Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕೊಡಗು ಜಿಲ್ಲೆಯ 102 ಗ್ರಾ.ಪಂ ಗಳಲ್ಲಿ 1200 ಸದಸ್ಯ ಸ್ಥಾನ ನಿಗದಿ :  ಆಕ್ಷೇಪಣೆ ಇದ್ದಲ್ಲಿ ಸಲ್ಲಿಸಲು ಅವಕಾಶ*
  • *ಕೊಡಗು : ವಿದೇಶಿ ಮಹಿಳೆ ಮೇಲಿನ ದೌರ್ಜನ್ಯ ಪ್ರಕರಣ : ಸಮಗ್ರ ತನಿಖೆಗೆ ಸಚಿವ ಭೋಸರಾಜು ಸೂಚನೆ*
  • *ವಿರಾಜಪೇಟೆ : ಏ.26 ರಂದು ಗ್ರಾಮೀಣ ಕ್ರೀಡಾಕೂಟ*
  • *ವಿದ್ಯುತ್ ಕಂಬಕ್ಕೆ ಆಟೋ ಡಿಕ್ಕಿ : ಚಾಲಕ ಸಾವು*
  • *ಸೋಮವಾರಪೇಟೆಯಲ್ಲಿ ಕುಂದುಕೊರತೆ ಸಭೆ : ಪರಿಶಿಷ್ಟರು ಸೇರಿದಂತೆ ಎಲ್ಲಾ ಜನರ ಶ್ರೇಯೋಭಿವೃದ್ಧಿಗೆ ಅಧಿಕಾರಿಗಳು ಇಚ್ಚಾಶಕ್ತಿಯಿಂದ ಕರ್ತವ್ಯ ನಿರ್ವಹಿಸಿ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್*
  • *ಸೋಮವಾರಪೇಟೆ : ಬಸವೇಶ್ವರ ದೇವಾಲಯದಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ವಿಶೇಷ ಪೂಜೆ*
  • *ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಏ.23 ರಂದು ನಡೆಯುವ ಪಂದ್ಯಗಳು*
  • *ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಏ.22 ರಂದು ಗೆಲುವು ಸಾಧಿಸಿದ ತಂಡಗಳು*
  • *ರಾಜ್ಯ ಮಟ್ಟದ ಮೊಗೇರ ಕ್ರೀಡಾಕೂಟಕ್ಕೆ ಮಡಿಕೇರಿಯಲ್ಲಿ ಸಂಭ್ರಮದ ತೆರೆ : ಮೊಗೇರ ಸಮಾಜಕ್ಕೆ ಸಮುದಾಯ ಭವನ : ಶಾಸಕ ಎ.ಎಸ್.ಪೊನ್ನಣ್ಣ ಭರವಸೆ*
  • *ಮೇ 1 ರಂದು ಶ್ರೀ ಯೋಗಿ ನಾರಾಯಣ ಕೊಡಗು ಜಿಲ್ಲಾ ಬಲಿಜ ಸಮಾಜದ ವಾರ್ಷಿಕ ಮಹಾಸಭೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕೊಡಗು ವಿಶ್ವವಿದ್ಯಾಲಯದಲ್ಲಿ ಕುವೆಂಪು ಜನ್ಮೋತ್ಸವ : ರಾಷ್ಟ್ರಕವಿ ಕುವೆಂಪು ಅವರ ‘ವಿಶ್ವಮಾನವ ಸಂದೇಶ‘ ಸಾರ್ವಕಾಲಿಕ : ಪ್ರೊ.ಅಶೋಕ ಸಂಗಪ್ಪ ಆಲೂರ ಅಭಿಪ್ರಾಯ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕೊಡಗು ವಿಶ್ವವಿದ್ಯಾಲಯದಲ್ಲಿ ಕುವೆಂಪು ಜನ್ಮೋತ್ಸವ : ರಾಷ್ಟ್ರಕವಿ ಕುವೆಂಪು ಅವರ ‘ವಿಶ್ವಮಾನವ ಸಂದೇಶ‘ ಸಾರ್ವಕಾಲಿಕ : ಪ್ರೊ.ಅಶೋಕ ಸಂಗಪ್ಪ ಆಲೂರ ಅಭಿಪ್ರಾಯ*

ಜನವರಿ 6, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜ.6 NEWS DESK : ಜಗದ ಕವಿ, ಯುಗದ ಕವಿ, ದಾರ್ಶನಿಕ ಕವಿ ಶ್ರೀಕುವೆಂಪು ಅವರು ಸಾಹಿತ್ಯ ಕ್ಷೇತ್ರದಲ್ಲಿ ಆಧ್ಯಾತ್ಮಿಕ ಕಾಣಿಕೆಯನ್ನು, ವೈಚಾರಿಕತೆಯನ್ನೂ ಬಿತ್ತಿದ ಮಹಾನ್‌ಚೇತನ. ಅಪ್ಪಟ ಅಧ್ಯಾತ್ಮ ಜೀವಿಯಾಗಿದ್ದ ಕುವೆಂಪು ಅವರು ರೂಪಿಸಿದ ‘ವಿಶ್ವಮಾನವ ಸಂದೇಶ‘ ಸಾರ್ವಕಾಲಿಕ ಎಂದು ಕೊಡಗು ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ.ಅಶೋಕ ಸಂಗಪ್ಪ ಆಲೂರ ಅವರು ಅಭಿಪ್ರಾಯಿಸಿದರು.  ಕೊಡಗು ವಿಶ್ವವಿದ್ಯಾಲಯದ ಜ್ಞಾನಕಾವೇರಿ ಆವರಣದ ಹಾರಂಗಿ ಸಭಾಂಗಣದಲ್ಲಿ ಕನ್ನಡಸಿರಿ ಸ್ನೇಹ ಬಳಗ, ಹಾಗೂ ನಾಡಪ್ರಭು ಪತ್ತಿನ ಸಹಕಾರ ಸಂಘ, ಕುಶಾಲನಗರ ಇವರ ಸಂಯುಕ್ತಾಶ್ರಯದಲ್ಲಿ ಜರುಗಿದ ವಿಶ್ವಮಾನವ ಕುವೆಂಪುರವರ ಜನ್ಮೋತ್ಸವ ಮತ್ತು -ಸಮಗ್ರ ಸಾಹಿತ್ಯದ ಕುರಿತು ಒಂದು ದಿನದ ರಾಷ್ಟ್ರೀಯ ಸಮ್ಮೇಳನ ಹಾಗೂ ರಸಪ್ರಶ್ನೆ ಕಾರ್ಯಕ್ರಮ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು. ಮಾನವ ವಿಕಾಸದ ಹಾದಿಯಲ್ಲಿ ಆಯಾ ಕಾಲದ ಅಗತ್ಯವನ್ನು ಪೂರೈಸಲು ಮಹಾಪುರುಷರು ಜನಿಸಿ ಹೋಗಿದ್ದಾರೆ. ಅವರಲ್ಲಿ ಕೆಲವರ ವಾಣಿ ವಿಶಿಷ್ಟ ಧರ್ಮವಾಗಿ ರೂಪುಗೊಂಡು ಕಡೆಗೆ ಮತವಾಗಿ ಪರಿಮಿತವಾಯಿತು. ಮಾನವರನ್ನು ಕೂಡಿಸಿ ಬಾಳಿಸಬೇಕೆಂಬ ಉದ್ದೇಶದಿಂದ ಹುಟ್ಟಿಕೊಂಡ ವಿಶ್ವಮಾನವ ಸಂದೇಶದ ಪರಿಕಲ್ಪನೆಯು ಜಾತಿ ಮತ ಧರ್ಮಗಳನ್ನು ಮೀರಿದ್ದಾಗಿದೆ. ಈ ವಿಚಾರಗಳನ್ನು ವಿದ್ಯಾರ್ಥಿಗಳು ಅರ್ಥೈಸಿಕೊಳ್ಳಬೇಕು ಎಂದು ಅವರು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಕುಶಾಲನಗರದ ನಾಡಪ್ರಭು ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾದ ಎಂ.ಕೆ. ದಿನೇಶ್ ಅವರು, ಮನುಜಮತ, ವಿಶ್ವಪಥ, ಸರ್ವೋದಯ, ಸಮನ್ವಯ, ಪೂರ್ಣದೃಷ್ಟಿ – ಈ ಪಂಚಮಂತ್ರ ಇನ್ನು ಮುಂದಿನ ದೃಷ್ಟಿಯಾಗಬೇಕಾಗಿದೆ ಎಂದು ತಿಳಿಸಿದರು. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ನಿಕಟಪೂರ್ವ ಅಧ್ಯಕ್ಷರು ಮತ್ತು ಕನ್ನಡಸಿರಿ ಸ್ನೇಹ ಬಳಗದ ಅಧ್ಯಕ್ಷರಾದ ಲೋಕೇಶ್ ಸಾಗರ್ ಬಿ.ಎಸ್ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಕುಶಾಲನಗರದ ರೋಟರಿ ಪೂರ್ವಾಧ್ಯಕ್ಷ ಎಂ.ಡಿ.ರಂಗಸ್ವಾಮಿ, ಕುಶಾಲನಗರ ಪುರಸಭೆ ಮಾಜಿ ಸದಸ್ಯ ಪ್ರಕಾಶ್, ಕನ್ನಡ ಸಿರಿ ಸ್ನೇಹ ಬಳಗದ ಪ್ರಮುಖರಾದ. ಕೆ.ಕೆ.ನಾಗರಾಜಶೆಟ್ಟಿ, ನಿವೃತ್ತ ಶಿಕ್ಷಕರಾದ ಉ.ರಾ. ನಾಗೇಶ್, ಖಾನ್ ಮಾಸ್ಟರ್, ಹೆಬ್ಬಾಲೆ ನಿವೃತ್ತ ಶಿಕ್ಷಕ ಹೆಚ್.ಎಸ್. ಲೋಕೇಶ್, ವಿಶ್ವವಿದ್ಯಾಲಯ ಕನ್ನಡ ಪ್ರಾಧ್ಯಾಪಕ ಜಮೀರ್ ಅಹಮದ್ ಸೇರಿದಂತೆ ವಿವಿಧ ವಿಭಾಗಗಳ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ವರ್ಗದವರು, ಸ್ನಾತಕ ಮತ್ತು ಸ್ನಾತಕೋತ್ತರ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಕನ್ನಡ ಅಧ್ಯಯನ ವಿಭಾಗ ಉಪನ್ಯಾಸಕ ಡಾ. ಜಮೀರ್ ಅಹಮದ್ ನಿರೂಪಿಸಿ, ವಂದಿಸಿದರು. :: ಗೋಷ್ಠಿ :: ಕಾರ್ಯಕ್ರಮದ ಮೊದಲ ಗೋಷ್ಠಿಯಲ್ಲಿ “ರಾಷ್ಟ್ರಕವಿ ಕುವೆಂಪುರವರ ಸಮಗ್ರ ಸಾಹಿತ್ಯ” ಕುರಿತು ಕಣಿವೆಯ ಖ್ಯಾತ ಸಾಹಿತಿಗಳಾದ ಭಾರದ್ವಾಜ ಕೆ. ಆನಂದತೀರ್ಥ ಅವರು ಉಪನ್ಯಾಸ ನೀಡಿ, ಯಾವ ಭಾವನೆಗಳು ಜಗತ್ತಿನಲ್ಲಿ ಎಲ್ಲ ಮಾನವರಿಗೂ ಅನ್ವಯವಾಗಬಹುದೊ ಅಂತಹ ಭಾವನೆ, ಅಂತಹ ದೃಷ್ಟಿ ಕೇವಲ ಒಂದು ಜಾತಿ, ಮತ, ಗುಂಪಿಗೆ, ಒಂದು ದೇಶಕ್ಕೆ ಮಾತ್ರ ಅನ್ವಯವಾಗುವುದಿಲ್ಲ. ಸರ್ವಕಾಲಕ್ಕೂ ಅನ್ವಯವಾಗುವ ಇವು ಮೂಲಮೌಲ್ಯಗಳು. ಈ ಮೌಲ್ಯಗಳು ಮಾನವರನ್ನು ಕೂಡಿಸಿ ಬಾಳಿಸುವತ್ತ ನಡೆದಾವು. ಗುಂಪುಗಾರಿಕೆಗೆಂದೂ ಇವು ತೊಡಗುವುದಿಲ್ಲ; ಅದೇನಿದ್ದರೂ ರಾಜಕೀಯದ ಕರ್ಮ. ವ್ಯಕ್ತಿಸ್ವಾತಂತ್ರ್ಯವನ್ನು ನೀಡಿಯೂ ಸಮಷ್ಟಿಯ ಉದ್ಧಾರದ ದೃಷ್ಟಿ ಇದರದು. ಈ ದೃಷ್ಟಿಗೆ ವ್ಯಕ್ತಿಗಳೆಷ್ಟೊ ಅಷ್ಟೂ ಸಂಖ್ಯೆಯ ಮತಗಳಿರುವುದು ಸಾಧ್ಯ; ಅಷ್ಟೂ ವ್ಯಕ್ತಿಗಳು ಸಮಷ್ಟಿಯ ವಿಕಾಸಕ್ಕೆ ಸಾಧಕವಾಗುವುದೂ ಸಾಧ್ಯ. ಈ ‘ದರ್ಶನ’ವನ್ನೆ ‘ವಿಶ್ವಮಾನವ ಗೀತೆ’ ಸಾರುತ್ತದೆ ಎಂದು ಅವರು ಅಭಿಪ್ರಾಯಪಟ್ಟರು. :: ರಸಪ್ರಶ್ನೆ ಸ್ಪರ್ಧೆ ::  ವಿಶ್ವಮಾನವ ಕುವೆಂಪುರವರ ಜನ್ಮೋತ್ಸವದ ಅಂಗವಾಗಿ ವಿದ್ಯಾರ್ಥಿಗಳಿಗಾಗಿ ರಸಪ್ರಶ್ನೆ ಸ್ಪರ್ಧಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈ ಸ್ಪರ್ಧೆಯನ್ನು ಕುಶಾಲನಗರದ ನಿವೃತ್ತ ಶಿಕ್ಷಕರಾದ ಉ.ರಾ. ನಾಗೇಶ್ ಅವರು ನೆರವೇರಿಸಿದರು.

 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕೊಡಗು ಜಿಲ್ಲೆಯ 102 ಗ್ರಾ.ಪಂ ಗಳಲ್ಲಿ 1200 ಸದಸ್ಯ ಸ್ಥಾನ ನಿಗದಿ :  ಆಕ್ಷೇಪಣೆ ಇದ್ದಲ್ಲಿ ಸಲ್ಲಿಸಲು ಅವಕಾಶ*

ಏಪ್ರಿಲ್ 22, 2026

*ಕೊಡಗು : ವಿದೇಶಿ ಮಹಿಳೆ ಮೇಲಿನ ದೌರ್ಜನ್ಯ ಪ್ರಕರಣ : ಸಮಗ್ರ ತನಿಖೆಗೆ ಸಚಿವ ಭೋಸರಾಜು ಸೂಚನೆ*

ಏಪ್ರಿಲ್ 22, 2026

*ವಿರಾಜಪೇಟೆ : ಏ.26 ರಂದು ಗ್ರಾಮೀಣ ಕ್ರೀಡಾಕೂಟ*

ಏಪ್ರಿಲ್ 22, 2026

*ಕೊಡಗು : ವಿದೇಶಿ ಮಹಿಳೆ ಮೇಲಿನ ದೌರ್ಜನ್ಯ ಪ್ರಕರಣ : ಸಮಗ್ರ ತನಿಖೆಗೆ ಸಚಿವ ಭೋಸರಾಜು ಸೂಚನೆ*

ಏಪ್ರಿಲ್ 22, 2026 ಇತ್ತೀಚಿನ ಸುದ್ದಿಗಳು ಕರ್ನಾಟಕ ಕೊಡಗು ಜಿಲ್ಲೆ ಪೊಲೀಸ್ ನ್ಯೂಸ್

ಬೆಂಗಳೂರು NEWS DESK ಏ.22 : ಕೊಡಗು ಜಿಲ್ಲೆಯ ಕುಟ್ಟ ಪ್ರದೇಶದಲ್ಲಿರುವ ಖಾಸಗಿ ಹೋಂಸ್ಟೇಯಲ್ಲಿ (𝗛𝗼𝗺𝗲𝘀𝘁𝗮𝘆) ಅಮೆರಿಕಾ ಮೂಲದ ಮಹಿಳೆಯೊಬ್ಬರ…

*ವಿರಾಜಪೇಟೆ : ಏ.26 ರಂದು ಗ್ರಾಮೀಣ ಕ್ರೀಡಾಕೂಟ*

ಏಪ್ರಿಲ್ 22, 2026

*ವಿದ್ಯುತ್ ಕಂಬಕ್ಕೆ ಆಟೋ ಡಿಕ್ಕಿ : ಚಾಲಕ ಸಾವು*

ಏಪ್ರಿಲ್ 22, 2026

*ಸೋಮವಾರಪೇಟೆಯಲ್ಲಿ ಕುಂದುಕೊರತೆ ಸಭೆ : ಪರಿಶಿಷ್ಟರು ಸೇರಿದಂತೆ ಎಲ್ಲಾ ಜನರ ಶ್ರೇಯೋಭಿವೃದ್ಧಿಗೆ ಅಧಿಕಾರಿಗಳು ಇಚ್ಚಾಶಕ್ತಿಯಿಂದ ಕರ್ತವ್ಯ ನಿರ್ವಹಿಸಿ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್*

ಏಪ್ರಿಲ್ 22, 2026

*ಸೋಮವಾರಪೇಟೆ : ಬಸವೇಶ್ವರ ದೇವಾಲಯದಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ವಿಶೇಷ ಪೂಜೆ*

ಏಪ್ರಿಲ್ 22, 2026

*ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಏ.23 ರಂದು ನಡೆಯುವ ಪಂದ್ಯಗಳು*

ಏಪ್ರಿಲ್ 22, 2026

*ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಏ.22 ರಂದು ಗೆಲುವು ಸಾಧಿಸಿದ ತಂಡಗಳು*

ಏಪ್ರಿಲ್ 22, 2026

*ರಾಜ್ಯ ಮಟ್ಟದ ಮೊಗೇರ ಕ್ರೀಡಾಕೂಟಕ್ಕೆ ಮಡಿಕೇರಿಯಲ್ಲಿ ಸಂಭ್ರಮದ ತೆರೆ : ಮೊಗೇರ ಸಮಾಜಕ್ಕೆ ಸಮುದಾಯ ಭವನ : ಶಾಸಕ ಎ.ಎಸ್.ಪೊನ್ನಣ್ಣ ಭರವಸೆ*

ಏಪ್ರಿಲ್ 22, 2026

*ಮೇ 1 ರಂದು ಶ್ರೀ ಯೋಗಿ ನಾರಾಯಣ ಕೊಡಗು ಜಿಲ್ಲಾ ಬಲಿಜ ಸಮಾಜದ ವಾರ್ಷಿಕ ಮಹಾಸಭೆ*

ಏಪ್ರಿಲ್ 22, 2026

*ಬಿಸಿಲಿನ ತೀವ್ರತೆಯ ಪರಿಣಾಮ : ದೇಹದ ತಾಪಮಾನ ಅಸಮರ್ಪಕವಾದಾಗ ಹೀಟ್ ಸ್ಟ್ರೋಕ್ ಉಂಟಾಗಬಹುದು : ಯಾರಿಗೆ ಹೆಚ್ಚು ಅಪಾಯ?…. : ಬರಹ : ಡಾ|| ಕೆ.ಬಿ.ಸೂರ್ಯ ಕುಮಾರ್, ಮಡಿಕೇರಿ*

ಏಪ್ರಿಲ್ 22, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.