Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*
  • *ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*
  • *ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*
  • *ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*
  • *ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*
  • *ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*
  • *2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*
  • *ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*
  • *ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*
  • *ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕೊಡಗು : ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ವಿವಿಧ ಯೋಜನೆ ಅರ್ಹರಿಗೆ ತಲುಪಿಸಿ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಸೂಚನೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕೊಡಗು : ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ವಿವಿಧ ಯೋಜನೆ ಅರ್ಹರಿಗೆ ತಲುಪಿಸಿ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಸೂಚನೆ*

ಜನವರಿ 8, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜ.8 NEWS DESK : ಜಿಲ್ಲಾ ಮಕ್ಕಳ ರಕ್ಷಣಾ ಘಟಕದಲ್ಲಿನ ಪ್ರಾಯೋಜಕತ್ವ, ವಿಶೇಷ ಪಾಲನೆ, ಉಪಕಾರ್ ಹಾಗೂ ಮುಖ್ಯಮಂತ್ರಿ ಅವರ ಬಾಲಸೇವಾ ಯೋಜನೆಯನ್ನು ಅರ್ಹರಿಗೆ ತಲುಪಿಸುವಂತೆ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಅವರು ಸೂಚಿಸಿದ್ದಾರೆ. ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ವ್ಯಾಪ್ತಿಯ ಪ್ರಾಯೋಜಕತ್ವ ಹಾಗೂ ಪೋಷಕತ್ವ ಅನುಮೋದನಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಸರ್ಕಾರದ ಮಿಷನ್ ವಾತ್ಸಲ್ಯ ಮಾರ್ಗಸೂಚಿಯಂತೆ ಪ್ರಾಯೋಜಕತ್ವ ಯೋಜನೆ ಜಾರಿಗೊಳಿಸಿದ್ದು, 18 ವರ್ಷದೊಳಗಿನ ಮಕ್ಕಳ ರಕ್ಷಣೆ, ಪಾಲನೆ ಮತ್ತಿತರ ಸರ್ವೋತೋಮುಖ ಅಭಿವೃದ್ಧಿಗೆ ಶ್ರಮಿಸುವಂತೆ ಸೂಚಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಅಧಿಕಾರಿ ಎಸ್.ಹೊನ್ನೇಗೌಡ ಅವರು ಪ್ರಾಯೋಜಕತ್ವ ಯೋಜನೆಯಡಿ 4 ಸಾವಿರ ರೂ. ನೀಡಲಾಗುತ್ತಿದ್ದು, 2025-26 ನೇ ಸಾಲಿನ ಮೂರನೇ ತ್ರೈಮಾಸಿಕಕ್ಕೆ 102 ಅರ್ಜಿಗಳು ಸ್ವೀಕೃತವಾಗಿದ್ದು, ಈ ಅರ್ಜಿಗಳಲ್ಲಿ 92 ಅರ್ಜಿಗಳು ಜಿಲ್ಲಾ ಪ್ರಾಯೋಜಕತ್ವ ಮತ್ತು ಪೋಷಕತ್ವ ಅನುಮೋದನಾ ಸಮಿತಿಗೆ ಮಂಡಿಸಲಾಗಿದೆ ಎಂದರು. ವಿಶೇಷ ಪಾಲನಾ ಯೋಜನೆಯಡಿ ಅರ್ಹರಿಗೆ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಬೇಕು. 18 ವರ್ಷದೊಳಗಿನ ಮಕ್ಕಳ ರಕ್ಷಣೆ, ಪಾಲನೆ, ಪೋಷಣೆ ಮತ್ತಿತರ ಸಂಬಂಧ ಅಗತ್ಯ ಕ್ರಮವಹಿಸುವಂತೆ ಜಿಲ್ಲಾಧಿಕಾರಿ ಅವರು ನಿರ್ದೇಶನ ನೀಡಿದರು. ಉಪಕಾರ್ ಯೋಜನೆಯಡಿ ಬಾಲ ನ್ಯಾಯ ಮಕ್ಕಳ ಪಾಲನೆ ಮತ್ತು ರಕ್ಷಣೆ ಕಾಯ್ದೆ, 2015 ರಡಿ ನೋಂದಾಯಿಸಲಾಗಿರುವ ಎಲ್ಲಾ ಮಕ್ಕಳ ಪಾಲನಾ ಸಂಸ್ಥೆಗಳಲ್ಲಿರುವ 18 ವರ್ಷ ಪೂರ್ಣಗೊಂಡು ಸಂಸ್ಥೆಯಿಂದ ಬಿಡುಗಡೆಯಾದ ಮಕ್ಕಳ ಮುಂದಿನ ಪುನರ್ ವಸತಿಗಾಗಿ ಹಾಗೂ ಸಮಾಜದಲ್ಲಿ ಗೌರವಯುತವಾಗಿ ಬದುಕಲು ಅನುವಾಗುವಂತೆ ಆರ್ಥಿಕ ಸ್ವಾವಲಂಬನೆಗೆ ಉಪಕಾರ್ ಯೋಜನೆ ಜಾರಿಗೊಳಿಸಲಾಗಿದೆ ಎಂದರು. ಮಕ್ಕಳ ರಕ್ಷಣಾ ಅಧಿಕಾರಿ ಸಚಿನ್ ಸುವರ್ಣ ಅವರು ಉಪಕಾರ್ ಯೋಜನೆಯಡಿ ಮಾಸಿಕ 5 ಸಾವಿರ ರೂ. ಅರ್ಹರಿಗೆ ನೀಡಲಾಗುತ್ತಿದ್ದು, ಕನಿಷ್ಠ ಮೂರು ವರ್ಷದವರೆಗೆ ಮಕ್ಕಳ ಪಾಲನೆ ಸಂಬಂಧಪಟ್ಟ ಸಂಸ್ಥೆಯವರದಾಗಿರುತ್ತದೆ ಎಂದು ತಿಳಿಸಿದರು. ಮುಖ್ಯಮಂತ್ರಿ ಅವರ ಬಾಲಸೇವಾ ಯೋಜನೆಯಡಿ ಕೋವಿಡ್-19 ಸಾಂಕ್ರಾಮಿಕ ರೋಗದಿಂದ ಪೋಷಕರನ್ನು ಕಳೆದುಕೊಂಡಿರುವ ಮಗುವಿಗೆ 18 ವರ್ಷ ತುಂಬುವವರೆಗೆ ಮಾಸಿಕ ರೂ.3,500 ನೀಡಲಾಗುತ್ತಿದ್ದು, ಈ ಯೋಜನೆಯಡಿ ಇಬ್ಬರಿಗೆ ಸಹಾಯಧನ ದೊರೆಯುತ್ತಿದೆ ಎಂದು ಮಾಹಿತಿ ನೀಡಿದರು. ಉಪ ಪೊಲೀಸ್ ವರಿಷ್ಠಾಧಿಕಾರಿ ದಿನೇಶ್ ಕುಮಾರ್, ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷರಾದ ಅಂಬಿಕಾ, ಬಾಲಕಿಯರ ಬಾಲಮಂದಿರದ ಅಧೀಕ್ಷಕರಾದ ನಾಗರತ್ನ ಇತರರು ಇದ್ದರು. :: ಸಭೆ :: ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿಯ ಕಾರ್ಯಕಾರಿ ಜಿಲ್ಲಾ ಮಟ್ಟದ ಟಾಸ್ಕ್ ಪೋರ್ಸ್ ಹಾಗೂ ಜಿಲ್ಲಾ ಸಲಹಾ ಸಮಿತಿ ಸಭೆಯು ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಬಾಲಕಾರ್ಮಿಕ ಯೋಜನಾ ಸೊಸೈಟಿಯ ಕಾರ್ಯಚಟುವಟಿಕೆಯನ್ನು ಪರಿಣಾಮಕಾರಿಯಾಗಿ ನಿರ್ವಹಿಸುವಂತೆ ಸೂಚಿಸಿದರು. ಬಾಲ ಹಾಗೂ ಕಿಶೋರ ಕಾರ್ಮಿಕರ ರಕ್ಷಣೆಗೆ ಮುಂದಾಗಬೇಕು. ಪತ್ತೆಯಾದ ಬಾಲ/ ಕಿಶೋರ ಕಾರ್ಮಿಕರಿಗೆ ಅರ್ಹತೆ ಅನುಸಾರ ಸರ್ಕಾರಿ ಬಾಲಮಂದಿರ ವಸತಿ ನಿಲಯಗಳಲ್ಲಿ ನೇರವಾಗಿ ದಾಖಲಿಸಲು ಕ್ರಮವಹಿಸಬೇಕು ಎಂದು ಸಲಹೆ ಮಾಡಿದರು. ಮಹಿಳೆಯರು ಮತ್ತು ಮಕ್ಕಳ ಕಾವಲು ಸಮಿತಿ, ಗ್ರಾಮ ಸಭೆಗಳಲ್ಲಿ ಬಾಲ/ಕಿಶೋರ ಕಾರ್ಮಿಕರ ರಕ್ಷಣೆ ಬಗ್ಗೆ ಬೆಳಕು ಚೆಲ್ಲುವಂತಾಗಬೇಕು ಸಲಹೆ ಮಾಡಿದರು. ಬಾಲ ಕಾರ್ಮಿಕರ ಮತ್ತು ಕಿಶೋರ ಕಾರ್ಮಿಕರು ಮುಕ್ತ ಜಿಲ್ಲೆಯನ್ನಾಗಿ ಮಾಡಲು ಅರಿವು ಮೂಡಿಸುವುದು, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಉಪಯೋಜನೆ ಕಾರ್ಯಕ್ರಮ ತಲುಪಿಸುವಂತೆ ನಿರ್ದೇಶನ ನೀಡಿದರು. ಈ ಸಂಬಂಧ ಇಬ್ಬರಿಗೆ ಕಲಿಕಾ ಸಾಮಗ್ರಿಗಳನ್ನು ಇದೇ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಅವರು ವಿತರಿಸಿದರು. ಜಿಲ್ಲಾ ಕಾರ್ಮಿಕ ಅಧಿಕಾರಿ ಕಾವೇರಿ, ತಾಲ್ಲೂಕು ಕಾರ್ಮಿಕ ಅಧಿಕಾರಿಗಳಾದ ಎಂ.ಎಂ.ಯತ್ನಟ್ಟಿ, ಶಶಿಧರ, ಎಂ.ಸಿ.ಮಾದಪ್ಪ, ಜಿಲ್ಲಾ ಕಾರ್ಮಿಕ ಯೋಜನಾ ಸೊಸೈಟಿಯ ಯೋಜನಾ ನಿರ್ದೇಶಕರಾದ ಶಿರಾಜ್ ಅಹಮದ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸತೀಶ್ ಕುಮಾರ್, ಐಟಿಡಿಪಿ ಇಲಾಖಾ ಅಧಿಕಾರಿ ಹೊನ್ನೇಗೌಡ, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಶೇಖರ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕರಾದ ಪ್ರಸನ್ನಕುಮಾರ್ ಇತರರು ಹಲವು ಮಾಹಿತಿ ನೀಡಿದರು.

 

Follow us Follow us
Share. WhatsApp Facebook Twitter Email Telegram Copy Link

Related Posts

*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಸೆ.26: ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್…

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*

ಸೆಪ್ಟೆಂಬರ್ 26, 2026

*ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*

ಸೆಪ್ಟೆಂಬರ್ 26, 2026

*ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*

ಸೆಪ್ಟೆಂಬರ್ 26, 2026

*2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*

ಸೆಪ್ಟೆಂಬರ್ 26, 2026

*ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*

ಸೆಪ್ಟೆಂಬರ್ 26, 2026

*ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*

ಸೆಪ್ಟೆಂಬರ್ 26, 2026

*ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*

ಸೆಪ್ಟೆಂಬರ್ 26, 2026

*36 ವರ್ಷ ಸೇವೆ ಸಲ್ಲಿಸಿದ ಅಂಗನವಾಡಿ ಕಾರ್ಯಕರ್ತೆ ದೇವಮಾಜಿ, ಶಿಕ್ಷಕಿ ಭೋಜಮ್ಮಗೆ ಆತ್ಮೀಯ ಬೀಳ್ಕೊಡುಗೆ*

ಸೆಪ್ಟೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.