Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*
  • *ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*
  • *ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*
  • *ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*
  • *ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*
  • *ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*
  • *2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*
  • *ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*
  • *ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*
  • *ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ನವಜಾತ ಶಿಶುಗಳ ಸಂರಕ್ಷಣೆಗಾಗಿ ತಾಯಿಯ ಎದೆಹಾಲು ಸಂಗ್ರಹ ಕೇಂದ್ರ ಸ್ಥಾಪನೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ನವಜಾತ ಶಿಶುಗಳ ಸಂರಕ್ಷಣೆಗಾಗಿ ತಾಯಿಯ ಎದೆಹಾಲು ಸಂಗ್ರಹ ಕೇಂದ್ರ ಸ್ಥಾಪನೆ*

ಜನವರಿ 13, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜ.13 NEWS DESK : ನವಜಾತ ಶಿಶುಗಳ ಸಂರಕ್ಷಣೆಗೆ ಪೂರಕವಾಗಿ ‘ತಾಯಿಯ ಎದೆಹಾಲು ಸಂಗ್ರಹ ಕೇಂದ್ರ’ಗಳನ್ನು ತೆರೆಯುವ ನಿಟ್ಟಿನಲ್ಲಿ ರೋಟರಿ ಸೇವಾ ಸಂಸ್ಥೆ ಪ್ರಥಮ ಆದ್ಯತೆಯೊಂದಿಗೆ ಕಾರ್ಯನಿರ್ವಹಿಸುತ್ತಿದೆಯೆಂದು ರೋಟರಿ ಜಿಲ್ಲಾ ರಾಜ್ಯಪಾಲರಾದ ಪಿ.ಕೆ.ರಾಮಕೃಷ್ಣ ಅವರು ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಾಕಷ್ಟು ಬಾರಿ ನವಜಾತ ಶಿಶುಗಳು ಅಗತ್ಯ ಪೋಷಕಾಂಶಯುಕ್ತ ಹಾಲಿನ ಕೊರತೆಯಿಂದ ಕೊನೆಯುಸಿರೆಳೆಯುತ್ತವೆ. ನವಜಾತ ಶಿಶುಗಳ ರಕ್ಷಣೆಗೆ ಕೃತಕ ಹಾಲು ಸಹಕಾರಿಯಾಗದಿರುವುದನ್ನು ಮನಗಂಡ ರೋಟರಿ ಸಂಸ್ಥೆ ಮೈಸೂರಿನ ಕೆ.ಆರ್. ಆಸ್ಪತ್ರೆಯಲ್ಲಿ ಹಾಗೂ ಮಂಗಳೂರಿನಲ್ಲಿ ‘ತಾಯಿ ಎದೆ ಹಾಲು ಸಂಗ್ರಹ ಕೇಂದ್ರ’ವನ್ನು ತೆರೆದಿದೆ. ಇವುಗಳ ಮೂಲಕ ಈಗಾಗಲೆ 436 ನವಜಾತ ಶಿಶುಗಳು ಪ್ರಯೋಜನವನ್ನು ಪಡೆದುಕೊಂಡಿರುವುದಾಗಿ ತಿಳಿಸಿದರು. ರಾಜ್ಯ ಸರ್ಕಾರವು ನವಜಾತ ಶಿಶುಗಳ ರಕ್ಷಣೆಯ ನಿಟ್ಟಿನಲ್ಲಿ ಆಸಕ್ತವಾಗಿರುವುದಲ್ಲದೆ, ಪ್ರತಿ ಜಿಲ್ಲಾ ಕೇಂದ್ರದ ಆಸ್ಪತ್ರೆಯಲ್ಲಿ ‘ತಾಯಿಯ ಎದೆಹಾಲು ಸಂಗ್ರಹ ಕೇಂದ್ರ’ವನ್ನು ತೆರೆಯುವ ನಿಟ್ಟಿನ ಚಿಂತನೆಗಳನ್ನು ನಡೆಸಿದೆಯೆಂದು ಅವರು ಹೇಳಿದರು. :: ಜೀವ ರಕ್ಷಣೆಗೆ ಅಗತ್ಯ ಮಾರ್ಗದರ್ಶನ :: ಹೃದಯಾಘಾತದ ಸಂದರ್ಭ ಸಂಕಷ್ಟದಲ್ಲಿರುವ ವ್ಯಕ್ತಿಯ ಜೀವ ರಕ್ಷಣೆಗೆ ಪೂರಕವಾದ ಪ್ರಥಮ ಚಿಕಿತ್ಸಾ ಕ್ರಮಗಳ ಬಗ್ಗೆ ಜನ ಸಾಮಾನ್ಯರಿಗೆ ಮಾಹಿತಿ ನೀಡುವ ಕಾರ್ಯಕ್ರಮಗಳ ಬಗ್ಗೆ ರೋಟರಿ ಕಾರ್ಯನಿರತವಾಗಿದೆ. ಈ ನಿಟ್ಟಿನಲ್ಲಿ ಆಯಾ ಪ್ರದೇಶದ ಜನರಲ್ಲಿ ಹಾಗೂ ಆಟೋ ರಿಕ್ಷಾ ಚಾಲಕರಿಗೆ ಮಾಹಿತಿ ಒದಗಿಸುವ ಕಾರ್ಯಗಳನ್ನು ನಡೆಸಲಾಗುತ್ತಿದೆಯೆಂದು ರಾಮಕೃಷ್ಣ ಅವರು ತಿಳಿಸಿದರು. :: ಪೋಲಿಯೋ ಲಸಿಕಾ ಕಾರ್ಯಕ್ರಮ :: ಅಂತರಾಷ್ಟ್ರೀಯ ರೋಟರಿ ಫೌಂಡೇಶನ್ ಸಂಸ್ಥೆಯು ವಿಶ್ವದಿಂದಲೆ ಪೋಲೀಯೋವನ್ನು ನಿರ್ಮೂಲನ ಮಾಡಬೇಕೆನ್ನುವ ನಿಟ್ಟಿನಲ್ಲಿ ‘ಪಲ್ಸ್ ಪೋಲಿಯೋ’ ಕಾರ್ಯಕ್ರಮವನ್ನು ವಿಶ್ವದಾಂದ್ಯಂತ ನಡೆಸಲು ಅಗತ್ಯ ಹಣಕಾಸನ್ನು ಒದಗಿಸಿಕೊಂಡು ಬಂದಿದೆ. ಭಾರತದಲ್ಲಿ ಪೋಲಿಯೋ ಪ್ರಕರಣಗಳು ಇಲ್ಲವಾದರು, ನೆರೆಯ ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನಗಳಲ್ಲಿ 59 ಪೋಲಿಯೋ ಪ್ರಕರಣಗಳು ದಾಖಲಾಗಿದೆ. ಈ ಹಿನ್ನೆಲೆ ಭಾರvದಲ್ಲಿ ಪೋಲೀಯೋ ಲಸಿಕಾ ಕಾರ್ಯಕ್ರಮ ಮುಂದುರಿಸಲಾಗಿದೆಯೆಂದು ಮಾಹಿತಿ ನೀಡಿದರು. ರೋಟರಿ ಜಿಲ್ಲಾ ಸಹಾಯಕ ರಾಜ್ಯಪಾಲ ದಿಲನ್ ಚಂಗಪ್ಪ ಅವರು ಮಾತನಾಡಿ, ಹೆಣ್ಣು ಮಕ್ಕಳಲ್ಲಿನ ‘ಗರ್ಭ ಕಂಠದ ಕ್ಯಾನ್ಸರ್’ ತಡೆಗೆ ಪೂರಕವಾಗಿ ರೋಟರಿ ಸಂಸ್ಥೆಯು ವಿವಿಧ ಶಾಲೆಗಳಲ್ಲಿ ಮಕ್ಕಳು ಮತ್ತು ಅವರ ಪೋಷಕರಿಗೆ ಅರಿವು ನೀಡುವ ಕಾರ್ಯಕ್ರಮವನ್ನು ಪ್ರಮುಖವಾಗಿ ಕೈಗೆತ್ತಿಕೊಂಡು ನಡೆಸುತ್ತಿರುವುದಾಗಿ ತಿಳಿಸಿದರು. ಮಡಿಕೇರಿ ರೋಟರಿ ಮಿಸ್ಟಿ ಹಿಲ್ಸ್ ಅಧ್ಯಕ್ಷರಾದ ರತ್ನಾಕರ ರೈ ಅವರು ಮಾತನಾಡಿ, ಸಂಸ್ಥೆಯ ವತಿಯಿಂದ ಜನಸೇವಾ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ನಡೆಸಿಕೊಂಡು ಬರಲಾಗುತ್ತಿದೆ. ಮೇಕೇರಿ ಮತ್ತು ಕಗ್ಗೋಡ್ಲು ಅಂಗನವಾಡಿ ಕೇಂದ್ರಗಳಿಗೆ ಅಗತ್ಯವಾದ ಪರಿಕರಗಳನ್ನು ಇದೀಗ ವಿತರಿಸಲಾಗುತ್ತಿದೆ, ವಿವಿಧ ಶಾಲೆಗಳಲ್ಲಿ ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಪೂರ್ವ ಪ್ರೇರಣಾ ಶಿಬಿರಗಳನ್ನು ಆಯೋಜಿಸಲಾಗುತ್ತಿದೆ. ಶೀಘ್ರದಲ್ಲೆ ಕೃತಕ ಕಾಲು ಜೋಡಣಾ ಶಿಬಿರವನ್ನು ಆಯೋಜಿಸುವ ಉದ್ದೇಶ ಹೊಂದಿರುವುದಾಗಿ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ರೋಟರಿ ಪ್ರಮುಖರಾದ ಬಿ.ಜಿ.ಅನಂತಶಯನ, ರೋಟರಿ ಕಾರ್ಯದರ್ಶಿ ಬಿ.ಕೆ.ಕಾರ್ಯಪ್ಪ, ರೋಟರಿ ಪಬ್ಲಿಕ್ ಇಮೇಜ್ ಕಮಿಟಿ ಉಪಾಧ್ಯಕ್ಷ ಅನಿಲ್ ಎಚ್.ಟಿ. ಉಪಸ್ಥಿತರಿದ್ದರು.

 

Follow us Follow us
Share. WhatsApp Facebook Twitter Email Telegram Copy Link

Related Posts

*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಸೆ.26: ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್…

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*

ಸೆಪ್ಟೆಂಬರ್ 26, 2026

*ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*

ಸೆಪ್ಟೆಂಬರ್ 26, 2026

*ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*

ಸೆಪ್ಟೆಂಬರ್ 26, 2026

*2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*

ಸೆಪ್ಟೆಂಬರ್ 26, 2026

*ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*

ಸೆಪ್ಟೆಂಬರ್ 26, 2026

*ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*

ಸೆಪ್ಟೆಂಬರ್ 26, 2026

*ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*

ಸೆಪ್ಟೆಂಬರ್ 26, 2026

*36 ವರ್ಷ ಸೇವೆ ಸಲ್ಲಿಸಿದ ಅಂಗನವಾಡಿ ಕಾರ್ಯಕರ್ತೆ ದೇವಮಾಜಿ, ಶಿಕ್ಷಕಿ ಭೋಜಮ್ಮಗೆ ಆತ್ಮೀಯ ಬೀಳ್ಕೊಡುಗೆ*

ಸೆಪ್ಟೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.