Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ವನ್ಯಜೀವಿಗಳ ಮಾಹಿತಿ ಪಡೆದ ಶಾಸಕ ಡಾ.ಮಂತರ್ ಗೌಡ*
  • *ಕಾಡಾನೆ ದಾಳಿಗೆ ಸಿಲುಕಿ ಗ್ರಾ.ಪಂ ಮಾಜಿ ಸದಸ್ಯೆ ಬಲಿ : ವಾಲ್ನೂರು ಗ್ರಾಮದಲ್ಲಿ ಘಟನೆ*
  • *ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ : ಕೊಡವ ಮಹಿಳೆಯರ ಸಬಲೀಕರಣಕ್ಕಾಗಿ ಸಿಎನ್‌ಸಿಯಿಂದ ಹಕ್ಕೊತ್ತಾಯ ಮಂಡನೆ*
  • *ಕೂಡಿಗೆ ಡಯಟ್ ಸಂಸ್ಥೆಯಲ್ಲಿ ಜಿಲ್ಲಾ ವೃತ್ತಿ ಮಾರ್ಗದರ್ಶನ ಘಟಕ ಸ್ಥಾಪನೆ ಕುರಿತ ಸಭೆ*
  • *ಗೋಣಿಕೊಪ್ಪಲು : ಮಹಿಳೆಯರು ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಕೊಳ್ಳಿ : ಶಾಸಕ ಎ.ಎಸ್.ಪೊನ್ನಣ್ಣ*
  • *ಮಡಿಕೇರಿಯಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ : ಮಹಿಳೆಯರಿಗೆ ಆತ್ಮವಿಶ್ವಾಸ ಮತ್ತು ಸಾಮಾಜಿಕ ಬೆಂಬಲ ಅತ್ಯಗತ್ಯ : ಕವಯತ್ರಿ ಸ್ಮಿತಾ ಅಮೃತಾರಾಜ್*
  • *ಬಾಳೆಲೆ : ರೂ. 27.23 ಕೋಟಿ ವೆಚ್ಚದ ವಿದ್ಯುತ್ ವಿತರಣಾ ಕೇಂದ್ರ ಸ್ಥಾಪನೆಗೆ ಶಾಸಕ ಎ.ಎಸ್.ಪೊನ್ನಣ್ಣ ಚಾಲನೆ*
  • *ಶ್ರೀಮಂಗಲದಲ್ಲಿ ಮಹಿಳಾ ದಿನಾಚರಣೆ : ಮಹಿಳಾ ಸಬಲೀಕರಣವು ಸರ್ಕಾರದ ಪ್ರಮುಖ ಆಶಯ : ಶಾಸಕ ಎ.ಎಸ್.ಪೊನ್ನಣ್ಣ*
  • *ಮಾ.8 ರಂದು ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ*
  • *ಮಾ.8 ರಂದು ಬಿಟ್ಟಂಗಾಲದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಜ.11ರಂದು ಕೊಡಗು ವಿದ್ಯಾ ಇಲಾಖಾ ನೌಕರರ ಪತ್ತಿನ ಸೌಹಾರ್ದ ಸಹಕಾರಿ ಸಂಘ ನಿಯಮಿತದ ಶತಮಾನೋತ್ಸವ ಸಮಾರಂಭ : ಶಿಕ್ಷಣ ಸಚಿವರಿಂದ ಶತಸಂಭ್ರಮ ಭವನಕ್ಕೆ ಶಂಕುಸ್ಥಾಪನೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಜ.11ರಂದು ಕೊಡಗು ವಿದ್ಯಾ ಇಲಾಖಾ ನೌಕರರ ಪತ್ತಿನ ಸೌಹಾರ್ದ ಸಹಕಾರಿ ಸಂಘ ನಿಯಮಿತದ ಶತಮಾನೋತ್ಸವ ಸಮಾರಂಭ : ಶಿಕ್ಷಣ ಸಚಿವರಿಂದ ಶತಸಂಭ್ರಮ ಭವನಕ್ಕೆ ಶಂಕುಸ್ಥಾಪನೆ*

ಜನವರಿ 9, 20263 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ NEWS DESK  ಜ.9 : ಕೊಡಗು ವಿದ್ಯಾ ಇಲಾಖಾ ನೌಕರರ ಪತ್ತಿನ ಸೌಹಾರ್ದ ಸಹಕಾರಿ ಸಂಘ ನಿಯಮಿತದ ಶತಮಾನೋತ್ಸವ ಸಮಾರಂಭ ಜ.11ರಂದು ಮಡಿಕೇರಿಯ ಗೌಡ ಸಮಾಜದಲ್ಲಿ ನಡೆಯಲಿದೆ. ಅಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಶತಸಂಭ್ರಮ ಭವನ ನಿರ್ಮಾಣ ಕಾರ್ಯಕ್ಕೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ವಿದ್ಯಾ ಇಲಾಖಾ ನೌಕರರ ಪತ್ತಿನ ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷ ಹೆಚ್.ಎಸ್.ಚೇತನ್ ಅವರು ತಮ್ಮ ಅಧ್ಯಕ್ಷತೆಯಲ್ಲಿ ಬೆಳಿಗ್ಗೆ 10.30 ಗಂಟೆಗೆ ನಡೆಯುವ ಸಭಾ ಕಾರ್ಯಕ್ರಮವನ್ನು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರು ಉದ್ಘಾಟಿಸಲಿದ್ದಾರೆ. ಬೆಳಿಗ್ಗೆ 9.30 ಗಂಟೆಗೆ ಗುರು ಸದನದಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಶತಸಂಭ್ರಮ ಭವನ ನಿರ್ಮಾಣಕ್ಕೆ ಭೂಮಿಪೂಜೆ ನೆರವೇರಿಸಲಿದ್ದಾರೆ. ಉದ್ದೇಶಿತ ಶತಸಂಭ್ರಮ ಕಟ್ಟಡದ ನಕಾಶೆಯನ್ನು ಕೊಡಗು-ಮೈಸೂರು ಲೋಕಸಭಾ ಕ್ಷೇತ್ರದ ಸಂಸದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಅನಾವರಣಗೊಳಿಸಲಿದ್ದಾರೆ ಎಂದರು.
ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿಯ ಅಧ್ಯಕ್ಷ ಜಿ.ನಂಜನಗೌಡ ಅವರು ಬೆಳಿಗ್ಗೆ ಸೌಹಾರ್ದ ಸೌರಭ ಕಟ್ಟಡದಲ್ಲಿ ಧ್ವಜಾರೋಹಣ ಮಾಡಲಿದ್ದಾರೆ. ಗೌಡ ಸಮಾಜದಲ್ಲಿ ನಡೆಯುವ ಸಭಾ ಕಾರ್ಯಕ್ರಮದಲ್ಲಿ ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಅವರು ಸ್ಮರಣ ಸಂಚಿಕೆ ಬಿಡುಗಡೆ, ಕ್ಯಾಲೆಂಡರ್ ಮತ್ತು ಉಡುಗೊರೆ ಅನಾವರಣ ಮಾಡಲಿದ್ದಾರೆ ಎಂದು ತಿಳಿಸಿದರು. ಮುಖ್ಯ ಅತಿಥಿಗಳಾಗಿ ವಿಧಾನ ಪರಿಷತ್ ಸದಸ್ಯರುಗಳಾದ ಎಂ.ಪಿ.ಸುಜಾ ಕುಶಾಲಪ್ಪ, ಎಸ್.ಎಲ್.ಭೋಜೇಗೌಡ, ಧನಂಜಯ ಸರ್ಜಿ, ಕೊಡಗು ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ನ ಅಧ್ಯಕ್ಷ ಕೊಡಂದೇರ ಬಾಂಡ್ ಗಣಪತಿ, ಜಿ.ಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಆನಂದ್ ಪ್ರಕಾಶ್ ಮೀನಾ, ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ರಾಜ್ಯಾಧ್ಯಕ್ಷ ಚಂದ್ರಶೇಖರ ನುಗ್ಲಿ, ಗೌರವಾಧ್ಯಕ್ಷ ನಾಗೇಶ್ ಕೆ., ಕೊಡಗು ಜಿಲ್ಲಾ ಸಹಕಾರಿ ಸಂಘಗಳ ಉಪನಿಬಂಧಕ ಹೆಚ್.ಡಿ.ರವಿಕುಮಾರ್, ನಿವೃತ್ತ ಪ್ರಾಂಶುಪಾಲ ಪಟ್ಟಡ ಎ.ಪೂವಣ್ಣ ಹಾಗೂ ಮಂಗಳೂರಿನ ಕೆಐಒಸಿಎಲ್ ಲಿಮಿಟೆಡ್ ನ ಡೆಪ್ಯೂಟಿ ಜನರಲ್ ಮ್ಯಾನೇಜರ್ ತೇಲಪಂಡ ಎಂ.ಕಾರ್ಯಪ್ಪ ಪಾಲ್ಗೊಳ್ಳಲಿದ್ದಾರೆ. ವಿಶೇಷ ಆಹ್ವಾನಿತರಾಗಿ ನಗರಸಭಾ ಅಧ್ಯಕ್ಷೆ ಪಿ.ಕಲಾವತಿ, ರಾಜ್ಯ ನೌಕರರ ಸಂಘದ ಹಾಸನ ಜಿಲ್ಲಾಧ್ಯಕ್ಷ ಬಿ.ಪಿ.ಕೃಷ್ಣೇಗೌಡ, ಕೊಡಗು ಡಿಸಿಸಿ ಬ್ಯಾಂಕ್ ನ ನಿರ್ದೇಶಕ ಟಿ.ಆರ್.ಶರವಣಕುಮಾರ್, ಉದ್ಯಮಿ ಹಾಗೂ ಸಮಾಜ ಸೇವಕ ನಾಪಂಡ ಮುತ್ತಪ್ಪ, ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆಯ ಉಪನಿರ್ದೇಶಕ ಬಸವರಾಜು, ಕೂಡಿಗೆ ಡಯಟ್ ನ ಉಪ ನಿರ್ದೇಶಕ ರಾಮಚಂದ್ರ ರಾಜೇ ಅರಸ್, ಮಡಿಕೇರಿ ತಾಲ್ಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಮಹೇಶ್ ಆರ್.ಪಿ., ಸೋಮವಾರಪೇಟೆ ತಾಲ್ಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಕೃಷ್ಣಪ್ಪ ಎಂ., ವಿರಾಜಪೇಟೆ ತಾಲ್ಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಆನಂದ ಟಿ.ಜಿ., ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಪ್ರಸನ್ನ ಕುಮಾರ್ ಕೆ.ಎಸ್., ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಕುಮಾರ್ ಹೆಚ್.ಜಿ., ಹಿರಿಯ ಸಹಕಾರಿ ಹಾಗೂ ವಕೀಲ ಬಸವರಾಜ್ ಸಂಗಪ್ಪನವರ್ ಹಾಗೂ ಕೊಡಗು ವಿದ್ಯಾ ಇಲಾಖಾ ನೌಕರರ ಪತ್ತಿನ ಸೌಹಾರ್ದ ಸಹಕಾರಿ ಸಂಘದ ನಿವೃತ್ತ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮುತ್ತಮ್ಮ ಪಿ.ಎಸ್ ಉಪಸ್ಥಿತರಿರುವರು. *100 ಸಹಕಾರಿಗಳಿಗೆ ಸನ್ಮಾನ*
ಕಾರ್ಯಕ್ರಮದಲ್ಲಿ 100 ಹಿರಿಯ ಸಹಕಾರಿಗಳನ್ನು ಸನ್ಮಾನಿಸಿ ಗೌರವಿಸಲಾಗುವುದು. ಶತಸಂಭ್ರಮ ಕಾರ್ಯಕ್ರಮದಲ್ಲಿ ಭಾಗವಹಿಸುವ ಎಲ್ಲಾ ಸದಸ್ಯರಿಗೆ ಉಡುಗೊರೆ ನೀಡಲಾಗುವುದು. ಶತಸಂಭ್ರಮ ಕಾರ್ಯಕ್ರಮದ ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಿಸಲಾಗುವುದು. ಸಂಘದ ಸ್ಥಾಪಕ ಕಾರ್ಯದರ್ಶಿ ತೇಲಂಪಡ ಎಂ.ಕಾರ್ಯಪ್ಪ ಅವರ ಕುಟುಂಬ ಹಾಗೂ ಸ್ಥಾಪಕ ಅಧ್ಯಕ್ಷ ಪಟ್ಟಡ ಎಂ.ಉತ್ತಪ್ಪ ಅವರ ಕುಟುಂಬದ ಸದಸ್ಯರನ್ನು ವಿಶೇಷವಾಗಿ ಸನ್ಮಾನಿಸಲಾಗುವುದು. ಶತಸಂಭ್ರಮದ ಪ್ರಯುಕ್ತ ವೈವಿಧ್ಯಮಯ ಮನೋರಂಜನಾ ಕಾರ್ಯಕ್ರಮಗಳನ್ನು ಕೂಡ ಆಯೋಜಿಸಲಾಗಿದೆ. ಸರ್ವರಿಗೂ ಊಟದ ವ್ಯವಸ್ಥೆಯನ್ನು ಮಾಡಲಾಗಿದೆ ಎಂದು ಹೆಚ್.ಎಸ್.ಚೇತನ್ ಮಾಹಿತಿ ನೀಡಿದರು.
ಸಂಘದ ಸರ್ವ ಸದಸ್ಯರು, ಹಿರಿಯ ಸದಸ್ಯರು, ಅಧಿಕಾರಿಗಳು, ವಿವಿಧ ನೌಕರರ, ಶಿಕ್ಷಕರ ಸಂಘದ ಅಧ್ಯಕ್ಷರು, ಪದಾಧಿಕಾರಿಗಳು, ನಿರ್ದೇಶಕರು, ಎಲ್ಲಾ ವೃತ್ತಿ ಬಾಂಧವರು ಹಾಗೂ ಕೊಡಗು ಜಿಲ್ಲೆಯ ಸಮಸ್ತ ಸಹಕಾರಿಗಳು ಆಗಮಿಸಿ ಶತಸಂಭ್ರಮ ಸಮಾರಂಭವನ್ನು ಯಶಸ್ವಿಗೊಳಿಸುವಂತೆ ಮನವಿ ಮಾಡಿದರು. ಸಂಘದ ನಿರ್ದೇಶಕ ಮಂಜುನಾಥ್ ಹೆಚ್.ಎನ್. ಅವರು ಮಾತನಾಡಿ ಕೊಡಗು ವಿದ್ಯಾ ಇಲಾಖಾ ನೌಕರರ ಪತ್ತಿನ ಸೌಹಾರ್ದ ಸಹಕಾರಿ ಸಂಘ 100 ವರ್ಷಗಳನ್ನು ಪೂರೈಸಿದ ಹೆಮ್ಮೆಯ ಸಂಸ್ಥೆಯಾಗಿದೆ. ಅದ್ದೂರಿಯ ಶತಮಾನೋತ್ಸವ ಸಮಾರಂಭವನ್ನು ಆಯೋಜಿಸಲು ಕಳೆದ ಒಂದು ತಿಂಗಳಿನಿಂದ ಅಧ್ಯಕ್ಷ ಹೆಚ್.ಎಸ್.ಚೇತನ್ ಅವರ ನೇತೃತ್ವದಲ್ಲಿ ಶ್ರಮಿಸಲಾಗುತ್ತಿದೆ. ಸರ್ವರೂ ಕಾರ್ಯಕ್ರಮಕ್ಕೆ ಆಗಮಿಸಿ ಯಶಸ್ವಿಗೊಳಿಸಿ ಎಂದರು. ಸುದ್ದಿಗೋಷ್ಠಿಯಲ್ಲಿ ಸಂಘದ ಉಪಾಧ್ಯಕ್ಷ ಹೆಚ್.ಆರ್.ಮುತ್ತಪ್ಪ, ನಿರ್ದೇಶಕರುಗಳಾದ ಪುದಿಯನೆರವನ ರೇವತಿ ರಮೇಶ್, ದೇವಾನಂದ ಎನ್.ಸಿ. ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಸ್.ಸಿ.ನಟೇಶ ಉಪಸ್ಥಿತರಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ವನ್ಯಜೀವಿಗಳ ಮಾಹಿತಿ ಪಡೆದ ಶಾಸಕ ಡಾ.ಮಂತರ್ ಗೌಡ*

ಮಾರ್ಚ್ 9, 2026

*ಕಾಡಾನೆ ದಾಳಿಗೆ ಸಿಲುಕಿ ಗ್ರಾ.ಪಂ ಮಾಜಿ ಸದಸ್ಯೆ ಬಲಿ : ವಾಲ್ನೂರು ಗ್ರಾಮದಲ್ಲಿ ಘಟನೆ*

ಮಾರ್ಚ್ 9, 2026

*ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ : ಕೊಡವ ಮಹಿಳೆಯರ ಸಬಲೀಕರಣಕ್ಕಾಗಿ ಸಿಎನ್‌ಸಿಯಿಂದ ಹಕ್ಕೊತ್ತಾಯ ಮಂಡನೆ*

ಮಾರ್ಚ್ 8, 2026

*ಕಾಡಾನೆ ದಾಳಿಗೆ ಸಿಲುಕಿ ಗ್ರಾ.ಪಂ ಮಾಜಿ ಸದಸ್ಯೆ ಬಲಿ : ವಾಲ್ನೂರು ಗ್ರಾಮದಲ್ಲಿ ಘಟನೆ*

ಮಾರ್ಚ್ 9, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ NEWS DESK ಮಾ.9 : ಕಾಡಾನೆ ದಾಳಿಗೆ ಸಿಲುಕಿ ಗ್ರಾ.ಪಂ ಮಾಜಿ ಸದಸ್ಯರೊಬ್ಬರು ಮೃತಪಟ್ಟಿರುವ ಘಟನೆ ಕುಶಾಲನಗರ ತಾಲ್ಲೂಕಿನ…

*ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ : ಕೊಡವ ಮಹಿಳೆಯರ ಸಬಲೀಕರಣಕ್ಕಾಗಿ ಸಿಎನ್‌ಸಿಯಿಂದ ಹಕ್ಕೊತ್ತಾಯ ಮಂಡನೆ*

ಮಾರ್ಚ್ 8, 2026

*ಕೂಡಿಗೆ ಡಯಟ್ ಸಂಸ್ಥೆಯಲ್ಲಿ ಜಿಲ್ಲಾ ವೃತ್ತಿ ಮಾರ್ಗದರ್ಶನ ಘಟಕ ಸ್ಥಾಪನೆ ಕುರಿತ ಸಭೆ*

ಮಾರ್ಚ್ 8, 2026

*ಗೋಣಿಕೊಪ್ಪಲು : ಮಹಿಳೆಯರು ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಕೊಳ್ಳಿ : ಶಾಸಕ ಎ.ಎಸ್.ಪೊನ್ನಣ್ಣ*

ಮಾರ್ಚ್ 8, 2026

*ಮಡಿಕೇರಿಯಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ : ಮಹಿಳೆಯರಿಗೆ ಆತ್ಮವಿಶ್ವಾಸ ಮತ್ತು ಸಾಮಾಜಿಕ ಬೆಂಬಲ ಅತ್ಯಗತ್ಯ : ಕವಯತ್ರಿ ಸ್ಮಿತಾ ಅಮೃತಾರಾಜ್*

ಮಾರ್ಚ್ 8, 2026

*ಬಾಳೆಲೆ : ರೂ. 27.23 ಕೋಟಿ ವೆಚ್ಚದ ವಿದ್ಯುತ್ ವಿತರಣಾ ಕೇಂದ್ರ ಸ್ಥಾಪನೆಗೆ ಶಾಸಕ ಎ.ಎಸ್.ಪೊನ್ನಣ್ಣ ಚಾಲನೆ*

ಮಾರ್ಚ್ 7, 2026

*ಶ್ರೀಮಂಗಲದಲ್ಲಿ ಮಹಿಳಾ ದಿನಾಚರಣೆ : ಮಹಿಳಾ ಸಬಲೀಕರಣವು ಸರ್ಕಾರದ ಪ್ರಮುಖ ಆಶಯ : ಶಾಸಕ ಎ.ಎಸ್.ಪೊನ್ನಣ್ಣ*

ಮಾರ್ಚ್ 7, 2026

*ಮಾ.8 ರಂದು ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ*

ಮಾರ್ಚ್ 7, 2026

*ಮಾ.8 ರಂದು ಬಿಟ್ಟಂಗಾಲದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ*

ಮಾರ್ಚ್ 7, 2026

*ಕೊಡವ ಅಭಿವೃದ್ಧಿ ನಿಗಮ ಘೋಷಣೆ : ಯುಕೊ ಸಂಭ್ರಮಾಚರಣೆ : ಶಾಸಕ ಪೊನ್ನಣ್ಣ, ಮಂಜು ಚಿಣ್ಣಪ್ಪಗೆ ಸನ್ಮಾನ

ಮಾರ್ಚ್ 7, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.