Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಬಾಳೆಲೆ : ರೂ. 27.23 ಕೋಟಿ ವೆಚ್ಚದ ವಿದ್ಯುತ್ ವಿತರಣಾ ಕೇಂದ್ರ ಸ್ಥಾಪನೆಗೆ ಶಾಸಕ ಎ.ಎಸ್.ಪೊನ್ನಣ್ಣ ಚಾಲನೆ*
  • *ಶ್ರೀಮಂಗಲದಲ್ಲಿ ಮಹಿಳಾ ದಿನಾಚರಣೆ : ಮಹಿಳಾ ಸಬಲೀಕರಣವು ಸರ್ಕಾರದ ಪ್ರಮುಖ ಆಶಯ : ಶಾಸಕ ಎ.ಎಸ್.ಪೊನ್ನಣ್ಣ*
  • *ಮಾ.8 ರಂದು ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ*
  • *ಮಾ.8 ರಂದು ಬಿಟ್ಟಂಗಾಲದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ*
  • *ಕೊಡವ ಅಭಿವೃದ್ಧಿ ನಿಗಮ ಘೋಷಣೆ : ಯುಕೊ ಸಂಭ್ರಮಾಚರಣೆ : ಶಾಸಕ ಪೊನ್ನಣ್ಣ, ಮಂಜು ಚಿಣ್ಣಪ್ಪಗೆ ಸನ್ಮಾನ
  • *ಜಾತಿಧರ್ಮಗಳ ಹೆಸರಿನಲ್ಲಿ ಸಮಾಜವನ್ನು ಒಡೆಯುವ ಪ್ರಯತ್ನಗಳ ಬಗ್ಗೆ ಜಾಗೃತರಾಗಿರಿ : ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ*
  • *ತಿತಿಮತಿ : ರೈಲ್ವೆ ಬ್ಯಾರಿಕೆಡ್ ಅಳವಡಿಸುವ ಕಾಮಗಾರಿ ಶಾಸಕ ಎ.ಎಸ್.ಪೊನ್ನಣ್ಣ ಚಾಲನೆ*
  • *ಪ್ರೊ.ಅಶೋಕ ಸಂಗಪ್ಪ ಆಲೂರ ಅವರಿಗೆ ಭಾರತರತ್ನ ಡಾ.ಸರ್.ಎಂ.ವಿಶ್ವೇಶ್ವರಯ್ಯ ವಿಜ್ಞಾನ ಪುರಸ್ಕಾರ*
  • *ಸುಂಟಿಕೊಪ್ಪ : ಮಕ್ಕಳಲ್ಲಿ ಸಾಹಿತ್ಯ ಅಭಿರುಚಿಯನ್ನು ಹೆಚ್ಚಿಸಬೇಕು : ಎಸ್.ಐ.ಮುನಿರ್‍ಅಹ್ಮದ್*
  • *ವಿರಾಜಪೇಟೆಯ ಸೈಂಟ್ ಆನ್ಸ್ ಪದವಿ ಕಾಲೇಜಿನ ಎನ್ ಎಸ್ ಎಸ್ ಎಸ್ ವಾರ್ಷಿಕ ಶಿಬಿರದಲ್ಲಿ ವಿದ್ಯಾರ್ಥಿಗಳಿಂದ ಗ್ರಾಮ ಸ್ವಚ್ಛತಾ ಅಭಿಯಾನ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಹೆಸರು ಬದಲಾಯಿಸಿರುವುದು ತಕರಾರಲ್ಲ, ಶೇ.40 ರಷ್ಟು ಪಾಲುಧನ ನೀಡಲು ಕಾಂಗ್ರೆಸ್ ಸರಕಾರಕ್ಕೆ ಆತಂಕ : ಪ್ರತಾಪ್ ಸಿಂಹ ವ್ಯಂಗ್ಯ*
ಇತ್ತೀಚಿನ ಸುದ್ದಿಗಳು ಕರ್ನಾಟಕ ಕೊಡಗು ಜಿಲ್ಲೆ

*ಹೆಸರು ಬದಲಾಯಿಸಿರುವುದು ತಕರಾರಲ್ಲ, ಶೇ.40 ರಷ್ಟು ಪಾಲುಧನ ನೀಡಲು ಕಾಂಗ್ರೆಸ್ ಸರಕಾರಕ್ಕೆ ಆತಂಕ : ಪ್ರತಾಪ್ ಸಿಂಹ ವ್ಯಂಗ್ಯ*

ಜನವರಿ 8, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜ.8 NEWS DESK : ಮಹಾತ್ಮಗಾಂಧಿ ಉದ್ಯೋಗ ಖಾತ್ರಿ ಯೋಜನೆಯ ಹೆಸರನ್ನು ‘ವಿಕಸಿತ ಭಾರತ್ – ರೋಜಗಾರ್ ಮತ್ತು ಆಜೀವಿಕಾ ಮಿಷನ್ ಖಾತರಿ (ವಿಬಿ ಜಿರಾಮ್ ಜಿ) ಎಂದು ಬದಲಾಯಿಸಿರುವ ಬಗ್ಗೆ ರಾಜ್ಯ ಕಾಂಗ್ರೆಸ್ ಸರಕಾರದ ತಕರಾರಿಲ್ಲ. ಬದಲಿಗೆ ಈ ಯೋಜನೆಗೆ ತನ್ನ ಪಾಲು ಹಣ ಶೇ.40 ನ್ನು ನೀಡಬೇಕಲ್ಲ ಎನ್ನುವ ಆತಂಕ ಕಾಡುತ್ತಿದೆ ಎಂದು ಮೈಸೂರು-ಕೊಡಗು ಕ್ಷೇತ್ರದ ಮಾಜಿ ಸಂಸದ ಪ್ರತಾಪ್ ಸಿಂಹ ವ್ಯಂಗ್ಯವಾಡಿದ್ದಾರೆ. ಮಡಿಕೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಒಂದು ವೇಳೆ ರಾಜ್ಯ ಕಾಂಗ್ರೆಸ್ ಸರಕಾರ ‘ವಿಬಿ ಜಿರಾಮ್ ಜಿ’ ಯೋಜನೆಯನ್ನು ಜಾರಿಗೆ ತಾರದಿದ್ದಲ್ಲಿ ಕೇಂದ್ರ ಸರಕಾರ ಅನಿವಾರ್ಯವಾಗಿ ಪರ್ಯಾಯ ಚಿಂತನೆ ಮಾಡಬೇಕಾಗುತ್ತದೆ. ಜನಪರ ಕಾಳಜಿ ಇದ್ದರೆ ಸರಕಾರ ಅನುಷ್ಠಾನಗೊಳಿಸುತ್ತದೆ, ತಪ್ಪಿದಲ್ಲಿ ಎರಡೂವರೆ ವರ್ಷ ಕಳೆದ ನಂತರ ರಾಜ್ಯದಲ್ಲಿ ನಮ್ಮ ಸರಕಾರ ಅಧಿಕಾರಕ್ಕೆ ಬರುತ್ತದೆ, ಆಗ ನಾವು ಯೋಜನೆಯನ್ನು ಸಮರ್ಪಕವಾಗಿ ಜಾರಿಗೆ ತರುತ್ತೇವೆ ಎಂದರು. ಮಹಾತ್ಮಗಾಂಧಿ ಉದ್ಯೋಗ ಖಾತ್ರಿ ಯೋಜನೆಯಲ್ಲಿ ಶೇ.90 ರಷ್ಟು ಹಣವನ್ನು ಕೇಂದ್ರ ಸರಕಾರ ನೀಡುತ್ತಿತ್ತು ಮತ್ತು ಉಳಿದ ಶೇ.10 ರಷ್ಟು ಹಣವನ್ನು ರಾಜ್ಯ ಸರಕಾರ ನೀಡಬೇಕಾಗಿತ್ತು. ಆದರೆ ‘ವಿಬಿ ಜಿರಾಮ್ ಜಿ’ ಯೋಜನೆಯಲ್ಲಿ ಶೇ.60 ರಷ್ಟು ಹಣವನ್ನು ಕೇಂದ್ರ ಸರಕಾರ ನೀಡುತ್ತಿದ್ದು, ಶೇ.40 ರಷ್ಟನ್ನು ರಾಜ್ಯ ಸರಕಾರ ನೀಡಬೇಕಾಗುತ್ತದೆ. ಯೋಜನೆಯ ಯಶಸ್ವಿ ಜಾರಿಗೆ ಸಮಾನ ಜವಾಬ್ದಾರಿ ಇರಬೇಕು ಮತ್ತು ದುರುಪಯೋಗವಾಗುವುದನ್ನು ತಡೆಯಬೇಕು ಎನ್ನುವ ಕಾರಣದಿಂದ ಪಾಲು ಹಣದ ಮೊತ್ತವನ್ನು ರಾಜ್ಯ ಸರಕಾರಕ್ಕೆ ಹೆಚ್ಚು ನಿಗಧಿ ಮಾಡಲಾಗಿದೆ ಎಂದು ತಿಳಿಸಿದರು. ‘ವಿಬಿ ಜಿರಾಮ್ ಜಿ’ ಯೋಜನೆ 266 ಕಾಮಗಾರಿಗಳನ್ನು ಸೃಷ್ಟಿ ಮಾಡಲಿದ್ದು, ಆಯಾ ಪ್ರದೇಶಕ್ಕೆ ಅನುಗುಣವಾಗಿ ರಾಜ್ಯ ಸರಕಾರ ಯೋಜನೆಯನ್ನು ತಯಾರು ಮಾಡಬಹುದಾಗಿದೆ. ಈ ಹಿಂದೆ ಉದ್ಯೋಗ ಖಾತ್ರಿ ಯೋಜನೆಯಲ್ಲಿ ಜಾಬ್ ಕಾರ್ಡ್ ದುರುಪಯೋಗವಾಗುತ್ತಿತ್ತು ಮತ್ತು ಹಣ ಪೋಲಾಗುತ್ತಿತ್ತು. ಅರ್ಹ ಫಲಾನುಭವಿಗಳಿಗೆ ಉದ್ಯೋಗ ಲಭಿಸುತ್ತಿರಲಿಲ್ಲ, ಕೆಲಸ ಮಾಡದೆ ಹಣ ಡ್ರಾ ಮಾಡಲಾಗುತ್ತಿತ್ತು. ಆದರೆ ಪ್ರಸ್ತುತ ಕೇಂದ್ರ ಸರಕಾರ ತಂದಿರುವ ಯೋಜನೆಯಲ್ಲಿ ಯಾವುದೇ ದುರುಪಯೋಗಕ್ಕೆ ಅವಕಾಶವಿಲ್ಲ. ಬೆಳಗ್ಗೆ ಮತ್ತು ಸಂಜೆ ಕಾಮಗಾರಿಯಲ್ಲಿ ತೊಡಗುವವರ ಛಾಯಾಚಿತ್ರವನ್ನು ತೆಗೆಯಬೇಕಾಗುತ್ತದೆ. ವಾರದ ಲೆಕ್ಕ ನೀಡಬೇಕು ಮತ್ತು ಸಕಾಲದಲ್ಲಿ ಆಡಿಟಿಂಗ್ ನಡೆಸಬೇಕಾಗುತ್ತದೆ. ಇದರಿಂದ ದುರುಪಯೋಗಕ್ಕೆ ಅವಕಾಶವಿರುವುದಿಲ್ಲ, ಅರ್ಹರಿಗೆ ಉದ್ಯೋಗ ಒದಗಿಸುವುದು, ಲೋಪಗಳನ್ನು ಸರಿಪಡಿಸುವುದು, ಹಣ ಸೋರಿಕೆಯಾಗುವುದನ್ನು ತಡೆಯುವುದು ಮತ್ತು ಗ್ರಾಮೀಣ ಅಭಿವೃದ್ಧಿಯೇ ಯೋಜನೆಯ ಮುಖ್ಯ ಉದ್ದೇಶವಾಗಿದೆ ಎಂದು ಸ್ಪಷ್ಟಪಡಿಸಿದರು. ಒಳ್ಳೆಯ ಉದ್ದೇಶದಿಂದ ಅಂದಿನ ಯುಪಿಎ ಸರಕಾರ ಆರಂಭಿಸಿದ ಉದ್ಯೋಗ ಖಾತ್ರಿ ಯೋಜನೆ 2008ರಲ್ಲಿ ಅನುಷ್ಠಾನಗೊಂಡಿತು. ಆದರೆ ಪ್ರಸ್ತುತ ಈ ಯೋಜನೆಯಲ್ಲಿ ಲೋಪದೋಷಗಳು ಮತ್ತು ದುರುಪಯೋಗದ ಅಂಶಗಳು ಕಂಡು ಬಂದ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಸರಕಾರ ಹಲವು ಸುಧಾರಣೆಗಳನ್ನು ಮಾಡಿ ‘ವಿಬಿ ಜಿರಾಮ್ ಜಿ’ ಯೋಜನೆಯನ್ನು ಜಾರಿಗೆ ತಂದಿದೆ. ಯೋಜನೆಗೆ ತಕ್ಕಂತೆ ಹೆಸರನ್ನು ಬದಲಾಯಿಸಲಾಗಿದೆಯೇ ಹೊರತು ಎಲ್ಲೂ ಮಹಾತ್ಮ ಗಾಂಧಿ ಅವರಿಗೆ ಅಗೌರವ ತೋರಿಲ್ಲ. ಕೇಂದ್ರ ಸರಕಾರ ಸ್ವಚ್ಛ ಭಾರತ್ ಯೋಜನೆಯ ಮೂಲಕ ಗಾಂಧಿ ಅವರಿಗೆ ಅಪಾರ ಗೌರವ ನೀಡಿದೆ. ನೋಟುಗಳಲ್ಲಿ ಗಾಂಧಿ ಅವರ ಭಾವಚಿತ್ರವಿದೆ ಎಂದು ಪ್ರತಾಪ್ ಸಿಂಹ ಸಮರ್ಥಿಸಿಕೊಂಡರು. 2047 ರಲ್ಲಿ ವಿಕಸಿತ ಭಾರತ ನಿರ್ಮಾಣವಾಗಬೇಕೆನ್ನುವ ಸದುದ್ದೇಶದಿಂದ ಈ ಯೋಜನೆಯನ್ನು ಕೇಂದ್ರ ಸರಕಾರ ಜಾರಿಗೆ ತಂದಿದೆ. ರಾಜ್ಯ ಸರಕಾರ ಶೇ.40 ರಷ್ಟು ಪಾಲಿನ ಹಣ ನೀಡಲು ಆತಂಕ ಪಡುತ್ತಿದೆ, ಅಲ್ಲದೆ ದುರುಪಯೋಗಕ್ಕೆ ಅವಕಾಶವಿಲ್ಲ ಎನ್ನುವ ಚಿಂತೆ ಆರಂಭವಾಗಿದೆ. ಇದೇ ಕಾರಣಕ್ಕೆ ಯೋಜನೆಯ ಬಗ್ಗೆ ತಕರಾರು ತೆಗೆದಿದೆ. ದೇಶದ ಯಾವುದೇ ಭಾಗದಲ್ಲಿ ‘ವಿಬಿ ಜಿರಾಮ್ ಜಿ’ ಗೆ ಅಪಸ್ವರವಿಲ್ಲ, ಆದರೆ ಕರ್ನಾಟಕದ ಕಾಂಗ್ರೆಸ್ ಸರಕಾರ ಮಾತ್ರ ಜನರ ಹಾದಿ ತಪ್ಪಿಸುವ ಯತ್ನ ಮಾಡುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಗ್ಯಾರಂಟಿ ಯೋಜನೆಗಳಿಂದ ರಸ್ತೆಗೆ ತೇಪೆ ಹಾಕುವುದಕ್ಕೂ ಹಣವಿಲ್ಲದೆ ಪರದಾಡುತ್ತಿರುವ ರಾಜ್ಯ ಸರಕಾರ, ಕೇಂದ್ರ ಸರಕಾರದ ಕಡೆ ಬೆರಳು ಮಾಡುವುದನ್ನು ಮತ್ತು ಸುಳ್ಳು ಹೇಳಿ ಜನರ ಹಾದಿ ತಪ್ಪಿಸುವುದನ್ನು ಮೊದಲು ನಿಲ್ಲಿಸಲಿ ಎಂದರು. ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ನಾಪಂಡ ರವಿ ಕಾಳಪ್ಪ, ಮಾಜಿ ಶಾಸಕರುಗಳಾದ ಕೆ.ಜಿ.ಬೋಪಯ್ಯ, ಎಂ.ಪಿ.ಅಪ್ಪಚ್ಚುರಂಜನ್, ವಿಧಾನ ಪರಿಷತ್ ಮಾಜಿ ಸದಸ್ಯ ಎಂ.ಪಿ.ಸುನಿಲ್ ಸುಬ್ರಮಣಿ ಹಾಗೂ ಪಕ್ಷದ ಪ್ರಧಾನ ಕಾರ್ಯದರ್ಶಿ ತಳೂರು ಕಿಶೋರ್ ಕುಮಾರ್ ಉಪಸ್ಥಿತರಿದ್ದರು.

 

 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಬಾಳೆಲೆ : ರೂ. 27.23 ಕೋಟಿ ವೆಚ್ಚದ ವಿದ್ಯುತ್ ವಿತರಣಾ ಕೇಂದ್ರ ಸ್ಥಾಪನೆಗೆ ಶಾಸಕ ಎ.ಎಸ್.ಪೊನ್ನಣ್ಣ ಚಾಲನೆ*

ಮಾರ್ಚ್ 7, 2026

*ಶ್ರೀಮಂಗಲದಲ್ಲಿ ಮಹಿಳಾ ದಿನಾಚರಣೆ : ಮಹಿಳಾ ಸಬಲೀಕರಣವು ಸರ್ಕಾರದ ಪ್ರಮುಖ ಆಶಯ : ಶಾಸಕ ಎ.ಎಸ್.ಪೊನ್ನಣ್ಣ*

ಮಾರ್ಚ್ 7, 2026

*ಮಾ.8 ರಂದು ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ*

ಮಾರ್ಚ್ 7, 2026

*ಶ್ರೀಮಂಗಲದಲ್ಲಿ ಮಹಿಳಾ ದಿನಾಚರಣೆ : ಮಹಿಳಾ ಸಬಲೀಕರಣವು ಸರ್ಕಾರದ ಪ್ರಮುಖ ಆಶಯ : ಶಾಸಕ ಎ.ಎಸ್.ಪೊನ್ನಣ್ಣ*

ಮಾರ್ಚ್ 7, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಮಾ.7 NEWS DESK : ಆಧುನಿಕ ಸಮಾಜದಲ್ಲಿ ಮಹಿಳೆಯರಿಗೆ ಅತ್ಯಂತ ಪ್ರಮುಖವಾದ ಸ್ಥಾನವಿದೆ. ಮಹಿಳೆಯರು ಸಮಾಜದ ಮುನ್ನೆಲೆಗೆ ಬಂದಲ್ಲಿ…

*ಮಾ.8 ರಂದು ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ*

ಮಾರ್ಚ್ 7, 2026

*ಮಾ.8 ರಂದು ಬಿಟ್ಟಂಗಾಲದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ*

ಮಾರ್ಚ್ 7, 2026

*ಕೊಡವ ಅಭಿವೃದ್ಧಿ ನಿಗಮ ಘೋಷಣೆ : ಯುಕೊ ಸಂಭ್ರಮಾಚರಣೆ : ಶಾಸಕ ಪೊನ್ನಣ್ಣ, ಮಂಜು ಚಿಣ್ಣಪ್ಪಗೆ ಸನ್ಮಾನ

ಮಾರ್ಚ್ 7, 2026

*ಜಾತಿಧರ್ಮಗಳ ಹೆಸರಿನಲ್ಲಿ ಸಮಾಜವನ್ನು ಒಡೆಯುವ ಪ್ರಯತ್ನಗಳ ಬಗ್ಗೆ ಜಾಗೃತರಾಗಿರಿ : ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ*

ಮಾರ್ಚ್ 7, 2026

*ತಿತಿಮತಿ : ರೈಲ್ವೆ ಬ್ಯಾರಿಕೆಡ್ ಅಳವಡಿಸುವ ಕಾಮಗಾರಿ ಶಾಸಕ ಎ.ಎಸ್.ಪೊನ್ನಣ್ಣ ಚಾಲನೆ*

ಮಾರ್ಚ್ 7, 2026

*ಪ್ರೊ.ಅಶೋಕ ಸಂಗಪ್ಪ ಆಲೂರ ಅವರಿಗೆ ಭಾರತರತ್ನ ಡಾ.ಸರ್.ಎಂ.ವಿಶ್ವೇಶ್ವರಯ್ಯ ವಿಜ್ಞಾನ ಪುರಸ್ಕಾರ*

ಮಾರ್ಚ್ 7, 2026

*ಸುಂಟಿಕೊಪ್ಪ : ಮಕ್ಕಳಲ್ಲಿ ಸಾಹಿತ್ಯ ಅಭಿರುಚಿಯನ್ನು ಹೆಚ್ಚಿಸಬೇಕು : ಎಸ್.ಐ.ಮುನಿರ್‍ಅಹ್ಮದ್*

ಮಾರ್ಚ್ 7, 2026

*ವಿರಾಜಪೇಟೆಯ ಸೈಂಟ್ ಆನ್ಸ್ ಪದವಿ ಕಾಲೇಜಿನ ಎನ್ ಎಸ್ ಎಸ್ ಎಸ್ ವಾರ್ಷಿಕ ಶಿಬಿರದಲ್ಲಿ ವಿದ್ಯಾರ್ಥಿಗಳಿಂದ ಗ್ರಾಮ ಸ್ವಚ್ಛತಾ ಅಭಿಯಾನ*

ಮಾರ್ಚ್ 7, 2026

*ಹವ್ಯಕ ಅಕಾಡೆಮಿ, ಕೊಡವ ನಿಗಮ : ಸಾಂಸ್ಕೃತಿಕ ಪರಂಪರೆಯ ರಕ್ಷಣೆ ಮತ್ತು ಸಮುದಾಯದ ಅಭಿವೃದ್ಧಿಯನ್ನು ಉತ್ತೇಜಿಸುವ ಮಹತ್ವದ ಹೆಜ್ಜೆ : ಸರಕಾರದ ಕ್ರಮವನ್ನು ಸ್ವಾಗತಿಸಿದ ಸಿಎನ್‌ಸಿ*

ಮಾರ್ಚ್ 7, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.