Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಮೈಸೂರು ತಾಲ್ಲೂಕು ಕಚೇರಿಗೆ ಸಂಸದ ಯದುವೀರ್‌ ದಿಢೀರ್‌ ಭೇಟಿ : ಜನರ ಕೆಲಸ ತ್ವರಿತವಾಗಿ ಮಾಡಿಕೊಡಲು ಅಧಿಕಾರಿಗಳಿಗೆ ಸೂಚನೆ
ಇತ್ತೀಚಿನ ಸುದ್ದಿಗಳು ಕರ್ನಾಟಕ

ಮೈಸೂರು ತಾಲ್ಲೂಕು ಕಚೇರಿಗೆ ಸಂಸದ ಯದುವೀರ್‌ ದಿಢೀರ್‌ ಭೇಟಿ : ಜನರ ಕೆಲಸ ತ್ವರಿತವಾಗಿ ಮಾಡಿಕೊಡಲು ಅಧಿಕಾರಿಗಳಿಗೆ ಸೂಚನೆ

ಜನವರಿ 8, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಮೈಸೂರು, ಜ.8 NEWS DESK : ಸಾರ್ವಜನಿಕರು ಸಮಸ್ಯೆಗಳನ್ನು ತಮ್ಮ ಬಳಿಗೆ ತಂದಾಗ ಅವುಗಳನ್ನು ಆಲಿಸಿ ತ್ವರಿತವಾಗಿ ಪರಿಹಾರ ಒದಗಿಸಲು ಕ್ರಮ ಕೈಗೊಳ್ಳಬೇಕು. ಪ್ರಮುಖವಾಗಿ ಗ್ರಾಮೀಣ ಭಾಗದ ಜನರನ್ನು ಪದೇಪದೆ ಕಚೇರಿಗಳಿಗೆ ಅಲೆಸುವ ಕೆಲಸ ಮಾಡಿಸಬೇಡಿ ಎಂದು ಅಧಿಕಾರಿಗಳಿಗೆ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದರಾದ ಶ್ರೀ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಸೂಚನೆ ನೀಡಿದ್ದಾರೆ. ಮೈಸೂರಿನ ಬಸ್‌ ನಿಲ್ದಾಣ ಸಮೀಪದ ಮಿನಿ ವಿಧಾನಸೌಧದಲ್ಲಿರುವ ತಾಲೂಕು ಕಚೇರಿಗೆ ದಿಢೀರ್‌ ಭೇಟಿ ನೀಡಿ ಪರಿಶೀಲನೆ ನಡೆಸಿದ ನಂತರ ಸಂಸದ ಯದುವೀರ್‌ ಮಾಹಿತಿ ನೀಡಿದ್ದಾರೆ. ತಾಲೂಕು ಕಚೇರಿಯಲ್ಲಿನ ಕೆಲವು ಲೋಪದೋಷಗಳ ಕುರಿತು ಜನರು ಅಹವಾಲುಗಳನ್ನು ನನ್ನ ಕಚೇರಿಗೆ ಕಳುಹಿಸಿದ್ದರು. ಈ ನಿಟ್ಟಿನಲ್ಲಿ ಇಂದು ದಿಢೀರ್‌ ಭೇಟಿ ನೀಡಿ ಪರಿಶೀಲನೆ ನಡೆಸಲಾಯಿತು ಎಂದರು. :: ನಿರ್ಲಕ್ಷ್ಯ ಮಾಡಿದರೆ ಕ್ರಮ ::  ತಾಲೂಕು ಕಚೇರಿಗಳಿಗೆ ಬರುವ ಹೆಚ್ಚಿನ ಜನರು ಗ್ರಾಮೀಣ ಭಾಗದವರಾಗಿರುತ್ತಾರೆ. ಇವರ ಅಹವಾಲುಗಳನ್ನು ತ್ವರಿತವಾಗಿ ಪರಿಹರಿಸಲು ಎಲ್ಲ ಅಧಿಕಾರಿಗಳು ಮುಂದಾಗಬೇಕು. ಈ ವಿಷಯದಲ್ಲಿ ನಿರ್ಲಕ್ಷ್ಯ ತೋರಿದರೆ ಮುಂದೆ ಕಠಿಣ ಕ್ರಮ ಎದುರಿಸಬೇಕಾಗುತ್ತದೆ ಎಂದು ಸಂಸದರು ಎಚ್ಚರಿಸಿದರು. ಕಚೇರಿಗೆ ತಡವಾಗಿ ಬಂದ ಸಿಬ್ಬಂದಿಯನ್ನು ಸಂಸದರು ಇದೇ ಸಂದರ್ಭದಲ್ಲಿ ಪ್ರಶ್ನಿಸಿದರು. ನಂತರ ತಹಶೀಲ್ದಾರ್‌ ಮಹೇಶ್‌ ಕುಮಾರ್‌ ಅವರೊಂದಿಗೆ ಇಡೀ ಕಚೇರಿಯಲ್ಲಿ ಪರಿಶೀಲನೆ ನಡೆಸಿದರು. ಕಚೇರಿಗೆ ಸಿಬ್ಬಂದಿ ತಡವಾಗಿ ಬರುವ ಹಾಗೂ ಕಚೇರಿಯಲ್ಲಿ ಇಲ್ಲದಿರುವ ಬಗ್ಗೆ ದೂರುಗಳು ಕೇಳಿಬಂದಿವೆ. ಈ ಸಮಸ್ಯೆ ಬಗೆಹರಿಸಲು ತಹಶೀಲ್ದಾರ್‌ಗೆ ಸೂಚನೆ ನೀಡಿದ್ದೇನೆ ಎಂದು ಸಂಸದರು ತಿಳಿಸಿದರು. ಕಚೇರಿಯಲ್ಲಿರುವ ಲಿಫ್ಟ್‌ ಕೆಟ್ಟು ನಿಂತಿತ್ತು, ಹಿರಿಯ ನಾಗರಿಕರಿಗೆ ಅನುಕೂಲವಾಗಲಿ ಎಂದು ಅದನ್ನೀಗ ರಿಪೇರಿ ಮಾಡಲಾಗಿದೆ. ಇಷ್ಟು ಮಾತ್ರವಲ್ಲದೇ ಜನರಿಗೆ ಎಲ್ಲ ರೀತಿಯ ಸೌಲಭ್ಯಗಳನ್ನು ಒದಗಿಸಲು ಅಧಿಕಾರಿಗಳು ಜವಾಬ್ದಾರಿ ವಹಿಸಿ ಕ್ರಮ ಕೈಗೊಳ್ಳಬೇಕು ಎಂದು ಯದುವೀರ್‌ ತಿಳಿಸಿದರು. ಸ್ಥಳೀಯ ಸಂಸ್ಥೆ ಚುನಾವಣೆ ವಿಳಂಬವಾಗುತ್ತಿರುವುದರಿಂದ ಭಾರಿ ತೊಂದರೆಗಳಾಗುತ್ತಿವೆ. ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಇದೇ ಸಂದರ್ಭದಲ್ಲಿ ಆಗ್ರಹಿಸಿದರು. :: ತಾಲೂಕು ಕಚೇರಿ ಜನಸ್ನೇಹಿ ಕಚೇರಿಯಾಗಲಿ ::  ಒಟ್ಟಾರೆಯಾಗಿ ತಾಲೂಕು ಕಚೇರಿ ಜನ ಸ್ನೇಹಿ ಕಚೇರಿಯಾಗಿ ರೂಪುಗೊಳ್ಳಬೇಕು. ಈ ರೀತಿಯಾಗಿ ಕ್ರಮ ಕೈಗೊಳ್ಳಬೇಕು ಎಂದು ತಹಶೀಲ್ದಾರ್‌, ಅಧಿಕಾರಿಗಳಿಗೆ, ಸಿಬ್ಬಂದಿಗೆ ಸ್ಪಷ್ಟ ಸೂಚನೆ ನೀಡಿದ್ದೇನೆ ಎಂದು ಸಂಸದ ಯದುವೀರ್‌ ಒಡೆಯರ್‌ ತಿಳಿಸಿದರು. :: ಕೇಂದ್ರದ ಸರ್ಕಾರದ ಯೋಜನೆ ಕುರಿತು ಪರಿಶೀಲನೆ ::  ಕೇಂದ್ರ ಬಿಜೆಪಿ ಸರ್ಕಾರ ಜಾರಿಗೆ ತಂದಿರುವ ಭೂ ರಕ್ಷಣಾ ದಾಖಲೀಕರಣ ಯೋಜನೆ ಕುರಿತು ಸಂಸದರು ಇದೇ ಸಂದರ್ಭದಲ್ಲಿ ಪರಿಶೀಲನೆ ನಡೆಸಿದರು. ಭೂ ದಾಖಲೆಗಳ ಸಂಪೂರ್ಣ ಡಿಜಿಟಲೀಕರಣ ಮಾಡುವ ಯೋಜನೆಗಾಗಿ ಮೈಸೂರನ್ನು ಪ್ರಾಯೋಗಿಕವಾಗಿ ಆಯ್ಕೆ ಮಾಡಿಕೊಳ್ಳಲಾಗಿದ್ದು, ಈ ನಿಟ್ಟಿನಲ್ಲಿ ತಾಲೂಕು ಕಚೇರಿಯಲ್ಲಿರುವ ಆಧುನಿಕ ಅಭಿಲೇಖಾಲಯ ಕಚೇರಿಗೆ ಭೇಟಿ ನೀಡಿ ದಾಖಲೆಗಳ ಡಿಜಿಟಲೀಕರಣ ಕುರಿತು ಮಾಹಿತಿ ಪಡೆದುಕೊಳ್ಳಲಾಯಿತು ಎಂದರು ತಿಳಿಸಿದರು. ಹಲವಾರು ದಶಕಗಳ ದಾಖಲೆಯ ಸಂರಕ್ಷಣೆ ಕಾರ್ಯ ನಡೆಯುತ್ತಿದೆ. ಕೇಂದ್ರ ಸರ್ಕಾರದ ಈ ಯೋಜನೆ ನಿಜಕ್ಕೂ ಜನಪರವಾಗಿದೆ ಎಂದು ಸಂಸದ ಯದುವೀರ್‌ ಒಡೆಯರ್‌ ಹೇಳಿದರು.

Follow us Follow us
Share. WhatsApp Facebook Twitter Email Telegram Copy Link

Related Posts

ಎಸ್‌ಐಆರ್ ವಿರುದ್ಧ ಕೊಡಗು ಜಿಲ್ಲಾ ಕಾಂಗ್ರೆಸ್ ಪ್ರತಿಭಟನೆ; ಚುನಾವಣಾ ಆಯುಕ್ತರ ರಾಜೀನಾಮೆಗೆ ಆಗ್ರಹಿಸಿ ರಸ್ತೆ ತಡೆ

ಅಕ್ಟೋಬರ್ 12, 2026

ಬೆಂಗಳೂರಿನಿಂದ ಮೈಸೂರಿಗೆ ದಕ್ಷಿಣ ಕರ್ನಾಟಕ ಅಂಚೆ ವಲಯದ ಪ್ರಧಾನ ಕಚೇರಿ ಸ್ಥಳಾಂತರಕ್ಕೆ ತಾತ್ವಿಕ ಒಪ್ಪಿಗೆ

ಅಕ್ಟೋಬರ್ 12, 2026

ಸೋಮೇಶ್ವರ ದೇವಾಲಯದಲ್ಲಿ 21ನೇ ವರ್ಷದ ಶರನ್ನವರಾತ್ರಿ ಉತ್ಸವಕ್ಕೆ ಚಾಲನೆ

ಅಕ್ಟೋಬರ್ 12, 2026

ಬೆಂಗಳೂರಿನಿಂದ ಮೈಸೂರಿಗೆ ದಕ್ಷಿಣ ಕರ್ನಾಟಕ ಅಂಚೆ ವಲಯದ ಪ್ರಧಾನ ಕಚೇರಿ ಸ್ಥಳಾಂತರಕ್ಕೆ ತಾತ್ವಿಕ ಒಪ್ಪಿಗೆ

ಅಕ್ಟೋಬರ್ 12, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮೈಸೂರು, NEWS DESK ಅ.12: ದಕ್ಷಿಣ ಕರ್ನಾಟಕ ಅಂಚೆ ವಲಯದ ಪ್ರಧಾನ ಕಚೇರಿಯನ್ನು ಬೆಂಗಳೂರಿನಿಂದ ಮೈಸೂರಿಗೆ ಸ್ಥಳಾಂತರಿಸಲು ಕೇಂದ್ರ ಸರ್ಕಾರ…

ಸೋಮೇಶ್ವರ ದೇವಾಲಯದಲ್ಲಿ 21ನೇ ವರ್ಷದ ಶರನ್ನವರಾತ್ರಿ ಉತ್ಸವಕ್ಕೆ ಚಾಲನೆ

ಅಕ್ಟೋಬರ್ 12, 2026

ಹಿರಿಯ ಹಾಕಿ ಆಟಗಾರ್ತಿ ದೇವರಾಜಮ್ಮ ಅವರಿಗೆ ನಾಡೋಜ ಕಮಲ ಹಂಪನಾ ರಾಜ್ಯಪ್ರಶಸ್ತಿ

ಅಕ್ಟೋಬರ್ 12, 2026

ಕುಂಜಿಲ ಸರ್ಕಾರಿ ಶಾಲೆಗೆ ಹೆಮ್ಮೆಯ ದುಬೈ ಕನ್ನಡ ಸಂಘದಿಂದ ಆಟೋಪಕರಣ, ಪೀಠೋಪಕರಣಗಳ ಕೊಡುಗೆ; ಸರ್ಕಾರಿ ಶಾಲೆ ಉಳಿಸಿ ಅಭಿಯಾನದಡಿ ವಿದ್ಯಾರ್ಥಿಗಳಿಗೆ ಸೌಲಭ್ಯಗಳ ಹಸ್ತಾಂತರ

ಅಕ್ಟೋಬರ್ 12, 2026

ಮಡಿಕೇರಿ ದಸರಾ ವಿದ್ಯುತ್ ದೀಪಾಲಂಕಾರ ಅಸಮರ್ಪಕ: ಶ್ರೀ ಕೋಟೆ ಮಹಾಗಣಪತಿ ದಸರಾ ಮಂಟಪ ಸಮಿತಿ ಆಕ್ಷೇಪ

ಅಕ್ಟೋಬರ್ 12, 2026

ಸುವರ್ಣ ಮಹೋತ್ಸವ ಸಂಭ್ರಮ: ಶ್ರೀ ಕೋಟೆ ಮಹಾಗಣಪತಿಗೆ 108 ಎಳನೀರು, ಪಂಚಾಮೃತ ಅಭಿಷೇಕ

ಅಕ್ಟೋಬರ್ 12, 2026

ಗಣೇಶೋತ್ಸವ ಸ್ವಾತಂತ್ರ್ಯ ಸಂಗ್ರಾಮದ ಪ್ರತೀಕ : ಸಂಸದ ಯದುವೀರ್ ಒಡೆಯರ್

ಅಕ್ಟೋಬರ್ 11, 2026

ಮಳೆ ಕೊರತೆ ನೀಗಿ ನಾಡಿನಲ್ಲಿ ಸಮೃದ್ಧಿ ನೆಲೆಸಲಿ : ಸಚಿವ ಪಿ.ಎಂ.ನರೇಂದ್ರ ಸ್ವಾಮಿ

ಅಕ್ಟೋಬರ್ 11, 2026

ಗೋಣಿಕೊಪ್ಪ ದಸರಾ ಜನೋತ್ಸವ ಉದ್ಘಾಟಿಸಿದ ಸಚಿವ ನರೇಂದ್ರ ಸ್ವಾಮಿ

ಅಕ್ಟೋಬರ್ 11, 2026

ಮಡಿಕೇರಿ ಜಿಲ್ಲಾಸ್ಪತ್ರೆಯಲ್ಲಿ ರೂ.10 ಕೋಟಿ ವೆಚ್ಚದ ಅತ್ಯಾಧುನಿಕ ಹೃದ್ರೋಗ ಚಿಕಿತ್ಸಾ ಘಟಕ : ನವೆಂಬರ್‌ನಲ್ಲಿ ಸೇವೆ ಆರಂಭಿಸಲು ಸಿದ್ಧತೆ : ಶಾಸಕ ಡಾ. ಮಂತರ್ ಗೌಡ ಪರಿಶೀಲನೆ

ಅಕ್ಟೋಬರ್ 11, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.