Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಜನ ಸಂಪರ್ಕ ಸಭೆ : ಜನರ ಸಮಸ್ಯೆ, ಅಹವಾಲು ಸ್ವೀಕರಿಸಿ ಪರಿಹಾರ ದೊರಕಿಸಿಕೊಡುವುದು ನನ್ನ ಗುರಿ : ಸಂಸದ ಯದುವೀರ್‌ ಒಡೆಯರ್‌
ಇತ್ತೀಚಿನ ಸುದ್ದಿಗಳು ಕರ್ನಾಟಕ

ಜನ ಸಂಪರ್ಕ ಸಭೆ : ಜನರ ಸಮಸ್ಯೆ, ಅಹವಾಲು ಸ್ವೀಕರಿಸಿ ಪರಿಹಾರ ದೊರಕಿಸಿಕೊಡುವುದು ನನ್ನ ಗುರಿ : ಸಂಸದ ಯದುವೀರ್‌ ಒಡೆಯರ್‌

ಜನವರಿ 7, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಮೈಸೂರು ಜ.7 NEWS DESK : ಸಾರ್ವಜನಿಕರ ಸಮಸ್ಯೆಗಳು/ಅಹವಾಲುಗಳನ್ನು ಸ್ವೀಕರಿಸುವುದು ಮಾತ್ರವಲ್ಲ, ಅದಕ್ಕೆ ಪರಿಹಾರ ಕೊಡುವುದಕ್ಕೆ ಕೂಡ ನಾನು ಆದ್ಯತೆ ನೀಡುತ್ತೇನೆ. ಈಗಾಗಲೇ ಹಲವಾರು ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಎಂದು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದರಾದ ಶ್ರೀ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ತಿಳಿಸಿದ್ದಾರೆ. ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ನಾಗನಹಳ್ಳಿ ಗ್ರಾಮದ ಲಕ್ಷ್ಮಿದೇವಿ ಆವರಣದಲ್ಲಿ, ಬೆಲವತ್ತ ಗ್ರಾಮದ ಸಮುದಾಯ ಭವನದಲ್ಲಿ, ಆಲನಹಳ್ಳಿಯ ಬಸವೇಶ್ವರ ದೇವಸ್ಥಾನ ಆವರಣದಲ್ಲಿ ಜನ ಸಂಪರ್ಕ ಸಭೆ ನಡೆಸಿದ ನಂತರ ಸಂಸದರು ಮಾಹಿತಿ ನೀಡಿದ್ದಾರೆ. “ಜನ ಸಂಪರ್ಕ ಸಭೆಗಳು ಮೂಲಕ ಜನರೊಂದಿಗೆ ನಂಟು ಬೆಳೆಯಲು ಅವರ ಸಮಸ್ಯೆಗಳನ್ನು ಖುದ್ದಾಗಿ ತಿಳಿಯಲು ಅನುಕೂಲವಾಗಲಿದೆ ಎಂದರು. ಪ್ರತಿ ಪಂಚಾಯತ್‌ಗೆ ಭೇಟಿ ನೀಡಿ ಜನರ ಸಮಸ್ಯೆಯನ್ನು ಅರ್ಥಮಾಡಿಕೊಳ್ಳುವುದಲ್ಲದೆ ಅವುಗಳನ್ನು ತ್ವರಿತವಾಗಿ ಪರಿಹರಿಸಲು ಆದ್ಯತೆ ನೀಡುತ್ತೇವೆ. ರೈಲ್ವೆ, ರಸ್ತೆ ಮತ್ತು ಶಾಲಾ ಅಭಿವೃದ್ಧಿ ಮತ್ತು ಕೆಎಸ್‌ಆರ್‌ಟಿಸಿ ಬಸ್ ಸಮಸ್ಯೆಗಳ ಬಗ್ಗೆ ನನಗೆ ಹಲವಾರು ಅಹವಾಲುಗಳು ಸಲ್ಲಿಕೆಯಾಗಿದೆ. ಅದೆಲ್ಲವನ್ನು ಬಗೆಹರಿಸಲು ಮುಂದಾಗುತ್ತೇನೆ, ಕೆಲವೊಂದು ಸಮಸ್ಯೆಗಳಿಗೆ ಸ್ಥಳದಲ್ಲೇ ಅಧಿಕಾರಿಗಳಿಗೆ ತಿಳಿಸಿ ಪರಿಹಾರ ದೊರಕಿಸಿಕೊಟ್ಟಿದ್ದೇವೆ ಎಂದರು. ನಾಗರಿಕರು ಅಧಿಕಾರಿಗಳಿಗೆ ಅಹವಾಲು ಸಲ್ಲಿಸಿದಾಗಲೂ ತ್ವರಿತವಾಗಿ ಕ್ರಮ ಕೈಗೊಳ್ಳಬೇಕು. ಈ ನಿಟ್ಟಿನಲ್ಲಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಅಗತ್ಯವಿದ್ದರೆ ನಾನೇ ಇಲಾಖೆ ಅಥವಾ ಕಚೇರಿಗಳಿಗೆ ಭೇಟಿ ನೀಡಿ ಫಾಲೋ ಅಪ್‌ ಮಾಡುತ್ತೇನೆ ಎಂದು ಯದುವೀರ್‌ ಒಡೆಯರ್‌ ತಿಳಿಸಿದರು. ಜನರಿಗಾಗಿ ನಮ್ಮ ಪ್ರಧಾನಮಂತ್ರಿಗಳು ಕೆಲಸ ಮಾಡುತ್ತಿದ್ದಾರೆ. ಆದರೆ ರಾಜ್ಯ ಸರ್ಕಾರ ಜನರನ್ನು ಸಂಪೂರ್ಣ ನಿರ್ಲಕ್ಷ್ಯ ಮಾಡುತ್ತಿರುವುದು ಸ್ಪಷ್ಟವಾಗಿದೆ. ಹೀಗಾಗಿ ಜನರ ಸಮಸ್ಯೆಗಳನ್ನು ಪರಿಹರಿಸುವ ಜವಾಬ್ದಾರಿ ನನ್ನ ಮೇಲಿದೆ ಎಂದು ಸಂಸದರು ಹೇಳಿದರು. ಇನ್ಮುಂದೆ ಈ ರೀತಿಯ ಜನಸಂಪರ್ಕ ಸಭೆಗಳನ್ನು ಹೆಚ್ಚಾಗಿ ಆಯೋಜಿಸಲಾಗುವುದು ಎಂದು ಜನರಿಗೆ ಸಂಸದರು ಭರವಸೆ ನೀಡಿದರು. ಬಿಜೆಪಿ ನಗರಾಧ್ಯಕ್ಷರಾದ ನಾಗೇಂದ್ರ, ಪ್ರಧಾನ ಕಾರ್ಯದರ್ಶಿ ರಘು, ರುದ್ರಮೂರ್ತಿ, ಮಂಡಲ ಅಧ್ಯಕ್ಷರಾದ ಪೈಲ್ವಾನ್‌ ರವಿ, ವಸ್ತು ಪ್ರದರ್ಶನ ಪ್ರಾಧಿಕಾರ ಮಾಜಿ ಅಧ್ಯಕ್ಷ ಹೇಮಂತ್‌ ಗೌಡ, ಅಧಿಕಾರಿಗಳು, ಮುಖಂಡರು ಹಾಗೂ ಕಾರ್ಯಕರ್ತರು, ಗ್ರಾಮಸ್ಥರು ಹಾಜರಿದ್ದರು. :: ಸಂಸದರಿಗೆ ಮಾಜಿ ಜಿಪಂ ಸದಸ್ಯರ ಅಭಿನಂದನೆ ::  “ನಮ್ಮ ಸಂಸದರು ನಮ್ಮ ಗ್ರಾಮಕ್ಕೆ ಭೇಟಿ ನೀಡಿ ಜನರಿಂದ ಎಲ್ಲಾ ಬೇಡಿಕೆಗಳನ್ನು ಸ್ವೀಕರಿಸುತ್ತಿರುವುದು ತುಂಬಾ ಸಂತೋಷ ತಂದಿದೆ. ನಮ್ಮ ಸಂಸದರು ಗ್ರಾಮದಲ್ಲಿ ಮತ್ತು ಇಡೀ ಕ್ಷೇತ್ರದಲ್ಲಿ ಅದ್ಭುತವಾಗಿ ಕೆಲಸ ಮಾಡುತ್ತಿದ್ದಾರೆ. ನಮ್ಮ ಸಂಸದರು ನಮ್ಮ ಹೆಮ್ಮೆ ಎಂದು ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ದಿನೇಶ್ ತಮ್ಮ ಮನದಾಳದ ಮಾತುಗಳನ್ನು ಹಂಚಿಕೊಂಡಿದ್ದಾರೆ.

 

 

Follow us Follow us
Share. WhatsApp Facebook Twitter Email Telegram Copy Link

Related Posts

ವಿರಾಜಪೇಟೆ ಕಾವೇರಿ ಕಾಲೇಜಿನ ಬಾಲಕರ ತಂಡಕ್ಕೆ ರನ್ನರ್ಸ್ ಟ್ರೋಫಿ

ಅಕ್ಟೋಬರ್ 12, 2026

ಎಸ್‌ಐಆರ್ ವಿರುದ್ಧ ಕೊಡಗು ಜಿಲ್ಲಾ ಕಾಂಗ್ರೆಸ್ ಪ್ರತಿಭಟನೆ; ಚುನಾವಣಾ ಆಯುಕ್ತರ ರಾಜೀನಾಮೆಗೆ ಆಗ್ರಹಿಸಿ ರಸ್ತೆ ತಡೆ

ಅಕ್ಟೋಬರ್ 12, 2026

ಬೆಂಗಳೂರಿನಿಂದ ಮೈಸೂರಿಗೆ ದಕ್ಷಿಣ ಕರ್ನಾಟಕ ಅಂಚೆ ವಲಯದ ಪ್ರಧಾನ ಕಚೇರಿ ಸ್ಥಳಾಂತರಕ್ಕೆ ತಾತ್ವಿಕ ಒಪ್ಪಿಗೆ

ಅಕ್ಟೋಬರ್ 12, 2026

ಎಸ್‌ಐಆರ್ ವಿರುದ್ಧ ಕೊಡಗು ಜಿಲ್ಲಾ ಕಾಂಗ್ರೆಸ್ ಪ್ರತಿಭಟನೆ; ಚುನಾವಣಾ ಆಯುಕ್ತರ ರಾಜೀನಾಮೆಗೆ ಆಗ್ರಹಿಸಿ ರಸ್ತೆ ತಡೆ

ಅಕ್ಟೋಬರ್ 12, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಅ. 12: ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಿಂದ ನೈಜ ಮತದಾರರ ಮತದಾನದ ಹಕ್ಕಿಗೆ…

ಬೆಂಗಳೂರಿನಿಂದ ಮೈಸೂರಿಗೆ ದಕ್ಷಿಣ ಕರ್ನಾಟಕ ಅಂಚೆ ವಲಯದ ಪ್ರಧಾನ ಕಚೇರಿ ಸ್ಥಳಾಂತರಕ್ಕೆ ತಾತ್ವಿಕ ಒಪ್ಪಿಗೆ

ಅಕ್ಟೋಬರ್ 12, 2026

ಸೋಮೇಶ್ವರ ದೇವಾಲಯದಲ್ಲಿ 21ನೇ ವರ್ಷದ ಶರನ್ನವರಾತ್ರಿ ಉತ್ಸವಕ್ಕೆ ಚಾಲನೆ

ಅಕ್ಟೋಬರ್ 12, 2026

ಹಿರಿಯ ಹಾಕಿ ಆಟಗಾರ್ತಿ ದೇವರಾಜಮ್ಮ ಅವರಿಗೆ ನಾಡೋಜ ಕಮಲ ಹಂಪನಾ ರಾಜ್ಯಪ್ರಶಸ್ತಿ

ಅಕ್ಟೋಬರ್ 12, 2026

ಕುಂಜಿಲ ಸರ್ಕಾರಿ ಶಾಲೆಗೆ ಹೆಮ್ಮೆಯ ದುಬೈ ಕನ್ನಡ ಸಂಘದಿಂದ ಆಟೋಪಕರಣ, ಪೀಠೋಪಕರಣಗಳ ಕೊಡುಗೆ; ಸರ್ಕಾರಿ ಶಾಲೆ ಉಳಿಸಿ ಅಭಿಯಾನದಡಿ ವಿದ್ಯಾರ್ಥಿಗಳಿಗೆ ಸೌಲಭ್ಯಗಳ ಹಸ್ತಾಂತರ

ಅಕ್ಟೋಬರ್ 12, 2026

ಮಡಿಕೇರಿ ದಸರಾ ವಿದ್ಯುತ್ ದೀಪಾಲಂಕಾರ ಅಸಮರ್ಪಕ: ಶ್ರೀ ಕೋಟೆ ಮಹಾಗಣಪತಿ ದಸರಾ ಮಂಟಪ ಸಮಿತಿ ಆಕ್ಷೇಪ

ಅಕ್ಟೋಬರ್ 12, 2026

ಸುವರ್ಣ ಮಹೋತ್ಸವ ಸಂಭ್ರಮ: ಶ್ರೀ ಕೋಟೆ ಮಹಾಗಣಪತಿಗೆ 108 ಎಳನೀರು, ಪಂಚಾಮೃತ ಅಭಿಷೇಕ

ಅಕ್ಟೋಬರ್ 12, 2026

ಗಣೇಶೋತ್ಸವ ಸ್ವಾತಂತ್ರ್ಯ ಸಂಗ್ರಾಮದ ಪ್ರತೀಕ : ಸಂಸದ ಯದುವೀರ್ ಒಡೆಯರ್

ಅಕ್ಟೋಬರ್ 11, 2026

ಮಳೆ ಕೊರತೆ ನೀಗಿ ನಾಡಿನಲ್ಲಿ ಸಮೃದ್ಧಿ ನೆಲೆಸಲಿ : ಸಚಿವ ಪಿ.ಎಂ.ನರೇಂದ್ರ ಸ್ವಾಮಿ

ಅಕ್ಟೋಬರ್ 11, 2026

ಗೋಣಿಕೊಪ್ಪ ದಸರಾ ಜನೋತ್ಸವ ಉದ್ಘಾಟಿಸಿದ ಸಚಿವ ನರೇಂದ್ರ ಸ್ವಾಮಿ

ಅಕ್ಟೋಬರ್ 11, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.