Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*
  • *ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*
  • *ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*
  • *ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*
  • *ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*
  • *ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*
  • *2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*
  • *ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*
  • *ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*
  • *ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ವಿವಿಧ ಬೇಡಿಕೆಗಳನ್ನು ಸಿಎಂ ಮುಂದಿಟ್ಟ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ವಿವಿಧ ಬೇಡಿಕೆಗಳನ್ನು ಸಿಎಂ ಮುಂದಿಟ್ಟ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕ*

ಜನವರಿ 12, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜ.12 NEWS DESK : ಕೊಡಗು ಜಿಲ್ಲೆಯ ಕೇಂದ್ರ ಸ್ಥಾನ ಮಡಿಕೇರಿ ನಗರದಲ್ಲಿ ‘ಜಿಲ್ಲಾ ಮುಸ್ಲಿಂ ಭವನ’ ನಿರ್ಮಾಣಕ್ಕೆ ಸೂಕ್ತ ಸರಕಾರಿ ಜಾಗವನ್ನು ಮಂಜೂರು ಮಾಡಬೇಕು ಸೇರಿದಂತೆ ವಿವಿಧ ಬೇಡಿಕೆಗಳ ಮನವಿ ಪತ್ರವನ್ನು ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಲ್ಪಸಂಖ್ಯಾತರ ಘಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಲ್ಲಿಸಿದೆ. ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಜಿಲ್ಲಾಧ್ಯಕ್ಷ ಹನೀಫ್ ಪಿ.ಎ ಅವರ ನೇತೃತ್ವದಲ್ಲಿ ಮುಖ್ಯಮಂತ್ರಿಗಳನ್ನು ಭೇಟಿಯಾದ ನಿಯೋಗ ಅಲ್ಪಸಂಖ್ಯಾತರ ಪಕ್ಷ ನಿಷ್ಠೆಯನ್ನು ವಿವರಿಸಿದರು. ಕೊಡಗು ಜಿಲ್ಲೆಯ ಮುಸ್ಲಿಂ ಮತದಾರರು ಕಾಂಗ್ರೆಸ್ ಪಕ್ಷದ ಬೆನ್ನೆಲುಬಾಗಿದ್ದಾರೆ. ಕಳೆದ ಹಲವು ದಶಕಗಳಿಂದ ಪಕ್ಷಕ್ಕಾಗಿ ತೋರಿದ ನಿಷ್ಠೆಗೆ ಯಾವುದೇ ರೀತಿಯಲ್ಲೂ ಬೆಲೆ ಕಲ್ಪಿಸಲು ಸಾಧ್ಯವಿಲ್ಲ. ಆದರೆ ಕಾಂಗ್ರೆಸ್ ಸರಕಾರ ರಾಜ್ಯದಲ್ಲಿ ಆಡಳಿತ ನಡೆಸುತ್ತಿದ್ದರೂ ಕೊಡಗು ಜಿಲ್ಲೆಯ ಕಾಂಗ್ರೆಸ್ ನ ಮುಸ್ಲಿಂ ಮುಖಂಡರಿಗೆ ಸೂಕ್ತ ರಾಜಕೀಯ ಸ್ಥಾನಮಾನ ದೊರೆಯಲಿಲ್ಲ ಎನ್ನುವ ಕೊರಗು ನಮ್ಮನ್ನು ನಿರಂತರವಾಗಿ ಕಾಡುತ್ತಿದೆ ಎಂದು ಹನೀಫ್ ಪಿ.ಎ ತಿಳಿಸಿದರು. ಕೊಡಗಿನ ಕಾಂಗ್ರೆಸ್ ಮುಸ್ಲಿಂ ಪ್ರಮುಖರೊಬ್ಬರನ್ನು ಕರ್ನಾಟಕ ವಿಧಾನ ಪರಿಷತ್ ಸದಸ್ಯರನ್ನಾಗಿ ಮಾಡಬೇಕು. ಮುಂಬರುವ ದಿನಗಳಲ್ಲಿ ರಾಜ್ಯದ ನಿಗಮ ಮತ್ತು ಮಂಡಳಿಗಳಿಗೆ ಅರ್ಹರನ್ನು ನೇಮಕಗೊಳಿಸುವ ಸಂದರ್ಭ ಕೊಡಗು ಜಿಲ್ಲೆಯ ಕಾಂಗ್ರೆಸ್ ಮುಸ್ಲಿಂ ಮುಖಂಡರನ್ನು ಪರಿಗಣಿಸಿ ಸೂಕ್ತ ರಾಜಕೀಯ ಸ್ಥಾನಮಾನ ನೀಡಬೇಕು. ಜಿ.ಪಂ ಮತ್ತು ತಾ.ಪಂ ಚುನಾವಣೆಗಳಲ್ಲಿ ಅಲ್ಪಸಂಖ್ಯಾತರು ಹೆಚ್ಚಾಗಿ ನೆಲೆಸಿರುವ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಮುಸ್ಲಿಂ ಮುಖಂಡರನ್ನು ರಾಜಕೀಯದ ಮುಖ್ಯ ವಾಹಿನಿಗೆ ಬರಲು ಅವಕಾಶಗಳನ್ನು ಖಚಿತಪಡಿಸಬೇಕು. ವಿರಾಜಪೇಟೆ ವಿಧಾನಸಭಾ ಕ್ಷೇತ್ರಕ್ಕೆ ಮೌಲಾನ ಅಬ್ದುಲ್ ಕಲಾಂ ಆಜಾದ್ ಮಾದರಿ ಶಾಲೆ ಮತ್ತು ಪೊನ್ನಂಪೇಟೆ ತಾಲ್ಲೂಕಿಗೆ ತೀರಾ ಅಗತ್ಯವಿರುವ ಸರಕಾರಿ ಪ್ರಥಮ ದರ್ಜೆ ಕಾಲೇಜು ನ್ನು ಶೀಘ್ರ ಮಂಜೂರು ಮಾಡಬೇಕು. ಕೊಡಗಿನಲ್ಲಿ ಅಲ್ಪಸಂಖ್ಯಾತರು ಹೆಚ್ಚಾಗಿ ವಾಸಿಸುವ ಪ್ರದೇಶಗಳಲ್ಲಿ ರಸ್ತೆ, ಶುದ್ಧ ಕುಡಿಯುವ ನೀರು, ಸಮುದಾಯ ಭವನ ನಿರ್ಮಾಣ ಮೊದಲಾದ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಲು ಹೆಚ್ಚಿನ ಅನುದಾನ ಬಿಡುಗಡೆಗೊಳಿಸಬೇಕು. ಮಡಿಕೇರಿಯಲ್ಲಿ ‘ಮುಸ್ಲಿಂ ಭವನ’ ನಿರ್ಮಾಣಕ್ಕೆ ಜಾಗ ಮಂಜೂರು ಮಾಡಬೇಕು ಎಂಬಿತ್ಯಾದಿ ಬೇಡಿಕೆಗಳ ಮನವಿ ಪತ್ರವನ್ನು ಹನೀಫ್ ಪಿ.ಎ ಮುಖ್ಯಮಂತ್ರಿಗಳಿಗೆ ಸಲ್ಲಿಸಿದರು. ಈ ಸಂದರ್ಭ ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು, ವಿರಾಜಪೇಟೆ ಶಾಸಕ ಎ.ಎಸ್.ಪೊನ್ನಣ್ಣ, ಮಡಿಕೇರಿ ಶಾಸಕ ಡಾ.ಮಂತರ್ ಗೌಡ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಧರ್ಮಜ ಉತ್ತಪ್ಪ, ಅಲ್ಪಸಂಖ್ಯಾತರ ಘಟಕದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸೈಯದ್ ಬಾವ, ಕೆಪಿಸಿಸಿ ಸದಸ್ಯ ಕೆ.ಎ.ಯಾಕುಬ್, ಆದಂ ಸೋಮವಾರಪೇಟೆ, ವಿರಾಜಪೇಟೆ ಬ್ಲಾಕ್ ಅಧ್ಯಕ್ಷ ರಫೀಕ್, ನಾಪೋಕ್ಲು ಬ್ಲಾಕ್ ಅಧ್ಯಕ್ಷ ಇಸ್ಮಾಯಿಲ್, ಮಡಿಕೇರಿ ಬ್ಲಾಕ್ ಅಧ್ಯಕ್ಷ ಹಂಸ ಕೊಟ್ಟಮುಡಿ, ವಿರಾಜಪೇಟೆ ಪುರಸಭಾ ಸದಸ್ಯ ರಾಫಿ, ವಿರಾಜಪೇಟೆ ಅಕ್ರಮ ಸಕ್ರಮ ಸಮಿತಿಯ ಅಧ್ಯಕ್ಷ ಆರ್.ಕೆ.ಸಲಾಂ, ಹಮೀದ್ ಕೂಡಿಗೆ, ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಹಕೀಂ ಸುಂಟಿಕೊಪ್ಪ ಮತ್ತಿತರರು ಹಾಜರಿದ್ದರು.

Follow us Follow us
Share. WhatsApp Facebook Twitter Email Telegram Copy Link

Related Posts

*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಸೆ.26: ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್…

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*

ಸೆಪ್ಟೆಂಬರ್ 26, 2026

*ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*

ಸೆಪ್ಟೆಂಬರ್ 26, 2026

*ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*

ಸೆಪ್ಟೆಂಬರ್ 26, 2026

*2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*

ಸೆಪ್ಟೆಂಬರ್ 26, 2026

*ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*

ಸೆಪ್ಟೆಂಬರ್ 26, 2026

*ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*

ಸೆಪ್ಟೆಂಬರ್ 26, 2026

*ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*

ಸೆಪ್ಟೆಂಬರ್ 26, 2026

*36 ವರ್ಷ ಸೇವೆ ಸಲ್ಲಿಸಿದ ಅಂಗನವಾಡಿ ಕಾರ್ಯಕರ್ತೆ ದೇವಮಾಜಿ, ಶಿಕ್ಷಕಿ ಭೋಜಮ್ಮಗೆ ಆತ್ಮೀಯ ಬೀಳ್ಕೊಡುಗೆ*

ಸೆಪ್ಟೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.