
ಮಡಿಕೇರಿ ಜ.8 NEWS DESK : ರಸ್ತೆ ಸುರಕ್ಷತಾ ಸಪ್ತಾಹದ ಅಂಗವಾಗಿ ಮಡಿಕೇರಿ ಗ್ರಾಮಾಂತರ ಠಾಣೆಯ ವತಿಯಿಂದ ಮೂರ್ನಾಡು ಮತ್ತು ಪೆರಾಜೆ ಗ್ರಾಮಗಳಲ್ಲಿ ರಸ್ತೆ ಸುರಕ್ಷತಾ ಜಾಗೃತಿ ಜಾಥಾ ನಡೆಯಿತು. ನಂತರ ಸಭೆ ನಡೆಸಿ ವಿದ್ಯಾರ್ಥಿಗಳು ಮತ್ತು ನಾಗರಿಕರಿಗೆ ರಸ್ತೆ ಮತ್ತು ಸಂಚಾರ ಸುರಕ್ಷತೆ, ಸಂಚಾರ ಕಾನೂನು ಮುಂತಾದ ವಿಷಯಗಳ ಬಗ್ಗೆ ಮಾಹಿತಿ ನೀಡಿ ಜಾಗೃತಿ ಮೂಡಿಸಲಾಯಿತು.










