Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಡೊನಾಲ್ಡ್ ಟ್ರಂಪ್ ಮೆಚ್ಚಿದ ಆ ‘ಒಂದು’ ನಿರ್ಧಾರ ಯಾವುದು? ಭಾರತಕ್ಕೆ ಸಿಗಲಿದೆ ಅತಿದೊಡ್ಡ ಆರ್ಥಿಕ ಲಾಭ!*
  • *ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*
  • *ಬಿಸಾಡಿದ ಬಾಟಲಿಗಳಿಂದ ಮತ್ತೆ ಗ್ಲಾಸಿಗೆ? ದೆಹಲಿ ಸ್ಟೇಡಿಯಂ ಸಿಬ್ಬಂದಿಯ ಈ ಕರ್ಮಕಾಂಡ ನೋಡಿ ನೀವೂ ವಾಕರಿಕೆ ಮಾಡ್ಕೊತೀರಾ!*
  • *ಚಿನ್ನಸ್ವಾಮಿಯಲ್ಲಿ ಮತ್ತೆ ಮೊಳಗಲಿದೆ RCB.. RCB.. ಸದ್ದು! ಸರ್ಕಾರದ ಗ್ರೀನ್ ಸಿಗ್ನಲ್ ಸಿಕ್ಕಿದ್ದು ಹೇಗೆ? ಅಭಿಮಾನಿಗಳೇ ಈಗಲೇ ರೆಡಿಯಾಗಿ!*
  • *ಕರೆಂಟ್ ಬಿಲ್ ನೋಡಿ ಬೆಚ್ಚಿಬೀಳಬೇಡಿ! ರಾಜ್ಯದಲ್ಲಿ ವಿದ್ಯುತ್ ದರ ಏರಿಕೆಗೆ ಕ್ಷಣಗಣನೆ; ಯಾರಿಗೆ ಎಷ್ಟು ಹೊರೆ?*
  • *ಶಾಲೆ ಪ್ರವಾಸಕ್ಕೆ ಟ್ರಕ್ ಬಳಕೆ: ಪೋಷಕರು ಫುಲ್ ಗರಂ! ಹೆಡ್‌ಮಾಸ್ಟರ್ ಅಮಾನತು ಹಿಂದಿನ ಅಸಲಿ ಕಥೆ ಇಲ್ಲಿದೆ*
  • *ಕೊಡಗಿಗೆ ಭೇಟಿ ನೀಡಿದ ಪೊಲೀಸ್ ಮಹಾ ನಿರೀಕ್ಷಕರು*
  • *ಕುಶಾಲನಗರದಲ್ಲಿ ಒಣ ಕಸ ಸಂಗ್ರಹ ಘಟಕ ಉದ್ಘಾಟನೆ*
  • *ಭ್ರಷ್ಟಾಚಾರದ ಪ್ರಮಾಣ ಹೆಚ್ಚಾಗಿದೆ : ಗುತ್ತಿಗೆದಾರರ ಸಂಘ ಗಂಭೀರ ಆರೋಪ*
  • *ಕೇಂದ್ರ ಸರಕಾರದ ವಿರುದ್ಧ ಮಡಿಕೇರಿಯಲ್ಲಿ ಕಾರ್ಮಿಕ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ನಾಪೋಕ್ಲುವಿನಲ್ಲಿ ಸಂಭ್ರಮದ ಲಯನ್ಸ್ ರೀಜನ್ ಮೀಟ್ “ಬೆಸುಗೆ” ಸಮ್ಮೇಳನ*
ಇತ್ತೀಚಿನ ಸುದ್ದಿಗಳು

*ನಾಪೋಕ್ಲುವಿನಲ್ಲಿ ಸಂಭ್ರಮದ ಲಯನ್ಸ್ ರೀಜನ್ ಮೀಟ್ “ಬೆಸುಗೆ” ಸಮ್ಮೇಳನ*

January 6, 20262 Mins Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ನಾಪೋಕ್ಲು ಜ.6 NEWS DESK : ಇನ್ನೊಬ್ಬರ ಕಷ್ಟದಲ್ಲಿ ಭಾಗಿಯಾಗುವ ಇನ್ನೊಬ್ಬರ ದುಃಖವನ್ನು ಶಮನಗೊಳಿಸುವ ಇನ್ನೊಬ್ಬರ ಜೀವನದಲ್ಲಿ ನಗುವನ್ನು ತರಿಸುವ ಜವಾಬ್ದಾರಿಯನ್ನು ನಾವು ನಿರ್ವಹಿಸಬೇಕಿದೆ ಎಂದು ರೊಟೇರಿಯನ್ ಮಾಜಿ ರಾಜ್ಯಪಾಲ (ಜಿಲ್ಲಾ ಗವರ್ನರ್) ಅಭಿನಂದನ್ ಬಿ.ಶೆಟ್ಟಿ ಹೇಳಿದರು. ಲಯನ್ಸ್ ಕ್ಲಬ್ ನಾಪೋಕ್ಲು ವತಿಯಿಂದ ಸ್ಥಳೀಯ ಕೊಡವ ಸಮಾಜದ ಅಪ್ಪಚ್ಚ ಕವಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಲಯನ್ಸ್ ರೀಜನ್ ಮೀಟ್ “ಬೆಸುಗೆ” ಸಮ್ಮೇಳನವನ್ನು ಉದ್ಘಾಟಿಸಿ ಅವರು ಮಾತನಾಡಿದರು. ವಿವಿಧ ಉದ್ದೇಶಗಳನ್ನು ಹೊತ್ತು ಸಂಘಟನೆಯಲ್ಲಿ ಸದಸ್ಯರು ತೊಡಗಿಸಿಕೊಳ್ಳುತ್ತಾರೆ. ಕೆಲವರು ಒಡನಾಟಕ್ಕಾಗಿ ಕೆಲವರು ಸಮಯ ನಿರ್ವಹಣೆಗಾಗಿ ಇನ್ನು ಕೆಲವರು ಸೇವೆಗಾಗಿ ಸಂಘ ಸಂಸ್ಥೆಗಳನ್ನು ಸೇರುತ್ತಾರೆ. ಸೇವೆ ಎಂಬುದು ಲಯನ್ಸ್ ಸಂಸ್ಥೆಯ ದ್ಯೇಯೋದ್ದೇಶ. ಜೀವನದಲ್ಲಿ ಉತ್ತಮ ಗುರಿಯೊಂದಿಗೆ ಸದ್ದುದ್ದೇಶದೊಂದಿಗೆ ಹಾಗೂ ಸ್ಪೂರ್ತಿಯೊಂದಿಗೆ ಸಾಮಾಜಿಕ ಸೇವೆಗಳನ್ನು ಕೈಗೊಳ್ಳಬೇಕಾಗಿದೆ ಎಂದರು. ಜಪಾನ್ ದೇಶ ಶತ್ರು ರಾಷ್ಟ್ರಗಳಿಂದ ದಾಳಿಗೊಳಗಾಗಿ ಸಂಕಷ್ಟವನ್ನು ಅನುಭವಿಸಿತು. ಅದೇ ಸೋಲನ್ನು ಸವಾಲಾಗಿ ಸ್ವೀಕರಿಸಿ ಇದೀಗ ಆರ್ಥಿಕವಾಗಿ ಸದೃಢ ದೇಶವಾಗಿದೆ. ಜಪಾನಿನ ನಾಗರಿಕರು ಸದೃಢ ದೇಶ ನಿರ್ಮಾಣದ ಪಣತೊಟ್ಟಿದ್ದಾರೆ. ಉತ್ತಮ ದೂರ ದೃಷ್ಟಿ ಹೊಂದಿದ ನಾಯಕತ್ವ ಗುಣಗಳನ್ನು ಹೊಂದಿದ ನೇತಾರರ ಪ್ರಭಾವದಿಂದಾಗಿ ನಾಗರಿಕರು ದೇಶಾಭಿಮಾನ ಬೆಳೆಸಿಕೊಂಡರು. ಯೋಗ್ಯ ನಾಯಕತ್ವದಿಂದ ದೇಶ ಸದೃಢಗೊಳ್ಳಲಿದೆ. ಲಯನ್ಸ್ ಸಂಸ್ಥೆಯ ದ್ಯೇಯೋದ್ದೇಶಗಳಿಂದ ಉತ್ತಮ ಸಮಾಜ ನಿರ್ಮಾಣಗೊಳ್ಳಬೇಕಿದೆ ಎಂದು ಅಭಿಪ್ರಾಯಪಟ್ಟರು. ಲಯನ್ಸ್ ಕ್ಲಬ್‍ಗಳ ಪ್ರಾಂತೀಯ ಅಧ್ಯಕ್ಷ ಡಾ.ಕೋಟೆರ ಪಂಚಮ ತಿಮ್ಮಯ್ಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಇಂತಹ ಸಮ್ಮೇಳನ ಮಾಡಲು ಬಹಳಷ್ಟು ಜನರ ಶ್ರಮ ಹಾಗೂ ಸಹಕಾರದಿಂದ ಸಾಧ್ಯವಾಯಿತು. ನಮ್ಮ ಲಯನ್ಸ್ ಕ್ಲಬ್ ಕೊಡಗು, ಚಿಕ್ಕಮಗಳೂರು, ಹಾಸನ ಮತ್ತು ಮಂಗಳೂರು ರೆವಿನ್ಯೂ ಜಿಲ್ಲೆಗಳನ್ನು ಹೊಂದಿದೆ. ಅದ್ದೂರಿ ಸಮ್ಮೇಳನವನ್ನು ಆಯೋಜಿಸಲಾದ ಕಾರ್ಯಕ್ರಮದಲ್ಲಿ 12 ಕ್ಲಬ್ ಗಳಸಹಯೋಗದಲ್ಲಿ ಉತ್ತಮ ಕಾರ್ಯಕ್ರಮಗಳು ಮೂಡಿಬಂದಿವೆ. ಸಂಘಟನೆಯನ್ನು ಮತ್ತಷ್ಟು ಬಲಪಡಿಸಲು ಎಲ್ಲರ ಸಹಕಾರವನ್ನು ಕೋರಿ ಕೃತಜ್ಞತೆ ಸಲ್ಲಿಸಿದರು. ಕಾರ್ಯಕ್ರಮದಲ್ಲಿ 12 ಕ್ಲಬ್‍ಗಳ ಸೇವೆಯನ್ನು ಪರಿಗಣಿಸಿ ನೆನಪಿನ ಕಾಣಿಕೆಯನ್ನು ನೀಡಿ ಪುರಸ್ಕರಿಸಲಾಯಿತು. ಕಾರ್ಯಕ್ರಮದಲ್ಲಿ ಪ್ರಾಂತಿಯ ರಾಯಬಾರಿ ಲಯನ್ ನವೀನ್ ಅಂಬೆಕಲ್, ವಲಯ ಅಧ್ಯಕ್ಷರುಗಳಾದ ಲಯನ್ ಬಿಂದ್ಯಾ ಗಣಪತಿ, ಲಯನ್ ಸಿ.ಟಿ.ಅಪ್ಪಣ್ಣ, ಲಯನ್ ನಟರಾಜ ಕೆಸ್ತೂರು, ಪ್ರಾಂತ್ಯ ಅಧ್ಯಕ್ಷರುಗಳು, ಸಮ್ಮೇಳನ ಅಧ್ಯಕ್ಷೆ ಲಯನ್ ಕೇಟೋಳಿರ ರತ್ನ ಚರ್ಮಣ್ಣ, ಕಾರ್ಯದರ್ಶಿ ಲಯನ್ ಮುಕ್ಕಾಟಿರ ವಿನಯ್, ಖಜಾಂಚಿ ಲಯನ್ ಎಳ್ತ ತಂಡ ಬಿ.ಬೋಪಣ್ಣ, ನಾಪೋಕ್ಲು ಲಯನ್ಸ್ ಕ್ಲಬ್ ಅಧ್ಯಕ್ಷ ಲಯನ್ ಮಾದೆಯಂಡ ಬಿ.ಕುಟ್ಟಪ್ಪ, ಕಾರ್ಯದರ್ಶಿ ಲಯನ್ ಅಪ್ಪುಮಣಿಯಂಡ ಬನ್ಸಿ ಭೀಮಯ್ಯ, ಖಜಾಂಚಿ ಲಯನ್ ಅಪ್ಪಚೆಟ್ಟೋಳಂಡ ವಸಂತ್ ಮುತ್ತಪ್ಪ, ಲಿಯೋ ಕ್ಲಬ್ಬಿನ ಅಧ್ಯಕ್ಷ ಬಿ.ಕೆ.ಕನ್ನಿಕ, ಕಾರ್ಯದರ್ಶಿ ಎಂ.ಪಿ.ಧ್ರುವ ದೇವಯ್ಯ, ಖಜಾಂಚಿ ಸಿ.ಅನನ್ಯ ಅಯ್ಯಪ್ಪ, ಪ್ರಾಂತೀಯಕ್ಕೆ ಒಳಪಟ್ಟ 11 ಲಯನ್ಸ್ ಕ್ಲಬ್ ಗಳ ಅಧ್ಯಕ್ಷರು, ಪದಾಧಿಕಾರಿಗಳ, ಹಾಗೂ ಕುಟುಂಬದ ಸದಸ್ಯರು ಉಪಸ್ಥಿತರಿದ್ದರು. ಇದಕ್ಕೂ ಮೊದಲು 12 ಲಯನ್ಸ್ ಕ್ಲಬ್ ಗಳ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಸದಸ್ಯರು ತಮ್ಮ ತಮ್ಮ ಕ್ಲಬ್ಬಿನ ಬ್ಯಾನರ್‍ಗಳೊಂದಿಗೆ ಆಗಮಿಸಿದಾಗ ಅವರನ್ನು ಗೌರವಪೂರ್ಣವಾಗಿ ಬರಮಾಡಿಕೊಳ್ಳಲಾಯಿತು. ರೊಟೇರಿಯನ್ ಮಾಜಿ ರಾಜ್ಯಪಾಲ ಅಭಿನಂದನ್ ಬಿ. ಶೆಟ್ಟಿ ಅವರನ್ನು ಅಂಕುರು ಶಾಲಾ ವಿದ್ಯಾರ್ಥಿಗಳ ಎನ್ ಸಿ ಸಿ ಬ್ಯಾಂಡ್ ಮೇಲಾಗದೊಂದಿಗೆ ಸ್ವಾಗತಿಸಲಾಯಿತು. ಕಾಂಡಂಡ ರೇಖಾ ಪೊನ್ನಣ್ಣ ಅವರ ಪ್ರಾರ್ಥನೆಯೊಂದಿಗೆ ಪ್ರಾರಂಭಗೊಂಡ ಕಾರ್ಯಕ್ರಮವನ್ನು ರತ್ನ ಚರ್ಮಣ ಸ್ವಾಗತಿಸಿ ಕುಂಚೆಟ್ಟೀರ ರೇಷ್ಮಾ ಉತ್ತಪ್ಪ ನಿರೂಪಿಸಿ ವಿನಯ್ ವಂದಿಸಿದರು.

ವರದಿ : ದುಗ್ಗಳ ಸದಾನಂದ.

 

Share. Facebook Twitter Pinterest LinkedIn Tumblr Email WhatsApp
Previous Article*ಕೊಡಗು ವಿಶ್ವವಿದ್ಯಾಲಯದಲ್ಲಿ ಕುವೆಂಪು ಜನ್ಮೋತ್ಸವ : ರಾಷ್ಟ್ರಕವಿ ಕುವೆಂಪು ಅವರ ‘ವಿಶ್ವಮಾನವ ಸಂದೇಶ‘ ಸಾರ್ವಕಾಲಿಕ : ಪ್ರೊ.ಅಶೋಕ ಸಂಗಪ್ಪ ಆಲೂರ ಅಭಿಪ್ರಾಯ*
Next Article *ಕೊಡಗು ವಿದ್ಯಾ ಇಲಾಖಾ ನೌಕರರ ಪತ್ತಿನ ಸಹಕಾರ ಸಂಘದಿಂದ ಶಾಸಕ ಎ.ಎಸ್.ಪೊನ್ನಣ್ಣರಿಗೆ ಸನ್ಮಾನ : ಶತ ಸಂಭ್ರಮಕ್ಕೆ ಆಹ್ವಾನ*

Recommended: Website design development company services in Mangalore Forex Trading Teacher in India

Related Posts

*ಡೊನಾಲ್ಡ್ ಟ್ರಂಪ್ ಮೆಚ್ಚಿದ ಆ ‘ಒಂದು’ ನಿರ್ಧಾರ ಯಾವುದು? ಭಾರತಕ್ಕೆ ಸಿಗಲಿದೆ ಅತಿದೊಡ್ಡ ಆರ್ಥಿಕ ಲಾಭ!*

February 12, 2026

*ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*

February 12, 2026

*ಬಿಸಾಡಿದ ಬಾಟಲಿಗಳಿಂದ ಮತ್ತೆ ಗ್ಲಾಸಿಗೆ? ದೆಹಲಿ ಸ್ಟೇಡಿಯಂ ಸಿಬ್ಬಂದಿಯ ಈ ಕರ್ಮಕಾಂಡ ನೋಡಿ ನೀವೂ ವಾಕರಿಕೆ ಮಾಡ್ಕೊತೀರಾ!*

February 12, 2026

*ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*

February 12, 2026

ಸಿಯಾಟಲ್ (ಅಮೆರಿಕಾ): ಕಳೆದ ಎರಡು ವರ್ಷಗಳಿಂದ ಇಡೀ ಜಗತ್ತಿನ ಗಮನ ಸೆಳೆದಿದ್ದ ಭಾರತೀಯ ವಿದ್ಯಾರ್ಥಿನಿ ಜಾಹ್ನವಿ ಕಂದುಲಾ ಅವರ ಸಾವಿನ…

*ಬಿಸಾಡಿದ ಬಾಟಲಿಗಳಿಂದ ಮತ್ತೆ ಗ್ಲಾಸಿಗೆ? ದೆಹಲಿ ಸ್ಟೇಡಿಯಂ ಸಿಬ್ಬಂದಿಯ ಈ ಕರ್ಮಕಾಂಡ ನೋಡಿ ನೀವೂ ವಾಕರಿಕೆ ಮಾಡ್ಕೊತೀರಾ!*

February 12, 2026

*ಚಿನ್ನಸ್ವಾಮಿಯಲ್ಲಿ ಮತ್ತೆ ಮೊಳಗಲಿದೆ RCB.. RCB.. ಸದ್ದು! ಸರ್ಕಾರದ ಗ್ರೀನ್ ಸಿಗ್ನಲ್ ಸಿಕ್ಕಿದ್ದು ಹೇಗೆ? ಅಭಿಮಾನಿಗಳೇ ಈಗಲೇ ರೆಡಿಯಾಗಿ!*

February 12, 2026

*ಕರೆಂಟ್ ಬಿಲ್ ನೋಡಿ ಬೆಚ್ಚಿಬೀಳಬೇಡಿ! ರಾಜ್ಯದಲ್ಲಿ ವಿದ್ಯುತ್ ದರ ಏರಿಕೆಗೆ ಕ್ಷಣಗಣನೆ; ಯಾರಿಗೆ ಎಷ್ಟು ಹೊರೆ?*

February 12, 2026

*ಶಾಲೆ ಪ್ರವಾಸಕ್ಕೆ ಟ್ರಕ್ ಬಳಕೆ: ಪೋಷಕರು ಫುಲ್ ಗರಂ! ಹೆಡ್‌ಮಾಸ್ಟರ್ ಅಮಾನತು ಹಿಂದಿನ ಅಸಲಿ ಕಥೆ ಇಲ್ಲಿದೆ*

February 12, 2026

*ಕೊಡಗಿಗೆ ಭೇಟಿ ನೀಡಿದ ಪೊಲೀಸ್ ಮಹಾ ನಿರೀಕ್ಷಕರು*

February 12, 2026

*ಕುಶಾಲನಗರದಲ್ಲಿ ಒಣ ಕಸ ಸಂಗ್ರಹ ಘಟಕ ಉದ್ಘಾಟನೆ*

February 12, 2026

*ಭ್ರಷ್ಟಾಚಾರದ ಪ್ರಮಾಣ ಹೆಚ್ಚಾಗಿದೆ : ಗುತ್ತಿಗೆದಾರರ ಸಂಘ ಗಂಭೀರ ಆರೋಪ*

February 12, 2026

*ಕೇಂದ್ರ ಸರಕಾರದ ವಿರುದ್ಧ ಮಡಿಕೇರಿಯಲ್ಲಿ ಕಾರ್ಮಿಕ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ*

February 12, 2026

*ಮಾಂದಲ್ ಪಟ್ಟಿ; ಸಾರ್ವಜನಿಕರು ಮತ್ತು ಪ್ರವಾಸಿಗರ ಗಮನಕ್ಕೆ*

February 12, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.