Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಬಾಳೆಲೆ : ರೂ. 27.23 ಕೋಟಿ ವೆಚ್ಚದ ವಿದ್ಯುತ್ ವಿತರಣಾ ಕೇಂದ್ರ ಸ್ಥಾಪನೆಗೆ ಶಾಸಕ ಎ.ಎಸ್.ಪೊನ್ನಣ್ಣ ಚಾಲನೆ*
  • *ಶ್ರೀಮಂಗಲದಲ್ಲಿ ಮಹಿಳಾ ದಿನಾಚರಣೆ : ಮಹಿಳಾ ಸಬಲೀಕರಣವು ಸರ್ಕಾರದ ಪ್ರಮುಖ ಆಶಯ : ಶಾಸಕ ಎ.ಎಸ್.ಪೊನ್ನಣ್ಣ*
  • *ಮಾ.8 ರಂದು ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ*
  • *ಮಾ.8 ರಂದು ಬಿಟ್ಟಂಗಾಲದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ*
  • *ಕೊಡವ ಅಭಿವೃದ್ಧಿ ನಿಗಮ ಘೋಷಣೆ : ಯುಕೊ ಸಂಭ್ರಮಾಚರಣೆ : ಶಾಸಕ ಪೊನ್ನಣ್ಣ, ಮಂಜು ಚಿಣ್ಣಪ್ಪಗೆ ಸನ್ಮಾನ
  • *ಜಾತಿಧರ್ಮಗಳ ಹೆಸರಿನಲ್ಲಿ ಸಮಾಜವನ್ನು ಒಡೆಯುವ ಪ್ರಯತ್ನಗಳ ಬಗ್ಗೆ ಜಾಗೃತರಾಗಿರಿ : ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ*
  • *ತಿತಿಮತಿ : ರೈಲ್ವೆ ಬ್ಯಾರಿಕೆಡ್ ಅಳವಡಿಸುವ ಕಾಮಗಾರಿ ಶಾಸಕ ಎ.ಎಸ್.ಪೊನ್ನಣ್ಣ ಚಾಲನೆ*
  • *ಪ್ರೊ.ಅಶೋಕ ಸಂಗಪ್ಪ ಆಲೂರ ಅವರಿಗೆ ಭಾರತರತ್ನ ಡಾ.ಸರ್.ಎಂ.ವಿಶ್ವೇಶ್ವರಯ್ಯ ವಿಜ್ಞಾನ ಪುರಸ್ಕಾರ*
  • *ಸುಂಟಿಕೊಪ್ಪ : ಮಕ್ಕಳಲ್ಲಿ ಸಾಹಿತ್ಯ ಅಭಿರುಚಿಯನ್ನು ಹೆಚ್ಚಿಸಬೇಕು : ಎಸ್.ಐ.ಮುನಿರ್‍ಅಹ್ಮದ್*
  • *ವಿರಾಜಪೇಟೆಯ ಸೈಂಟ್ ಆನ್ಸ್ ಪದವಿ ಕಾಲೇಜಿನ ಎನ್ ಎಸ್ ಎಸ್ ಎಸ್ ವಾರ್ಷಿಕ ಶಿಬಿರದಲ್ಲಿ ವಿದ್ಯಾರ್ಥಿಗಳಿಂದ ಗ್ರಾಮ ಸ್ವಚ್ಛತಾ ಅಭಿಯಾನ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮಡಿಕೇರಿಯಲ್ಲಿ ರಸ್ತೆ ಸುರಕ್ಷತಾ ಮಾಸಾಚರಣೆ : ಸಂಚಾರ ನಿಯಮ ಪಾಲಿಸಿ, ಅಪಘಾತ ತಪ್ಪಿಸಿ : ಎಎಸ್ಪಿ ದಿನೇಶ್ ಕುಮಾರ್ ಸಲಹೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮಡಿಕೇರಿಯಲ್ಲಿ ರಸ್ತೆ ಸುರಕ್ಷತಾ ಮಾಸಾಚರಣೆ : ಸಂಚಾರ ನಿಯಮ ಪಾಲಿಸಿ, ಅಪಘಾತ ತಪ್ಪಿಸಿ : ಎಎಸ್ಪಿ ದಿನೇಶ್ ಕುಮಾರ್ ಸಲಹೆ*

ಜನವರಿ 14, 20263 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜ.14 NEWS DESK : ವಾಹನ ಚಲಾಯಿಸುವ ಪ್ರತಿಯೊಬ್ಬರಲ್ಲಿಯೂ ಸಹ ಸಂಚಾರ ನಿಯಮವನ್ನು ಪಾಲಿಸುತ್ತೇವೆ ಎಂಬ ದೃಢಸಂಕಲ್ಪ ಮಾಡಬೇಕು. ಇದರಿಂದ ಅಪಘಾತವನ್ನು ತಡೆಯಬಹುದು ಎಂದು ಉಪ ಪೊಲೀಸ್ ವರಿಷ್ಠಾಧಿಕಾರಿ ಬಾರಿಕೆ ದಿನೇಶ್ ಕುಮಾರ್ ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಜಿಲ್ಲಾಡಳಿತ, ಪೊಲೀಸ್ ಇಲಾಖೆ, ಪ್ರಾದೇಶಿಕ ಸಾರಿಗೆ,ಕಾನೂನು ಸೇವಾ ಪ್ರಾಧಿಕಾರ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಕಾರದಲ್ಲಿ ನಡೆದ ರಸ್ತೆ ಸುರಕ್ಷತಾ ಮಾಸಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಜಿಲ್ಲೆಯಲ್ಲಿ ಸಂಭವಿಸುವ ವಿವಿಧ ರೀತಿಯ ಅಪಘಾತಗಳ ಬಗ್ಗೆ ಪಿಪಿಟಿ ಮೂಲಕ ಮಾಹಿತಿ ನೀಡಿ ಯುವ ಜನರಲ್ಲಿ  ಜಾಗೃತಿ ಮೂಡಿಸಿದರು.  ವಾಹನ ಸಂಚಾರ ಸಂಬಂಧಿಸಿದಂತೆ ಎಲ್ಲಾ ನಿಯಮಗಳು ಗೊತ್ತಿದೆ ಎಂದು ಉದಾಸೀನ ಮಾಡಬಾರದು. 18 ವರ್ಷದೊಳಗಿನವರು ಸಾರ್ವಜನಿಕ ಸ್ಥಳಗಳಲ್ಲಿ ವಾಹನ ಚಲಾಯಿಸಬಾರದು. 18 ವರ್ಷ ಮೇಲ್ಪಟ್ಟವರು ಕಡ್ಡಾಯವಾಗಿ ಪರವಾನಗಿ ಪಡೆಯಬೇಕು. ಜೊತೆಗೆ ವಾಹನದ ವಿಮೆ ಇರಬೇಕು ಎಂದು ದಿನೇಶ್ ಕುಮಾರ್ ಅವರು ಸಲಹೆ ನೀಡಿದರು. ಇತ್ತೀಚಿನ ದಿನಗಳಲ್ಲಿ ಯುವಜನರಲ್ಲಿ ವೀಲಿಂಗ್ ಸಂಚಾರ ಬೈಕ್ ಓಡಿಸುವುದು ಹೆಚ್ಚಾಗಿದೆ. ಇದರಿಂದ ಹೆಚ್ಚಿನ ಅಪಘಾತಗಳು ಸಂಭವಿಸುತ್ತವೆ ಎಂದು ಅವರು ತಿಳಿಸಿದರು. ಸಾರಿಗೆ ಸಂಚಾರ ನಿಯಮ ಉಲ್ಲಂಘನೆ ಮಾಡಿದರೆ ಕಠಿಣ ಶಿಕ್ಷೆಗೆ ಒಳಗಾಗಬೇಕಾಗುತ್ತದೆ. ಹಾಗೆಯೇ ತಮ್ಮ ಜೀವ ಕಳೆದುಕೊಳ್ಳಬೇಕಾಗುತ್ತದೆ. ವಾಹನ ಚಲಾಯಿಸುವಾಗ ಕುಟುಂಬದವರ ನೆನಪು ಸದಾ ಇರಬೇಕು. ಆ ನಿಟ್ಟಿನಲ್ಲಿ ಎಚ್ಚರಿಕೆಯಿಂದ ವಾಹನ ಚಲಾಯಿಸಬೇಕು ಎಂದು ಸಲಹೆ ಮಾಡಿದರು. ರಾಷ್ಟ್ರದಲ್ಲಿ ವಾಹನ ಅಪಘಾತದಿಂದಲೇ ಹೆಚ್ಚಿನ ಸಾವು ನೋವುಗಳು ಸಂಭವಿಸುತ್ತಿವೆ. ಆದ್ದರಿಂದ ಈ ಬಗ್ಗೆ ಎಚ್ಚರವಹಿಸಬೇಕು. ಶಿಸ್ತುಬದ್ಧವಾಗಿ ಸಂಚಾರ ನಿಯಮ ಪಾಲಿಸಬೇಕು ಎಂದರು. ದ್ವಿಚಕ್ರ ವಾಹನ ಚಲಾಯಿಸುವವರು ಕಡ್ಡಾಯವಾಗಿ ಹೆಲ್ಮೇಟ್ ಧರಿಸಬೇಕು. ಸೀಟ್ ಬೆಲ್ಟ್ ಅಳವಡಿಸಿಕೊಳ್ಳಬೇಕು. ಪರವಾನಗಿ ಇಲ್ಲದೆ ವಾಹನ ಚಲಾಯಿಸಬಾರದು. ಆ ನಿಟ್ಟಿನಲ್ಲಿ ಸುರಕ್ಷತೆಗೆ ಹೆಚ್ಚಿನ ಒತ್ತು ನೀಡುವುದು ಅತ್ಯಗತ್ಯ ಎಂದು ದಿನೇಶ್ ಕುಮಾರ್ ಅವರು ಪ್ರತಿಪಾದಿಸಿದರು.  ಅತೀ ವೇಗವಾಗಿ ಹಾಗೂ ಮದ್ಯಪಾನ ಮಾಡಿ ವಾಹನ ಚಲಾಯಿಸಬಾರದು. ಮದ್ಯಪಾನ ಮಾಡಿ ವಾಹನ ಚಲಾಯಿಸುವುದು ಕಂಡುಬಂದಲ್ಲಿ ಪರವಾನಗಿ ರದ್ದುಪಡಿಸಲಾಗುತ್ತದೆ ಎಂದು ಎಚ್ಚರಿಸಿದರು.  ಜೊತೆಗೆ ವಾಹನದ ಆರ್‍ಸಿಯ ಪರವಾನಗಿಯನ್ನು ಒಂದು ವರ್ಷದವರೆಗೆ ರದ್ದು ಮಾಡಲಾಗುತ್ತದೆ. ಈ ಎಲ್ಲಾ ನಿಯಮಗಳನ್ನು ತಿಳಿದುಕೊಂಡು ವಾಹನ ಚಲಾಯಿಸಬೇಕು ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಯವರು ಹೇಳಿದರು. ‘ಅಪ್ರಾಪ್ತರು ಸಾರ್ವಜನಿಕ ಸ್ಥಳದಲ್ಲಿ ವಾಹನ ಚಾಲನೆ ಮಾಡುವುದಿಲ್ಲ ಎಂಬ ಶಪಥ ಮಾಡಬೇಕು. ಅಪಘಾತ ರಹಿತ ಸಮಾಜ ನಿರ್ಮಾಣಕ್ಕೆ ಎಲ್ಲರೂ ಕೈಜೋಡಿಸಬೇಕು. ಪ್ರತಿಯೊಬ್ಬರೂ ಸುಖ, ಶಾಂತಿ, ನೆಮ್ಮದಿಯಾಗಿ ಬದುಕುವತ್ತ ಗಮನಹರಿಸಬೇಕು ಎಂದರು.’  ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶುಭ ಅವರು ಮಾತನಾಡಿ ಪ್ರತಿನಿತ್ಯ ಚಟುವಟಿಕೆಯ ಸಂಚಾರಕ್ಕೆ ವಾಹನ ಅತ್ಯಗತ್ಯ. ಆ ನಿಟ್ಟಿನಲ್ಲಿ ಸಂಚಾರ ನಿಯಮವನ್ನು ಕಡ್ಡಾಯವಾಗಿ ಪಾಲಿಸುವುದು ಹೆಚ್ಚಿನ ಅಗತ್ಯ ಎಂದು ಹೇಳಿದರು.  ಸಂಚಾರಿ ನಿಯಮ ಉಲ್ಲಂಘನೆ ಪ್ರಕರಣಗಳು ನ್ಯಾಯಾಲಯದಲ್ಲಿ ಹೆಚ್ಚು ದಾಖಲಾಗುತ್ತಿವೆ. ಇದು ಒಳ್ಳೆಯ ಬೆಳವಣಿಗೆಯಲ್ಲ ಎಂದರು. ರಸ್ತೆ ನಿಯಮಗಳನ್ನು ಚಾಚೂ ತಪ್ಪದೇ ಪಾಲಿಸಬೇಕು. ಕಾನೂನಿನಲ್ಲಿ ರಸ್ತೆ ಸುರಕ್ಷತೆ ಬಗ್ಗೆ ಸಾಕಷ್ಟು ಮಾಹಿತಿ ಇದ್ದು, ಜೀವ ಮುಖ್ಯ ಎಂಬುದನ್ನು ಅರಿತುಕೊಳ್ಳಬೇಕು ಎಂದರು. ‘ಪ್ರತಿಯೊಬ್ಬರ ಮನೆಯಲ್ಲಿರುವ ವಾಹನವು ರಥ ಇದ್ದಂತೆ. ರಥವನ್ನು ಯಾವ ರೀತಿ ಪೂಜಾ ಭಾವನೆಯಿಂದ ಕಾಣುತ್ತೇವೆ. ಅಷ್ಟು ಗೌರವ ನೀಡಿ, ತಾಳ್ಮೆ, ಸಹನೆಯಿಂದ, ಸಂಯಮದಿಂದ ವಾಹನ ಚಲಾಯಿಸಬೇಕು ಎಂದು ಶುಭ ಅವರು ಒತ್ತಿ ಹೇಳಿದರು.’  ಪ್ರಾದೇಶಿಕ ಸಾರಿಗೆ ಅಧಿಕಾರಿ ಸತೀಶ್ ಅವರು ರಸ್ತೆ ಸುರಕ್ಷತೆ ಸಂಬಂಧಿಸಿದಂತೆ ಪ್ರತಿಜ್ಞಾ ವಿಧಿ ಬೋಧಿಸಿದರು. ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್‍ನ ಪ್ರಧಾನ ಆಯುಕ್ತರಾದ ಕೆ.ಟಿ.ಬೇಬಿ ಮ್ಯಾಥ್ಯೂ, ಖಾಸಗಿ ಬಸ್ ಮಾಲೀಕರ ಸಂಘದ ಅಧ್ಯಕ್ಷರಾದ ಹೊಸೂರು ರಮೇಶ್ ಜೋಯಪ್ಪ, ವಾಹನ ಚಾಲನಾ ತರಬೇತಿ ಶಾಲೆಗಳ ಸಂಘದ ಅಧ್ಯಕ್ಷರಾದ ಗಿಲ್ಬರ್ಟ್ ಲೋಬೋ, ಪ್ರಾದೇಶಿಕ ಸಾರಿಗೆ ಇಲಾಖೆಯ ಅಧೀಕ್ಷಕರಾದ ಸಲೀಮ, ಮೋಹನ್ ಕುಮಾರ್, ಮೋಟಾರು ವಾಹನ ನಿರೀಕ್ಷಕರಾದ ಮೋಹನ್ ಕುಮಾರ್, ಪ್ರದೀಪ್ ಇತರರು ಇದ್ದರು.  ನಿವೃತ್ತ ಪ್ರಾದೇಶಿಕ ಅಧಿಕಾರಿ ಪಾಷ ನಿರೂಪಿಸಿದರು. ಸಂತ ಮೈಕಲರ ಶಾಲೆಯ ಗೈಡ್ಸ್ ವಿದ್ಯಾರ್ಥಿಗಳು ನಾಡಗೀತೆ ಹಾಡಿದರು. ರೀಟಾ ವಂದಿಸಿದರು. :: ಜಾಥಾ :: ರಸ್ತೆ ಸುರಕ್ಷತೆ ಮಾಸಾಚರಣೆ ಪ್ರಯುಕ್ತ ನಗರದ ಹೊಸ ಖಾಸಗಿ ಬಸ್ ನಿಲ್ದಾಣದಿಂದ ಮೈತ್ರಿ ಸಭಾಂಗಣದವರೆಗೆ ಜಾಥಾ ನಡೆಯಿತು. ಜಾಥಾಗೆ ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಅವರು ಚಾಲನೆ ನೀಡಿದರು.  ಜಾಥಾದಲ್ಲಿ ವಿವಿಧ ಇಲಾಖೆ ಅಧಿಕಾರಿಗಳು, ಸಿಬ್ಬಂದಿಗಳು, ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳು, ಖಾಸಗಿ ಬಸ್ ಹಾಗೂ ಆಟೋ ಚಾಲಕರ ಸಂಘ ಹೀಗೆ ಸಂಘ ಸಂಸ್ಥೆಗಳ ಪ್ರತಿನಿಧಿಗಳು ಭಾಗವಹಿಸಿದ್ದರು. ರಸ್ತೆ ಸುರಕ್ಷತೆ ಸಂಬಂಧಿಸಿದಂತೆ ಪ್ಲೇ ಕಾರ್ಡ್ ಮೂಲಕ ಜಾಗೃತಿ ಮೂಡಿಸಲಾಯಿತು.

 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಬಾಳೆಲೆ : ರೂ. 27.23 ಕೋಟಿ ವೆಚ್ಚದ ವಿದ್ಯುತ್ ವಿತರಣಾ ಕೇಂದ್ರ ಸ್ಥಾಪನೆಗೆ ಶಾಸಕ ಎ.ಎಸ್.ಪೊನ್ನಣ್ಣ ಚಾಲನೆ*

ಮಾರ್ಚ್ 7, 2026

*ಶ್ರೀಮಂಗಲದಲ್ಲಿ ಮಹಿಳಾ ದಿನಾಚರಣೆ : ಮಹಿಳಾ ಸಬಲೀಕರಣವು ಸರ್ಕಾರದ ಪ್ರಮುಖ ಆಶಯ : ಶಾಸಕ ಎ.ಎಸ್.ಪೊನ್ನಣ್ಣ*

ಮಾರ್ಚ್ 7, 2026

*ಮಾ.8 ರಂದು ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ*

ಮಾರ್ಚ್ 7, 2026

*ಶ್ರೀಮಂಗಲದಲ್ಲಿ ಮಹಿಳಾ ದಿನಾಚರಣೆ : ಮಹಿಳಾ ಸಬಲೀಕರಣವು ಸರ್ಕಾರದ ಪ್ರಮುಖ ಆಶಯ : ಶಾಸಕ ಎ.ಎಸ್.ಪೊನ್ನಣ್ಣ*

ಮಾರ್ಚ್ 7, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಮಾ.7 NEWS DESK : ಆಧುನಿಕ ಸಮಾಜದಲ್ಲಿ ಮಹಿಳೆಯರಿಗೆ ಅತ್ಯಂತ ಪ್ರಮುಖವಾದ ಸ್ಥಾನವಿದೆ. ಮಹಿಳೆಯರು ಸಮಾಜದ ಮುನ್ನೆಲೆಗೆ ಬಂದಲ್ಲಿ…

*ಮಾ.8 ರಂದು ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ*

ಮಾರ್ಚ್ 7, 2026

*ಮಾ.8 ರಂದು ಬಿಟ್ಟಂಗಾಲದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ*

ಮಾರ್ಚ್ 7, 2026

*ಕೊಡವ ಅಭಿವೃದ್ಧಿ ನಿಗಮ ಘೋಷಣೆ : ಯುಕೊ ಸಂಭ್ರಮಾಚರಣೆ : ಶಾಸಕ ಪೊನ್ನಣ್ಣ, ಮಂಜು ಚಿಣ್ಣಪ್ಪಗೆ ಸನ್ಮಾನ

ಮಾರ್ಚ್ 7, 2026

*ಜಾತಿಧರ್ಮಗಳ ಹೆಸರಿನಲ್ಲಿ ಸಮಾಜವನ್ನು ಒಡೆಯುವ ಪ್ರಯತ್ನಗಳ ಬಗ್ಗೆ ಜಾಗೃತರಾಗಿರಿ : ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ*

ಮಾರ್ಚ್ 7, 2026

*ತಿತಿಮತಿ : ರೈಲ್ವೆ ಬ್ಯಾರಿಕೆಡ್ ಅಳವಡಿಸುವ ಕಾಮಗಾರಿ ಶಾಸಕ ಎ.ಎಸ್.ಪೊನ್ನಣ್ಣ ಚಾಲನೆ*

ಮಾರ್ಚ್ 7, 2026

*ಪ್ರೊ.ಅಶೋಕ ಸಂಗಪ್ಪ ಆಲೂರ ಅವರಿಗೆ ಭಾರತರತ್ನ ಡಾ.ಸರ್.ಎಂ.ವಿಶ್ವೇಶ್ವರಯ್ಯ ವಿಜ್ಞಾನ ಪುರಸ್ಕಾರ*

ಮಾರ್ಚ್ 7, 2026

*ಸುಂಟಿಕೊಪ್ಪ : ಮಕ್ಕಳಲ್ಲಿ ಸಾಹಿತ್ಯ ಅಭಿರುಚಿಯನ್ನು ಹೆಚ್ಚಿಸಬೇಕು : ಎಸ್.ಐ.ಮುನಿರ್‍ಅಹ್ಮದ್*

ಮಾರ್ಚ್ 7, 2026

*ವಿರಾಜಪೇಟೆಯ ಸೈಂಟ್ ಆನ್ಸ್ ಪದವಿ ಕಾಲೇಜಿನ ಎನ್ ಎಸ್ ಎಸ್ ಎಸ್ ವಾರ್ಷಿಕ ಶಿಬಿರದಲ್ಲಿ ವಿದ್ಯಾರ್ಥಿಗಳಿಂದ ಗ್ರಾಮ ಸ್ವಚ್ಛತಾ ಅಭಿಯಾನ*

ಮಾರ್ಚ್ 7, 2026

*ಹವ್ಯಕ ಅಕಾಡೆಮಿ, ಕೊಡವ ನಿಗಮ : ಸಾಂಸ್ಕೃತಿಕ ಪರಂಪರೆಯ ರಕ್ಷಣೆ ಮತ್ತು ಸಮುದಾಯದ ಅಭಿವೃದ್ಧಿಯನ್ನು ಉತ್ತೇಜಿಸುವ ಮಹತ್ವದ ಹೆಜ್ಜೆ : ಸರಕಾರದ ಕ್ರಮವನ್ನು ಸ್ವಾಗತಿಸಿದ ಸಿಎನ್‌ಸಿ*

ಮಾರ್ಚ್ 7, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.