
ನಾಪೋಕ್ಲು ಜ.8 NEWS DESK : ಜಿಲ್ಲಾ ಮಟ್ಟದ ಪ್ರಾಥಮಿಕ ಶಾಲಾ ವಿಭಾಗದ ಹಾಕಿ ಪಂದ್ಯಾವಳಿಯಲ್ಲಿ ಕಕ್ಕಬ್ಬೆ ಕೇಂದ್ರ ಆಂಗ್ಲ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿ ಪ್ರಶಸ್ತಿ ಪಡೆದುಕೊಂಡರು. ಮೂರ್ನಾಡು ಪ್ರೌಢಶಾಲೆಯ ಆಟದ ಮೈದಾನದಲ್ಲಿ ಚೆನಂಡ ಕುಟುಂಬಸ್ಥರು ಆಯೋಜಿಸಿದ್ದ ಜಿಲ್ಲಾ ಮಟ್ಟದ ಪ್ರಾಥಮಿಕ ಶಾಲಾ ವಿಭಾಗದ ಹಾಕಿ ಪಂದ್ಯಾವಳಿಯಲ್ಲಿ ಕಕ್ಕಬ್ಬೆ ಕೇಂದ್ರ ಆಂಗ್ಲ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು 5-1 ಗೋಲುಗಳ ಅಂತರದಿಂದ ಜಯಗಳಿಸಿ ಪ್ರಶಸ್ತಿಗಳಿಸಿ ಶಾಲೆಗೆ ಕೀರ್ತಿಯನ್ನು ತಂದಿದ್ದಾರೆ . –
ವರದಿ : ದುಗ್ಗಳ ಸದಾನಂದ.









