Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*
  • *ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*
  • *ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*
  • *ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*
  • *ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*
  • *ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*
  • *2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*
  • *ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*
  • *ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*
  • *ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»NH-275 ಹೆದ್ದಾರಿ ಸುರಕ್ಷತೆ : ಕೇಂದ್ರ ಸರ್ಕಾರದಿಂದ 94.08 ಕೋಟಿ ರೂ.ಗಳ ಬೃಹತ್ ಯೋಜನೆಗೆ ಹಣ ಬಿಡುಗಡೆ : ಸಂಸದ ಯದುವೀರ್*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

NH-275 ಹೆದ್ದಾರಿ ಸುರಕ್ಷತೆ : ಕೇಂದ್ರ ಸರ್ಕಾರದಿಂದ 94.08 ಕೋಟಿ ರೂ.ಗಳ ಬೃಹತ್ ಯೋಜನೆಗೆ ಹಣ ಬಿಡುಗಡೆ : ಸಂಸದ ಯದುವೀರ್*

ಜನವರಿ 12, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜ.12 NEWS DESK : ರಾಜ್ಯದ NH-275 ಹೆದ್ದಾರಿ ಸುರಕ್ಷತೆಗಾಗಿ ಕೇಂದ್ರ ಸರ್ಕಾರದಿಂದ 94.08 ಕೋಟಿ ರೂ.ಗಳ ಬೃಹತ್ ಯೋಜನೆಗೆ ತಾಂತ್ರಿಕ ಅನುಮೋದನೆ ನೀಡಿ ಹಣಬಿಡುಗಡೆ ಮಾಡಲಾಗಿದೆ ಎಂದು ಮೈಸೂರು-ಕೊಡಗು ಲೋಕಸಭಾ ಸದಸ್ಯರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ತಿಳಿಸಿದ್ದಾರೆ. ಕೇಂದ್ರ ಸರ್ಕಾರದ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು ಕರ್ನಾಟಕದ ಅತ್ಯಂತ ಜನನಿಬಿಡ ಹೆದ್ದಾರಿಗಳಲ್ಲಿ ಒಂದಾದ NH-275 (ಬಂಟ್ವಾಳ-ಬೆಂಗಳೂರು ವಿಭಾಗ) ರಸ್ತೆಯ ಅಭಿವೃದ್ಧಿಗಾಗಿ (ಸಂಪಾಜೆ ಯಿಂದ ಕುಶಾಲನಗರ ವರೆಗೆ) ಭರ್ಜರಿ ಕೊಡುಗೆ ನೀಡಿದ್ದು, ಈ ರಸ್ತೆ ಅಭಿವೃದ್ಧಿ ಕಾಣಲಿದೆ ಎಂದಿದ್ದಾರೆ. ಈ ಹೆದ್ದಾರಿಯ ಆಯ್ದ ಭಾಗಗಳಲ್ಲಿ ರಕ್ಷಣಾತ್ಮಕ ಗೋಡೆಗಳ ನಿರ್ಮಾಣ ಮತ್ತು ಸುರಕ್ಷತಾ ಕಾಮಗಾರಿಗಳಿಗಾಗಿ 94.08 ಕೋಟಿ ರೂಪಾಯಿಗಳ ಆರ್ಥಿಕ ಮತ್ತು ತಾಂತ್ರಿಕ ಮಂಜೂರಾತಿಯನ್ನು ನೀಡಿ ಆದೇಶ ಹೊರಡಿಸಿದ್ದುಯೋಜನೆಯ ಹಿನ್ನೆಲೆ ಮತ್ತು ಉದ್ದೇಶಬಂಟ್ವಾಳ ಮತ್ತು ಬೆಂಗಳೂರು ನಡುವಿನ ಈ ಘಟ್ಟ ಪ್ರದೇಶದ ರಸ್ತೆಯು ಮಳೆಗಾಲದಲ್ಲಿ ಪದೇ ಪದೇ ಭೂಕುಸಿತಕ್ಕೆ ತುತ್ತಾಗುತ್ತಿತ್ತು. ಇದನ್ನು ತಡೆಗಟ್ಟಲು ಮತ್ತು ಪ್ರಯಾಣಿಕರ ಸುರಕ್ಷತೆಯನ್ನು ಖಚಿತಪಡಿಸಲು ಕಿಮೀ 78.000 ರಿಂದ 125.000 ವರೆಗಿನ (ಸಂಪಾಜೆ ಯಿಂದ ಕುಶಾಲನಗರ ವರೆಗೆ) ವ್ಯಾಪ್ತಿಯಲ್ಲಿ ಈ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲಾಗುತ್ತಿದೆ ಎಂದರು. ಈ ಯೋಜನೆಯನ್ನು EPC (Engineering, Procurement, and Construction) ಮಾದರಿಯಲ್ಲಿ ಅನುಷ್ಠಾನಗೊಳ್ಳುತ್ತಿದೆ ಎಂದು ಅವರು ತಿಳಿಸಿದರು. :: ಪ್ರಮುಖ ಕಾಮಗಾರಿಗಳು :: ಸಚಿವಾಲಯದ ತಾಂತ್ರಿಕ ವರದಿಯ ಪ್ರಕಾರ, :: ಯೋಜನೆಯು ರಕ್ಷಣಾತ್ಮಕ ಗೋಡೆಗಳು : : ಒಟ್ಟು 1,650 ಮೀಟರ್ ಉದ್ದದ ಆರ್‌ಸಿಸಿ ಕ್ಯಾಂಟಿಲಿವರ್ ರಿಟೈನಿಂಗ್ ವಾಲ್ ಮತ್ತು ಕಣಿವೆಯ ಬದಿಯಲ್ಲಿ ವಿಶೇಷವಾಗಿ 110 ಮೀಟರ್ ಉದ್ದದ ಪ್ರೆಶರ್ ರಿಲೀಫ್ ಗೋಡೆಗಳನ್ನು ನಿರ್ಮಿಸಲಾಗುವುದು. :: ಬ್ರೆಸ್ಟ್ ವಾಲ್ ಮತ್ತು ಚರಂಡಿ : ಗುಡ್ಡದ ಬದಿಯಲ್ಲಿ ಮಣ್ಣು ಕುಸಿಯದಂತೆ 1,910 ಮೀಟರ್ ಉದ್ದದ ಬ್ರೆಸ್ಟ್ ವಾಲ್ ಮತ್ತು ನೀರು ಸರಾಗವಾಗಿ ಹರಿಯಲು 2,720 ಮೀಟರ್ ಉದ್ದದ ಚೂಟ್ ಡ್ರೈನ್‌ಗಳನ್ನು ನಿರ್ಮಿಸಲಾಗುತಿದೆ ಎಂದಿದ್ದಾರೆ. :: ತಿರುವುಗಳ ಸುಧಾರಣೆ : : ರಸ್ತೆ ಸುರಕ್ಷತೆಯನ್ನು ಹೆಚ್ಚಿಸಲು 17 ಆಯ್ದ ಸ್ಥಳಗಳಲ್ಲಿ ಒಟ್ಟು 1,690 ಮೀಟರ್ ಉದ್ದದ ರಸ್ತೆಯನ್ನು ವಿಸ್ತರಿಸಲಾಗುತಿದೆ. :: ಮೋರಿಗಳ ಪುನರ್ನಿರ್ಮಾಣ : : ಕಿಮೀ 77.750 ಮತ್ತು 89.670 ರಲ್ಲಿ ಹಳೆಯದಾದ ಎರಡು ಬಾಕ್ಸ್ ಮೋರಿಗಳನ್ನು ಮರುನಿರ್ಮಾಣ ಮಾಡಲಾಗುವುದು. :: ಸುರಕ್ಷತಾ ಕ್ರಮಗಳು : : ರಕ್ಷಣಾತ್ಮಕ ಕ್ರಾಶ್ ಬ್ಯಾರಿಯರ್‌ಗಳು ಮತ್ತು ಆಧುನಿಕ ಸಂಚಾರ ಸೂಚನಾ ಫಲಕಗಳನ್ನು ಅಳವಡಿಸಲಾಗುವುದು ಎಂದರು. ರೂ. 94.08 ಕೋಟಿ (ಜಿಎಸ್‌ಟಿ ಮತ್ತು ನಿರ್ವಹಣಾ ವೆಚ್ಚಗಳು ಸೇರಿ). ವೆಚ್ಚದ ಯೋಜನೆಯು
ಮಳೆಗಾಲವನ್ನೂ ಒಳಗೊಂಡಂತೆ 18 ತಿಂಗಳುಗಳಲ್ಲಿ ಪೂರ್ಣಗೊಳ್ಳಲಿದೆ. :: ನಿರ್ವಹಣೆ : : ಗುತ್ತಿಗೆದಾರರು ಕಾಮಗಾರಿ ಮುಗಿದ ನಂತರ ಮುಂದಿನ 10 ವರ್ಷಗಳ ಕಾಲ ರಸ್ತೆಯ ದೋಷ ಹೊಣೆಗಾರಿಕೆ ಮತ್ತು ನಿರ್ವಹಣೆಯನ್ನು ನೋಡಿಕೊಳ್ಳಬೇಕಾಗುತ್ತದೆ ಎಂದು ತಿಳಿಸಿದ್ದಾರೆ. ಯೋಜನೆಯ ಗುಣಮಟ್ಟ ಕಾಪಾಡಲು ಸಚಿವಾಲಯವು ಹಲವು ಷರತ್ತುಗಳನ್ನು ವಿಧಿಸಿದೆಕಾಮಗಾರಿ ಆರಂಭಿಸುವ ಮುನ್ನ ಮತ್ತು ನಂತರ ನೆಟ್‌ವರ್ಕ್ ಸರ್ವೆ ವೆಹಿಕಲ್ (NSV) ಮೂಲಕ ರಸ್ತೆಯ ಗುಣಮಟ್ಟವನ್ನು ದಾಖಲಿಸುವುದು ಕಡ್ಡಾಯಗೊಳಿಸಿದೆ ಎಂದಿದ್ದಾರೆ. ಸಾರ್ವಜನಿಕ ಸಂಚಾರಕ್ಕೆ ತೊಂದರೆಯಾಗದಂತೆ ಏಕಕಾಲಕ್ಕೆ 3 ಕಿಮೀಗಿಂತ ಹೆಚ್ಚು ಉದ್ದದ ಕಾಮಗಾರಿ ನಡೆಸದಂತೆ ಸೂಚಿಸಲಾಗಿದೆ. ಈ ಯೋಜನೆಯು ಪೂರ್ಣಗೊಂಡ ನಂತರ, ಬೆಂಗಳೂರು ಮತ್ತು ಕರಾವಳಿ ಭಾಗದ ನಡುವಿನ ಸಂಚಾರವು ಹವಾಮಾನ ವೈಪರೀತ್ಯಗಳ ಸಂದರ್ಭದಲ್ಲೂ ಹೆಚ್ಚು ಸುರಕ್ಷಿತ ಮತ್ತು ಸುಗಮವಾಗಲಿದೆ.ಕಾಮಗಾರಿಗೆ ಮಡಿಕೇರಿ ಸಮೀಪದಲ್ಲಿ 2026 ಜನವರಿ ಜನವರಿ ಮಾಹೆಯ ಕೊನೆಯ ವಾರದಂದು ಚಾಲನೆ ನೀಡುವುದಾಗಿ ಸಂಸದ ಯದುವೀರ್ ಒಡೆಯರ್ ತಿಳಿಸಿದ್ದಾರೆ.

 

Follow us Follow us
Share. WhatsApp Facebook Twitter Email Telegram Copy Link

Related Posts

*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಸೆ.26: ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್…

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*

ಸೆಪ್ಟೆಂಬರ್ 26, 2026

*ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*

ಸೆಪ್ಟೆಂಬರ್ 26, 2026

*ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*

ಸೆಪ್ಟೆಂಬರ್ 26, 2026

*2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*

ಸೆಪ್ಟೆಂಬರ್ 26, 2026

*ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*

ಸೆಪ್ಟೆಂಬರ್ 26, 2026

*ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*

ಸೆಪ್ಟೆಂಬರ್ 26, 2026

*ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*

ಸೆಪ್ಟೆಂಬರ್ 26, 2026

*36 ವರ್ಷ ಸೇವೆ ಸಲ್ಲಿಸಿದ ಅಂಗನವಾಡಿ ಕಾರ್ಯಕರ್ತೆ ದೇವಮಾಜಿ, ಶಿಕ್ಷಕಿ ಭೋಜಮ್ಮಗೆ ಆತ್ಮೀಯ ಬೀಳ್ಕೊಡುಗೆ*

ಸೆಪ್ಟೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.