Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*
  • *ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*
  • *ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*
  • *ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*
  • *ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*
  • *ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*
  • *2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*
  • *ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*
  • *ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*
  • *ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕಾಂಗ್ರೆಸ್ ಸರಕಾರವನ್ನು ವಜಾಗೊಳಿಸಲು ಆಗ್ರಹಿಸಿ ಬಿಜೆಪಿ ಪ್ರತಿಭಟನೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕಾಂಗ್ರೆಸ್ ಸರಕಾರವನ್ನು ವಜಾಗೊಳಿಸಲು ಆಗ್ರಹಿಸಿ ಬಿಜೆಪಿ ಪ್ರತಿಭಟನೆ*

ಜನವರಿ 9, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ NEWS DESK ಜ.9 : ರಾಜ್ಯದ ಕಾಂಗ್ರೆಸ್ ಸರಕಾರದ ಆಡಳಿತದಲ್ಲಿ ಮಹಿಳೆಯರಿಗೆ ರಕ್ಷಣೆ ಇಲ್ಲದಂತಹ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಆರೋಪಿಸಿ ಕೊಡಗು ಜಿಲ್ಲಾ ಬಿಜೆಪಿ ನಗರದಲ್ಲಿ ಪ್ರತಿಭಟನೆ ನಡೆಸಿತು. ಜಿಲ್ಲಾಧಿಕಾರಿಗಳ ಕಚೇರಿ ಭವನದ ಎದುರು ಪ್ರತಿಭಟನೆ ನಡೆಸಿದ ಬಿಜೆಪಿ ಪ್ರಮುಖರು ಹಾಗೂ ಕಾರ್ಯಕರ್ತರು ರಾಜ್ಯ ಸರ್ಕಾರವನ್ನು ವಜಾಗೊಳಿಸುವಂತೆ ಆಗ್ರಹಿಸಿದರು. ಜಿಲ್ಲಾ ಬಿಜೆಪಿ ಅಧ್ಯಕ್ಷ ನಾಪಂಡ ರವಿ ಕಾಳಪ್ಪ ಅವರು ಮಾತನಾಡಿ, ಕಾಂಗ್ರೆಸ್ ಸರಕಾರದಲ್ಲಿ ಮಹಿಳೆಯರಿಗೆ ಸೂಕ್ತ ರಕ್ಷಣೆ ಇಲ್ಲದಂತಾಗಿದೆ. ಹುಬ್ಬಳ್ಳಿ ನಗರದ ಕಾರ್ಪೋರೇಟರ್ ಸುವರ್ಣ ಅವರು ನೀಡಿದ ದೂರನ್ನೆ ಆಧರಿಸಿ, ಬಿಜೆಪಿ ಕಾರ್ಯಕರ್ತೆಯೊಬ್ಬರನ್ನು ಬಂಧಿಸಿ, ವಿವಸ್ತ್ರ ಗೊಳಿಸಿ ಹಲ್ಲೆ ಮಾಡಲಾಗಿದೆ. ಪೊಲೀಸರು ಮಹಿಳೆಯ ಮೇಲೆ ದರ್ಪ ಪ್ರದರ್ಶಿಸಿರುವ ಘಟನೆ ರಾಜ್ಯದಲ್ಲಿ ಮಹಿಳೆಯರು ಎಷ್ಟು ಅಸುರಕ್ಷಿತರೆನ್ನುವುದಕ್ಕೆ ಮತ್ತು ರಾಜ್ಯ ಸರಕಾರದ ದುರಾಡಳಿತಕ್ಕೆ ಸಾಕ್ಷಿಯಾಗಿದೆ ಎಂದು ಆರೋಪಿಸಿದರು. ಮಹಿಳೆಯ ಮೇಲೆ ದರ್ಪ ತೋರಿದ ಅಧಿಕಾರಿಗಳನ್ನು ಅಮಾನತುಗೊಳಿಸಬೇಕು. ಸುಳ್ಯ ತಾಲ್ಲೂಕಿನ ಶಾಸಕಿ ಭಾಗೀರಥಿ ಮುರುಳ್ಯ ಅವರ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ‘ಶ್ರದ್ಧಾಂಜಲಿ’ ಪೋಸ್ಟ್ ಹಾಕಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ದುರಾಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರಕಾರವನ್ನು ರಾಜ್ಯಪಾಲರು ವಜಾಗೊಳಿಸಬೇಕೆಂದು ಒತ್ತಾಯಿಸಿದರು. ವಿಧಾನಸಭೆಯ ಮಾಜಿ ಅಧ್ಯಕ್ಷ ಕೆ.ಜಿ.ಬೋಪಯ್ಯ ಅವರು ಮಾತನಾಡಿ, ರಾಜ್ಯದಲ್ಲಿ ನಡೆಯುತ್ತಿರುವ ಇಂತಹ ಘಟನೆಗಳು ನಾಗರಿಕ ಸಮಾಜವನ್ನು ತಲೆ ತಗ್ಗಿಸುವಂತೆ ಮಾಡಿದೆ. ಉತ್ತಮ ಆಡಳಿತ, ಉತ್ತಮ ಸಂಸ್ಕಾರವನ್ನು ಇಂದಿನ ಕಾಂಗ್ರೆಸ್ ಸರಕಾರದಿಂದ ನಿರೀಕ್ಷೆ ಮಾಡಲು ಸಾಧ್ಯವಿಲ್ಲವೆಂದು ಅಸಮಾಧಾನ ವ್ಯಕ್ತಪಡಿಸಿದರು.
ಪೊಲೀಸ್ ಕಚೇರಿಗಳು ಕಾಂಗ್ರೆಸ್ ಕಚೇರಿಗಳಂತೆ ಆಗಿದೆ, ಹುಬ್ಬಳ್ಳ್ಳಿ ಪ್ರಕರಣದಲ್ಲಿ ದೌರ್ಜನ್ಯಕ್ಕೆ ಒಳಗಾಗಿರುವ ಮಹಿಳೆಗೆ ಕನಿಷ್ಟ ನ್ಯಾಯ ದೊರಕಿಸಿಕೊಡುವ ನಿಟ್ಟಿನಲ್ಲಿ ರಾಜ್ಯ ಮಹಿಳಾ ಆಯೋಗ ಏನು ಮಾಡಿದೆ ಎಂದು ಪ್ರಶ್ನಿಸಿದರು. ಪ್ರತಿಭಟನಾ ಸ್ಥಳಕ್ಕೆ ಎಡಿಸಿ ಐಶ್ವರ್ಯ ಅವರು ಆಗಮಿಸಿದ ಸಂದರ್ಭ ಬಿಜೆಪಿ ಪ್ರಮುಖರು, ಜಿಲ್ಲಾಧಿಕಾರಿಗಳು ಸ್ಥಳಕ್ಕೆ ಬರಬೇಕೆಂದು ಒತ್ತಾಯಿಸಿದರು. ಬಳಿಕ ಸ್ಥಳಕ್ಕೆ ಬಂದ ಜಿಲ್ಲಾಧಿಕಾರಿ ಸೋಮಶೇಖರ್ ಅವರಿಗೆ ಪ್ರತಿಭಟನಾಕಾರರು ಮನವಿ ಸಲ್ಲಿಸಿದರು. ಪ್ರತಿಭಟನೆಯಲ್ಲಿ ವಿಧಾನ ಪರಿಷತ್ ಮಾಜಿ ಸದಸ್ಯ ಎಂ.ಪಿ.ಸುನಿಲ್ ಸುಬ್ರಮಣಿ, ಮಹಿಳಾ ಮೋರ್ಚಾದ ಜಿಲ್ಲಾಧ್ಯಕ್ಷೆ ಅನಿತಾ ಪೂವಯ್ಯ, ಪ್ರಮುಖರಾದ ರಾಬಿನ್ ದೇವಯ್ಯ, ಶಾಂತೆಯಂಡ ರವಿ ಕುಶಾಲಪ್ಪ, ವಿ.ಕೆ.ಲೋಕೇಶ್, ಮಹೇಶ್ ಜೈನಿ, ಕೋಡಿ ಪೊನ್ನಪ್ಪ, ನಾಗೇಶ್ ಕುಂದಲ್ಪಾಡಿ, ಉಮೇಶ್ ಸುಬ್ರಮಣಿ, ಬಿ.ಕೆ.ಅರುಣ್ ಕುಮಾರ್, ಬಿ.ಕೆ.ಜಗದೀಶ್, ಉಮಾ ಪ್ರಭು, ಸವಿತಾ ರಾಕೇಶ್, ಕನ್ನಿಕೆ, ಶ್ವೇತಾ ಪ್ರಶಾಂತ್, ಅರುಣ್ ಶೆಟ್ಟಿ, ಕನ್ನಂಡ ಸಂಪತ್, ಬಿ.ಪಿ.ಡಿಶು, ಬೊಳ್ಳಜಿರ ಬಿ.ಅಯ್ಯಪ್ಪ, ನೆಲ್ಲೀರ ಚಲನ್, ಆರ್.ಕೆ.ಚಂದ್ರು ಮೊದಲಾದವರು ಪಾಲ್ಗೊಂಡಿದ್ದರು.

Follow us Follow us
Share. WhatsApp Facebook Twitter Email Telegram Copy Link

Related Posts

*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಸೆ.26: ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್…

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*

ಸೆಪ್ಟೆಂಬರ್ 26, 2026

*ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*

ಸೆಪ್ಟೆಂಬರ್ 26, 2026

*ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*

ಸೆಪ್ಟೆಂಬರ್ 26, 2026

*2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*

ಸೆಪ್ಟೆಂಬರ್ 26, 2026

*ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*

ಸೆಪ್ಟೆಂಬರ್ 26, 2026

*ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*

ಸೆಪ್ಟೆಂಬರ್ 26, 2026

*ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*

ಸೆಪ್ಟೆಂಬರ್ 26, 2026

*36 ವರ್ಷ ಸೇವೆ ಸಲ್ಲಿಸಿದ ಅಂಗನವಾಡಿ ಕಾರ್ಯಕರ್ತೆ ದೇವಮಾಜಿ, ಶಿಕ್ಷಕಿ ಭೋಜಮ್ಮಗೆ ಆತ್ಮೀಯ ಬೀಳ್ಕೊಡುಗೆ*

ಸೆಪ್ಟೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.