ ಪ್ರತಿಭೆಗಳನ್ನು ಗುರುತಿಸಲು “ಮಿಸ್ಟರ್ ಗೌಡ” ಮತ್ತು “ಮಿಸ್ ಗೌಡತಿ” ಎಂಬ ಸ್ಪರ್ಧೆಯನ್ನು ನಡೆಸಲಾಗುತ್ತಿದೆ. ಗೌಡ ಸಂಸ್ಕೃತಿ, ಆಚಾರ ವಿಚಾರ, ಭಾಷೆ ಮತ್ತು ದೈಹಿಕ ಸದೃಢತೆಯನ್ನು ಪರೀಕ್ಷಿಸಿ ವಿಜೇತರನ್ನು ಘೋಷಿಸಲಾಗುತ್ತದೆ ಎಂದು ಹೇಳಿದರು. ಜಿಪಿಎಲ್ ಸೀಸನ್-4 :: ಕೊಡಗು ಗೌಡ ಯುವ ವೇದಿಕೆ ಯುವ ಪ್ರತಿಭೆ ಗಳನ್ನು ಗುರುತಿಸಿ ಪ್ರೊಫೆಷನಲ್ ಕ್ರಿಕೆಟಿಂಗ್ ಕೆರಿಯರ್ ರೂಪಿಸಿಕೊಳ್ಳಲು ಜಿಪಿಎಲ್ ಸೀಸನ್-4 ನ್ನು ಡಿ.16 ರಿಂದ ಡಿ.31 ರವರೆಗೆ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಸಲು ತೀರ್ಮಾನಿಸಲಾಗಿದೆ. ಈ ಕ್ರೀಡಾಕೂಟದಲ್ಲಿ ಕೊಡಗು ಮತ್ತು ದಕ್ಷಿಣ ಕನ್ನಡದ ಎಲ್ಲಾ ಒಕ್ಕಲಿಗ ಬಾಂಧವರು ಭಾಗವಹಿಸಬಹುದಾಗಿದೆ. ಕುಟುಂಬವಾರು ಟೆನ್ನಿಸ್ ಬಾಲ್ ಕ್ರೀಡಾಕೂಟ ಹಾಗೂ ಮೊದಲ ಬಾರಿಗೆ ಆಯೋಜನೆ ಗೊಳ್ಳುತ್ತಿರುವ ರಿಂಕ್ ಹಾಕಿ ಕ್ರೀಡಾಕೂಟಕ್ಕೆ ಕುಟುಂಬಗಳು ಹೆಸರು ನೋಂದಾಯಿಸಲು ಕುಟ್ಟನ ಪ್ರಶಾಂತ್ 7019671130, ಪೂಜಾರಿರ ಮಿತ್ರ 9663253025, ಪರಿಚನ ಸೋನಿ 7676452107 ಹಾಗೂ “ಮಿಸ್ಟರ್ ಗೌಡ” ಮತ್ತು “ಮಿಸ್ ಗೌಡತಿ” ಸ್ಪರ್ಧೆಗೆ 9008198955 ಸಂಪರ್ಕಿಸಬಹುದಾಗಿದೆ ಎಂದು ರಿಶಿತ್ ಮಾದಯ್ಯ ತಿಳಿಸಿದರು. *ಅನುದಾಕ್ಕೆ ಒತ್ತಾಯ* ಕೊಡಗು ಗೌಡ ಯುವ ವೇದಿಕೆಯ ಅಧ್ಯಕ್ಷ ಬಾಳಾಡಿ ಮನೋಜ್ ಕುಮಾರ್ ಮಾತನಾಡಿ, ಕೊಡಗು ಗೌಡ ಯುವ ವೇದಿಕೆ ನಡೆಸುವ ಕ್ರೀಡಾಕೂಟಕ್ಕೆ 2023 ರಿಂದ ಸರಕಾರದಿಂದ ಅನುದಾನ ಬಿಡುಗಡೆಯಾಗಿಲ್ಲ, ಈ ಹಿಂದಿನ ವರ್ಷಗಳಲ್ಲಿ ಅನುದಾನ ನೀಡಲಾಗಿದೆ ಎಂದರು. ಜನಾಂಗ ಬಾಂಧವರು ಹಾಗೂ ಹಿತೈಷಿಗಳ ನೆರವಿನಿಂದ ಕ್ರೀಡಾಕೂಟವನ್ನು ಯಶಸ್ವಿಯಾಗಿ ಮುಂದುವರೆಸುತ್ತಾ ಬಂದಿದ್ದೇವೆ. ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರ ಬಳಿ ಅನುದಾನದ ಕುರಿತು ಚರ್ಚಿಸಲಾಗಿದೆ. ಶಾಸಕರು ಈ ವರ್ಷ ಅನುದಾನವನ್ನು ಸರಕಾರದಿಂದ ಕೊಡಿಸುವುದಾಗಿ ಭರವಸೆ ನೀಡಿದ್ದಾರೆ. ಮಡಿಕೇರಿ ಶಾಸಕ ಡಾ.ಮಂತರ್ ಗೌಡ ಅವರು ಕ್ರೀಡಾಕೂಟಕ್ಕೆ ಸಹಕಾರ ನೀಡುವುದಾಗಿ ಹೇಳಿದ್ದಾರೆ. ಈ ಕಾರ್ಯಕ್ರಮಕ್ಕೆ ಬಹಳಷ್ಟು ಅನುದಾನದ ಅವಶ್ಯಕತೆ ಇರುವುದರಿಂದ ಶಾಸಕರುಗಳು ಅನುದಾನ ಬಿಡುಗಡೆ ಮಾಡುವಂತೆ ಬಾಳಾಡಿ ಮನೋಜ್ ಕುಮಾರ್ ಒತ್ತಾಯಿಸಿದರು. ಸುದ್ದಿಗೋಷ್ಠಿಯಲ್ಲಿ ಕೊಡಗು ಗೌಡ ಯುವ ವೇದಿಕೆಯ ಉಪಾಧ್ಯಕ್ಷರಾದ ಪರಿಚನ ಸತೀಶ್, ಎಡಿಕೇರಿ ಪ್ರಸನ್ನ, ಕಾರ್ಯದರ್ಶಿ ಕೆದಂಬಾಡಿ ಕಾಂಚನ ಗೌಡ ಹಾಗೂ ಆಹಾರ ಸಮಿತಿ ಅಧ್ಯಕ್ಷರಾದ ಫೈಕೇರ ಗಗನ್ ದೇವಯ್ಯ ಉಪಸ್ಥಿತರಿದ್ದರು.

 

Follow us Follow us
Share. WhatsApp Facebook Twitter Email Telegram Copy Link

Related Posts

*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಸೆ.26: ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್…

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*

ಸೆಪ್ಟೆಂಬರ್ 26, 2026

*ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*

ಸೆಪ್ಟೆಂಬರ್ 26, 2026

*ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*

ಸೆಪ್ಟೆಂಬರ್ 26, 2026

*2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*

ಸೆಪ್ಟೆಂಬರ್ 26, 2026

*ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*

ಸೆಪ್ಟೆಂಬರ್ 26, 2026

*ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*

ಸೆಪ್ಟೆಂಬರ್ 26, 2026

*ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*

ಸೆಪ್ಟೆಂಬರ್ 26, 2026

*36 ವರ್ಷ ಸೇವೆ ಸಲ್ಲಿಸಿದ ಅಂಗನವಾಡಿ ಕಾರ್ಯಕರ್ತೆ ದೇವಮಾಜಿ, ಶಿಕ್ಷಕಿ ಭೋಜಮ್ಮಗೆ ಆತ್ಮೀಯ ಬೀಳ್ಕೊಡುಗೆ*

ಸೆಪ್ಟೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.