Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಏ.6 ರಿಂದ ಕೊಡವ ಕ್ರಿಕೆಟ್ ಲೆದರ್ ಬಾಲ್ ಪ್ರೀಮಿಯರ್ ಲೀಗ್ ಸೀಸನ್-3 ಆರಂಭ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಏ.6 ರಿಂದ ಕೊಡವ ಕ್ರಿಕೆಟ್ ಲೆದರ್ ಬಾಲ್ ಪ್ರೀಮಿಯರ್ ಲೀಗ್ ಸೀಸನ್-3 ಆರಂಭ

ಜನವರಿ 6, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಮಡಿಕೇರಿ ಜ.6 NEWS DESK : ಕೂರ್ಗ್ ಕ್ರಿಕೆಟ್ ಫೌಂಡೇಶನ್ ವತಿಯಿಂದ ಏ.6 ರಿಂದ ಏ.19 ರವರೆಗೆ ಕೊಡವ ಕ್ರಿಕೆಟ್ ಲೆದರ್ ಬಾಲ್ ಪ್ರೀಮಿಯರ್ ಲೀಗ್ ಸೀಸನ್-3 ಕ್ರಿಕೆಟ್ ಪಂದ್ಯಾವಳಿಯನ್ನು ಗೋಣಿಕೊಪ್ಪದಲ್ಲಿ ಆಯೋಜಿಸಲಾಗಿದೆ ಎಂದು ಫೌಂಡೇಶನ್‍ನ ಅಧ್ಯಕ್ಷ ಪೊರುಕೊಂಡ ಸುನಿಲ್ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಗೋಣಿಕೊಪ್ಪದ ಕಾವೇರಿ ಕಾಲೇಜು ಮೈದಾನದಲ್ಲಿ 14 ದಿನಗಳ ಕಾಲ ಐಪಿಎಲ್ ಮಾದರಿಯಲ್ಲಿ ಪಂದ್ಯಾವಳಿ ನಡೆಯಲಿದ್ದು, ಎಲ್ಲಾ ಕೊಡವ ಭಾಷಿಕ ಜನಾಂಗದವರಿಗೆ ಅವಕಾಶ ಕಲ್ಪಿಸಲಾಗಿದೆ. ಕೊಡಗು ಮಾತ್ರವಲ್ಲದೆ ಜಿಲ್ಲೆಯ ಹೊರಗೆ ನೆಲೆಸಿರುವ ಕೊಡವರು ಹಾಗೂ ಕೊಡವ ಭಾಷಿಕರು ಕೂಡ ಪಂದ್ಯಾವಳಿಯಲ್ಲಿ ಭಾಗವಹಿಸಬಹುದಾಗಿದೆ ಎಂದು ಹೇಳಿದರು. ಸೀಸನ್-3ರ ವಿಜೇತರಿಗೆ ಪ್ರಥಮ ರೂ.2 ಲಕ್ಷ, ದ್ವಿತೀಯ 1 ಲಕ್ಷ ಹಾಗೂ ತೃತೀಯ 50 ಸಾವಿರ ನಗದು ಮತ್ತು ಆಕರ್ಷಕ ಟ್ರೋಫಿ ಹಾಗೂ ವೈಯಕ್ತಿಕ ಬಹುಮಾನ ನೀಡಿ ಗೌರವಿಸಲಾಗುವುದು. ಅಲ್ಲದೇ ಪ್ರತಿ ಪಂದ್ಯಾವಳಿಯಲ್ಲಿ ಮ್ಯಾನ್‍ಆಫ್‍ದಿ ಮ್ಯಾಚ್ ಆಕರ್ಷಕ ಟ್ರೋಫಿ ನೀಡಲಾಗುವುದು ಎಂದು ತಿಳಿಸಿದರು. ಕಳೆದ ಬಾರಿ 175 ಆಟಗಾರರು ಪಾಲ್ಗೊಂಡಿದ್ದು, ಈ ಬಾರಿ 180ಕ್ಕೂ ಅಧಿಕ ಕ್ರೀಡಾಪಟುಗಳು ಆಡಲಿದ್ದಾರೆ. ಈಗಾಗಲೇ 12 ತಂಡಗಳು ಆಯ್ಕೆಯಾಗಿದ್ದು, ಹಳೆಯ ಹತ್ತು ಹಾಗೂ ಎರಡು ಹೊಸ  ಫ್ರಾಂಚೈಸಿಗಳು ಹರಾಜು ಪ್ರಕ್ರಿಯೆಯ ಮೂಲಕ ಆಟಗಾರರನ್ನು ಆಯ್ಕೆ ಮಾಡಲಿದ್ದಾರೆ. ಆಟಗಾರರು ಆನ್‍ಲೈನ್ ಮುಖಾಂತರ ಹೆಸರು ನೋಂದಾಯಿಸಿಕೊಳ್ಳಬಹುದಾಗಿದ್ದು, ಲಿಂಕ್‍ನ್ನು ಶೀಘ್ರದಲ್ಲೇ ತಿಳಿಸಲಾಗುವುದು ಎಂದರು. ಪ್ರತಿದಿನ ಎರಡು ಟಿ-20 ಪಂದ್ಯಾವಳಿಯನ್ನು ಆಯೋಜಿಸಲಾಗಿದ್ದು, ಕೊಡಗು, ಮೈಸೂರು, ಮಂಗಳೂರು, ಚೆನ್ನೈ, ಪಾಂಡಿಚೇರಿ ಸೇರಿದಂತೆ ಉತ್ತರ ಭಾರತದ ಪ್ರತಿಷ್ಠಿತ ಆಟಗಾರರು ಕೂಡ ಪಂದ್ಯಾವಳಿಯಲ್ಲಿ ಪಾಲ್ಗೊಳ್ಳಲಿದ್ದಾರೆ. ಯೂಟ್ಯೂಬ್ ಚಾನೆಲ್ ನಲ್ಲಿ ಪಂದ್ಯಾವಳಿಯ ನೇರ ಪ್ರಸಾರ ಇರಲಿದೆ. ಹೆಚ್ಚಿನ ಮಾಹಿತಿಗೆ 9945122952, 9686107297 ಸಂಪರ್ಕಿಸಬಹುದಾಗಿದೆ ಎಂದು ಸುನಿಲ್ ಹೇಳಿದರು.  ಉಪಾಧ್ಯಕ್ಷ ಪಾಲಚಂಡ ಜಗನ್ ಉತ್ತಪ್ಪ ಮಾತನಾಡಿ, ಪಂದ್ಯಾವಳಿಯು ಅಂತರಾಷ್ಟ್ರೀಯ ನಿಯಮಗಳಿಗೆ ಒಳಪಟ್ಟಂತೆ ನಡೆಯಲಿದ್ದು, ಸಮುದಾಯದ ಯುವ ಪ್ರತಿಭೆಗಳು ಇದನ್ನು ಸದುಪಯೋಗ ಪಡಿಸಿಕೊಳ್ಳಲು ಸಲಹೆ ನೀಡಿದರು.  ಕಾರ್ಯದರ್ಶಿ ಕೀತಿಯಂಡ ಗಣಪತಿ ಮಾತನಾಡಿ, ಕೊಡಗಿನ ಕ್ರೀಡಾ ಪ್ರತಿಭೆಗಳು ಲೆದರ್ ಬಾಲ್ ಕ್ರಿಕೆಟ್ ನಲ್ಲಿ ತೊಡಗಿಸಿಕೊಂಡರೆ ಉತ್ತಮ ಭವಿಷ್ಯವಿದೆ. ಪ್ರತಿಭಾವಂತ ಯುವಕರನ್ನು ಗುರುತಿಸಿ ಅವರಿಗೆ ಕ್ರೀಡೆಯ ಬಗ್ಗೆ ಮಾರ್ಗದರ್ಶನ ನೀಡಿ, ಉದ್ಯೋಗ ಕಲ್ಪಿಸುವ ನಿಟ್ಟಿನಲ್ಲಿ ಕೂರ್ಗ್ ಕ್ರಿಕೆಟ್ ಫೌಂಡೇಶನ್ ಲೆದರ್ ಬಾಲ್ ಪ್ರೀಮಿಯರ್ ಲೀಗ್ ಪಂದ್ಯಾವಳಿಗೆ ಉತ್ತೇಜನ ನೀಡುತ್ತಿದೆ ಎಂದು ತಿಳಿಸಿದರು. ಪಂದ್ಯಾವಳಿಯ ನಿರ್ವಾಹಕ ಮಡ್ಲಂಡ ದರ್ಶನ್ ಮಾತನಾಡಿ, ಮೊದಲು ಬರುವ 180 ಆಟಗಾರರಿಗೆ ಅವಕಾಶ ಕಲ್ಪಿಸಲಾಗುವುದು ಎಂದರು. ಸುದ್ದಿಗೋಷ್ಠಿಯಲ್ಲಿ ಫೌಂಡೇಶನ್‍ನ ಸಂಚಾಲಕ ಅಣ್ಣಳಮಾಡ ರಾಯ್ ಚಿಣ್ಣಪ್ಪ ಹಾಗೂ ನಿರ್ದೇಶಕರಾದ ಕುಲ್ಲೇಟಿರ ಶಾಂತ ಕಾಳಪ್ಪ ಉಪಸ್ಥಿತರಿದ್ದರು.

 

 

 

 

Follow us Follow us
Share. WhatsApp Facebook Twitter Email Telegram Copy Link

Related Posts

ನ.11ರಂದು ಕಡಂಗದಲ್ಲಿ ಸಿಎನ್‌ಸಿಯಿಂದ 9ನೇ ಶಾಂತಿಯುತ ಮಾನವ ಸರಪಳಿ ಕಾರ್ಯಕ್ರಮ

ನವೆಂಬರ್ 7, 2026

ನ.11ರಿಂದ ಕೊಡಗು ಜಿಲ್ಲೆಯಲ್ಲಿ ಖಾಸಗಿ ಬಸ್ ಪ್ರಯಾಣ ದರ ಶೇ.15ರಿಂದ 20ರಷ್ಟು ಹೆಚ್ಚಳ

ನವೆಂಬರ್ 7, 2026

ನ.8ರಂದು ನಾಪೋಕ್ಲು ಕೊಡವ ಸಮಾಜದ 26ನೇ ವಾರ್ಷಿಕ ಮಹಾಸಭೆ

ನವೆಂಬರ್ 7, 2026

ನ.11ರಿಂದ ಕೊಡಗು ಜಿಲ್ಲೆಯಲ್ಲಿ ಖಾಸಗಿ ಬಸ್ ಪ್ರಯಾಣ ದರ ಶೇ.15ರಿಂದ 20ರಷ್ಟು ಹೆಚ್ಚಳ

ನವೆಂಬರ್ 7, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ನ.7: ಇಂಧನ ಹಾಗೂ ವಾಹನಗಳ ಬಿಡಿಭಾಗಗಳ ಬೆಲೆ ಏರಿಕೆಯ ಹಿನ್ನೆಲೆಯಲ್ಲಿ ಕೊಡಗು ಜಿಲ್ಲಾ ವ್ಯಾಪ್ತಿಯ ಖಾಸಗಿ…

ನ.8ರಂದು ನಾಪೋಕ್ಲು ಕೊಡವ ಸಮಾಜದ 26ನೇ ವಾರ್ಷಿಕ ಮಹಾಸಭೆ

ನವೆಂಬರ್ 7, 2026

ನ.14ರಿಂದ ಶ್ರೀ ಕ್ಷೇತ್ರ ಕಬ್ಬಳ್ಳಿ ಬಸವೇಶ್ವರ ಸ್ವಾಮಿ ದೇವಸ್ಥಾನದ ಲೋಕಾರ್ಪಣೆ ಹಾಗೂ ಮಹಾಕುಂಭಾಭಿಷೇಕ ಮಹೋತ್ಸವ

ನವೆಂಬರ್ 7, 2026

ರಸ್ತೆ ಅಪಘಾತ ತಡೆಗೆ ಕಠಿಣ ಕ್ರಮ ಕೈಗೊಳ್ಳಿ: ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್

ನವೆಂಬರ್ 7, 2026

ಸುಂಟಿಕೊಪ್ಪಕ್ಕೂ ಕನ್ನಡ ಸಾಹಿತ್ಯ ಕ್ಷೇತ್ರಕ್ಕೂ ಅವಿನಾಭಾವ ಸಂಬಂಧ: ಪಿ.ಎಫ್. ಸೆಬಾಸ್ಟಿನ್

ನವೆಂಬರ್ 7, 2026

ಸೋಮವಾರಪೇಟೆ ಮಾಸ್ಟರ್ ಪ್ಲಾನ್ ರಚನೆಗೆ ಸಾರ್ವಜನಿಕರಿಂದ ಸಲಹೆ ಆಹ್ವಾನ

ನವೆಂಬರ್ 7, 2026

ನಾಂಗಾಲ ಗ್ರಾಮದಲ್ಲಿ ಮಹಿಳಾ ಸಮಾಜದ ನೂತನ ಕಟ್ಟಡಕ್ಕೆ ಭೂಮಿಪೂಜೆ

ನವೆಂಬರ್ 7, 2026

ಕುಶಾಲನಗರದಲ್ಲಿ ಕರ್ಕಶ ಡಿಜೆ ಸೌಂಡ್: ಮೂರು ಪ್ರವಾಸಿ ಬಸ್‌ಗಳಿಗೆ ದಂಡ

ನವೆಂಬರ್ 7, 2026

ಕ.ಸಾ.ಪ.ವತಿಯಿಂದ ಕುಶಾಲನಗರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಗಂಗಮ್ಮ ರಾಚಪ್ಪ ದತ್ತಿನಿಧಿ ಉಪನ್ಯಾಸ; ಕನ್ನಡ ಸಾಹಿತ್ಯಕ್ಕೆ ಕುವೆಂಪು ಅವರ ಕೊಡುಗೆ ಅನನ್ಯ: ಬಿ.ಬಿ.ಹೇಮಲತಾ ಬಣ್ಣನೆ

ನವೆಂಬರ್ 7, 2026

ಕೃಷಿ ಪದ್ಧತಿಗೆ ವಿರುದ್ಧವಾಗಿ ಕಟ್ಟಡಗಳ ನಿರ್ಮಾಣ: ಕೊಡಗಿನ ಭೌಗೋಳಿಕ ಚಿತ್ರಣವೇ ಬದಲು; ಕೃಷಿ ಭೂಮಿಗಳ ಮಾರಾಟದಿಂದ ಪರಿಸರಕ್ಕೆ ಧಕ್ಕೆ: ಅಮ್ಮತ್ತಿ ರೈತ ಸಂಘ ಆತಂಕ

ನವೆಂಬರ್ 7, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.