
ಮಡಿಕೇರಿ ಜ.5 NEWS DESK : ಕರ್ನಾಟಕದ ರಾಜ್ಯ ಸರ್ಕಾರವು ಮಹಿಳೆಯರು ಮತ್ತು ಮಕ್ಕಳ ರಕ್ಷಣೆಗಾಗಿ ಜಾರಿಗೊಳಿಸಿರುವ ‘ಅಕ್ಕಪಡೆ’ ವಿಶೇಷ ಯೋಜನೆಯನ್ನು ಪೊಲೀಸ್ ವರಿಷ್ಠಾಧಿಕಾರಿ ಆರ್.ಎನ್.ಬಿಂದು ಮಣಿ ಉದ್ಘಾಟಿಸಿದರು. ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರಾದ ಪ್ರಸನ್ನ ಕುಮಾರ್, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಬಿ.ಪಿ.ದಿನೇಶ್ ಕುಮಾರ್, ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿ, ಗೃಹರಕ್ಷಕರು, ಸೇಂಟ್ ಜೋಸೆಫ್ ಶಾಲೆಯ ವಿದ್ಯಾರ್ಥಿಗಳು ಹಾಜರಿದ್ದರು.









