Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಡೊನಾಲ್ಡ್ ಟ್ರಂಪ್ ಮೆಚ್ಚಿದ ಆ ‘ಒಂದು’ ನಿರ್ಧಾರ ಯಾವುದು? ಭಾರತಕ್ಕೆ ಸಿಗಲಿದೆ ಅತಿದೊಡ್ಡ ಆರ್ಥಿಕ ಲಾಭ!*
  • *ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*
  • *ಬಿಸಾಡಿದ ಬಾಟಲಿಗಳಿಂದ ಮತ್ತೆ ಗ್ಲಾಸಿಗೆ? ದೆಹಲಿ ಸ್ಟೇಡಿಯಂ ಸಿಬ್ಬಂದಿಯ ಈ ಕರ್ಮಕಾಂಡ ನೋಡಿ ನೀವೂ ವಾಕರಿಕೆ ಮಾಡ್ಕೊತೀರಾ!*
  • *ಚಿನ್ನಸ್ವಾಮಿಯಲ್ಲಿ ಮತ್ತೆ ಮೊಳಗಲಿದೆ RCB.. RCB.. ಸದ್ದು! ಸರ್ಕಾರದ ಗ್ರೀನ್ ಸಿಗ್ನಲ್ ಸಿಕ್ಕಿದ್ದು ಹೇಗೆ? ಅಭಿಮಾನಿಗಳೇ ಈಗಲೇ ರೆಡಿಯಾಗಿ!*
  • *ಕರೆಂಟ್ ಬಿಲ್ ನೋಡಿ ಬೆಚ್ಚಿಬೀಳಬೇಡಿ! ರಾಜ್ಯದಲ್ಲಿ ವಿದ್ಯುತ್ ದರ ಏರಿಕೆಗೆ ಕ್ಷಣಗಣನೆ; ಯಾರಿಗೆ ಎಷ್ಟು ಹೊರೆ?*
  • *ಶಾಲೆ ಪ್ರವಾಸಕ್ಕೆ ಟ್ರಕ್ ಬಳಕೆ: ಪೋಷಕರು ಫುಲ್ ಗರಂ! ಹೆಡ್‌ಮಾಸ್ಟರ್ ಅಮಾನತು ಹಿಂದಿನ ಅಸಲಿ ಕಥೆ ಇಲ್ಲಿದೆ*
  • *ಕೊಡಗಿಗೆ ಭೇಟಿ ನೀಡಿದ ಪೊಲೀಸ್ ಮಹಾ ನಿರೀಕ್ಷಕರು*
  • *ಕುಶಾಲನಗರದಲ್ಲಿ ಒಣ ಕಸ ಸಂಗ್ರಹ ಘಟಕ ಉದ್ಘಾಟನೆ*
  • *ಭ್ರಷ್ಟಾಚಾರದ ಪ್ರಮಾಣ ಹೆಚ್ಚಾಗಿದೆ : ಗುತ್ತಿಗೆದಾರರ ಸಂಘ ಗಂಭೀರ ಆರೋಪ*
  • *ಕೇಂದ್ರ ಸರಕಾರದ ವಿರುದ್ಧ ಮಡಿಕೇರಿಯಲ್ಲಿ ಕಾರ್ಮಿಕ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ವಿರಾಜಪೇಟೆಯಲ್ಲಿ ದೈವಜ್ಞ ದರ್ಶನ ಕಾರ್ಯಕ್ರಮ : ಮಕ್ಕಳಿಗೆ ಸನಾತನ ಪರಂಪರೆಯ ಸಂಸ್ಕಾರ ನೀಡಿ : ಶ್ರೀ ಸಚ್ಚಿದಾನಂದ ಜ್ಞಾನೇಶ್ವರ ಭಾರತೀ ಸ್ವಾಮೀಜಿ*
ಇತ್ತೀಚಿನ ಸುದ್ದಿಗಳು

*ವಿರಾಜಪೇಟೆಯಲ್ಲಿ ದೈವಜ್ಞ ದರ್ಶನ ಕಾರ್ಯಕ್ರಮ : ಮಕ್ಕಳಿಗೆ ಸನಾತನ ಪರಂಪರೆಯ ಸಂಸ್ಕಾರ ನೀಡಿ : ಶ್ರೀ ಸಚ್ಚಿದಾನಂದ ಜ್ಞಾನೇಶ್ವರ ಭಾರತೀ ಸ್ವಾಮೀಜಿ*

January 10, 20262 Mins Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ವಿರಾಜಪೇಟೆ ಜ.10 NEWS DESK : ಜೀವನದಲ್ಲಿ ನಮ್ಮ ಮನಸ್ಸಿನ ಯೋಚನೆ, ಉತ್ತಮವಾದ ಚಿಂತನೆಗಳೇ ಎಲ್ಲದಕ್ಕೂ ಕಾರಣವಾಗುತ್ತವೆ. ನಾವು ಯೋಚಿಸುವ ರೀತಿ, ನಡೆಯುವ ಮಾರ್ಗ ಸೂಕ್ತವಾಗಿದ್ದರೆ ನಮ್ಮ ಬದುಕು ಉತ್ತಮವಾಗಿರುತ್ತದೆ ಎಂದು ಶ್ರೀ ಕ್ಷೇತ್ರ ಕರ್ಕಿ ದೈವಜ್ಞ ಬ್ರಾಹ್ಮಣ ಮಠದ ಜ್ಞಾನೇಶ್ವರಿ ಪೀಠದ ಶ್ರೀ ಸಚ್ಚಿದಾನಂದ ಜ್ಞಾನೇಶ್ವರ ಭಾರತೀ ಸ್ವಾಮೀಜಿ ನುಡಿದರು. ವಿರಾಜಪೇಟೆಯ ನಿಸರ್ಗ ಬಡಾವಣೆಯ ದೈವಜ್ಞ ಬ್ರಾಹ್ಮಣ ಸಮಾಜದಲ್ಲಿ ದಕ್ಷಿಣ ಕೊಡಗು ದೈವಜ್ಞ ಬ್ರಾಹ್ಮಣ ಸಮಾಜದ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ದೈವಜ್ಞ ದರ್ಶನ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿದ ಸ್ವಾಮಿಜಿಗಳು, ನಾಲ್ಕು ದಶಕಗಳ ಹಿಂದೆ ದೈವಜ್ಞ ಸಮಾಜ ತೀರಾ ಹಿಂದುಳಿದಿತ್ತು. ಸಾಮಾಜಿಕ, ಶೈಕ್ಷಣಿಕವಾಗಿ ಬೆಳೆಯಬೇಕೆಂಬ ಸಂಕಲ್ಪ, ಶ್ರಮದಿಂದ ಈಗ ಉತ್ತಮ ಪ್ರಗತಿ ಕಂಡಿದೆ. ಪಾಶ್ಚಿಮಾತ್ಯ ಸಂಸ್ಕೃತಿಯ ಮೋಹದಲ್ಲಿ ನಮ್ಮತನ ಕಳೆದುಕೊಳ್ಳಬಾರದು. ಮಕ್ಕಳಿಗೆ ಸನಾತನ ಪರಂಪರೆಯ ಸಂಸ್ಕಾರ ನೀಡುವ ಹೊಣೆ ಪಾಲಕರದ್ದು ಎಂದ ಶ್ರೀಗಳು, ಸಮಾಜ ಬಾಂಧವರೆಲ್ಲರೂ ಸಂಘಟಿತರಾಗಿ ಶ್ರಮಿಸಿದರೆ ಅದು ಅಸಾಧ್ಯವೇನಲ್ಲ. ಇತ್ತೀಚಿನ ದಿನಗಳಲ್ಲಿ ಎಲ್ಲರಲ್ಲೂ ಆಸ್ತಿ, ಅಂತಸ್ತು, ಹಣ ದ್ವಿಗುಣಗೊಂಡಿದೆ. ಆದರೆ ಸಂಸ್ಕಾರ, ಸಂಸ್ಕೃತಿ, ಆಚಾರ, ವಿಚಾರ, ಸಂಪ್ರದಾಯಗಳು ಮರೆಯಾಗುತ್ತಿವೆ. ಹಿಂದಿನ ದಿನಗಳಲ್ಲಿ ಮನೆಗಳಲ್ಲಿ ಬಡತನ, ಕಷ್ಟಗಳ ಮಧ್ಯೆ ನಮ್ಮ ಸಂಸ್ಕೃತಿ, ಆಚಾರ ವಿಚಾರ ಎಲ್ಲವನ್ನು ಸಮರ್ಪಕವಾಗಿ ಆಚರಿಸುತ್ತಿದ್ದರಿಂದ ಮನೆ, ಮನಗಳಲ್ಲಿ ನೆಮ್ಮದಿ, ಶಾಂತಿ, ಸಮೃದ್ಧಿ ನೆಲೆಸಿರುತ್ತಿತ್ತು. ಸಂಸ್ಕೃತಿ, ಸಂಸ್ಕಾರ, ಆಚಾರ, ವಿಚಾರ ಜೀವಂತವಾಗಿದ್ದರೆ ನಾವು ಬದಲಾಗಬೇಕಿಲ್ಲ. ಇಲ್ಲದಿದ್ದರೆ ನಾವು ಬದಲಾವಣೆ ಮಾಡಿಕೊಳ್ಳುವುದು ಅಗತ್ಯವಾಗಿದೆ. ದೈವಜ್ಞ ದರ್ಶನ ಕಾರ್ಯಕ್ರಮ ರಾಜ್ಯಾದ್ಯಂತ ನಡೆಯುತ್ತಿದ್ದು, ದೈವಜ್ಞ ಸಮಾಜದವರು ಶ್ರೀಮಠದ ಉತ್ತರಾಧಿಕಾರಿ ಸುಜ್ಞಾನೇಶ್ವರ ಭಾರತಿ ಸ್ವಾಮಿಗಳ ಪರಿಚಯ ಮಾಡುವುದರ ಜತೆ ಸಮಾಜ ಸಂಘಟನೆ ಇದರ ಉದ್ದೇಶವಾಗಿದೆ ಎಂದರು. ಕಿರಿಯ ಯತಿಗಳಾದ ಶ್ರೀ ಸುಜ್ಞಾನೇಶ್ವರ ಭಾರತೀ ಸ್ವಾಮೀಜಿ ಆಶೀರ್ವಚನ ನೀಡಿ, ಸನಾತನ ಧರ್ಮ ನಮ್ಮ ಬದುಕಿನಲ್ಲಿ ಹೇಗೆ ನಡೆಯಬೇಕು ಎಂಬ ಮಾರ್ಗದರ್ಶನ ಮಾಡುತ್ತದೆ. ವಿನಯದಿಂದ ಬಾಗಿ ಬದುಕುವವರು ಭಾಗ್ಯವಂತರಾಗುತ್ತಾರೆ, ಅಹಂಕಾರದಿಂದ ಬಾಳುವವನ ಬದುಕು ಹೀನಾಯವಾಗುತ್ತದೆ. ಸತ್ಯ, ಪ್ರೀತಿ, ವಿಧೇಯತೆಯಿಂದ ಧರ್ಮದ ಹಾದಿಯಲ್ಲಿ ಜೀವನ ನಡೆಸುವವರಿಗೆ ಪ್ರಪಂಚದಲ್ಲಿ ಗೌರವ ದೊರೆಯುತ್ತದೆ, ಅಂತವರು ದೇವರಿಗೂ ಪ್ರಿಯರಾಗುತ್ತಾರೆ. ಅದೇ ಮಾರ್ಗದಲ್ಲಿ ಸಾಗಲು ಎಲ್ಲರೂ ಪ್ರಯತ್ನಿಸಬೇಕು ಎಂದು ಸಲಹೆ ನೀಡಿದರು. ಭಕ್ತಿಯಿಂದ ಭಗವಂತನ ಆರಾಧನೆ, ಸ್ಮರಣೆ, ಧ್ಯಾನ ಮಾಡಿದರೆ ಸಾಕು ಭಗವಂತ ಎಲ್ಲರಿಗೂ ಒಲಿಯುತ್ತಾನೆ. ಸಮಾಜದ ಪ್ರತಿ ಕುಟುಂಬದ ಮಕ್ಕಳು ಸಂಸ್ಕಾರವಂತರಾಗಬೇಕು. ಮೂಲ ಆಚಾರ, ವಿಚಾರ, ಸಂಸ್ಕಾರದಿಂದ ದೂರವಾಗುತ್ತಿದ್ದೇವೆ. ಹೆಸರಿಂದ ಮಾತ್ರ ಶ್ರೇಷ್ಠನಾದರೆ ಸಾಲದು. ನಮ್ಮ ಕರ್ತವ್ಯ, ವಿಚಾರ, ಮನಸ್ಥಿತಿಯಲ್ಲಿಯೂ ಕೂಡ ಶ್ರೇಷ್ಠರಾಗಬೇಕು. ದಕ್ಷಿಣ ಕೊಡಗಿನಲ್ಲಿ ದೈವಜ್ಞ ಸಮಾಜದವರು ಇಂತಹ ಧಾರ್ಮಿಕ ಕಾರ್ಯಗಳಿಗೆ ಒಗ್ಗಟ್ಟಾಗಿ ಕಾರ್ಯಕ್ರಮ ಮಾಡುತ್ತಿರುವುದು ಒಳ್ಳೆಯ ಬೆಳವಣಿಗೆಯಾಗಿದೆ ಎಂದರು. ದೈವಜ್ಞ ಬ್ರಾಹ್ಮಣ ಶ್ರೀಮಠದ ಟ್ರಸ್ಟಿ ಬೆಂಗಳೂರಿನ ಗಣಪತಿ ಶೇಟ್ ಮಾತನಾಡಿ, ವೈದಿಕ ಕಾಲದ ಅದ್ವೈತ ಪರಂಪರೆಯ ದೈವಜ್ಞ ಬ್ರಾಹ್ಮಣರು ತಮ್ಮ ಆಚಾರ ವಿಚಾರ ಸಂಪ್ರದಾಯಗಳಲ್ಲಿ ಇನ್ನಷ್ಟು ನಿಷ್ಠೆ ಹೊಂದಿ ತಮ್ಮ ಐತಿಹಾಸಿಕ ಪರಂಪರೆಯನ್ನು ಪುನರುಜ್ಜೀವನ ಗೊಳಿಸಬೇಕಾಗಿದೆ. ನಾಲ್ಕು ದಶಕಗಳ ಹಿಂದೆ ಸಮಾಜಕ್ಕೊಂದು ಕುಲಗುರು, ಶ್ರೀ ಮಠ ಹೊಂದಿದ ಬಳಿಕ ದೈವಜ್ಞ ಸಮಾಜವು ಸರ್ವಾಂಗೀಣ ಅಭಿವೃದ್ಧಿ ಹೊಂದಿದೆ ಎಂದರು. ಕರ್ಕಿ ಮಠದ ಪ್ರಧಾನ ಪುರೋಹಿತರಾದ ಯೋಗೇಶ್ ಭಟ್ ಮಾತನಾಡಿ, ಸಂಸ್ಕಾರ ಸಂಪ್ರದಾಯ, ಕೌಟುಂಬಿಕ ಹೊಣೆಗಾರಿಕೆ, ಸಮಾಜಮುಖಿ ಚಿಂತನೆ ಮತ್ತು ಮೌಲ್ಯಧಾರಿದ ಜೀವನವನ್ನು ಅಳವಡಿಸಿಕೊಳ್ಳಬೇಕು ಎಂದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ದೈವಜ್ಞ ಬ್ರಾಹ್ಮಣ ಸಮಾಜದ ಅಧ್ಯಕ್ಷ ಉಲ್ಲಾಸ್ ಶೇಟ್, ಸಮಾಜದಲ್ಲಿ ಒಗ್ಗಟ್ಟು ಮೂಡಿಸುವ ನಿಟ್ಟಿನಲ್ಲಿ ಶ್ರೀಗಳ ಮಾರ್ಗದರ್ಶನದಲ್ಲಿ ದೈವಜ್ಞ ದರ್ಶನ ಕಾರ್ಯಕ್ರಮ ನಡೆಸಲಾಗುತ್ತಿದೆ ಎಂದರು. ಉಭಯ ಶ್ರೀಗಳವರನ್ನು ನಗರದ ಆಂಜನೇಯ ದೇವಸ್ಥಾನದಿಂದ ಪಟ್ಟಣದ ಮುಖ್ಯಬೀದಿಯಲ್ಲಿ ಕಾರು, ಬೈಕ್ ರ್ಯಾಲಿ ಹಾಗೂ ಮಂಗಳವಾದ್ಯ, ಭಜನಾ ನೃತ್ಯ, ಟ್ಯಾಬ್ಲೋಗಳ ಮೂಲಕ ಪೂರ್ಣಕುಂಭ ಸ್ವಾಗತದೊಂದಿಗೆ ಸಭಾಂಗಣದವರೆಗೆ ಬರಮಾಡಿಕೊಳ್ಳಲಾಯಿತು. ವೇದಿಕೆಯಲ್ಲಿ ದೈವಜ್ಞ ಬ್ರಾಹ್ಮಣ ಶ್ರೀಮಠದ ಟ್ರಸ್ಟಿಗಳಾದ ಬೆಂಗಳೂರಿನ ಗಣಪತಿ ಶೇಟ್, ಗದಗಿನ ಅರುಣ್ ವರ್ಣೆಕರ ಅವರನ್ನು ಸನ್ಮಾನಿಸಲಾಯಿತು. ದೈವಜ್ಞ ಸಮಾಜದ ವಿವಿಧ ಸಂಘ ಸಂಸ್ಥೆಯ ಅಧ್ಯಕ್ಷರು, ಪದಾಧಿಕಾರಿಗಳು ಶ್ರೀ ದೈವಜ್ಞ ಕುಲ ಗುರುಗಳಿಗೆ ಪಾದಪೂಜೆ ಹಾಗೂ ಗುರುವಂದನೆ ಸಲ್ಲಿಸಿದರು. ಕಾರ್ಯಕ್ರಮದಲ್ಲಿ ಸಮಾಜದ ಉಪಾಧ್ಯಕ್ಷ ನಾರಾಯಣ, ಖಜಾಂಚಿ ಆರ್.ರಾಜೇಶ್ ಶೇಟ್, ಪ್ರದಾನ ಕಾರ್ಯದರ್ಶಿ ಬಾಲಕೃಷ್ಣ, ವೆಂಟೇಶ್, ಸೌಮ್ಯ ನಾಗೇಶ್, ಮುಂತಾದ ಗಣ್ಯರು ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.

Share. Facebook Twitter Pinterest LinkedIn Tumblr Email WhatsApp
Previous Article*ಸಾಧಕ ಅಂಗನವಾಡಿ ಕಾಯ೯ಕತೆ೯ಯರಿಗೆ ಸನ್ಮಾನ : ಮಕ್ಕಳ ಬಾಲ್ಯ ರೂಪಿಸುವಲ್ಲಿ ಅಂಗನವಾಡಿ ಕಾಯ೯ಕತೆ೯ಯರ ಶ್ರಮ ಶ್ಲಾಘನೀಯ : ಕಲಾವತಿ*
Next Article *ವಿಜಯಲಕ್ಷ್ಮಿ ವಿದ್ಯಾ ಸಂಸ್ಥೆಗೆ ಆರ್ಥಿಕ ನೆರವು*

Recommended: Website design development company services in Mangalore Forex Trading Teacher in India

Related Posts

*ಡೊನಾಲ್ಡ್ ಟ್ರಂಪ್ ಮೆಚ್ಚಿದ ಆ ‘ಒಂದು’ ನಿರ್ಧಾರ ಯಾವುದು? ಭಾರತಕ್ಕೆ ಸಿಗಲಿದೆ ಅತಿದೊಡ್ಡ ಆರ್ಥಿಕ ಲಾಭ!*

February 12, 2026

*ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*

February 12, 2026

*ಬಿಸಾಡಿದ ಬಾಟಲಿಗಳಿಂದ ಮತ್ತೆ ಗ್ಲಾಸಿಗೆ? ದೆಹಲಿ ಸ್ಟೇಡಿಯಂ ಸಿಬ್ಬಂದಿಯ ಈ ಕರ್ಮಕಾಂಡ ನೋಡಿ ನೀವೂ ವಾಕರಿಕೆ ಮಾಡ್ಕೊತೀರಾ!*

February 12, 2026

*ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*

February 12, 2026

ಸಿಯಾಟಲ್ (ಅಮೆರಿಕಾ): ಕಳೆದ ಎರಡು ವರ್ಷಗಳಿಂದ ಇಡೀ ಜಗತ್ತಿನ ಗಮನ ಸೆಳೆದಿದ್ದ ಭಾರತೀಯ ವಿದ್ಯಾರ್ಥಿನಿ ಜಾಹ್ನವಿ ಕಂದುಲಾ ಅವರ ಸಾವಿನ…

*ಬಿಸಾಡಿದ ಬಾಟಲಿಗಳಿಂದ ಮತ್ತೆ ಗ್ಲಾಸಿಗೆ? ದೆಹಲಿ ಸ್ಟೇಡಿಯಂ ಸಿಬ್ಬಂದಿಯ ಈ ಕರ್ಮಕಾಂಡ ನೋಡಿ ನೀವೂ ವಾಕರಿಕೆ ಮಾಡ್ಕೊತೀರಾ!*

February 12, 2026

*ಚಿನ್ನಸ್ವಾಮಿಯಲ್ಲಿ ಮತ್ತೆ ಮೊಳಗಲಿದೆ RCB.. RCB.. ಸದ್ದು! ಸರ್ಕಾರದ ಗ್ರೀನ್ ಸಿಗ್ನಲ್ ಸಿಕ್ಕಿದ್ದು ಹೇಗೆ? ಅಭಿಮಾನಿಗಳೇ ಈಗಲೇ ರೆಡಿಯಾಗಿ!*

February 12, 2026

*ಕರೆಂಟ್ ಬಿಲ್ ನೋಡಿ ಬೆಚ್ಚಿಬೀಳಬೇಡಿ! ರಾಜ್ಯದಲ್ಲಿ ವಿದ್ಯುತ್ ದರ ಏರಿಕೆಗೆ ಕ್ಷಣಗಣನೆ; ಯಾರಿಗೆ ಎಷ್ಟು ಹೊರೆ?*

February 12, 2026

*ಶಾಲೆ ಪ್ರವಾಸಕ್ಕೆ ಟ್ರಕ್ ಬಳಕೆ: ಪೋಷಕರು ಫುಲ್ ಗರಂ! ಹೆಡ್‌ಮಾಸ್ಟರ್ ಅಮಾನತು ಹಿಂದಿನ ಅಸಲಿ ಕಥೆ ಇಲ್ಲಿದೆ*

February 12, 2026

*ಕೊಡಗಿಗೆ ಭೇಟಿ ನೀಡಿದ ಪೊಲೀಸ್ ಮಹಾ ನಿರೀಕ್ಷಕರು*

February 12, 2026

*ಕುಶಾಲನಗರದಲ್ಲಿ ಒಣ ಕಸ ಸಂಗ್ರಹ ಘಟಕ ಉದ್ಘಾಟನೆ*

February 12, 2026

*ಭ್ರಷ್ಟಾಚಾರದ ಪ್ರಮಾಣ ಹೆಚ್ಚಾಗಿದೆ : ಗುತ್ತಿಗೆದಾರರ ಸಂಘ ಗಂಭೀರ ಆರೋಪ*

February 12, 2026

*ಕೇಂದ್ರ ಸರಕಾರದ ವಿರುದ್ಧ ಮಡಿಕೇರಿಯಲ್ಲಿ ಕಾರ್ಮಿಕ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ*

February 12, 2026

*ಮಾಂದಲ್ ಪಟ್ಟಿ; ಸಾರ್ವಜನಿಕರು ಮತ್ತು ಪ್ರವಾಸಿಗರ ಗಮನಕ್ಕೆ*

February 12, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.