Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*
  • *ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*
  • *ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*
  • *ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*
  • *ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*
  • *ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*
  • *2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*
  • *ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*
  • *ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*
  • *ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ರಾಜ್ಯ ಸರ್ಕಾರಿ ನೌಕರರ ಜಿಲ್ಲಾ ಮಟ್ಟದ ಕ್ರೀಡಾಕೂಟ : 9 ಕೋಟಿ ರೂ. ವೆಚ್ಚದಲ್ಲಿ ಸಿಂಥಟಿಕ್ ಅಥ್ಲೆಟಿಕ್ ಟ್ರ್ಯಾಕ್ ನಿರ್ಮಾಣ : ಶಾಸಕ ಡಾ.ಮಂತರ್ ಗೌಡ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ರಾಜ್ಯ ಸರ್ಕಾರಿ ನೌಕರರ ಜಿಲ್ಲಾ ಮಟ್ಟದ ಕ್ರೀಡಾಕೂಟ : 9 ಕೋಟಿ ರೂ. ವೆಚ್ಚದಲ್ಲಿ ಸಿಂಥಟಿಕ್ ಅಥ್ಲೆಟಿಕ್ ಟ್ರ್ಯಾಕ್ ನಿರ್ಮಾಣ : ಶಾಸಕ ಡಾ.ಮಂತರ್ ಗೌಡ*

ಜನವರಿ 9, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ NEWS DESK ಜ.9 : ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ 9 ಕೋಟಿ ರೂ. ವೆಚ್ಚದಲ್ಲಿ ಸಿಂಥಟಿಕ್ ಅಥ್ಲೆಟಿಕ್ ಟ್ರ್ಯಾಕ್ ನಿರ್ಮಾಣಕ್ಕೆ ಸರ್ಕಾರದಿಂದ ಮಂಜೂರಾತಿ ದೊರೆತಿದ್ದು, ಈಗಾಗಲೇ 20 ಲಕ್ಷ ರೂ. ಬಿಡುಗಡೆಯಾಗಿದೆ ಎಂದು ಮಡಿಕೇರಿ ಶಾಸಕ ಡಾ.ಮಂತರ್ ಗೌಡ ಅವರು ತಿಳಿಸಿದ್ದಾರೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ರಾಜ್ಯ ಸರ್ಕಾರಿ ನೌಕರರ ಸಂಘ, ಜಿಲ್ಲಾ ಶಾಖೆ ಇವರ ಸಂಯುಕ್ತ ಆಶ್ರಯದಲ್ಲಿ ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಕೊಡಗು ಜಿಲ್ಲಾ ಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ ಸಾಂಸ್ಕೃತಿಕ ಸ್ಪರ್ಧೆಗೆ ಚಾಲನೆ ನೀಡಿ ಅವರು ಮಾತನಾಡಿದರು. ಹಾಗೆಯೇ ಜಿಲ್ಲಾ ಕ್ರೀಡಾಂಗಣದಲ್ಲಿ ಮಿನಿ ಒಳಾಂಗಣ ಸೆಮಿ ಇಂಡೋರ್ ಸಿಂಥಟಿಕ್ ಬಾಸ್ಕೆಟ್ ಬಾಲ್ ಅಂಕಣ ನಿರ್ಮಾಣಕ್ಕೆ ಸರ್ಕಾರದಿಂದ 150 ಲಕ್ಷ ರೂ. ವೆಚ್ಚಕ್ಕೆ ಅನುಮೋದನೆ ದೊರೆತಿದ್ದು, ಈಗಾಗಲೇ 20 ಲಕ್ಷ ರೂ. ಬಿಡುಗಡೆಯಾಗಿದೆ ಎಂದು ಶಾಸಕರು ವಿವರಿಸಿದರು. ಸರ್ಕಾರ ಕ್ರೀಡೆಗೆ ಹೆಚ್ಚಿನ ಉತ್ತೇಜನ ನೀಡಿದ್ದು, ಕ್ರೀಡಾಕ್ಷೇತ್ರದಲ್ಲಿ ಹೆಸರುವಾಸಿಯಾಗಿರುವ ಕೊಡಗು ಜಿಲ್ಲೆ, ಕ್ರೀಡೆಯಲ್ಲಿ ಮತ್ತಷ್ಟು ಹೆಚ್ಚಿನ ಸಾಧನೆ ಮಾಡುವಂತಾಗಬೇಕು ಎಂದು ಸಲಹೆ ಮಾಡಿದರು. ರಾಜ್ಯ ಸರ್ಕಾರಿ ನೌಕರರ ಭವನ ನಿರ್ಮಾಣಕ್ಕೆ ಈಗಾಗಲೇ ಜಾಗ ಗುರುತಿಸಲಾಗಿದ್ದು, ಮುಖ್ಯಮಂತ್ರಿ ಅವರ ವಿಶೇಷ ಅನುದಾನ ಅಥವಾ ಶಾಸಕರ ನಿಧಿಯಿಂದ ಅನುದಾನ ಬಿಡುಗಡೆ ಮಾಡಿಸಿ, ಪ್ರಸಕ್ತ ವರ್ಷವೇ ಭೂಮಿ ಪೂಜೆ ನೆರವೇರಿಸಲಾಗುವುದು ಎಂದು ಡಾ.ಮಂತರ್ ಗೌಡ ಅವರು ಹೇಳಿದರು. ಸರ್ಕಾರಿ ನೌಕರರ ಭವನ ನಿರ್ಮಾಣ ಸಂಬAಧ ನೀಲ ನಕಾಶೆ ಸಿದ್ಧಪಡಿಸಿ ಅಂದಾಜು ಪಟ್ಟಿ ಸಲ್ಲಿಸುವಂತೆ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕಕ್ಕೆ ಸಲಹೆ ಮಾಡಿದರು.
ಸರ್ಕಾರಿ ನೌಕರರು ಪ್ರತೀ ನಿತ್ಯ ಒಂದಲ್ಲ ಒಂದು ರೀತಿ ಒತ್ತಡದಲ್ಲಿ ಕೆಲಸ ನಿರ್ವಹಿಸುತ್ತಾರೆ. ಒತ್ತಡದ ನಡುವೆ ಆರೋಗ್ಯಕ್ಕೆ ಸಮಯ ನೀಡಿದ್ದಲ್ಲಿ ಉತ್ತಮವಾಗಿ ಕರ್ತವ್ಯ ನಿರ್ವಹಿಸಲು ಸಾಧ್ಯವಾಗಲಿದೆ ಎಂದು ಶಾಸಕರು ಅಭಿಪ್ರಾಯ ವ್ಯಕ್ತಪಡಿಸಿದರು. ಪ್ರತಿನಿತ್ಯದ ಕೆಲಸದ ನಡುವೆ ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಓಟ, ನಡಿಗೆ, ಹೀಗೆ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳುವಂತಾಗಬೇಕು. ಇದರಿಂದ ಮಾನಸಿಕ ಮತ್ತು ದೈಹಿಕವಾಗಿ ಸದೃಢರಾಗಿರಲು ಸಾಧ್ಯವಾಗಲಿದೆ ಎಂದು ಡಾ.ಮಂತರ್ ಗೌಡ ಅವರು ವಿವರಿಸಿದರು. ಮಾನಸಿಕ ಮತ್ತು ದೈಹಿಕವಾಗಿ ಪರಿಪೂರ್ಣರಾಗಿದ್ದಲ್ಲಿ ಎಷ್ಟೇ ಒತ್ತಡವಿದ್ದರೂ ಕೆಲಸ ನಿಭಾಯಿಸಬಹುದು. ಆ ನಿಟ್ಟಿನಲ್ಲಿ ಆರೋಗ್ಯವೇ ಭಾಗ್ಯ ಎನ್ನುವಂತೆ ಆರೋಗ್ಯಕ್ಕೆ ಹೆಚ್ಚಿನ ಒತ್ತು ನೀಡಬೇಕು. ಕ್ರೀಡಾ ಕ್ಷೇತ್ರದಲ್ಲಿ ತೊಡಗಿಸಿಕೊಳ್ಳುವಂತಾಗಬೇಕು ಎಂದು ಶಾಸಕರು ನುಡಿದರು. ರಾಜ್ಯ ಸರ್ಕಾರಿ ನೌಕರರ ಜಿಲ್ಲಾ ಸಂಘದ ಅಧ್ಯಕ್ಷರಾದ ಎಂ.ಸಿ.ಅರುಣ್ ಕುಮಾರ್ ಅವರು ಮಾತನಾಡಿ ಪ್ರತಿ ವರ್ಷದಂತೆ ಈ ವರ್ಷವೂ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆಯನ್ನು ಏರ್ಪಡಿಸಲಾಗಿದೆ ಎಂದು ಹೇಳಿದರು. ರಾಜ್ಯ ಸರ್ಕಾರಿ ನೌಕರರಿಗೆ ಜಿಲ್ಲಾ ಮಟ್ಟದಲ್ಲಿ ಸರ್ವೋತ್ತಮ ಪ್ರಶಸ್ತಿಯನ್ನು ನೀಡಲಾಗುತ್ತಿದ್ದು, ಇದನ್ನು ಮುಂದುವರಿಸುವಂತಾಗಬೇಕು ಎಂದು ಕೋರಿದರು. ಸರ್ಕಾರಿ ನೌಕರರ ಭವನ ನಿರ್ಮಾಣಕ್ಕೆ ಜಾಗವಿದ್ದು, ಹೆಚ್ಚಿನ ಅನುದಾನ ಒದಗಿಸುವಂತಾಗಬೇಕು ಎಂದು ಇದೇ ಸಂದರ್ಭದಲ್ಲಿ ಶಾಸಕರಲ್ಲಿ ಮನವಿ ಮಾಡಿದರು. ಉಪ ವಿಭಾಗಾಧಿಕಾರಿ ನಿತಿನ್ ಚಕ್ಕಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರಾದ ವಿ.ಟಿ.ವಿಸ್ಮಯಿ, ಸಂಘದ ನಿರ್ದೇಶಕರಾದ ಎಸ್.ಹೊನ್ನೇಗೌಡ, ಜಿಲ್ಲಾ ಕಾರ್ಯದರ್ಶಿ ಬಿ.ಜಿ.ಸಂದೀಪ, ರಾಜ್ಯ ಸರ್ಕಾರಿ ನೌಕರರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷರಾದ ಜಿಲ್ಲಾ ಖಜಾಂಜಿ ಪಿ.ಡಿ.ರಾಜೇಶ್, ರಾಜ್ಯ ಪರಿಷತ್ತಿನ ಸದಸ್ಯರಾದ ಪಿ.ಎಂ.ಬಾಬು, ರಾಜ್ಯ ಸರ್ಕಾರಿ ನೌಕರರ ತಾಲ್ಲೂಕು ಘಟಕದ ಅಧ್ಯಕ್ಷರಾದ ಪ್ರದೀಪ್, ಕೆ.ಎಂ.ತಿಮ್ಮಯ್ಯ, ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಶಾಖೆಯ ಕಾರ್ಯಾಧ್ಯಕ್ಷರಾದ ಮೋಹನ್ ಪೆರಾಜೆ, ಗೌರವಾಧ್ಯಕ್ಷರಾದ ಶಮ್ಮಿ ಎಸ್.ಟಿ, ಇತರರು ಇದ್ದರು. ಹಾಕಿ ಸೇರಿದಂತೆ ವಿವಿಧ ಕ್ರೀಡಾಕ್ಷೇತ್ರದಲ್ಲಿ ಸಾಧನೆ ಮಾಡಿದವರನ್ನು ಇದೇ ಸಂದರ್ಭದಲ್ಲಿ ಸನ್ಮಾನಿಸಲಾಯಿತು. ಲಹರಿ ತಂಡದವರು ನಾಡಗೀತೆ, ರೈತಗೀತೆ ಹಾಡಿದರು. ಪಿ.ಟಿ.ಪೂರ್ಣೇಶ್ ಅವರು ಕ್ರೀಡಾಜ್ಯೋತಿ ತಂದರು. ಅನಿತಾ ನಿರೂಪಿಸಿದರು. ಶ್ರೀಕಾಂತ್ ಸ್ವಾಗತಿಸಿದರು.

Follow us Follow us
Share. WhatsApp Facebook Twitter Email Telegram Copy Link

Related Posts

*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಸೆ.26: ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್…

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*

ಸೆಪ್ಟೆಂಬರ್ 26, 2026

*ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*

ಸೆಪ್ಟೆಂಬರ್ 26, 2026

*ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*

ಸೆಪ್ಟೆಂಬರ್ 26, 2026

*2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*

ಸೆಪ್ಟೆಂಬರ್ 26, 2026

*ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*

ಸೆಪ್ಟೆಂಬರ್ 26, 2026

*ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*

ಸೆಪ್ಟೆಂಬರ್ 26, 2026

*ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*

ಸೆಪ್ಟೆಂಬರ್ 26, 2026

*36 ವರ್ಷ ಸೇವೆ ಸಲ್ಲಿಸಿದ ಅಂಗನವಾಡಿ ಕಾರ್ಯಕರ್ತೆ ದೇವಮಾಜಿ, ಶಿಕ್ಷಕಿ ಭೋಜಮ್ಮಗೆ ಆತ್ಮೀಯ ಬೀಳ್ಕೊಡುಗೆ*

ಸೆಪ್ಟೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.