Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕೊಡಗು : ವಿದೇಶಿ ಮಹಿಳೆ ಮೇಲಿನ ದೌರ್ಜನ್ಯ ಪ್ರಕರಣ : ಸಮಗ್ರ ತನಿಖೆಗೆ ಸಚಿವ ಭೋಸರಾಜು ಸೂಚನೆ*
  • *ವಿರಾಜಪೇಟೆ : ಏ.26 ರಂದು ಗ್ರಾಮೀಣ ಕ್ರೀಡಾಕೂಟ*
  • *ವಿದ್ಯುತ್ ಕಂಬಕ್ಕೆ ಆಟೋ ಡಿಕ್ಕಿ : ಚಾಲಕ ಸಾವು*
  • *ಸೋಮವಾರಪೇಟೆಯಲ್ಲಿ ಕುಂದುಕೊರತೆ ಸಭೆ : ಪರಿಶಿಷ್ಟರು ಸೇರಿದಂತೆ ಎಲ್ಲಾ ಜನರ ಶ್ರೇಯೋಭಿವೃದ್ಧಿಗೆ ಅಧಿಕಾರಿಗಳು ಇಚ್ಚಾಶಕ್ತಿಯಿಂದ ಕರ್ತವ್ಯ ನಿರ್ವಹಿಸಿ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್*
  • *ಸೋಮವಾರಪೇಟೆ : ಬಸವೇಶ್ವರ ದೇವಾಲಯದಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ವಿಶೇಷ ಪೂಜೆ*
  • *ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಏ.23 ರಂದು ನಡೆಯುವ ಪಂದ್ಯಗಳು*
  • *ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಏ.22 ರಂದು ಗೆಲುವು ಸಾಧಿಸಿದ ತಂಡಗಳು*
  • *ರಾಜ್ಯ ಮಟ್ಟದ ಮೊಗೇರ ಕ್ರೀಡಾಕೂಟಕ್ಕೆ ಮಡಿಕೇರಿಯಲ್ಲಿ ಸಂಭ್ರಮದ ತೆರೆ : ಮೊಗೇರ ಸಮಾಜಕ್ಕೆ ಸಮುದಾಯ ಭವನ : ಶಾಸಕ ಎ.ಎಸ್.ಪೊನ್ನಣ್ಣ ಭರವಸೆ*
  • *ಮೇ 1 ರಂದು ಶ್ರೀ ಯೋಗಿ ನಾರಾಯಣ ಕೊಡಗು ಜಿಲ್ಲಾ ಬಲಿಜ ಸಮಾಜದ ವಾರ್ಷಿಕ ಮಹಾಸಭೆ*
  • *ಬಿಸಿಲಿನ ತೀವ್ರತೆಯ ಪರಿಣಾಮ : ದೇಹದ ತಾಪಮಾನ ಅಸಮರ್ಪಕವಾದಾಗ ಹೀಟ್ ಸ್ಟ್ರೋಕ್ ಉಂಟಾಗಬಹುದು : ಯಾರಿಗೆ ಹೆಚ್ಚು ಅಪಾಯ?…. : ಬರಹ : ಡಾ|| ಕೆ.ಬಿ.ಸೂರ್ಯ ಕುಮಾರ್, ಮಡಿಕೇರಿ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಗಣರಾಜ್ಯೋತ್ಸವ : ಅರ್ಥಪೂರ್ಣ ಆಚರಣೆಗೆ ಕೊಡಗು ಜಿಲ್ಲಾಡಳಿತ ನಿರ್ಧಾರ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಗಣರಾಜ್ಯೋತ್ಸವ : ಅರ್ಥಪೂರ್ಣ ಆಚರಣೆಗೆ ಕೊಡಗು ಜಿಲ್ಲಾಡಳಿತ ನಿರ್ಧಾರ*

ಜನವರಿ 12, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜ.12 NEWS DESK : ಕಳೆದ ಬಾರಿಯಂತೆ ಈ ಬಾರಿಯೂ ಸಹ ಗಣರಾಜ್ಯೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲು ಕೊಡಗು ಜಿಲ್ಲಾಡಳಿತ ನಿರ್ಧರಿಸಿದೆ. ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಅವರು ಮಾತನಾಡಿದರು. ಕಳೆದ ಬಾರಿಯಂತೆ ಈ ಬಾರಿಯು ಸಹ ಗಣರಾಜ್ಯೋತ್ಸವ ಆಚರಣೆಗೆ ವಿವಿಧ ಇಲಾಖೆಗಳು ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು. ವಿವಿಧ ಉಪ ಸಮಿತಿಗಳು ವಹಿಸಿರುವ ಜವಾಬ್ದಾರಿಯನ್ನು ಚಾಚೂ ತಪ್ಪದೆ ಪಾಲಿಸಬೇಕು ಎಂದು ನಿರ್ದೇಶನ ನೀಡಿದರು. ಗಣರಾಜ್ಯೋತ್ಸವವನ್ನು ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣ ಅಥವಾ ಪೊಲೀಸ್ ಕವಾಯತು ಮೈದಾನದಲ್ಲಿ ಆಯೋಜಿಲಾಗುವುದು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಅವರು ಹೇಳಿದರು. ಸಾಂಸ್ಕøತಿಕ ಕಾರ್ಯಕ್ರಮ ಏರ್ಪಡಿಸುವ ಸಂಬಂಧ ಮಾಹಿತಿ ನೀಡಿದ ಹೆಚ್ಚುವರಿ ಜಿಲ್ಲಾಧಿಕಾರಿ ಅವರು ಸಾಂಸ್ಕೃತಿಕ ಕಾರ್ಯಕ್ರಮ ನಡೆಸುವ ಶಾಲೆಗಳ ವಿವರ ತಿಳಿಸಬೇಕು. ಜೊತೆಗೆ ರಿಹರ್ಸಲ್‍ನ್ನು ಮಾಡಿಕೊಳ್ಳಬೇಕು. ಶಾಲೆಯಲ್ಲಿಯೇ ಅಗತ್ಯ ತರಬೇತಿ ಪಡೆದು ಸಿದ್ಧತೆ ಮಾಡಿಕೊಳ್ಳಬೇಕು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಅವರು ಸೂಚಿಸಿದರು. ಸರ್ಕಾರದ ಗ್ಯಾರಂಟಿ ಯೋಜನೆ ಸೇರಿದಂತೆ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳ ಸಂಬಂಧ ಸ್ತಬ್ಧಚಿತ್ರ ಏರ್ಪಡಿಸುವಂತಾಗಬೇಕು. ಆ ನಿಟ್ಟಿನಲ್ಲಿ ಹಿಂದಿನಂತೆಯೇ ಕ್ರಮವಹಿಸುವಂತೆ ಆರ್.ಐಶ್ವರ್ಯ ಅವರು ಸಲಹೆ ನೀಡಿದರು. ಕಾರ್ಯಕ್ರಮ ನಿಮಿತ್ತ ಕಲಾತಂಡಗಳ ಆಹ್ವಾನ, ಮತ್ತಿತರ ಬಗ್ಗೆ ಗಮನಹರಿಸುವಂತೆ ಹೆಚ್ಚುವರಿ ಜಿಲ್ಲಾಧಿಕಾರಿ ಅವರು ತಿಳಿಸಿದರು. ರಿಹರ್ಸಲ್ ಹಾಗೂ ಕಾರ್ಯಕ್ರಮದ ದಿನ ಉಪಾಹಾರ ಪೂರೈಕೆ ಮಾಡುವುದು, ಶುದ್ಧ ಕುಡಿಯುವ ನೀರು ಸರಬರಾಜು ಮಾಡುವುದು ಮತ್ತಿತರ ಬಗ್ಗೆ ಗಮನಹರಿಸುವಂತೆ ಸಂಬಂಧಪಟ್ಟ ಇಲಾಖಾ ಅಧಿಕಾರಿಗಳಿಗೆ ಸೂಚಿಸಿದರು. ಹಾಗೆಯೇ ವೇದಿಕೆ ನಿರ್ಮಾಣ, ಸೇರಿದಂತೆ ಹಲವು ಕಾರ್ಯಕ್ರಮಗಳ ಸಂಬಂಧ ಗಮನಹರಿಸುವಂತೆ ಹೆಚ್ಚುವರಿ ಜಿಲ್ಲಾಧಿಕಾರಿ ತಿಳಿಸಿದರು. ವಿವಿಧ ಇಲಾಖೆಗಳು ತಮ್ಮ ಇಲಾಖೆ ವ್ಯಾಪ್ತಿಯ ಅಭಿವೃದ್ಧಿ ಕಾರ್ಯಕ್ರಮಗಳ ಸಂಬಂಧ ಇದೇ ಜನವರಿ, 14 ರೊಳಗೆ ಜಿಲ್ಲಾಡಳಿತಕ್ಕೆ ಮಾಹಿತಿ ನೀಡಬೇಕು. ಪ್ರಶಸ್ತಿ ವಿತರಣೆ ಇದ್ದಲ್ಲಿ 16 ರೊಳಗೆ ಮಾಹಿತಿ ನೀಡುವಂತಾಗಬೇಕು. ಸಾಂಸ್ಕøತಿಕ ಕಾರ್ಯಕ್ರಮ ಸಂಬಂಧಿಸಿದಂತೆ ಜನವರಿ, 21 ರೊಳಗೆ ಲಿಖಿತವಾಗಿ ಮಾಹಿತಿ ನೀಡುವಂತೆ ಹೆಚ್ಚುವರಿ ಜಿಲ್ಲಾಧಿಕಾರಿ ಅವರು ಹೇಳಿದರು. ನಗರದಲ್ಲಿರುವ ಎಲ್ಲಾ ಗಣ್ಯರ ಪ್ರತಿಮೆಗಳಿಗೆ ದೀಪಾಲಂಕಾರ ಮಾಡುವುದು ಸೇರಿದಂತೆ ಹಬ್ಬದ ರೀತಿ ಗಣರಾಜ್ಯೋತ್ಸವವನ್ನು ಆಚರಿಸುವಂತಾಗಬೇಕು ಎಂದು ಅವರು ಸಲಹೆ ನೀಡಿದರು. ಗಣರಾಜ್ಯೋತ್ಸವ ದಿನದಂದು ಎಲ್ಲಾ ಜಿಲ್ಲಾ ಮಟ್ಟದ ಅಧಿಕಾರಿಗಳು ಕಡ್ಡಾಯವಾಗಿ ಹಾಜರಿರಬೇಕು. ಕಾರ್ಯಕ್ರಮದಲ್ಲಿ ಪ್ಲಾಸ್ಟಿಕ್ ಬಳಸದಂತೆ ಎಚ್ಚರ ವಹಿಸಬೇಕು. ಶುಚಿತ್ವಕ್ಕೆ ಆದ್ಯತೆ ನೀಡಬೇಕು ಎಂದು ಆರ್.ಐಶ್ವರ್ಯ ಅವರು ಹೇಳಿದರು. ಉಪ ಪೊಲೀಸ್ ವರಿಷ್ಠಾಧಿಕಾರಿ ದಿನೇಶ್ ಕುಮಾರ್ ಅವರು ಮಾತನಾಡಿ ಸಾಂಸ್ಕøತಿಕ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ನಡೆಸಬೇಕು. ಈ ಸಂಬಂಧ ಅಗತ್ಯ ಸಿದ್ಧತೆಯನ್ನು ಶಾಲೆಯಲ್ಲಿಯೇ ವಿದ್ಯಾರ್ಥಿಗಳು ಮಾಡಿಕೊಳ್ಳಬೇಕು. ಮೈದಾನದ ಮಧ್ಯಭಾಗದಲ್ಲಿ ಸಾಂಸ್ಕøತಿಕ ಕಾರ್ಯಕ್ರಮ ಆಯೋಜಿಸುವಂತಾಗಬೇಕು ಎಂದರು. ವೇದಿಕೆ ನಿರ್ಮಾಣ ಮಾಡುವ ಸಂದರ್ಭದಲ್ಲಿಯೂ ಸಹ ಸೂಕ್ತ ಜಾಗದಲ್ಲಿ ನಿರ್ಮಿಸಬೇಕು ಎಂದು ಅವರು ಹೇಳಿದರು. ಉಪ ವಿಭಾಗಾಧಿಕಾರಿ ನಿತಿನ್ ಚಕ್ಕಿ ಅವರು ಶಬ್ಧ ಚಿತ್ರ ಸಂಬಂಧ ಗಮನಹರಿಸಲಾಗುವುದು ಎಂದರು. ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕರಾದ ಬಸವರಾಜು ಅವರು ಸಾಂಸ್ಕøತಿಕ ಕಾರ್ಯಕ್ರಮ ಏರ್ಪಡಿಸುವ ಸಂಬಂಧ ಅಗತ್ಯ ಕ್ರಮವಹಿಸಲಾಗುವುದು. ಈ ಸಂಬಂಧ ರಿಹರ್ಸಲ್ ನಡೆಸಲಾಗುವುದು ಎಂದರು. ಲೋಕೋಪಯೋಗಿ, ಕಂದಾಯ, ಪಂಚಾಯತ್ ರಾಜ್, ಅರಣ್ಯ, ಆಹಾರ ಮತ್ತು ನಾಗರಿಕ ಸರಬರಾಜು, ಕೃಷಿ, ತೋಟಗಾರಿಕೆ, ಪಶುಪಾಲನೆ, ಕನ್ನಡ ಮತ್ತು ಸಂಸ್ಕøತಿ ಹೀಗೆ ವಿವಿಧ ಇಲಾಖೆಗಳು ಸಮನ್ವಯತೆಯಿಂದ ಕಾರ್ಯನಿರ್ವಹಿಸಬೇಕು. ಕಾರ್ಯಕ್ರಮ ಆಯೋಜನೆಗೆ ಸರ್ಕಾರ ಮತ್ತು ಸರ್ಕಾರೇತರ ಸಂಸ್ಥೆಗಳು ಜೊತೆಗೂಡಿ ಕಾರ್ಯನಿರ್ವಹಿಸಬೇಕು ಎಂದರು. ಕೃಷಿ ಇಲಾಖೆಯ ಜಂಟಿ ನಿರ್ದೇಶಕರಾದ ಚಂದ್ರಶೇಖರ್, ತೋಟಗಾರಿಕೆ ಇಲಾಖೆ ಉಪ ನಿರ್ದೇಶಕರಾದ ಶಶಿಧರ, ಪಶುಪಾಲನೆ ಇಲಾಖೆ ಉಪ ನಿರ್ದೇಶಕರಾದ ಲಿಂಗರಾಜು ದೊಡ್ಡಮನಿ, ಪೌರಾಯುಕ್ತರಾದ ಎಚ್.ಆರ್.ರಮೇಶ್, ತಹಶೀಲ್ದಾರ್ ಶ್ರೀಧರ, ಸೈನಿಕ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರಾದ ಬಿ.ಆರ್.ಶೆಟ್ಟಿ, ಪಂಚಾಯತ್ ರಾಜ್ ಇಲಾಖೆ ಎಂಜಿನಿಯರ್ ಜಿ.ಕೆ.ನಾಯಕ್, ಲೀಡ್ ಬ್ಯಾಂಕ್ ವ್ಯವಸ್ಥಾಪಕರಾದ ಗಂಗಾಧರ್ ನಾಯಕ್, ಜಿಲ್ಲಾ ಪರಿಸರ ಅಧಿಕಾರಿ ರಘುರಾಮ್, ನಗರಾಭಿವೃದ್ಧಿ ಯೋಜನಾ ಶಾಖೆಯ ಯೋಜನಾ ನಿರ್ದೇಶಕರಾದ ಬಿ.ಬಸಪ್ಪ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಕುಮಾರ, ಎಂಜಿನಿಯರ್ ಪ್ರಭು, ಸ್ಕೌಟ್ಸ್ ಮತ್ತು ಗೈಡ್ಸ್‍ನ ಜಿಮ್ಮಿ ಸ್ವಿಕ್ವೇರಾ, ಭೂದಾಖಲೆಗಳ ಉಪನಿರ್ದೇಶಕರಾದ ನಿರಂಜನ, ಜಿ.ಪಂ.ಸಹಾಯಕ ಕಾರ್ಯದರ್ಶಿ ಜೀವನ್ ಕುಮಾರ್, ಲೋಕೋಪಯೋಗಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.

 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕೊಡಗು : ವಿದೇಶಿ ಮಹಿಳೆ ಮೇಲಿನ ದೌರ್ಜನ್ಯ ಪ್ರಕರಣ : ಸಮಗ್ರ ತನಿಖೆಗೆ ಸಚಿವ ಭೋಸರಾಜು ಸೂಚನೆ*

ಏಪ್ರಿಲ್ 22, 2026

*ವಿರಾಜಪೇಟೆ : ಏ.26 ರಂದು ಗ್ರಾಮೀಣ ಕ್ರೀಡಾಕೂಟ*

ಏಪ್ರಿಲ್ 22, 2026

*ವಿದ್ಯುತ್ ಕಂಬಕ್ಕೆ ಆಟೋ ಡಿಕ್ಕಿ : ಚಾಲಕ ಸಾವು*

ಏಪ್ರಿಲ್ 22, 2026

*ವಿರಾಜಪೇಟೆ : ಏ.26 ರಂದು ಗ್ರಾಮೀಣ ಕ್ರೀಡಾಕೂಟ*

ಏಪ್ರಿಲ್ 22, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ ಏ.22 NEWS DESK : ವಿಷು ಹಬ್ಬದ ಪ್ರಯುಕ್ತ ಶ್ರೀ ಮುತ್ತಪ್ಪ ಮಲಯಾಳಿ ಸಮಾಜದ ವತಿಯಿಂದ ಏ.26 ರಂದು…

*ವಿದ್ಯುತ್ ಕಂಬಕ್ಕೆ ಆಟೋ ಡಿಕ್ಕಿ : ಚಾಲಕ ಸಾವು*

ಏಪ್ರಿಲ್ 22, 2026

*ಸೋಮವಾರಪೇಟೆಯಲ್ಲಿ ಕುಂದುಕೊರತೆ ಸಭೆ : ಪರಿಶಿಷ್ಟರು ಸೇರಿದಂತೆ ಎಲ್ಲಾ ಜನರ ಶ್ರೇಯೋಭಿವೃದ್ಧಿಗೆ ಅಧಿಕಾರಿಗಳು ಇಚ್ಚಾಶಕ್ತಿಯಿಂದ ಕರ್ತವ್ಯ ನಿರ್ವಹಿಸಿ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್*

ಏಪ್ರಿಲ್ 22, 2026

*ಸೋಮವಾರಪೇಟೆ : ಬಸವೇಶ್ವರ ದೇವಾಲಯದಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ವಿಶೇಷ ಪೂಜೆ*

ಏಪ್ರಿಲ್ 22, 2026

*ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಏ.23 ರಂದು ನಡೆಯುವ ಪಂದ್ಯಗಳು*

ಏಪ್ರಿಲ್ 22, 2026

*ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಏ.22 ರಂದು ಗೆಲುವು ಸಾಧಿಸಿದ ತಂಡಗಳು*

ಏಪ್ರಿಲ್ 22, 2026

*ರಾಜ್ಯ ಮಟ್ಟದ ಮೊಗೇರ ಕ್ರೀಡಾಕೂಟಕ್ಕೆ ಮಡಿಕೇರಿಯಲ್ಲಿ ಸಂಭ್ರಮದ ತೆರೆ : ಮೊಗೇರ ಸಮಾಜಕ್ಕೆ ಸಮುದಾಯ ಭವನ : ಶಾಸಕ ಎ.ಎಸ್.ಪೊನ್ನಣ್ಣ ಭರವಸೆ*

ಏಪ್ರಿಲ್ 22, 2026

*ಮೇ 1 ರಂದು ಶ್ರೀ ಯೋಗಿ ನಾರಾಯಣ ಕೊಡಗು ಜಿಲ್ಲಾ ಬಲಿಜ ಸಮಾಜದ ವಾರ್ಷಿಕ ಮಹಾಸಭೆ*

ಏಪ್ರಿಲ್ 22, 2026

*ಬಿಸಿಲಿನ ತೀವ್ರತೆಯ ಪರಿಣಾಮ : ದೇಹದ ತಾಪಮಾನ ಅಸಮರ್ಪಕವಾದಾಗ ಹೀಟ್ ಸ್ಟ್ರೋಕ್ ಉಂಟಾಗಬಹುದು : ಯಾರಿಗೆ ಹೆಚ್ಚು ಅಪಾಯ?…. : ಬರಹ : ಡಾ|| ಕೆ.ಬಿ.ಸೂರ್ಯ ಕುಮಾರ್, ಮಡಿಕೇರಿ*

ಏಪ್ರಿಲ್ 22, 2026

*ವಿಕಾಸ್ ಜನತಾ ಸೇವಾ ಟ್ರಸ್ಟ್ ನಿಂದ ತುರ್ತು ಆರೋಗ್ಯ ಸೇವಾ ಘಟಕ ರಚನೆ*

ಏಪ್ರಿಲ್ 22, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.