
ನಾಪೋಕ್ಲು ಜ.10 NEWS DESK : ಚಳ್ಳಕೆರೆಯ ಕರ್ನಾಟಕ ಅಕಾಡೆಮಿ ಆಫ್ ಮ್ಯಾಥಮೆಟಿಕ್ಸ್ ವತಿಯಿಂದ ನಡೆಸಲಾಗಿದ್ದ ಗಣಿತ ಪ್ರತಿಭಾ ಪರೀಕ್ಷೆಯಲ್ಲಿ ಮೂರ್ನಾಡಿನ ಮಾರುತಿ ವಿದ್ಯಾಸಂಸ್ಥೆಯ 87 ವಿದ್ಯಾರ್ಥಿಗಳು ಭಾಗವಹಿಸಿದ್ದು, ಕೆಲವು ವಿದ್ಯಾರ್ಥಿಗಳು ರಾಷ್ಟ್ರಮಟ್ಟ, ರಾಜ್ಯಮಟ್ಟ, ಜಿಲ್ಲಾಮಟ್ಟ ಹಾಗೂ ತಾಲ್ಲೂಕು ಮಟ್ಟದಲ್ಲಿ ಉನ್ನತ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ. ವಿದ್ಯಾಸಂಸ್ಥೆಯ ಎರಡನೇ ತರಗತಿಯ ವಿದ್ಯಾರ್ಥಿ ಟಿ.ಆರ್.ಅಭಿನವ ರಾಷ್ಟ್ರಮಟ್ಟದಲ್ಲಿ ಐದನೇ ಸ್ಥಾನವನ್ನು 9ನೇ ತರಗತಿಯ ವಿದ್ಯಾರ್ಥಿನಿ ಎಂ.ಎಸ್.ಲಿಪಿಕಾ ಎಂಟನೇ ಸ್ಥಾನವನ್ನು ಪಡೆದು ಶಾಲೆಗೆ ಕೀರ್ತಿ ತಂದಿದ್ದಾರೆ. ರಾಜ್ಯಮಟ್ಟದಲ್ಲಿ ವಿದ್ಯಾರ್ಥಿಗಳಾದ ಮೂರನೇ ತರಗತಿಯ ವಿದ್ಯಾರ್ಥಿ ಪಿ.ಬಿ.ಅಲೋಕ್ ಎರಡನೇ ಸ್ಥಾನವನ್ನು, 5ನೇ ತರಗತಿ ವಿದ್ಯಾರ್ಥಿನಿ ಕೃತಿಕಾ ನಾಲ್ಕನೇ ಸ್ಥಾನವನ್ನು, ನಾಲ್ಕನೇ ತರಗತಿಯ ವಿದ್ಯಾರ್ಥಿನಿ ತಂಗಮ್ಮ ಸಿ.ಎನ್ ಆರನೆಯ ಸ್ಥಾನವನ್ನು, 5ನೇ ತರಗತಿಯ ವಿದ್ಯಾರ್ಥಿನಿ ಸಿ.ಎಸ್.ದ್ವಿತಿ ಎರಡನೇ ಸ್ಥಾನವನ್ನು ಪಡೆದುಕೊಂಡಿದ್ದಾರೆ. ಜಿಲ್ಲಾ ಮಟ್ಟದಲ್ಲಿ 5ನೇ ತರಗತಿಯ ವಿದ್ಯಾರ್ಥಿನಿ ಪುಣ್ಯ ಕೀರ್ತನ ಹಾಗೂ ಒಂದನೇ ತರಗತಿಯ ವಿದ್ಯಾರ್ಥಿನಿ ಆದ್ಯಚಂದಮ್ಮ ಕ್ರಮವಾಗಿ ಏಳನೇ ಮತ್ತು 8ನೇ ಸ್ಥಾನವನ್ನು ಗಳಿಸಿದ್ದಾರೆ. ಮೂರನೇ ತರಗತಿ ವಿದ್ಯಾರ್ಥಿ ಮಹಮ್ಮದ್ ಆಫ್ವಾನ್ ಹಾಗೂ ಒಂದನೇ ತರಗತಿಯ ವಿದ್ಯಾರ್ಥಿ ಕೆ.ಕೆ.ವಿಸ್ಮಿತ ತಾಲ್ಲೂಕು ಮಟ್ಟದಲ್ಲಿ ಉನ್ನತ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ. ಭಾಗವಹಿಸಿದ ಎಲ್ಲಾ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪತ್ರ ಹಾಗೂ ಪಾದಕಗಳನ್ನು ಶಾಲಾ ಮುಖ್ಯೋಪಾಧ್ಯಾಯನಿ ಸುಮಿತಾ, ಶಿಕ್ಷಕಿ ಹೇಮಾವತಿ ಹಾಗೂ ಶಿಕ್ಷಕ ವೃಂದದವರು ವಿತರಿಸಿದರು.
ವರದಿ: ದುಗ್ಗಳ ಸದಾನಂದ.








