Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*
  • *ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*
  • *ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*
  • *ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*
  • *ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*
  • *ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*
  • *2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*
  • *ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*
  • *ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*
  • *ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಜ.9 ರಿಂದ 11ರ ವರೆಗೆ ಮಡಿಕೇರಿಯಲ್ಲಿ ಸರಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಜ.9 ರಿಂದ 11ರ ವರೆಗೆ ಮಡಿಕೇರಿಯಲ್ಲಿ ಸರಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆ*

ಜನವರಿ 7, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜ.7 NEWS DESK : ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಕೊಡಗು ಜಿಲ್ಲಾ ಘಟಕದ ವತಿಯಿಂದ ಜ.9 ರಿಂದ 11ರ ವರೆಗೆ ನಗರದಲ್ಲಿ ಜಿಲ್ಲಾ ಮಟ್ಟದ ಸರಕಾರಿ ನೌಕರರ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ ಎಂದು ಸಂಘದ ಜಿಲ್ಲಾಧ್ಯಕ್ಷ ಎಂ.ಸಿ.ಅರುಣ್ ಕುಮಾರ್ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಕೊಡಗು ಶಾಖೆ ಸಂಯುಕ್ತಾಶ್ರಯದಲ್ಲಿ ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಮೂರು ದಿನಗಳ ಕಾಲ ಪಂದ್ಯಾವಳಿ ನಡೆಯಲಿದೆ ಎಂದರು. ಕಾರ್ಯಕ್ರಮವನ್ನು ಜ.9 ರಂದು ಬೆಳಗ್ಗೆ 11 ಗಂಟೆಗೆ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು ಉದ್ಘಾಟಿಸಲಿದ್ದು, ಅಧ್ಯಕ್ಷತೆಯನ್ನು ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ವಹಿಸಲಿದ್ದಾರೆ ಎಂದು ತಿಳಿಸಿದರು. ಮುಖ್ಯ ಅತಿಥಿಗಳಾಗಿ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ, ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ರಾಜ್ಯಸಭೆ ಸಂಸದ ಅಜಯ್ ಮಾಕನ್, ವಿಧಾನ ಪರಿಷತ್ ಸದಸ್ಯರಾದ ಎಂ.ಪಿ.ಸುಜಾ ಕುಶಾಲಪ್ಪ, ಎಸ್.ಎಲ್.ಭೋಜೇಗೌಡ, ಡಾ.ಧನಂಜಯ ಸರ್ಜಿ, ಕರ್ನಾಟಕ ಕ್ರೀಡಾ ಪ್ರಾಧಿಕಾರ ಉಪಾಧ್ಯಕ್ಷ ಸಿ.ಎಸ್.ಅರುಣ್ ಮಾಚಯ್ಯ, ನಗರಸಭೆ ಅಧ್ಯಕ್ಷೆ ಕಲಾವತಿ, ಜಿಲ್ಲಾ ಗ್ಯಾರಂಟಿ ಯೋಜನೆಯ ಅನುಷ್ಠಾನ ಸಮಿತಿ ಅಧ್ಯಕ್ಷ ಟಿ.ಎಂ.ಧರ್ಮಜ ಉತ್ತಪ್ಪ, ಕೊಡಗು ಜಿ.ಪಂ ಆಡಳಿತಾಧಿಕಾರಿ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಎನ್.ವಿ.ಪ್ರಸಾದ್ ಪಾಲ್ಗೊಳ್ಳಲಿದ್ದಾರೆ. ವಿಶೇಷ ಆಹ್ವಾನಿತರಾಗಿ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಎನ್.ಬಿಂದುಮಣಿ, ಜಿ.ಪಂ ಕಾರ್ಯನಿರ್ವಹಣಾಧಿಕಾರಿ ಆನಂದ್ ಪ್ರಕಾಶ್ ಮೀನಾ, ಹೆಚ್ಚುವರಿ ಜಿಲ್ಲಾಧಿಕಾರಿ ಐಶ್ವರ್ಯ ಆರ್, ಉಪ ವಿಭಾಗಾಧಿಕಾರಿ ನಿತಿನ್ ಚಕ್ಕಿ, ಮಡಿಕೇರಿ ತಾಲ್ಲೂಕು ತಹಶೀಲ್ದಾರ್ ಶ್ರೀಧರ್ ಆರ್ ಭಾಗವಹಿಸಲಿದ್ದಾರೆ ಎಂದರು. ಆರಂಭಿಕ ದಿನವಾದ ಜ.9 ರಂದು ಅಥ್ಲೆಟಿಕ್ಸ್ ಕ್ರೀಡಾಕೂಟ ನಡೆಯಲಿದ್ದು, ಜ.10 ರಂದು ಸಾಂಸ್ಕೃತಿಕ ಸ್ಪರ್ಧೆಗಳು ಹಾಗೂ ಮಧ್ಯಾಹ್ನ 2 ಗಂಟೆಗೆ ವಾರ್ಷಿಕ ಮಹಾಸಭೆ ನಡೆಯಲಿದೆ. ಅಲ್ಲದೆ ಜ.11 ರಂದು ಶಟಲ್ ಬ್ಯಾಡ್ಮಿಂಟನ್, ಚೆಸ್, ಕೇರಂ, ಟೇಬಲ್ ಟೆನ್ನಿಸ್ ಸೇರಿದಂತೆ ಒಳಾಂಗಣ ಕ್ರೀಡಾಕೂಟ ನಡೆಯಲಿದೆ. ಕ್ರೀಡಾಪಟುಗಳು ಬೆಳಗ್ಗೆ 9.30 ರೊಳಗೆ ಕಡ್ಡಾಯವಾಗಿ ನೋಂದಾವಣಿ ಕೌಂಟರ್‍ನಲ್ಲಿ ನೋಂದಾಯಿಸಿಕೊಳ್ಳುವಂತೆ ತಿಳಿಸಿದರು. ಕ್ರೀಡಾಕೂಟಕ್ಕೆ ಈಗಾಗಲೇ ಮಡಿಕೇರಿ 225, ಸೋಮವಾರಪೇಟೆ 184, ವಿರಾಜಪೇಟೆ ತಾಲ್ಲೂಕಿನಿಂದ 115 ಕ್ರೀಡಾಪಟುಗಳು ಸೇರಿ ಒಟ್ಟು 524 ಕ್ರೀಡಾಪಟುಗಳು ನೋಂದಾಯಿಸಿಕೊಂಡಿದ್ದಾರೆ. ಕ್ರೀಡಾಕೂಟದಲ್ಲಿ ಸುಮಾರು 700ರಕ್ಕಿಂತಲೂ ಹೆಚ್ಚು ನೌಕರರು ಭಾಗವಹಿಸುವ ನಿರೀಕ್ಷೆ ಇದ್ದು, ಜಿಲ್ಲೆಯ ನೌಕರರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಎಂ.ಸಿ.ಅರುಣ್ ಕುಮಾರ್ ಮನವಿ ಮಾಡಿದರು.
ಕ್ರೀಡಾಕೂಟದಲ್ಲಿ ಭಾಗವಹಿಸುವ ನೌಕರರಿಗೆ ಹಾಜರಾತಿ ಪ್ರಮಾಣ ಪತ್ರ ಸಂಘದ ವತಿಯಿಂದ ನೀಡಲಾಗುವುದೆಂದು ತಿಳಿಸಿದರು. ಕ್ರೀಡಾಕೂಟದ ಹೆಚ್ಚಿನ ಮಾಹಿತಿಗಾಗಿ ಎಂ.ಸಿ. ಅರುಣ್ ಕುಮಾರ್ ಮೊ.9480917707, ಬಿ.ಜಿ. ಸಂದೀಪ ಮೊ.9482451488ನ್ನು ಸಂಪರ್ಕಿಸಬಹುದು. ಸುದ್ದಿಗೋಷ್ಠಿಯಲ್ಲಿ ಸಂಘದ ಜಿಲ್ಲಾ ಕಾರ್ಯದರ್ಶಿ ಬಿ.ಜಿ.ಸಂದೀಪ, ಜಿಲ್ಲಾ ಖಜಾಂಚಿ ಪಿ.ಡಿ.ರಾಜೇಶ್ ಹಾಗೂ ರಾಜ್ಯ ಪರಿಷತ್ ಸದಸ್ಯ ಪಿ.ಎಂ.ಬಾಬು ಉಪಸ್ಥಿತರಿದ್ದರು.

 

Follow us Follow us
Share. WhatsApp Facebook Twitter Email Telegram Copy Link

Related Posts

*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಸೆ.26: ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್…

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*

ಸೆಪ್ಟೆಂಬರ್ 26, 2026

*ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*

ಸೆಪ್ಟೆಂಬರ್ 26, 2026

*ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*

ಸೆಪ್ಟೆಂಬರ್ 26, 2026

*2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*

ಸೆಪ್ಟೆಂಬರ್ 26, 2026

*ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*

ಸೆಪ್ಟೆಂಬರ್ 26, 2026

*ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*

ಸೆಪ್ಟೆಂಬರ್ 26, 2026

*ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*

ಸೆಪ್ಟೆಂಬರ್ 26, 2026

*36 ವರ್ಷ ಸೇವೆ ಸಲ್ಲಿಸಿದ ಅಂಗನವಾಡಿ ಕಾರ್ಯಕರ್ತೆ ದೇವಮಾಜಿ, ಶಿಕ್ಷಕಿ ಭೋಜಮ್ಮಗೆ ಆತ್ಮೀಯ ಬೀಳ್ಕೊಡುಗೆ*

ಸೆಪ್ಟೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.